AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತವನ್ನು ತಡೆಯಲು ಒಬ್ಬ ವ್ಯಕ್ತಿ ಪ್ರತಿನಿತ್ಯ ಎಷ್ಟು ಹೊತ್ತು ನಡೆಯಬೇಕು ತಿಳಿದುಕೊಳ್ಳಿ

ಚುರುಕಾದ ನಡಿಗೆ, ಏರೋಬಿಕ್ಸ್, ಈಜು, ಸೈಕ್ಲಿಂಗ್ ಮತ್ತು ಓಟ ಎಲ್ಲವೂ ನಿಮ್ಮ ಹೃದಯವನ್ನು ಆರೋಗ್ಯವಾಗಿಟ್ಟುಕೊಳ್ಳಲು ಮಾಡಲೇಬೇಕಾದಂತಹ ವ್ಯಾಯಾಮಗಳಾಗಿವೆ. ಇವೆಲ್ಲಾ ಸಾಧ್ಯವಾಗದಿದ್ದಲ್ಲಿ ಪ್ರತಿದಿನ ವಾಕಿಂಗ್ ಮಾಡುವ ಮೂಲಕವೂ ಹೃದಯಾಘಾತವನ್ನು ತಡೆಗಟ್ಟಬಹುದು. ಹೌದು. ಆರೋಗ್ಯ ತಜ್ಞರು ಹೇಳುವ ಪ್ರಕಾರ, ಪ್ರತಿದಿನ ವಾಕಿಂಗ್ ಮಾಡುವುದು ಬಹಳ ಉಪಯೋಗಕಾರಿ. ಈ ಒಂದು ಅಭ್ಯಾಸ ಹೃದಯ ಸಂಬಂಧಿ ಕಾಯಿಲೆಗಳು ಬರುವ ಅಪಾಯವನ್ನು ಕಡಿಮೆ ಮಾಡುತ್ತದೆ. ಹಾಗಾದರೆ ಒಬ್ಬ ವ್ಯಕ್ತಿ ತನ್ನ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಎಷ್ಟು ಹೊತ್ತು ವಾಕಿಂಗ್ ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೃದಯಾಘಾತವನ್ನು ತಡೆಯಲು ಒಬ್ಬ ವ್ಯಕ್ತಿ ಪ್ರತಿನಿತ್ಯ ಎಷ್ಟು ಹೊತ್ತು ನಡೆಯಬೇಕು ತಿಳಿದುಕೊಳ್ಳಿ
40 Minute Daily Walk Heart Health Benefits
ಪ್ರೀತಿ ಭಟ್​, ಗುಣವಂತೆ
|

Updated on: Nov 10, 2025 | 2:26 PM

Share

ಇತ್ತೀಚಿನ ದಿನಗಳಲ್ಲಿ, ಜನರಲ್ಲಿ ವಿವಿಧ ರೀತಿಯ ಕಾಯಿಲೆಗಳು ಕಂಡುಬರುತ್ತಿದೆ. ಬದಲಾಗುತ್ತಿರುವ ಜೀವನಶೈಲಿ, ಆಹಾರ ಪದ್ಧತಿ, ಒತ್ತಡ ಸೇರಿದಂತೆ ನಾನಾ ರೀತಿಯ ಅಂಶಗಳು ಆರೋಗ್ಯ ಸಮಸ್ಯೆಗಳು ಉದ್ಭವಿಸುವುದಕ್ಕೆ ಕಾರಣವಾಗುತ್ತಿದೆ. ಮಾತ್ರವಲ್ಲ, ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತದ ಅಪಾಯಗಳು ಕೂಡ ವೇಗವಾಗಿ ಹೆಚ್ಚುತ್ತಿವೆ. ಅದರಲ್ಲಿಯೂ ಈ ಚಳಿಗಾಲದಲ್ಲಿ ಹೃದಯ ಸಂಬಂಧಿ ಸಮಸ್ಯೆಗಳಿರುವರು ಬಹಳ ಜಾಗರೂಕರಾಗಿರಬೇಕಾಗುತ್ತದೆ. ಏಕೆಂದರೆ ಈ ಋತು ಇಂತಹ ಸಮಸ್ಯೆಗಳಿರುವವರಿಗೆ ಬಹಳ ಅಪಾಯಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾಗಿ ಈ ಸಮಸ್ಯೆಯನ್ನು ಆದಷ್ಟು ತಡೆಗಟ್ಟಲು ಪ್ರತಿದಿನ ವಾಕಿಂಗ್ (Walking) ಮಾಡುವುದು ಬಹಳ ಉಪಯೋಗಕಾರಿ. ಈ ಒಂದು ಅಭ್ಯಾಸ ಹೃದಯಾಘಾತದ (Heart Attack) ಅಪಾಯವನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಒಬ್ಬ ವ್ಯಕ್ತಿ ತನ್ನ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಎಷ್ಟು ಹೊತ್ತು ವಾಕಿಂಗ್ ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಎಷ್ಟು ಹೊತ್ತು ವಾಕಿಂಗ್ ಮಾಡುವುದು ಒಳ್ಳೆಯದು?

ಆರೋಗ್ಯ ತಜ್ಞರು, ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು, ನೀವು ವಾರಕ್ಕೆ 200 ನಿಮಿಷಗಳ ಕಾಲ ವೇಗವಾಗಿ ನಡೆಯಬೇಕು ಎಂದು ಹೇಳುತ್ತಾರೆ. 200 ನಿಮಿಷಗಳು ಎಂದರೆ ವಾರದ ಐದು ದಿನ ದಿನಕ್ಕೆ 40 ನಿಮಿಷಗಳ ಕಾಲ ನಡೆಯಬೇಕು. ಈ ರೀತಿ ತಪ್ಪದೆ ಪ್ರತಿದಿನ 40 ನಿಮಿಷ ನಡೆಯುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು ಬರುವ ಅಪಾಯ ಕಡಿಮೆಯಾಗುತ್ತದೆ. ಅದಲ್ಲದೆ ಸಾಮಾನ್ಯ ವೇಗದಲ್ಲಿ ನಡೆಯುವುದಕ್ಕಿಂತ ವೇಗವಾಗಿ ನಡೆಯುವುದು ಹೃದಯಕ್ಕೆ ಬಹಳ ಉತ್ತಮ. ಆದ್ದರಿಂದ, ವೇಗವಾಗಿ ನಡೆಯುವ ಮೂಲಕ ನೀವು ಈ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನೀವು ಕೂಡ ಇದನ್ನು ಅನುಸರಿಸಬಹುದು. ಆದರೆ ಅದಕ್ಕೂ ಮೊದಲು ನಿಮ್ಮ ವೈದ್ಯರ ಸಲಹೆ ಪಡೆಯುವುದು ಬಹಳ ಒಳ್ಳೆಯದು.

ಇದನ್ನೂ ಓದಿ: ಪ್ರೌಢಾವಸ್ಥೆಗೆ ಬಂದ ಮಕ್ಕಳಲ್ಲಿ ಹೃದಯ ಸಂಬಂಧಿ ಸಮಸ್ಯೆಗಳಿರುವುದನ್ನು ಕಂಡುಹಿಡಿಯುವುದು ಹೇಗೆ? ಪ್ರತಿ ಪೋಷಕರು ತಿಳಿಯಬೇಕಾದ ವಿಷಯವಿದು

ಹೃದಯದ ಆರೋಗ್ಯಕ್ಕೆ ಯಾವ ರೀತಿಯ ವ್ಯಾಯಾಮ ಒಳ್ಳೆಯದು?

ಚುರುಕಾದ ನಡಿಗೆ, ಏರೋಬಿಕ್ಸ್, ಈಜು, ಸೈಕ್ಲಿಂಗ್ ಮತ್ತು ಓಟ ಇವೆಲ್ಲವೂ ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ಉತ್ತಮ ವ್ಯಾಯಾಮಗಳಾಗಿವೆ. ನೀವು ಪ್ರತಿದಿನ 40 ನಿಮಿಷಗಳಿಗಿಂತ ಹೆಚ್ಚು ಕಾಲ ವೇಗದಲ್ಲಿ ವಾಕಿಂಕ್ ಮಾಡಿದರೆ, ನಿಮ್ಮ ದೇಹದ ತೂಕವೂ ಕಡಿಮೆಯಾಗುತ್ತದೆ. ಇನ್ನು ಹೃದಯಾಘಾತವನ್ನು ತಡೆಗಟ್ಟಲು, ಪ್ರತಿದಿನ 40 -45 ನಿಮಿಷಗಳ ಕಾಲ ಚುರುಕಾದ ನಡಿಗೆ ಮಾಡಿ. ಇದು ನಿಮ್ಮ ಹೃದಯ, ಯಕೃತ್ತು ಮತ್ತು ಮೆದುಳನ್ನು ಆರೋಗ್ಯವಾಗಿಡುತ್ತದೆ. ಮಾತ್ರವಲ್ಲ, ಕೊಲೆಸ್ಟ್ರಾಲ್, ರಕ್ತದೊತ್ತಡ ಮತ್ತು ಮಧುಮೇಹದ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?