AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಣ್ಣನೆಯ ವಾತಾವರಣದಲ್ಲಿ ವಾಕಿಂಗ್ ಮಾಡುವುದು ಒಳ್ಳೆಯದಾ?

Walking Benefits: ಶೀತ ಹವಾಮಾನವು ಕೆಲವರ ಆರೋಗ್ಯಕ್ಕೆ ತೊಂದರೆಗಳನ್ನು ಉಂಟುಮಾಡುತ್ತದೆ. ಚಳಿಗಾಲದಲ್ಲಿ ವಾಕಿಂಗ್ ಮಾಡುವುದು ಕಷ್ಟ. ತಂಪಾಗಿರುವ ವಾತಾವರಣದಲ್ಲಿ ವಾಕ್ ಮಾಡುವುದು ಒಳ್ಳೆಯದಾ? ಕೆಟ್ಟದ್ದಾ? ಎಂಬ ಗೊಂದಲ ನಿಮ್ಮಲ್ಲಿರಬಹುದು. ಅಧ್ಯಯನಗಳ ಪ್ರಕಾರ, ಚಳಿಗಾಲದ ವಾಕಿಂಗ್ ಮತ್ತು ವ್ಯಾಯಾಮದಿಂದ ಕೆಲವು ಉತ್ತಮ ಆರೋಗ್ಯ ಪ್ರಯೋಜನಗಳಿವೆ. ಅದನ್ನು ನೀವು ಪಡೆಯಬಹುದು.

ತಣ್ಣನೆಯ ವಾತಾವರಣದಲ್ಲಿ ವಾಕಿಂಗ್ ಮಾಡುವುದು ಒಳ್ಳೆಯದಾ?
ಸಾಂದರ್ಭಿಕ ಚಿತ್ರ Image Credit source: iStock
ಸುಷ್ಮಾ ಚಕ್ರೆ
|

Updated on:Feb 17, 2024 | 7:05 PM

Share

ಹಾರ್ವರ್ಡ್ ಹೆಲ್ತ್ ಪ್ರಕಾರ, ಚಳಿಗಾಲದಲ್ಲಿ (Winter Season) ವಾಕಿಂಗ್ ಮಾಡುವುದರಿಂದ ಸ್ತನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಯಾವುದೇ ರೀತಿಯ ದೈಹಿಕ ಚಟುವಟಿಕೆಯು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅದರಲ್ಲೂ ನಡೆಯುವುದು ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್​ನ (Breast Cancer) ಸಾಧ್ಯತೆಯನ್ನು ನಿಯಂತ್ರಿಸುತ್ತದೆ.

ಅಮೆರಿಕನ್ ಕ್ಯಾನ್ಸರ್ ಸೊಸೈಟಿಯ ಅಧ್ಯಯನದ ಪ್ರಕಾರ, ವಾರಕ್ಕೆ 7 ಅಥವಾ ಅದಕ್ಕಿಂತ ಹೆಚ್ಚು ಗಂಟೆಗಳ ಕಾಲ ನಡೆಯುವ ಮಹಿಳೆಯರು ವಾರಕ್ಕೆ 3 ಗಂಟೆ ಅಥವಾ ಕಡಿಮೆ ನಡೆದವರಿಗಿಂತ ಶೇ. 14ರಷ್ಟು ಕಡಿಮೆ ಸ್ತನ ಕ್ಯಾನ್ಸರ್ ಅಪಾಯವನ್ನು ಹೊಂದಿರುತ್ತಾರೆ. ಅಲ್ಲದೆ, ವಾಕಿಂಗ್ ನಿಮಗೆ ಬೊಜ್ಜು ಮತ್ತು ಅಧಿಕ ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲಿ ವ್ಯಾಯಾಮ ಮಾಡುವಾಗ ನೀವು ಮಾಡುವ ತಪ್ಪು ಹೃದಯಾಘಾತಕ್ಕೆ ಕಾರಣವಾಗಬಹುದು!

ವಾಕಿಂಗ್ ಗಂಟು ಮತ್ತು ಮೂಳೆ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ, ನೋವು ಮತ್ತು ಉರಿಯೂತದ ಸಮಸ್ಯೆ ಇರುವವರಿಗೆ ಉತ್ತಮವಾಗಿದೆ. ನಿಯಮಿತವಾಗಿ ನಡೆಯುವುದು, ಶೀತ ವಾತಾವರಣದಲ್ಲಿಯೂ ಸಹ ಸಂಧಿವಾತಕ್ಕೆ ಸಂಬಂಧಿಸಿದ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ವಾಕಿಂಗ್ ಕೀಲುಗಳನ್ನು ರಕ್ಷಿಸಲು ಸಹಾಯ ಮಾಡುತ್ತದೆ. ವಿಶೇಷವಾಗಿ ಮೊಣಕಾಲುಗಳು ಮತ್ತು ಸೊಂಟ ನೋವನ್ನು ಕಡಿಮೆ ಮಾಡುತ್ತದೆ.

ವಾಕಿಂಗ್ ಕೀಲುಗಳನ್ನು ನಯಗೊಳಿಸುತ್ತದೆ ಮತ್ತು ಅವುಗಳನ್ನು ಬೆಂಬಲಿಸುವ ಸ್ನಾಯುಗಳನ್ನು ಬಲಪಡಿಸುತ್ತದೆ. ವೇಗವಾದ ನಡಿಗೆಯು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಶೀತ ಮತ್ತು ಜ್ವರದಿಂದ ನಿಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ. ನಿಯಮಿತವಾಗಿ ವಾಕಿಂಗ್ ಮಾಡುವುದು ರಕ್ತದ ಹರಿವನ್ನು ಹೆಚ್ಚಿಸುವ ಮೂಲಕ, ಒತ್ತಡ ಮತ್ತು ಉರಿಯೂತವನ್ನು ಕಡಿಮೆ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಇದನ್ನೂ ಓದಿ: Joint Pain: ಗಂಟು ನೋವಿನಿಂದ ಒದ್ದಾಡುತ್ತೀರಾ?; ಸರಳ ಮನೆಮದ್ದುಗಳು ಇಲ್ಲಿವೆ

ಹೊರಗೆ 15 ನಿಮಿಷಗಳ ವೇಗದ ನಡಿಗೆಯು ಚಾಕೊಲೇಟ್ ಮತ್ತು ಇತರ ಸಿಹಿ ಆಹಾರಗಳಿಗಾಗಿ ನಿಮ್ಮ ಹಾತೊರೆಯುವಿಕೆಯನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ. ಅಧ್ಯಯನಗಳ ಪ್ರಕಾರ, ವಾಕಿಂಗ್ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ಇದು ನಿಮ್ಮನ್ನು ಹೆಚ್ಚು ತಿನ್ನುವಂತೆ ಮಾಡುವ ಹಾರ್ಮೋನುಗಳನ್ನು ಬಿಡುಗಡೆ ಮಾಡುತ್ತದೆ. ವಾಕಿಂಗ್ ಕಡುಬಯಕೆಗಳನ್ನು ಕಡಿಮೆ ಮಾಡುತ್ತದೆ ಮತ್ತು ವಿವಿಧ ಸಕ್ಕರೆ ತಿಂಡಿಗಳ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Sat, 17 February 24

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್