Walking Benefits: ರಾತ್ರಿ ಊಟದ ಬಳಿಕ ವಾಕಿಂಗ್​ ಮಾಡುವುದರಿಂದ ಆಗುವ 6 ಪ್ರಯೋಜನಗಳಿವು

ರಾತ್ರಿಯ ಊಟದ ನಂತರ ನಡೆಯುವುದರಿಂದ ದೇಹದ ಚಯಾಪಚಯ ಕ್ರಿಯೆ ಸುಧಾರಿಸುತ್ತದೆ. ಇದು ಹೆಚ್ಚಿನ ಕ್ಯಾಲೊರಿಗಳನ್ನು ಬರ್ನ್ ಮಾಡಲು ಸಹಾಯ ಮಾಡುತ್ತದೆ.

Walking Benefits: ರಾತ್ರಿ ಊಟದ ಬಳಿಕ ವಾಕಿಂಗ್​ ಮಾಡುವುದರಿಂದ ಆಗುವ 6 ಪ್ರಯೋಜನಗಳಿವು
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Feb 08, 2023 | 7:17 PM

ದಿನವಿಡೀ ಆಫೀಸ್ ಕೆಲಸ, ಮನೆ ಕೆಲಸವಿದ್ದಾಗ ನಿಮ್ಮ ದೇಹದ ಆರೋಗ್ಯ ಮತ್ತು ಮಾನಸಿಕ ಆರೋಗ್ಯದ (Mental Health) ಬಗ್ಗೆ ಗಮನಹರಿಸುವುದು ಕಷ್ಟ. ಆದರೆ, ನಿಮ್ಮ ಫಿಟ್‌ನೆಸ್ (Fitness) ಮತ್ತು ಆರೋಗ್ಯದ ಬಗ್ಗೆ ಗಮನಹರಿಸಲು ಪ್ರತಿದಿನ ಸ್ವಲ್ಪವಾದರೂ ಸಮಯವನ್ನು ತೆಗೆದುಕೊಳ್ಳುವುದು ಅತ್ಯಗತ್ಯ. ಕೆಲಸ ಮಾಡಲು ಅಥವಾ ಕೆಲವು ದೈಹಿಕ ವ್ಯಾಯಾಮ ಮಾಡಲು ದಿನದಲ್ಲಿ ಸಮಯವನ್ನು ತೆಗೆದುಕೊಳ್ಳುವುದು ಕಷ್ಟವಾದರೆ ನೀವು ಆ್ಯಕ್ಟಿವ್ ಆಗಿರಲು ಸರಳವಾದ ಮಾರ್ಗವಿದೆ. ರಾತ್ರಿ ಊಟದ ನಂತರ ಬಿರುಸಾಗಿ ವಾಕಿಂಗ್ (Walking) ಮಾಡುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಮಲಬದ್ಧತೆಯನ್ನು ಕಡಿಮೆ ಮಾಡಲು ಸಹಾಯ ಮಾಡುವ ಹೆಚ್ಚಿನ ಗ್ಯಾಸ್ಟ್ರಿಕ್ ಕಿಣ್ವಗಳನ್ನು ಉತ್ಪಾದಿಸಲು ವಾಕಿಂಗ್ ನಿಮ್ಮ ದೇಹಕ್ಕೆ ಸಹಾಯ ಮಾಡುತ್ತದೆ.

ಚಯಾಪಚಯವನ್ನು ಹೆಚ್ಚಿಸುತ್ತದೆ: ರಾತ್ರಿಯ ಊಟದ ನಂತರ ನಡೆಯುವುದರಿಂದ ದೇಹದ ಚಯಾಪಚಯ ಕ್ರಿಯೆ ಸುಧಾರಿಸುತ್ತದೆ. ಇದು ಹೆಚ್ಚಿನ ಕ್ಯಾಲೊರಿಗಳನ್ನು ಬರ್ನ್ ಮಾಡಲು ಸಹಾಯ ಮಾಡುತ್ತದೆ. ಆದರೆ ಆಹಾರ ಸೇವಿಸಿದ ಕೂಡಲೇ ವಿಶ್ರಾಂತಿ ತೆಗೆದುಕೊಳ್ಳುವುದು ಅಥವಾ ಕುಳಿತುಕೊಳ್ಳುವುದರಿಂದ ದೇಹದ ತೂಕ ಇನ್ನಷ್ಟು ಹೆಚ್ಚಾಗುತ್ತದೆ.

ಇದನ್ನೂ ಓದಿ: Health Tips: ಮತ್ತಷ್ಟು ಕ್ಯಾಲೊರಿ ಬರ್ನ್ ಮಾಡಬೇಕಾ?; ವಾಕಿಂಗ್​ನಲ್ಲಿ ಈ ಬದಲಾವಣೆ ಮಾಡಿಕೊಳ್ಳಿ

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ರಾತ್ರಿ ಊಟದ ನಂತರ ನೀವು ನಿಯಮಿತವಾಗಿ ವಾಕ್ ಮಾಡಿದರೆ, ಇದು ನಿಮ್ಮ ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಇದು ದೇಹದಲ್ಲಿನ ವಿಷವನ್ನು ಹೊರಹಾಕಲು ಮತ್ತು ನಿಮ್ಮ ಅಂಗಗಳ ಸ್ಥಿತಿಯನ್ನು ಸುಧಾರಿಸಲು ಮತ್ತು ನಿಮ್ಮ ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕಡುಬಯಕೆಗಳನ್ನು ಕಡಿಮೆ ಮಾಡುತ್ತದೆ: ಮಧ್ಯರಾತ್ರಿಯ ವೇಳೆ ಏನಾದರೂ ತಿನ್ನಬೇಕು ಎಂದು ಹಲವರಿಗೆ ಬಯಕೆಯಾಗುತ್ತದೆ. ಆದರೆ, ರಾತ್ರಿ ನಿಯಮಿತ ವಾಕಿಂಗ್ ಮಾಡುವುದರಿಂದ ಇದನ್ನು ಕಡಿಮೆ ಮಾಡಬಹುದು. ಹಲವಾರು ವರದಿಗಳ ಪ್ರಕಾರ, 15 ನಿಮಿಷಗಳ ಕಾಲ ಚುರುಕಾಗಿ ನಡೆಯುವುದರಿಂದ ಕಡುಬಯಕೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Winter Tips: ಚಳಿಗಾಲದಲ್ಲಿ ಬೆಳಗ್ಗೆ ವಾಕಿಂಗ್ ಮಾಡುವುದರಿಂದ ಆಗುವ ಐದು ಪ್ರಯೋಜನಗಳು

ನಿದ್ರೆಯನ್ನು ಸುಧಾರಿಸುತ್ತದೆ: ರಾತ್ರಿಯಲ್ಲಿ ನಿದ್ರಿಸಲು ನಿಮಗೆ ತೊಂದರೆ ಇದ್ದರೆ, ಊಟದ ನಂತರ ಸ್ವಲ್ಪ ನಡೆಯಲು ಪ್ರಯತ್ನಿಸಿ. ಇದು ಒತ್ತಡವನ್ನು ಕಡಿಮೆ ಮಾಡಲು ಮತ್ತು ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ.

ರಕ್ತದ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ: ಭೋಜನದ ನಂತರ ನಡೆಯುವುದರಿಂದ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯವಾಗುತ್ತದೆ. ಏಕೆಂದರೆ ದೈಹಿಕ ವ್ಯಾಯಾಮದ ಸಮಯದಲ್ಲಿ ದೇಹವು ನಿಮ್ಮ ರಕ್ತದಲ್ಲಿನ ಕೆಲವು ಗ್ಲೂಕೋಸ್ ಅನ್ನು ಬಳಸಿಕೊಳ್ಳುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ