AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Walking Benefits: ಪ್ರತಿದಿನ ಎಷ್ಟು ಹೊತ್ತು ನಡೆಯಬೇಕು? ಸಂಶೋಧನೆ ಹೇಳುವುದೇನು?

ತೂಕ ಇಳಿಸಿಕೊಳ್ಳಲು ಜಿಮ್‌ಗೆ ಹೋಗಲು ಸಮಯವಿಲ್ಲದಿದ್ದರೆ, ನಿಯಮಿತವಾಗಿ ನಡೆಯಿರಿ. ನೀವು ತೂಕವನ್ನು ಕಳೆದುಕೊಳ್ಳುತ್ತೀರಿ. ಆದರೆ ಎಷ್ಟು ನಡೆಯಬೇಕು, ಎಷ್ಟು ದೂರ ನಡೆಯಬೇಕು ಎಂದು ತಿಳಿಯರಿ.

Walking Benefits: ಪ್ರತಿದಿನ ಎಷ್ಟು ಹೊತ್ತು ನಡೆಯಬೇಕು? ಸಂಶೋಧನೆ ಹೇಳುವುದೇನು?
Walking (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 24, 2022 | 7:00 AM

Share

“ಆರೋಗ್ಯವೇ ಭಾಗ್ಯ” ಆ ಭಾಗ್ಯ ಪಡೆಯುವುದು ಹೇಗೆ? ಮತ್ತು ಏನು ಮಾಡಬೇಕು ಎಂದು ಯೋಚಿಸುತ್ತೀದ್ದೀರಾ. ನಾವು ಹೇಳುತ್ತೇವೆ ಕೇಳಿ. ಕೆಲವರು ಆರೋಗ್ಯವಾಗಿರಲು ಬೆಳಿಗ್ಗೆ ವಾಕಿಂಗ್, ಓಟ ಮತ್ತು ಯೋಗ ಮಾಡಲು ಯೋಚಿಸುತ್ತಾರೆ. ಆದರೆ ಇವತ್ತಲ್ಲ ಮರುದಿನ ಎಂದುಕೊಂಡು ಮತ್ತೆ ನಿದ್ದೆ ಮಾಡುತ್ತಾರೆ. ಆದರೆ ನಾವು ಆರೋಗ್ಯವಾಗಿರಬೇಕಾದರೆ ಪೌಷ್ಠಿಕ ಆಹಾರ ಮತ್ತು ವ್ಯಾಯಾಮವನ್ನು ಪ್ರತಿನಿತ್ಯ ತೆಗೆದುಕೊಳ್ಳಬೇಕು. ಆದರೆ ವ್ಯಾಯಾಮ ತುಂಬಾ ಸುಲಭವಾಗಿದ್ದು, ಏಕೆಂದರೆ ವೆಚ್ಚವೇ ಇಲ್ಲ. ಇದರಲ್ಲಿ ಜಿಮ್​ಗಿಂತ ವಾಕಿಂಗ್ ಉತ್ತಮ ಆಯ್ಕೆ ಎಂದು ಹೇಳಬಹುದು. ದೈನಂದಿನ ನಡಿಗೆಯು ಅನೇಕ ಪ್ರಯೋಜನಗಳನ್ನು ಹೊಂದಿದೆ. ಜನರು ತಮ್ಮ ತೂಕವನ್ನು ನಿಯಂತ್ರಿಸಲು ವಿವಿಧ ವಿಧಾನಗಳನ್ನು ಅನುಸರಿಸುತ್ತಾರೆ. ಆಹಾರ ಕ್ರಮವನ್ನು ನಿಯಂತ್ರಿಸುವುದರಿಂದ ಮತ್ತು ಗಂಟೆಗಟ್ಟಲೆ ಜಿಮ್‌ನಲ್ಲಿ ವ್ಯಾಯಾಮ ಮಾಡುವುದರಿಂದ ನೀವು ತೂಕವನ್ನು ಕಳೆದುಕೊಳ್ಳುವುದಿಲ್ಲ.

ಆದರೆ ಕೆಲವು ದಿನಗಳ ಕಾಲ ಜಿಮ್‌ನಲ್ಲಿ ವರ್ಕೌಟ್ ಮಾಡಿದ ನಂತರ ಜಿಮ್​ನ್ನು ಸಂಪೂರ್ಣವಾಗಿ ನಿಲ್ಲಿಸುತ್ತಾರೆ. ಆದರೆ ಇತ್ತೀಚಿನ ಸಂಶೋಧನೆಯ ಪ್ರಕಾರ ತೂಕ ಇಳಿಸಿಕೊಳ್ಳಲು ಜಿಮ್‌ನಲ್ಲಿ ವ್ಯಾಯಾಮ ಮಾಡುವ ಅಗತ್ಯವಿಲ್ಲ. ನಿಯಮಿತವಾಗಿ ವಾಕಿಂಗ್ ಮಾಡುವ ಮೂಲಕ ನಿಮ್ಮ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.

ವಾಕಿಂಗ್ ಮಾಡುವುದರಿಂದ ತೂಕ ಹೇಗೆ ಕಡಿಮೆ ಆಗುತ್ತದೆ?

ನಿಯಮಿತವಾದ ನಡಿಗೆ ಕೂಡ ನಿಮ್ಮ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ. ನಿಯಮಿತ ವಾಕಿಂಗ್ ದೇಹಕ್ಕೆ ತುಂಬಾ ಪ್ರಯೋಜನಕಾರಿ. ಜರ್ನಲ್ ಆಫ್ ಎಕ್ಸರ್ಸೈಸ್ ನ್ಯೂಟ್ರಿಷನ್ ಮತ್ತು ಬಯೋಕೆಮಿಸ್ಟ್ರಿಯಲ್ಲಿನ ಅಧ್ಯಯನದ ಪ್ರಕಾರ, ವಾಕಿಂಗ್ ದೇಹದ ಮೇಲೆ ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ನಿಯಮಿತ ನಡಿಗೆಯು ಹೊಟ್ಟೆ ಮತ್ತು ಸೊಂಟದ ಕೊಬ್ಬನ್ನು ಕಡಿಮೆ ಮಾಡುತ್ತದೆ. ಅವರ ಅಧ್ಯಯನದ ಪ್ರಕಾರ, ಮಹಿಳೆಯರು ವಾರದಲ್ಲಿ 3 ದಿನಗಳು 50-70 ನಿಮಿಷಗಳು ಒಟ್ಟು 12 ವಾರಗಳವರೆಗೆ ನಡೆಯಬೇಕು. ಈ ಅಧ್ಯಯನದ ನಂತರದ ಫಲಿತಾಂಶಗಳು ಸರಾಸರಿ 1.5% ದೇಹದ ಕೊಬ್ಬು ಮತ್ತು ಸೊಂಟದ ಸುತ್ತ 1.1 ಇಂಚುಗಳಷ್ಟು ಕೊಬ್ಬು ಕಂಡುಬಂದಿದೆ.

ನಡಿಗೆಯ ಪ್ರಯೋಜನಗಳು:

ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿರುವ ಲಾರೆನ್ಸ್ ಬರ್ಕ್ಲಿ ನ್ಯಾಷನಲ್ ಲ್ಯಾಬೊರೇಟರಿ, ಲೈಫ್ ಸೈನ್ಸ್ ವಿಭಾಗದಲ್ಲಿ ನಡೆಸಿದ ಹೊಸ ಅಧ್ಯಯನದ ಪ್ರಕಾರ, ವೇಗದ ನಡಿಗೆಯು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ನಿಮಗೆ ಸಹಾಯ ಮಾಡುತ್ತದೆ. ನಡಿಗೆಯಿಂದ ಹೃದಯ ಆರೋಗ್ಯಕರವಾಗಿರುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ಸಹ ನಿಯಂತ್ರಿಸುತ್ತದೆ. ಬೊಜ್ಜು, ಹೃದಯ ಮತ್ತು ಮಧುಮೇಹ ಕಾಯಿಲೆಗಳನ್ನು ನಿಯಂತ್ರಿಸುವುದು ಅವಶ್ಯಕ. ಇಲ್ಲವಾದರೆ ಈ ರೋಗಗಳು ಬರುವ ಅಪಾಯ ಹೆಚ್ಚು. ಆದರೆ ನಡೆಯುವವರು ದಿನಕ್ಕೆ ಕನಿಷ್ಠ ಒಂದು ಗಂಟೆ ನಡೆಯಲು ಮೊದಲೇ ಯೋಜನೆ ಹಾಕಿಕೊಳ್ಳಬೇಕು. ಆಗ ಮಾತ್ರ ವಾಕಿಂಗ್‌ನಿಂದ ಆರೋಗ್ಯ ಪ್ರಯೋಜನಗಳು ಬರುತ್ತವೆ. ಒಂದೇ ಬಾರಿಗೆ ಒಂದು ಗಂಟೆ ನಡೆಯಲು ಸಾಧ್ಯವಾಗದಿದ್ದರೆ, ಬೆಳಿಗ್ಗೆ ಮತ್ತು ಸಂಜೆ 30 ನಿಮಿಷಗಳ ಕಾಲ ಮಾಡಬಹುದು. ಈ ರೀತಿಯಾಗಿ, ವಾಕಿಂಗ್​ನ್ನು ಸುಲಭವಾಗಿ ಪೂರ್ಣಗೊಳಿಸಬಹುದು.

(ಗಮನಿಸಿ: ವಿಷಯಗಳು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ. ಇದನ್ನು ಆರೋಗ್ಯ ವೃತ್ತಿಪರರ ಸಲಹೆಯ ಮೇರೆಗೆ ಒದಗಿಸಲಾಗಿದೆ. ನಿಮಗೆ ಯಾವುದೇ ಸಂದೇಹಗಳಿದ್ದರೆ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸಿ.)

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!