AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಡ್ನಿ ಆರೋಗ್ಯವಾಗಿ ಇರಬೇಕು ಅಂದ್ರೆ ಆರೋಗ್ಯ ತಜ್ಞರು ಹೇಳಿದ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಲೇಬೇಕು!

ಇತ್ತೀಚಿನ ಕೆಲವು ವರ್ಷಗಳಲ್ಲಿ ಕಿಡ್ನಿ ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತಿದೆ. ಹಾಗಾಗಿ ಜನರಿಗೆ ಕಿಡ್ನಿ ಸಂಬಂಧಿತ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸುವುದು ಅನಿವಾರ್ಯವಾಗಿದೆ. ವೈದ್ಯರು ಹೇಳುವಂತೆ, ದಿನನಿತ್ಯದ ಕೆಲವು ಸರಳ ಅಭ್ಯಾಸಗಳನ್ನು ಪಾಲಿಸಿದರೆ ಕಿಡ್ನಿಯನ್ನು ಆರೋಗ್ಯವಾಗಿಡಬಹುದು. ಈ ಬಗ್ಗೆ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಡಾ. ಹಿಮಾಂಶು ವರ್ಮಾ ಮಾತನಾಡಿದ್ದು ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ. ಮಿಸ್ ಮಾಡ್ದೆ ಈ ಸಲಹೆಗಳನ್ನು ಪಾಲಿಸಿ ಕಿಡ್ನಿಯ ಆರೋಗ್ಯವನ್ನು ಕಾಪಾಡಿಕೊಳ್ಳಿ.

ಕಿಡ್ನಿ ಆರೋಗ್ಯವಾಗಿ ಇರಬೇಕು ಅಂದ್ರೆ ಆರೋಗ್ಯ ತಜ್ಞರು ಹೇಳಿದ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಲೇಬೇಕು!
Daily Habits For Healthy KidneysImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Mar 12, 2026 | 8:37 PM

Share

ಇತ್ತೀಚಿನ ಕೆಲವು ವರ್ಷಗಳಲ್ಲಿ ಕಿಡ್ನಿ (Kidney) ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತಿದೆ. ಅಸ್ವಸ್ಥ ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿ ಮಾಡಿಕೊಂಡ ಅನೇಕ ರೀತಿಯ ಬದಲಾವಣೆಗಳು ಇಂತಹ ಸಮಸ್ಯೆಗಳ ಹೆಚ್ಚಳಕ್ಕೆ ಕಾರಣಗಳಾಗಿವೆ. ಆದರೆ ಕೆಲ ಆರೋಗ್ಯಕರ ಅಭ್ಯಾಸಗಳನ್ನು ಅನುಸರಿಸಿದರೆ ಕಿಡ್ನಿಯ ಆರೋಗ್ಯವನ್ನು ಸುಲಭವಾಗಿ ಕಾಪಾಡಿಕೊಳ್ಳಬಹುದು. ಈ ಬಗ್ಗೆ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಡಾ. ಹಿಮಾಂಶು ವರ್ಮಾ ಮಾತನಾಡಿದ್ದು ಕಿಡ್ನಿ ಆರೋಗ್ಯವಾಗಿರಲು ಯಾವ ರೀತಿಯ ಸಲಹೆಗಳನ್ನು ಪಾಲಿಸಬೇಕು, ಇದರಿಂದ ಕಿಡ್ನಿ ಆರೋಗ್ಯ ಹೇಗೆ ಸುಧಾರಿಸುತ್ತದೆ ಎಂಬುದನ್ನು ತಿಳಿಸಿಕೊಟ್ಟಿದ್ದಾರೆ. ಈ ಸಲಹೆಗಳನ್ನು ತಪ್ಪದೆ ಪಾಲನೆ ಮಾಡುವುದರಿಂದ ಕಿಡ್ನಿ ಆರೋಗ್ಯ ಹಾಳಾಗುವುದನ್ನು ತಡೆಯಬಹುದಾಗಿದೆ.

ಕಿಡ್ನಿಯನ್ನು ಆರೋಗ್ಯವಾಗಿಡಲು ಸಲಹೆಗಳು;

ನೀರು ಕುಡಿಯಿರಿ: ಪ್ರತಿ ದಿನ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಕಿಡ್ನಿ ಆರೋಗ್ಯಕ್ಕೆ ಅಗತ್ಯ. ಇದರಿಂದ ದೇಹದಲ್ಲಿನ ವಿಷಪದಾರ್ಥಗಳು ಹೊರಹೋಗುತ್ತವೆ ಮತ್ತು ಕಿಡ್ನಿಯ ಮೇಲಿನ ಒತ್ತಡ ಕಡಿಮೆಯಾಗುತ್ತದೆ.

ಉಪ್ಪಿನ ಸೇವನೆಯನ್ನು ನಿಯಂತ್ರಿಸಿ: ಹೆಚ್ಚು ಉಪ್ಪು ಸೇವಿಸುವುದರಿಂದ ರಕ್ತದೊತ್ತಡ ಹೆಚ್ಚಾಗಬಹುದು, ಇದು ಕಿಡ್ನಿಗೆ ಹಾನಿಕಾರಕ. ಆದ್ದರಿಂದ ದಿನನಿತ್ಯ ಸೇವನೆ ಮಾಡುವ ಉಪ್ಪಿನ ಪ್ರಮಾಣವನ್ನು ನಿಯಂತ್ರಿಸುವುದು ಅಗತ್ಯ.

ರಕ್ತದೊತ್ತಡ ಮತ್ತು ಶುಗರ್ ನಿಯಂತ್ರಣದಲ್ಲಿರಲಿ: ಯಾರಾದರೂ ಹೈ ಬಿಪಿ ಅಥವಾ ಮಧುಮೇಹದಿಂದ ಬಳಲುತ್ತಿದ್ದರೆ ಅವುಗಳನ್ನು ನಿಯಂತ್ರಣದಲ್ಲಿಡುವುದು ಅತ್ಯಂತ ಮುಖ್ಯ. ಇಲ್ಲವಾದರೆ ಕಿಡ್ನಿಯ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರುತ್ತದೆ.

ನಿಯಮಿತ ವ್ಯಾಯಾಮ ಮಾಡಿ: ಪ್ರತಿ ದಿನ ಕನಿಷ್ಠ 30 ನಿಮಿಷ ವ್ಯಾಯಾಮ ಮಾಡಿದರೆ ದೇಹ ಫಿಟ್ ಆಗಿರುತ್ತದೆ ಮತ್ತು ಕಿಡ್ನಿ ಕಾಯಿಲೆಗಳ ಅಪಾಯ ಕಡಿಮೆಯಾಗಬಹುದು.

ಇದನ್ನೂ ಓದಿ: ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ? ಯಾವಾಗ ವೈದ್ಯರ ಸಲಹೆ ಪಡೆಯಬೇಕು

ವೈದ್ಯರ ಸಲಹೆ ಇಲ್ಲದೆ ಪೇನ್‌ಕಿಲರ್ ಬಳಸದಿರಿ: ಕೆಲವು ಪೇನ್‌ಕಿಲರ್ ಔಷಧಿಗಳನ್ನು ದೀರ್ಘಕಾಲ ಬಳಸುವುದರಿಂದ ಕಿಡ್ನಿಗೆ ಹಾನಿಯಾಗಬಹುದು. ಆದ್ದರಿಂದ ವೈದ್ಯರ ಸಲಹೆ ಇಲ್ಲದೆ ಔಷಧಿ ತೆಗೆದುಕೊಳ್ಳುವುದನ್ನು ತಪ್ಪಿಸಬೇಕು.

35 ವರ್ಷಗಳ ನಂತರ ಪೂರ್ಣ ಆರೋಗ್ಯ ತಪಾಸಣೆ: ಡಾ. ಹಿಮಾಂಶು ಹೇಳುವ ಪ್ರಕಾರ 35 ವರ್ಷಗಳ ನಂತರ ನಿಯಮಿತವಾಗಿ ಫುಲ್ ಬಾಡಿ ಚೆಕ್‌ಅಪ್ ಮಾಡಿಸಿಕೊಳ್ಳುವುದು ಅಗತ್ಯ. ಇದರಿಂದ ಯಾವುದೇ ಕಾಯಿಲೆಯನ್ನು ಮೊದಲ ಹಂತದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!