Warm Water: ಬಿಸಿ ನೀರು ಕುಡಿಯುವುದರಿಂದ ತೂಕ ಕಡಿಮೆಯಾಗುತ್ತಾ? ಇಲ್ಲಿದೆ ಅಸಲಿ ಮಾಹಿತಿ

ವ್ಯಾಯಾಮ ಮತ್ತು ಜಿಮ್‌ಗೆ ಹೋಗುವುದು ಕೂಡ ಇತ್ತೀಚಿನ ದಿನಗಳಲ್ಲಿ ಕೊಬ್ಬನ್ನು ಕಡಿಮೆ ಮಾಡಲು ಒಂದು ವಿಧಾನವಾಗಿದೆ. ಆದರೆ ತೂಕವನ್ನು ಕಳೆದುಕೊಳ್ಳುವ ಅತ್ಯಂತ ಜನಪ್ರಿಯ ವಿಧಾನವೆಂದರೆ ಬಿಸಿ ನೀರನ್ನು ಕುಡಿಯುವುದು.

Warm Water: ಬಿಸಿ ನೀರು ಕುಡಿಯುವುದರಿಂದ ತೂಕ ಕಡಿಮೆಯಾಗುತ್ತಾ? ಇಲ್ಲಿದೆ ಅಸಲಿ ಮಾಹಿತಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Sep 06, 2022 | 7:00 AM

ತೂಕವನ್ನು ಕಡಿಮೆ ಮಾಡಲು ನಾವುಗಳು ದಿನನಿತ್ಯ ಹಲವು ಸರ್ಕಸ್​ ಮಾಡುತ್ತೇವೆ. ಕೆಲವರು ತೂಕ ಇಳಿಸಿಕೊಳ್ಳಲು ತಿನ್ನುವುದನ್ನು ನಿಲ್ಲಿಸಬಿಡುತ್ತಾರೆ. ಇತರರು ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳುತ್ತಾರೆ. ವ್ಯಾಯಾಮ ಮತ್ತು ಜಿಮ್‌ಗೆ ಹೋಗುವುದು ಕೂಡ ಇತ್ತೀಚಿನ ದಿನಗಳಲ್ಲಿ ಕೊಬ್ಬನ್ನು ಕಡಿಮೆ ಮಾಡಲು ಒಂದು ವಿಧಾನವಾಗಿದೆ. ಆದರೆ ತೂಕವನ್ನು ಕಳೆದುಕೊಳ್ಳುವ ಅತ್ಯಂತ ಜನಪ್ರಿಯ ವಿಧಾನವೆಂದರೆ ಬಿಸಿ ನೀರನ್ನು ಕುಡಿಯುವುದು. ಸಾಮಾನ್ಯವಾಗಿ ಮಹಿಳೆಯರು ತೂಕ ಇಳಿಸಿಕೊಳ್ಳಲು ಬಿಸಿ ನೀರು ಕುಡಿಯುತ್ತಾರೆ. ಆದರೆ ತೂಕ ನಷ್ಟಕ್ಕೆ ಈ ವಿಧಾನವು ಎಷ್ಟು ಪ್ರಯೋಜನಕಾರಿ ಎಂದು ಇಂದು ನಾವು ತಿಳಿಯೋಣ.

ಬಿಸಿ ನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು?

ನೀರು ಕುಡಿಯುವುದು ಯಾವಾಗಲೂ ಆರೋಗ್ಯಕ್ಕೆ ಒಳ್ಳೆಯದು. ಬಿಸಿ ನೀರು ನಿಮ್ಮ ದೇಹವನ್ನು ನಿರ್ವಿಷಗೊಳಿಸುತ್ತದೆ. ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ. ಬಿಸಿ ನೀರು ಕುಡಿಯುವುದರಿಂದ ಹಸಿವನ್ನು ಕಡಿಮೆಯಾಗುತ್ತದೆ. ಆಹಾರ ಸೇವಿಸಿದ ನಂತರ ಬಿಸಿ ನೀರು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುತ್ತದೆ. ಮಲಬದ್ಧತೆ, ಆಮ್ಲೀಯತೆ ಮತ್ತು ಅಜೀರ್ಣದಂತಹ ಜೀರ್ಣಕಾರಿ ಸಮಸ್ಯೆಗಳು ದೂರವಾಗುತ್ತವೆ.

ಇದನ್ನೂ ಓದಿ: ಈ ಆಹಾರ ಪದಾರ್ಥಗಳನ್ನು ಮತ್ತೆ ಬಿಸಿ ಮಾಡುವುದು ಅಪಾಯಕಾರಿ, ಆರೋಗ್ಯಕ್ಕೆ ಗಂಭೀರ ಹಾನಿಯಾಗಬಹುದು

ಯಾವಾಗ ಬಿಸಿ ನೀರು ಕುಡಿಯಬೇಕು?

ಖಾಲಿ ಹೊಟ್ಟೆಯಲ್ಲಿ ಅಥವಾ ಊಟದ ನಂತರ ಬಿಸಿ ನೀರು ಕುಡಿಯುವುದು ತೂಕ ನಷ್ಟಕ್ಕೆ ಪ್ರಯೋಜನಕಾರಿಯಾಗಿದೆ. ಪ್ರತಿದಿನ ಬೆಳಗ್ಗೆ ಬಿಸಿ ನೀರು ಕುಡಿಯುವುದರಿಂದ ಕೊಬ್ಬು ಕರಗುತ್ತದೆ. ಊಟದ ನಂತರ ಬಿಸಿ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಹೊಟ್ಟೆಯ ಕೊಬ್ಬು ಕಡಿಮೆಯಾಗುತ್ತದೆ.

ಹೆಚ್ಚು ಹೆಚ್ಚು ಬಿಸಿ ನೀರು ಕುಡಿಯಬಾರದು:

ಬಿಸಿ ನೀರು ತೂಕವನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿದೆ. ಹಾಗಂತ ಹೆಚ್ಚು ಬಿಸಿ ನೀರು ಕುಡಿದರೆ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ ಎನ್ನುತ್ತಾರೆ ವೈದ್ಯಕೀಯ ತಜ್ಞರು.

1. ಹೆಚ್ಚು ಬಿಸಿ ನೀರು ಕುಡಿಯುವುದರಿಂದ ರಕ್ತನಾಳಗಳಲ್ಲಿ ಊತ ಉಂಟಾಗುತ್ತದೆ. ಇದರಿಂದಾಗಿ ಕೆಲವೊಮ್ಮೆ ಮಿದುಳಿನ ನರಗಳಿಗೂ ತೊಂದರೆಯಾಗಿ ತಲೆನೋವಿನ ಸಮಸ್ಯೆ ಶುರುವಾಗುತ್ತದೆ.

2. ಬಿಸಿ ನೀರು ಕುಡಿಯುವುದರಿಂದ ದೇಹವು ನಿರ್ವಿಷಗೊಳ್ಳುತ್ತದೆ. ಆದರೆ ಹೆಚ್ಚು ಬಿಸಿ ನೀರು ಕುಡಿಯುವುದರಿಂದ ಕಿಡ್ನಿ ಮೇಲೆ ಒತ್ತಡ ಬೀಳುತ್ತದೆ.

3. ಬಿಸಿ ನೀರು ಕುಡಿಯುವುದರಿಂದ ರಕ್ತನಾಳಗಳಲ್ಲಿ ರಕ್ತ ಸಂಚಾರ ಹೆಚ್ಚುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ