ರಾತ್ರಿ ಮಲಗುವ ಮೊದಲು ಈ ರೀತಿ ಮಾಡುವ ಅಭ್ಯಾಸ ನಿಮಗಿದ್ದರೆ ಮೆದುಳಿಗೆ ಹಾನಿಯಾಗುತ್ತೆ ಎಚ್ಚರ

ನಮ್ಮಲ್ಲಿ ಹೆಚ್ಚಿನವರು ರಾತ್ರಿ ಮಲಗುವ ಮೊದಲು ರೀಲ್ಗಳು ಮತ್ತು ಕಿರು ವೀಡಿಯೊಗಳನ್ನು ನೋಡುವ ಅಭ್ಯಾಸವನ್ನು ಹೊಂದಿದ್ದಾರೆ. ಪ್ರತಿನಿತ್ಯ ನೀವು ಮಾಡುವ ಈ ಕೆಲಸ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದಕ್ಕೆ ಪೂರಕವಾಗಿ ಈ ವಿಷಯಕ್ಕೆ ಸಂಬಂಧಿಸಿದಂತೆ ಚೀನಾದ ಸಂಶೋಧಕರು ಒಂದು ಅಧ್ಯಯನವನ್ನು ನಡೆಸಿದ್ದು, ಈ ರೀತಿಯ ಅಭ್ಯಾಸವು ಬಿಪಿ ಸಮಸ್ಯೆಗಳನ್ನು ಉಂಟುಮಾಡಬಹುದು ಎಂಬುದನ್ನು ಕಂಡು ಹಿಡಿದಿದೆ.

ರಾತ್ರಿ ಮಲಗುವ ಮೊದಲು ಈ ರೀತಿ ಮಾಡುವ ಅಭ್ಯಾಸ ನಿಮಗಿದ್ದರೆ ಮೆದುಳಿಗೆ ಹಾನಿಯಾಗುತ್ತೆ ಎಚ್ಚರ
Watching Reels Before Sleep Affects
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Jan 18, 2025 | 3:43 PM

ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಎಲ್ಲಾ ವಯಸ್ಸಿನವರಲ್ಲಿಯೂ ಮೊಬೈಲ್ ಗೀಳು ಹುಟ್ಟಿಕೊಂಡಿದೆ. ಯಾವಾಗ ನೋಡಿದರೂ ಕೈಯಲ್ಲಿ ಮೊಬೈಲ್ ಇದ್ದೆ ಇರುತ್ತದೆ. ಇನ್ನು ರಾತ್ರಿ ಮಲಗುವ ಮೊದಲು ರೀಲ್ ಗಳನ್ನು ನೋಡದಿದ್ದರೆ ನಿದ್ರೆಯೇ ಬರುವುದಿಲ್ಲ. ಆದರೆ ಈ ರೀತಿಯ ಅಭ್ಯಾಸ ಎಷ್ಟು ಅಪಾಯಕಾರಿ ಎಂದು ನಿಮಗೆ ತಿಳಿದಿದೆಯೇ? ಸಾಮಾಜಿಕ ಮಾಧ್ಯಮದ ಪ್ರಭಾವವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ. ಆದರೆ ನಮ್ಮಲ್ಲಿ ಹೆಚ್ಚಿನವರು ರಾತ್ರಿ ಮಲಗುವ ಮೊದಲು ರೀಲ್ಗಳು ಮತ್ತು ಕಿರು ವೀಡಿಯೊಗಳನ್ನು ನೋಡುವ ಅಭ್ಯಾಸವನ್ನು ಹೊಂದಿದ್ದಾರೆ. ಪ್ರತಿನಿತ್ಯ ನೀವು ಮಾಡುವ ಈ ಕೆಲಸ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದಕ್ಕೆ ಪೂರಕವಾಗಿ ಈ ವಿಷಯಕ್ಕೆ ಸಂಬಂಧಿಸಿದಂತೆ ಚೀನಾದ ಸಂಶೋಧಕರು ಒಂದು ಅಧ್ಯಯನವನ್ನು ನಡೆಸಿದ್ದು, ಈ ರೀತಿಯ ಅಭ್ಯಾಸವು ಬಿಪಿ ಸಮಸ್ಯೆಗಳನ್ನು ಉಂಟುಮಾಡಬಹುದು ಎಂಬುದನ್ನು ಕಂಡು ಹಿಡಿದಿದೆ.

ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ಬಿಡುವು ಸಿಕ್ಕಾಗಲೆಲ್ಲಾ ಸಾಮಾಜಿಕ ಮಾಧ್ಯಮಗಳಲ್ಲಿ ನಾನಾ ರೀತಿಯ ರೀಲ್ ಗಳನ್ನು ನೋಡುತ್ತಾರೆ. ಈ ಅಭ್ಯಾಸವು ನಿಮ್ಮ ಸಮಯವನ್ನು ವ್ಯರ್ಥ ಮಾಡುವುದಲ್ಲದೆ, ಒತ್ತಡ, ನಿದ್ರಾಹೀನತೆ ಮತ್ತು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಜೊತೆಗೆ ಇದು ನಿಮ್ಮ ಮೆದುಳಿಗೂ ಹಾನಿ ಮಾಡಬಹುದು ಎಂದು ಸಂಶೋಧಕರು ಎಚ್ಚರಿಸಿದ್ದಾರೆ.

ಸಂಶೋಧನೆ ಹೇಳುವುದೇನು?

ಚೀನಾದ ಹೆಬೀ ವೈದ್ಯಕೀಯ ವಿಶ್ವವಿದ್ಯಾಲಯವು 4,318 ಜನರ ಮೇಲೆ ಒಂದು ಅಧ್ಯಯನ ನಡೆಸಿದ್ದು ಅವರು ಯಾವ ಸಮಯದಲ್ಲಿ ಹೆಚ್ಚಾಗಿ ರೀಲ್ಗಳನ್ನು ನೋಡುತ್ತಾರೆ ಎಂಬುದನ್ನು ಪರಿಶೀಲಿಸಿದ್ದು, ಇದರಲ್ಲಿ ಹೆಚ್ಚಿನವರು ರಾತ್ರಿ ರೀಲ್ಗಳನ್ನು ಹೆಚ್ಚಾಗಿ ವೀಕ್ಷಿಸುತ್ತಾರೆ ಎಂಬುದು ತಿಳಿದು ಬಂದಿದೆ. ಈ ರೀತಿಯ ಸ್ಮಾರ್ಟ್ಫೋನ್ ಬಳಕೆಯು ನರಮಂಡಲದ ಕಾರ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಸಂಶೋಧನೆ ತಿಳಿಸಿದೆ. ತಜ್ಞರು ಹೇಳುವ ಪ್ರಕಾರ, ರಾತ್ರಿಯಲ್ಲಿ ರೀಲ್ ಮತ್ತು ಕಿರು ವೀಡಿಯೊಗಳನ್ನು ವೀಕ್ಷಿಸಲು ಹೆಚ್ಚು ಸಮಯ ಕಳೆಯುವ ಜನರಿಗೆ ರಕ್ತದೊತ್ತಡ ಬರುವ ಅಪಾಯ ಹೆಚ್ಚು. ಈ ಅಭ್ಯಾಸವು ನರಮಂಡಲದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಮತ್ತು ಅನೇಕ ಅನಗತ್ಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ಸೌಂದರ್ಯ ದುಪ್ಪಟ್ಟಾಗಬೇಕಾದರೆ ಗುಲಾಬಿ ದಳಗಳನ್ನು ಈ ರೀತಿ ಬಳಸಿರಿ

ತಜ್ಞರು ನೀಡಿರುವ ಸಲಹೆಗಳೇನು?

ಈ ಅಭ್ಯಾಸವನ್ನು ಕಡಿಮೆ ಮಾಡುವುದು ಅತ್ಯಗತ್ಯ. ರಾತ್ರಿಯಲ್ಲಿ ರೀಲ್ ಗಳನ್ನು ನೋಡುವುದನ್ನು ಕಡಿಮೆ ಮಾಡುವುದರ ಹೊರತಾಗಿ, ತೂಕವನ್ನು ನಿಯಂತ್ರಣದಲ್ಲಿಡುವ ಮೂಲಕ, ಸಕ್ಕರೆ ಮಟ್ಟವನ್ನು ಹತೋಟಿಯಲ್ಲಿ ಇಟ್ಟುಕೊಂಡು ಜೊತೆಗೆ ಮಲಗುವ ಮೊದಲು ಶಾಂತ ಚಟುವಟಿಕೆಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ನೀವು ಬಿಪಿಯಂತಹ ಸಮಸ್ಯೆಗಳಿಂದ ದೂರವಿರಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ