AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಲಾಬಿ ಸೇಬು: ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ವಾರಕ್ಕೊಮ್ಮೆಯಾದರೂ ನೀರು ಸೇಬು ತಿನ್ನಲೇಬೇಕು

Water Apple or Rose Apple: ನೀರು ಸೇಬಿನಲ್ಲಿ ಫೈಬರ್ ಅಂಶ ಹೇರಳವಾಗಿದ್ದು ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ನಿತ್ಯವೂ ಈ ಹಣ್ಣನ್ನು ತಿನ್ನುವವರಿಗೆ ಗ್ಯಾಸ್, ಮಲಬದ್ಧತೆ, ಅಜೀರ್ಣ, ಆಸಿಡ್ ರಿಫ್ಲಕ್ಸ್, ಅಸಿಡಿಟಿಯಂತಹ ಸಮಸ್ಯೆಗಳು ಬರುವುದಿಲ್ಲ.

ಗುಲಾಬಿ ಸೇಬು: ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ವಾರಕ್ಕೊಮ್ಮೆಯಾದರೂ ನೀರು ಸೇಬು ತಿನ್ನಲೇಬೇಕು
ವಾರಕ್ಕೊಮ್ಮೆಯಾದರೂ ನೀರು ಸೇಬು ತಿನ್ನಲೇಬೇಕು!
ಸಾಧು ಶ್ರೀನಾಥ್​
|

Updated on: Oct 18, 2023 | 6:06 AM

Share

ನೀರು ಸೇಬು ತಿನ್ನುವುದರಿಂದ ಆರೋಗ್ಯ ಪ್ರಯೋಜನಗಳು: ವೈದ್ಯರು ಪ್ರತಿದಿನ ಸೇಬು ತಿನ್ನಲು ಹೇಳುತ್ತಾರೆ. ನಿತ್ಯವೂ ಸೇಬು ತಿಂದರೆ ವೈದ್ಯರ ಬಳಿ ಹೋಗುವ ಅಗತ್ಯವಿಲ್ಲ ಎನ್ನುತ್ತಾರೆ ತಜ್ಞರು. ಆದರೆ ನೀರು ಸೇಬು ಹೆಸರು ಕೇಳಿದ್ದೀರಾ? ಇದನ್ನು ಗುಲಾಬಿ ಸೇಬು ಎಂದೂ ಕರೆಯುತ್ತಾರೆ. ಇದು ಆಗ್ನೇಯ ಏಷ್ಯಾದ ಉಷ್ಣವಲಯದ ಹಣ್ಣು. ಈ ಹಣ್ಣನ್ನು ಸಿಜಿಜಿಯಂ ಅಕ್ವಿಯಂ ಎಂದು ಕರೆಯುತ್ತಾರೆ. ಇದು ತೆಳುವಾದ ಪೊರೆಯೊಂದಿಗೆ ಸಣ್ಣ ಹಣ್ಣು. ಅದರ ಬಣ್ಣ ಕೆಂಪು ಅಥವಾ ಹಸಿರು. ಇದರ ತಿರುಳು ಸಾಮಾನ್ಯವಾಗಿ ಬಿಳಿ ಅಥವಾ ಗುಲಾಬಿ ಬಣ್ಣವನ್ನು ಹೊಂದಿರುತ್ತದೆ. ರಸಭರಿತ, ಸ್ವಾದಿಷ್ಟ ಮತ್ತು ಸಿಹಿಯದ್ದಾಗಿದೆ ಈ ಹಣ್ಣು.

1. ವಿಟಮಿನ್‌ಗಳಲ್ಲಿ ಸಮೃದ್ಧವಾಗಿದೆ: ವಿಟಮಿನ್ ಸಿ ಮತ್ತು ವಿಟಮಿನ್ ಎ – ಈ ಹಣ್ಣಿನಲ್ಲಿ ಹೇರಣವಾಗಿರುತ್ತದೆ. ದೇಹದ ಒಟ್ಟಾರೆ ಆರೋಗ್ಯಕ್ಕೆ ಇದು ಬಹಳ ಮುಖ್ಯ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಚರ್ಮವನ್ನು ಆರೋಗ್ಯಕರವಾಗಿರಿಸುತ್ತದೆ. ಆದ್ದರಿಂದ ನಾವು ನಿಯಮಿತವಾಗಿ ನೀರು ಸೇಬು ಅಥವಾ ಗುಲಾಬಿ ಸೇಬು ತಿನ್ನಬೇಕು.

ಇದನ್ನೂ ಓದಿ: Success Story: ನಷ್ಟದಲ್ಲಿದ್ದ ರೈತ ‘ಕೈ ಕೆಸರಾದರೆ ಬಾಯಿ ಮೊಸರು’ ಅನ್ನೋ ಮಾತನ್ನು ಅಕ್ಷರಶಃ ಸತ್ಯ ಮಾಡಿದ್ದಾರೆ! ಏನು ಆತನ ಸಾಧನೆ? ನುಗ್ಗೆ ಬೀಜಕ್ಕೆ ಬಂತು ಭಾರೀ ಡಿಮ್ಯಾಂಡ್

2. ಜಲ ಸಂಚಯನ: ನೀರು ಸೇಬಿನಲ್ಲಿ ನೀರಿನ ಶೇಕಡಾವಾರು ಪ್ರಮಾಣ ಹೆಚ್ಚು. ಇದು ವಿಶೇಷವಾಗಿ ಬಿಸಿ ಅಥವಾ ಆರ್ದ್ರ ವಾತಾವರಣದಲ್ಲಿ ದೇಹವನ್ನು ಜಲೀಕರಣಗೊಳಿಸುವಲ್ಲಿ ಸಹಾಯ ಮಾಡುತ್ತದೆ. ನೀವು ಸಾಕಷ್ಟು ದೈಹಿಕ ಚಟುವಟಿಕೆಗಳನ್ನು ಮಾಡುತ್ತಿದ್ದರೆ ಈ ಹಣ್ಣು ನಿಮಗೆ ಉಪಯುಕ್ತವಾಗಿದೆ.

3. ಜೀರ್ಣಕ್ರಿಯೆಯಲ್ಲಿ ಸಹಾಯ: ನೀರು ಸೇಬಿನಲ್ಲಿ ಫೈಬರ್ ಅಂಶ ಹೇರಳವಾಗಿದ್ದು ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ನಿತ್ಯವೂ ಈ ಹಣ್ಣನ್ನು ತಿನ್ನುವವರಿಗೆ ಗ್ಯಾಸ್, ಮಲಬದ್ಧತೆ, ಅಜೀರ್ಣ, ಆಸಿಡ್ ರಿಫ್ಲಕ್ಸ್, ಅಸಿಡಿಟಿಯಂತಹ ಸಮಸ್ಯೆಗಳು ಬರುವುದಿಲ್ಲ.

4. ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ: ವಾಟರ್ ಆಪಲ್ ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಂ ಅನ್ನು ಹೊಂದಿರುತ್ತದೆ. ಇದು ರಕ್ತದೊತ್ತಡದ ಮಟ್ಟವನ್ನು ನಿಯಂತ್ರಿಸಲು ಮತ್ತು ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದಲ್ಲದೆ, ಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಹೃದಯರಕ್ತನಾಳದ ವ್ಯವಸ್ಥೆಯಲ್ಲಿ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ.

Also Read: ರಾತ್ರಿ ಮಲಗುವ ಮುನ್ನ ಈ ಹಸಿರು ಎಲೆಗಳನ್ನು ಬಳಸಿ, ಉತ್ತಮ ಆರೋಗ್ಯದ ಜೊತೆಗೆ ಕೂದಲಿನ ಸಮಸ್ಯೆಗೂ ಪರಿಹಾರವಿದೆ

5. ತೂಕ ನಷ್ಟ: ಆದಷ್ಟು ಬೇಗ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ವಾಟರ್ ಆಪಲ್ ಅತ್ಯುತ್ತಮ ಹಣ್ಣು. ಇದರಲ್ಲಿ ನೀರು ಮತ್ತು ನಾರಿನಂಶ ಹೇರಳವಾಗಿರುವುದರಿಂದ ಹೊಟ್ಟೆಯು ಹೆಚ್ಚು ಕಾಲ ತುಂಬಿರುತ್ತದೆ. ಹಾಗಾಗಿ ಈ ಹಣ್ಣು ಅತಿಯಾದ ಆಹಾರ ಸೇವನೆಯನ್ನು ತಡೆಯುತ್ತದೆ. ಈ ಕಾರಣದಿಂದಾಗಿ, ತೂಕವು ಕ್ರಮೇಣ ಕಡಿಮೆಯಾಗಲು ಪ್ರಾರಂಭಿಸುತ್ತದೆ.

ಹೆಚ್ಚಿನ ಜೀವನಶೈಲಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

(ಗಮನಿಸಿ: ಇದು ತಜ್ಞರಿಂದ ಸಂಗ್ರಹಿಸಿದ ಮಾಹಿತಿಯಾಗಿದೆ. ಆದಾಗ್ಯೂ ಈ ಸಲಹೆಗಳನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಉತ್ತಮ)

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ