AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿಯರಲ್ಲಿ ನೀರಿನ ಅಂಶ ಕಡಿಮೆಯಾದರೆ ಸಿ-ಸೆಕ್ಷನ್ ಹೆರಿಗೆಯ ಅಪಾಯ ಹೆಚ್ಚಾಗುತ್ತದೆಯೇ?

ಸಾಮಾನ್ಯವಾಗಿ ಚಳಿಗಾಲದಲ್ಲಿ ಬಾಯಾರಿಕೆ ಕಡಿಮೆಯಾಗುತ್ತದೆ. ಹಾಗಾಗಿ ಜನ ನೀರು ಕುಡಿಯುವ ಪ್ರಮಾಣವನ್ನು ಕಡಿಮೆ ಮಾಡುತ್ತಾರೆ. ಆದರೆ ದೇಹಕ್ಕೆ ನೀರಿನ ಅವಶ್ಯಕತೆ ಇರುತ್ತದೆ ಎಂಬುದನ್ನು ಮರೆಯಬಾರದು. ಅದರಲ್ಲಿಯೂ ಚಳಿಗಾಲದಲ್ಲಿ ಗರ್ಭಿಣಿಯರು ನೀರನ್ನು ಸಾಕಷ್ಟು ಪ್ರಮಾಣದಲ್ಲಿ ಕುಡಿಯಬೇಕು. ಈ ವಿಷಯವಾಗಿ ಆರ್‌ಎಂಎಲ್ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ಡಾ. ಸಲೋನಿ ಚಡ್ಡಾ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದು ಗರ್ಭಿಣಿಯರು ದಿನಕ್ಕೆ ಎಷ್ಟು ಲೋಟ ನೀರು ಕುಡಿಯಬೇಕು, ನೀರಿನ ಅಂಶ ಕಡಿಮೆಯಾದರೆ ಸಿ-ಸೆಕ್ಷನ್ ಹೆರಿಗೆಯ ಅಪಾಯ ಹೆಚ್ಚಾಗುತ್ತದೆಯೇ ಎಂಬುದರ ಬಗ್ಗೆ ತಿಳಿಸಿದ್ದಾರೆ.

ಗರ್ಭಿಣಿಯರಲ್ಲಿ ನೀರಿನ ಅಂಶ ಕಡಿಮೆಯಾದರೆ ಸಿ-ಸೆಕ್ಷನ್ ಹೆರಿಗೆಯ ಅಪಾಯ ಹೆಚ್ಚಾಗುತ್ತದೆಯೇ?
Pregnancy Hydration Tips For WintersImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jan 13, 2026 | 8:53 PM

Share

ಚಳಿಗಾಲದಲ್ಲಿ (Winters) ಸಾಮಾನ್ಯವಾಗಿ ಬಾಯಾರಿಕೆ ಕಡಿಮೆ ಇರುತ್ತದೆ, ಆದರೆ ಇದರರ್ಥ ಕಡಿಮೆ ನೀರು (Water) ಕುಡಿಯಬೇಕು ಎಂದಲ್ಲ. ಅದರಲ್ಲಿಯೂ ಚಳಿಗಾಲದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಗರ್ಭಿಣಿಯರಿಗೆ (Pregnant Women) ಮುಖ್ಯವಾಗಿದೆ. ಏಕೆಂದರೆ ದೇಹದಲ್ಲಿ ನೀರಿನ ಕೊರತೆಯಿದ್ದರೆ, ಅದು ತಾಯಿ ಮತ್ತು ಮಗುವಿನ ಮೇಲೆ ಪರಿಣಾಮ ಬೀರಬಹುದು. ಅನೇಕ ಸಂದರ್ಭಗಳಲ್ಲಿ, ಇದು ಹೆರಿಗೆಯ ಸಮಯದಲ್ಲಿ ತೊಂದರೆಗಳನ್ನು ಉಂಟುಮಾಡಬಹುದು ಅಥವಾ ಅಕಾಲಿಕ ಜನನಕ್ಕೆ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಗರ್ಭಿಣಿಯರು ದಿನಕ್ಕೆ ಎಷ್ಟು ಲೋಟ ನೀರು ಕುಡಿಯಬೇಕು, ನೀರಿನ ಅಂಶ ಕಡಿಮೆಯಾದರೆ ಸಿ-ಸೆಕ್ಷನ್ ಹೆರಿಗೆಯ ಅಪಾಯ ಹೆಚ್ಚಾಗುತ್ತದೆಯೇ ತಿಳಿದುಕೊಳ್ಳಿ.

ದೆಹಲಿಯ ಆರ್‌ಎಂಎಲ್ ಆಸ್ಪತ್ರೆಯ ಪ್ರಸೂತಿ ವಿಭಾಗದ ಡಾ. ಸಲೋನಿ ಚಡ್ಡಾ ಹೇಳುವ ಪ್ರಕಾರ, ಗರ್ಭಿಣಿಯರು ಚಳಿಗಾಲದಲ್ಲಿಯೂ ಸಹ ಪ್ರತಿದಿನ 8 ರಿಂದ 10 ಗ್ಲಾಸ್ ನೀರು ಕುಡಿಯಬೇಕು. ಇದಕ್ಕಿಂತ ಕಡಿಮೆ ಕುಡಿಯುವುದರಿಂದ ಮೂತ್ರನಾಳದ ಸೋಂಕು, ದೇಹದಲ್ಲಿ ಊತ ಮತ್ತು ಆಮ್ನಿಯೋಟಿಕ್ ದ್ರವದ ಪ್ರಮಾಣದಲ್ಲಿ ಇಳಿಕೆಯಾಗುವ ಅಪಾಯ ಹೆಚ್ಚಾಗುತ್ತದೆ. ಆಮ್ನಿಯೋಟಿಕ್ ದ್ರವದ ಪ್ರಮಾಣ ಕಡಿಮೆಯಾದರೆ, ಅದು ಸಿಸೇರಿಯನ್ ಹೆರಿಗೆಯ ಅಪಾಯವನ್ನು ಹೆಚ್ಚಿಸುತ್ತದೆ.

ನೀರು ಕಡಿಮೆ ಕುಡಿಯುವುದರಿಂದ ಸಿ-ಸೆಕ್ಷನ್ ಹೆರಿಗೆಯ ಅಪಾಯ ಹೆಚ್ಚಾಗುತ್ತದೆಯೇ?

ಸಾಮಾನ್ಯವಾಗಿ ನೀರು ಕಡಿಮೆ ಕುಡಿಯುವುದರಿಂದ ದೇಹದಲ್ಲಿ ಆಮ್ನಿಯೋಟಿಕ್ ದ್ರವದ ಪ್ರಮಾಣ ಕಡಿಮೆಯಾಗುತ್ತದೆ. ಅದರ ಮಟ್ಟವು ಆರಂಭಿಕ ಹಂತದಲ್ಲಿ ಕಡಿಮೆಯಾದರೆ, ಅದು ಮಗುವಿನ ಕೈಗಳು, ಪಾದಗಳು ಅಥವಾ ಮುಖದ ಮೇಲೆ ಒತ್ತಡವನ್ನು ಉಂಟುಮಾಡಬಹುದು, ಇದು ಆಮ್ನಿಯೋಟಿಕ್ ಬ್ಯಾಂಡ್ ಸಿಂಡ್ರೋಮ್‌ನಂತಹ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ, ಚಳಿಗಾಲದಲ್ಲೂ ಮಹಿಳೆಯರು ನೀರು ಕುಡಿಯುವುದನ್ನು ಕಡಿಮೆ ಮಾಡಬಾರದು. ದಿನಕ್ಕೆ ಕನಿಷ್ಠ 2.5 ರಿಂದ 3 ಲೀಟರ್ ನೀರನ್ನು ಕುಡಿಯುವುದು ಒಳ್ಳೆಯದು. ಜೊತೆಗೆ ನೀರಿನ ಕೊರತೆ ನೀಗಿಸಲು ಎಳನೀರು, ಸೂಪ್‌ ಗಳನ್ನು ಸೇವಿಸಬಹುದು ಆದರೆ ಹೆಚ್ಚು ಚಹಾ ಅಥವಾ ಕಾಫಿ ಕುಡಿಯುವುದನ್ನು ತಪ್ಪಿಸಿ, ಏಕೆಂದರೆ ಇವುಗಳಿಂದ ದೇಹದಲ್ಲಿ ನಿರ್ಜಲೀಕರಣ ಉಂಟಾಗುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲಿ ನೀರು ಕಡಿಮೆ ಕುಡಿಯುತ್ತೀರಾ? ಹಾಗಿದ್ರೆ ಈ ಸಮಸ್ಯೆ ಕಟ್ಟಿಟ್ಟ ಬುತ್ತಿ

ಚಳಿಗಾಲದಲ್ಲಿ ನೀರು ಕುಡಿಯಲು ಸಿಂಪಲ್ ಸಲಹೆಗಳು:

  • ಎದ್ದ ತಕ್ಷಣ 1 ಲೋಟ ನೀರು ಕುಡಿಯುವುದನ್ನು ಮರೆಯಬೇಡಿ.
  • ಸಾಮಾನ್ಯ ತಾಪಮಾನದಲ್ಲಿ ನೀರು ಕುಡಿಯಿರಿ.
  • ಒಂದೇ ಬಾರಿಗೆ ಹೆಚ್ಚು ನೀರು ಕುಡಿಯಬೇಡಿ.

ದೇಹ ನಿರ್ಜಲೀಕರಣಗೊಂಡಿರುವುದನ್ನು ಗುರುತಿಸುವುದು ಹೇಗೆ?

  • ಮೂತ್ರದ ಬಣ್ಣ ಹಳದಿ.
  • ತುಟಿಗಳು ಒಣಗಿರುತ್ತವೆ.
  • ದಣಿದ ಭಾವನೆ.
  • ನಿರಂತರ ತಲೆನೋವು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು