AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watermelon: ಕಲ್ಲಂಗಡಿ ಹಣ್ಣಿನ ಆರೋಗ್ಯ ಪ್ರಯೋಜನಗಳು; ಹಿತ-ಮಿತವಾಗಿ ಬಳಸಿ ಆರೋಗ್ಯ ಕಾಪಾಡಿಕೊಳ್ಳಿ

ಕಲ್ಲಂಗಡಿ ಹಣ್ಣು: ಕಲ್ಲಂಗಡಿಯಲ್ಲಿರುವ ಪೊಟ್ಯಾಷಿಯಮ್​ ಮತ್ತು ಮೆಗ್ನೀಷಿಯಮ್​ ಪ್ರಮಾಣವು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿರುವುದರಿಂದ ಹೃದ್ರೋಗ ಸಮಸ್ಯೆಯನ್ನು ತಡೆಗಟ್ಟಲು ಸಹಾಯಕವಾಗಿದೆ.

Watermelon: ಕಲ್ಲಂಗಡಿ ಹಣ್ಣಿನ ಆರೋಗ್ಯ ಪ್ರಯೋಜನಗಳು; ಹಿತ-ಮಿತವಾಗಿ ಬಳಸಿ ಆರೋಗ್ಯ ಕಾಪಾಡಿಕೊಳ್ಳಿ
ಕಲ್ಲಂಗಡಿ ಹಣ್ಣು
TV9 Web
| Edited By: |

Updated on: Jul 17, 2021 | 7:14 AM

Share

ಕಲ್ಲಂಗಡಿ ಹಣ್ಣು ರಸಭರಿತ ಹಣ್ಣು ಎಂಬುದು ಎಲ್ಲರಿಗೂ ಗೊತ್ತಿದೆ. ಹಣ್ಣುಗಳಲ್ಲಿ ಕಲ್ಲಂಗಡಿ ಹಣ್ಣನ್ನು ಜನರು ಹೆಚ್ಚು ಇಷ್ಟಪಟ್ಟು ಸೇವಿಸುತ್ತಾರೆ. ಹೆಚ್ಚು ಸಿಹಿಯಾಗಿರುವುದರ ಜತೆಗೆ ಆಂಟಿ ಆಕ್ಸಿಡೆಂಟ್​ಗಳನ್ನು ಹೊಂದಿರುತ್ತದೆ. ಜತೆಗೆ ಜೀವಸತ್ವಗಳು, ಖನಿಜಗಳು ಮತ್ತು ಇತರ ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಕಲ್ಲಂಗಡಿ ಹಣ್ಣಿನಲ್ಲಿ ಕ್ಯಾಲೊರಿ ಕಡಿಮೆ ಇರುತ್ತದೆ. ಇದರಲ್ಲಿ ವಿಟಮಿನ್ ಸಿ ಮತ್ತು ಎ ಅಂಶವಿರುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಹಾಗಂದ ಮಾತ್ರಕ್ಕೆ ಅತಿಯಾಗಿ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.

ಯಾವುದೇ ಆಹಾರವಾಗಲಿ ಹಿತಮಿತವಾಗಿ ಬಳಸಿ ಆರೋಗ್ಯವನ್ನು ಕಾಪಾಡಿಕೊಳ್ಳಿ. ತಿನ್ನಲು ರುಚಿಯಾಗಿದೆ ಎಂದು ಅತಿಯಾಗಿ ತಿಂದರೆ ಆರೋಗ್ಯಕ್ಕೆ ಅನಾರೋಗ್ಯಗಳೇ ಹೆಚ್ಚು. ಅತಿಯಾಗಿ ತಿಂದರೆ ಅಮೃತವೂ ವಿಷ ಎಂಬ ಮಾತಿನಂತೆ ಆಹಾರವನ್ನು ನಿಯಮಿತವಾಗಿ ಸೇವಿಸುವ ಅಭ್ಯಾಸ ಮಾಡಿಕೊಳ್ಳಿ. ಹಣ್ಣುಗಳೆಂದರೆ ಯಾರಿಗೆ ಇಷ್ಟವಿಲ್ಲ ಹೇಳಿ? ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಇಷ್ಟಪಟ್ಟು ತಿನ್ನುತ್ತಾರೆ. ಹಾಗಿರುವಾಗ ನಾವು ಸೇವಿಸುತ್ತಿರುವ ತರಕಾರಿಗಳು ಮತ್ತು ಹಣ್ಣುಗಳಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದರ ಬಗ್ಗೆ ತಿಳಿದುಕೊಳ್ಳಲೇಬೇಕು. ಕಲ್ಲಂಗಡಿ ಹಣ್ಣಿನಿಂದ ಆರೋಗ್ಯಕ್ಕೆ ಎಷ್ಟು ಪ್ರಯೋಜನವಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಕಲ್ಲಂಗಡಿಯಲ್ಲಿರುವ ಪೊಟ್ಯಾಷಿಯಮ್​ ಮತ್ತು ಮೆಗ್ನೀಷಿಯಮ್​ ಪ್ರಮಾಣವು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿರುವುದರಿಂದ ಹೃದ್ರೋಗ ಸಮಸ್ಯೆಯನ್ನು ತಡೆಗಟ್ಟಲು ಸಹಾಯಕವಾಗಿದೆ.

ದೇಹವನ್ನು ಹೈಡ್ರೀಕರಿಸುತ್ತದೆ ಕಲ್ಲಂಗಡಿಯಲ್ಲಿ ಶೇ.90ರಷ್ಟು ನೀರಿನ ಪ್ರಮಾಣ ಇರುವುದರಿಂದ ಇದು ನಿಮ್ಮ ದೇಹಕ್ಕೆ ನೀರಿನಾಂಶವನ್ನು ನೀಡುತ್ತದೆ. ಉಷ್ಣಾಂಶದಿಂದ ದೇಹವನ್ನು ತಂಪಾಗಿಡಲು ಸಹಾಯ ಮಾಡುತ್ತದೆ. ಹೆಚ್ಚು ತಂಪಾಗಿರುವುದರಿಂದ ಮಳೆಗಾಲದ ಸಮಯದಲ್ಲಿ ಈ ಹಣ್ಣನ್ನು ಹೆಚ್ಚು ಸೇವಿಸುವುದಿಲ್ಲ.

ತೂಕನಷ್ಟಕ್ಕೆ ಸಹಾಯಕ ಕಲ್ಲಂಗಡಿ ಸಿಹಿ ಮತ್ತು ರಸಭರಿತ ಹಣ್ಣು. ಇದರಲ್ಲಿ ಕ್ಯಾಲೊರಿ ಕಡಿಮೆ. ಆದ್ದರಿಂದ ತೂಕ ಇಳಿಸಿಕೊಳ್ಳಲು ಸಹಾಯಕವಾಗಿದೆ. ಕೊಬ್ಬಿನಾಂಶ ಹೆಚ್ಚಾಗಿ ಇಲ್ಲವಾದ್ದರಿಂದ ಯಾವ ವಯಸ್ಸಿನವರೂ ಸಹ ನಿಯಮಿತವಾಗಿ ಹಣ್ಣನ್ನು ಸೇವಿಸಬಹುದು.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಕಲ್ಲಂಗಡಿಯಲ್ಲಿ ಫೈಬರ್​ ಅಂಶ ಕಂಡು ಬರುತ್ತದೆ. ಇದು ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಗೆ ಸಹಾಯಕವಾಗಿದೆ. ಫೈಬರ್​ಯುಕ್ತ ಹಣ್ಣುಗಳು ಮತ್ತು ತರಕಾರಿಗಳು ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಜತೆಗೆ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಾಯಕವಾಗಿದೆ.

ಇದನ್ನೂ ಓದಿ:

ಲಾಕ್​ಡೌನ್​ ಎಫೆಕ್ಟ್: ಮಾರಾಟವಾಗಲಿಲ್ಲ ಕಲ್ಲಂಗಡಿ ಹಣ್ಣು, ಸಾಲ ಮಾಡಿ ಬೆಳೆದ ಬೆಳೆಯನ್ನು ನಾಶ ಮಾಡಿದ ಬಡ ರೈತ

ಹೊರ ರಾಜ್ಯಕ್ಕೆ ಹೋಗುತ್ತಿದ್ದ ಕಲ್ಲಂಗಡಿ ಹಣ್ಣು ಸಂಪೂರ್ಣ ಹಾಳು; ಲಾಕ್​ಡೌನ್​ನಿಂದ ಕಣ್ಣೀರು ಹಾಕುತ್ತಿರುವ ದಾವಣಗೆರೆ ರೈತ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ