AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಶೀತವಾಗುತ್ತಾ, ಕೆಮ್ಮು ಒಮ್ಮೆ ಶುರುವಾದರೆ ಕಡಿಮೆನೇ ಆಗ್ತಾ ಇಲ್ವಾ? ಇದಕ್ಕೆ ಕಾರಣ ಏನು ಗೊತ್ತಾ?

ಚಳಿಗಾಲದಲ್ಲಿ, ಶೀತ, ಕೆಮ್ಮು ಮತ್ತು ಸಣ್ಣಪುಟ್ಟ ಸೋಂಕುಗಳು ಕಂಡುಬರುವುದು ಸಾಮಾನ್ಯ. ಆದರೆ ಪದೇ ಪದೇ ಈ ರೀತಿಯಾಗುತ್ತಿದ್ದರೆ ಅದನ್ನು ನಿರ್ಲಕ್ಷಿಸುವುದು ಸರಿಯಲ್ಲ. ಅನೇಕರು ಈ ರೀತಿಯ ಲಕ್ಷಣಗಳು ಹವಾಮಾನದಿಂದ ಕಂಡುಬರುವ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಆರೋಗ್ಯ ತಜ್ಞರು ಈ ರೀತಿ ಮಾಡುವುದು ಸರಿಯಲ್ಲ ಎನ್ನುತ್ತಾರೆ. ಹಾಗಾದರೆ ರೋಗನಿರೋಧಕ ಶಕ್ತಿ ಕುಂಠಿತಗೊಳ್ಳುವುದಕ್ಕೆ ಕಾರಣವೇನು, ಈ ರೀತಿ ಸಮಸ್ಯೆಯನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪದೇ ಪದೇ ಶೀತವಾಗುತ್ತಾ, ಕೆಮ್ಮು ಒಮ್ಮೆ ಶುರುವಾದರೆ ಕಡಿಮೆನೇ ಆಗ್ತಾ ಇಲ್ವಾ? ಇದಕ್ಕೆ ಕಾರಣ ಏನು ಗೊತ್ತಾ?
Signs Of Weak Immune SystemImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jan 11, 2026 | 8:25 PM

Share

ಚಳಿಗಾಲದಲ್ಲಿ, ಶೀತ, ಕೆಮ್ಮು ಮತ್ತು ಸಣ್ಣಪುಟ್ಟ ಸೋಂಕುಗಳು ಕಂಡುಬರುವುದು ಸಾಮಾನ್ಯ. ಶೀತ ಗಾಳಿ, ಸೂರ್ಯನ ಬೆಳಕು ಸರಿಯಾಗಿ ಸಿಗದಿರುವುದು ಮತ್ತು ಬದಲಾಗುತ್ತಿರುವ ಹವಾಮಾನವು ದೇಹದ ಮೇಲೆ ಬೇಗ ಪರಿಣಾಮ ಬೀರುತ್ತದೆ. ಆದರೆ ಪದೇ ಪದೇ ಶೀತವಾಗುವುದು (Cold) ಕೆಮ್ಮು ಒಮ್ಮೆ ಆರಂಭವಾದರೆ ಅದು ಗುಣವಾಗದಿರುವುದು, ಅಥವಾ ಕಡಿಮೆ ಸಮಯದ ಅಂತರದಲ್ಲಿ ಪದೇ ಪದೇ ಸೋಂಕುಗಳು ಕಂಡುಬರುವುದು ಸಾಮಾನ್ಯವಲ್ಲ. ಇಂತಹ ಲಕ್ಷಣಗಳು ನಿಮ್ಮ ದೇಹ ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದೆ ಎಂಬುದನ್ನು ಸೂಚಿಸಬಹುದು. ಅನೇಕರು ಈ ರೀತಿಯ ಲಕ್ಷಣಗಳನ್ನು ಹವಾಮಾನದಿಂದ ಕಂಡುಬರುವ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಆರೋಗ್ಯ ತಜ್ಞರು ಈ ರೀತಿ ಮಾಡುವುದು ಸರಿಯಲ್ಲ ಎನ್ನುತ್ತಾರೆ. ಹಾಗಾದರೆ ರೋಗನಿರೋಧಕ ಶಕ್ತಿ (Immune System) ಕುಂಠಿತಗೊಳ್ಳುವುದಕ್ಕೆ ಕಾರಣವೇನು, ಈ ರೀತಿ ಸಮಸ್ಯೆಯನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದಕ್ಕೆ ಕಾರಣವೇನು?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಪ್ರೊಫೆಸರ್ ಡಾ. ಸುಭಾಷ್ ಗಿರಿ ಅವರು ಹೇಳುವ ಪ್ರಕಾರ, ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದಕ್ಕೆ ಹಲವಾರು ಕಾರಣಗಳಿರಬಹುದು ಎನ್ನುತ್ತಾರೆ. ಆಹಾರ ಪದ್ದತಿ ಸರಿಯಾಗಿ ಇಲ್ಲದಿರುವುದು, ಪೋಷಕಾಂಶಗಳ ಕೊರತೆ ಮತ್ತು ನಿದ್ರೆ ಸರಿಯಾಗಿ ಆಗದಿರುವುದು ಕೂಡ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸಬಹುದು. ಅದರ ಜೊತೆಗೆ ನಿರಂತರ ಒತ್ತಡ ಮತ್ತು ಮಾನಸಿಕ ಒತ್ತಡವು ದೇಹದ ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಜೊತೆಗೆ ಚಳಿಗಾಲದಲ್ಲಿ, ದೈಹಿಕ ಚಟುವಟಿಕೆ ಕಡಿಮೆಯಾಗುವುದು ಮತ್ತು ಸೂರ್ಯನ ಬೆಳಕು ಸರಿಯಾಗಿ ಸಿಗದಿರುವುದು ಪದೇ ಪದೇ ಆರೋಗ್ಯ ಹದಗೆಡುವುದಕ್ಕೆ ಕಾರಣವಾಗಬಹುದು. ಜೊತೆಗೆ ಆಗಾಗ ಫಾಸ್ಟ್ ಫುಡ್ ತಿನ್ನುವುದು, ನೀರು ಕಡಿಮೆ ಕುಡಿಯುವುದು ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸಬಹುದು.

ಇದನ್ನೂ ಓದಿ: ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ಗೊತ್ತಾ?

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ?

ಪ್ರತಿನಿತ್ಯ ಸಮತೋಲಿತ ಮತ್ತು ಪೌಷ್ಟಿಕ ಆಹಾರ ಸೇವನೆ ಮಾಡಿ. ಆಹಾರದಲ್ಲಿ ಹಣ್ಣು, ತರಕಾರಿ ಮತ್ತು ಪ್ರೋಟೀನ್‌ಗಳನ್ನು ಸೇರಿಸಿ. ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ. ಲಘು ವ್ಯಾಯಾಮ ಅಥವಾ ಯೋಗ ಮಾಡಿ. ಸರಿಯಾಗಿ ನಿದ್ರೆ ಮಾಡಿ, ಜಂಕ್ ಫುಡ್‌ನಿಂದ ದೂರವಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ