
ಚಳಿಗಾಲದಲ್ಲಿ, ಶೀತ, ಕೆಮ್ಮು ಮತ್ತು ಸಣ್ಣಪುಟ್ಟ ಸೋಂಕುಗಳು ಕಂಡುಬರುವುದು ಸಾಮಾನ್ಯ. ಶೀತ ಗಾಳಿ, ಸೂರ್ಯನ ಬೆಳಕು ಸರಿಯಾಗಿ ಸಿಗದಿರುವುದು ಮತ್ತು ಬದಲಾಗುತ್ತಿರುವ ಹವಾಮಾನವು ದೇಹದ ಮೇಲೆ ಬೇಗ ಪರಿಣಾಮ ಬೀರುತ್ತದೆ. ಆದರೆ ಪದೇ ಪದೇ ಶೀತವಾಗುವುದು (Cold) ಕೆಮ್ಮು ಒಮ್ಮೆ ಆರಂಭವಾದರೆ ಅದು ಗುಣವಾಗದಿರುವುದು, ಅಥವಾ ಕಡಿಮೆ ಸಮಯದ ಅಂತರದಲ್ಲಿ ಪದೇ ಪದೇ ಸೋಂಕುಗಳು ಕಂಡುಬರುವುದು ಸಾಮಾನ್ಯವಲ್ಲ. ಇಂತಹ ಲಕ್ಷಣಗಳು ನಿಮ್ಮ ದೇಹ ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದೆ ಎಂಬುದನ್ನು ಸೂಚಿಸಬಹುದು. ಅನೇಕರು ಈ ರೀತಿಯ ಲಕ್ಷಣಗಳನ್ನು ಹವಾಮಾನದಿಂದ ಕಂಡುಬರುವ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಆರೋಗ್ಯ ತಜ್ಞರು ಈ ರೀತಿ ಮಾಡುವುದು ಸರಿಯಲ್ಲ ಎನ್ನುತ್ತಾರೆ. ಹಾಗಾದರೆ ರೋಗನಿರೋಧಕ ಶಕ್ತಿ (Immune System) ಕುಂಠಿತಗೊಳ್ಳುವುದಕ್ಕೆ ಕಾರಣವೇನು, ಈ ರೀತಿ ಸಮಸ್ಯೆಯನ್ನು ತಡೆಯಲು ಏನು ಮಾಡಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಪ್ರೊಫೆಸರ್ ಡಾ. ಸುಭಾಷ್ ಗಿರಿ ಅವರು ಹೇಳುವ ಪ್ರಕಾರ, ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದಕ್ಕೆ ಹಲವಾರು ಕಾರಣಗಳಿರಬಹುದು ಎನ್ನುತ್ತಾರೆ. ಆಹಾರ ಪದ್ದತಿ ಸರಿಯಾಗಿ ಇಲ್ಲದಿರುವುದು, ಪೋಷಕಾಂಶಗಳ ಕೊರತೆ ಮತ್ತು ನಿದ್ರೆ ಸರಿಯಾಗಿ ಆಗದಿರುವುದು ಕೂಡ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸಬಹುದು. ಅದರ ಜೊತೆಗೆ ನಿರಂತರ ಒತ್ತಡ ಮತ್ತು ಮಾನಸಿಕ ಒತ್ತಡವು ದೇಹದ ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಜೊತೆಗೆ ಚಳಿಗಾಲದಲ್ಲಿ, ದೈಹಿಕ ಚಟುವಟಿಕೆ ಕಡಿಮೆಯಾಗುವುದು ಮತ್ತು ಸೂರ್ಯನ ಬೆಳಕು ಸರಿಯಾಗಿ ಸಿಗದಿರುವುದು ಪದೇ ಪದೇ ಆರೋಗ್ಯ ಹದಗೆಡುವುದಕ್ಕೆ ಕಾರಣವಾಗಬಹುದು. ಜೊತೆಗೆ ಆಗಾಗ ಫಾಸ್ಟ್ ಫುಡ್ ತಿನ್ನುವುದು, ನೀರು ಕಡಿಮೆ ಕುಡಿಯುವುದು ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸಬಹುದು.
ಇದನ್ನೂ ಓದಿ: ಉಗುರು ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಇದರಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ಗೊತ್ತಾ?
ಪ್ರತಿನಿತ್ಯ ಸಮತೋಲಿತ ಮತ್ತು ಪೌಷ್ಟಿಕ ಆಹಾರ ಸೇವನೆ ಮಾಡಿ. ಆಹಾರದಲ್ಲಿ ಹಣ್ಣು, ತರಕಾರಿ ಮತ್ತು ಪ್ರೋಟೀನ್‌ಗಳನ್ನು ಸೇರಿಸಿ. ಬೆಚ್ಚಗಿನ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ. ಲಘು ವ್ಯಾಯಾಮ ಅಥವಾ ಯೋಗ ಮಾಡಿ. ಸರಿಯಾಗಿ ನಿದ್ರೆ ಮಾಡಿ, ಜಂಕ್ ಫುಡ್‌ನಿಂದ ದೂರವಿರಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ