ಗಾಜಿನ ಬಳೆ ಹಾಕಿಕೊಳ್ಳುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?

ಗಾಜಿನ ಬಳೆ ಅತ್ಯಂತ ಶ್ರೇಷ್ಠ ಎನ್ನಲಾಗುತ್ತದೆ. ಹಾಗಾಗಿ ಹಿಂದಿನ ಕಾಲದಿಂದಲೂ ಮಹಿಳೆಯರು ಬಳೆಗಳನ್ನು ಧರಿಸುತ್ತಾ ಬಂದಿದ್ದಾರೆ. ಆದರೆ ಈಗಿನ ದಿನಗಳಲ್ಲಿ ಈ ಪದ್ಧತಿ ಕ್ರಮೇಣ ಕಡಿಮೆಯಾಗುತ್ತಾ ಬಂದಿದೆ. ಹಬ್ಬ ಹರಿದಿನಗಳ ಸಮಯದಲ್ಲಿ ಮಾತ್ರ ಬಳೆಗಳನ್ನು ತೊಡುವವರು ಇದ್ದಾರೆ. ಆದರೆ ನಮ್ಮ ಪೂರ್ವಜರು ಬಳೆಗಳನ್ನು ಏಕೆ ಧರಿಸಬೇಕು ಎನ್ನುತ್ತಿದ್ದರು? ಇದರ ಹಿಂದಿರುವ ಕಾರಣವೇನು ತಿಳಿದುಕೊಳ್ಳಿ.

ಗಾಜಿನ ಬಳೆ ಹಾಕಿಕೊಳ್ಳುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ?
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 14, 2024 | 6:11 PM

ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳು ಕೈಗಳಿಗೆ ಬಳೆಯನ್ನು ಧರಿಸುತ್ತಾರೆ. ಅದರಲ್ಲಿಯೂ ಗಾಜಿನ ಬಳೆ ಅತ್ಯಂತ ಶ್ರೇಷ್ಠ ಎನ್ನಲಾಗುತ್ತದೆ. ಹಾಗಾಗಿ ಹಿಂದಿನ ಕಾಲದಿಂದಲೂ ಮಹಿಳೆಯರು ಬಳೆಗಳನ್ನು ಧರಿಸುತ್ತಾ ಬಂದಿದ್ದಾರೆ. ಆದರೆ ಈಗಿನ ದಿನಗಳಲ್ಲಿ ಈ ಪದ್ಧತಿ ಕ್ರಮೇಣ ಕಡಿಮೆಯಾಗುತ್ತಾ ಬಂದಿದೆ. ಹಬ್ಬ ಹರಿದಿನಗಳ ಸಮಯದಲ್ಲಿ ಮಾತ್ರ ಬಳೆಗಳನ್ನು ತೊಡುವವರು ಇದ್ದಾರೆ. ಆದರೆ ನಮ್ಮ ಪೂರ್ವಜರು ಬಳೆಗಳನ್ನು ಏಕೆ ಧರಿಸಬೇಕು ಎನ್ನುತ್ತಿದ್ದರು? ಇದರ ಹಿಂದಿರುವ ಕಾರಣವೇನು ತಿಳಿದುಕೊಳ್ಳಿ.

ವೈಜ್ಞಾನಿಕ ದೃಷ್ಟಿಯಲ್ಲಿ ನೋಡುವುದಾದರೆ ಬಳೆಗಳು ಮಹಿಳೆಯರ ಆರೋಗ್ಯವನ್ನು ಕಾಪಾಡುತ್ತದೆ. ಇದು ನಿಮಗೆ ಆಶ್ಚರ್ಯ ಎನಿಸಬಹುದು ಆದರೆ ಸತ್ಯ. ಮಹಿಳೆಯರು ಪ್ರತಿನಿತ್ಯ ಬಳೆಗಳನ್ನು ಹಾಕಿಕೊಳ್ಳುವುದು ಒಳ್ಳೆಯದು. ಆಕ್ಯೂಪಂಚರ್‌ನಲ್ಲಿ ನೀವು ನೋಡಿರಬಹುದು ದೇಹದ ಯಾವ ಭಾಗದ ಮೇಲೆ ಒತ್ತಡ ಹಾಕಿದರೆ ಏನು ಪ್ರಯೋಜನ ಸಿಗಲಿದೆ ಎಂದು ಹೇಳಲಾಗುತ್ತದೆ. ಅದೇ ರೀತಿ ಕೈ ಬಳೆಗಳನ್ನು ಹಾಕುವುದರಿಂದ ಇದು ಮಣಿಗಂಟು ಅಥವಾ ಮಣಿಕಟ್ಟಿನ ಮೇಲೆ ಒತ್ತಡ ಹಾಕುತ್ತದೆ ಇದು ಮಹಿಳೆಯರ ಗರ್ಭಕೋಶದ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಬಿಪಿ ನಿಯಂತ್ರಣಕ್ಕೆ ಮಾತ್ರೆ ತೆಗೆದುಕೊಳ್ಳುವವರು ಈ ಸಲಹೆಯನ್ನು ಪಾಲನೆ ಮಾಡಿ

ಗಂಡು- ಹೆಣ್ಣಿನ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ

ಕೈ ಬಳೆಗಳ ಶಬ್ದ ಕೇಳಲು ತುಂಬಾ ಹಿತವಾಗಿರುವುದರಿಂದ ಮನಸ್ಸಿನ ಒತ್ತಡ ಕಡಿಮೆಯಾಗುತ್ತದೆ. ಚಿಂತೆ ದೂರವಾಗುತ್ತದೆ. ಅಲ್ಲದೆ ಗಾಜಿನ ಬಳೆಗಳನ್ನು ಧರಿಸುವುದರಿಂದ ರಕ್ತ ಸಂಚಾರ ತುಂಬಾ ಚೆನ್ನಾಗಿ ಆಗುತ್ತದೆ ಅಲ್ಲದೆ ಇದು ಅಧಿಕ ರಕ್ತದೊತ್ತಡ ತಡೆಗಟ್ಟಲು ಕೂಡ ಸಹಕಾರಿಯಾಗಿದೆ. ಅಲ್ಲದೆ ಬಳೆಗಳು ಗಂಡು- ಹೆಣ್ಣಿನ ನಡುವಿನ ಬಾಂಧವ್ಯ ಗಟ್ಟಿಯಾಗಿಸುತ್ತದೆ. ಪತ್ನಿಯ ಕೈ ಬಳೆ ಶಬ್ದ ಅವಳೆಡೆಗೆ ಆಸಕ್ತಿ ಹೆಚ್ಚುವಂತೆ ಮಾಡುತ್ತದೆ. ಇಬ್ಬರ ನಡುವೆ ಉತ್ತಮ ಬಾಂಧವ್ಯ ಮೂಡಲು ಸಹಕಾರಿಯಾಗುತ್ತದೆ. ಪುರಾಣಗಳಲ್ಲಿಯೂ ಗಾಜಿನ ಬಳೆಗಳನ್ನು ಧರಿಸುವುದು ತುಂಬಾ ಶುಭವೆಂದು ಹೇಳಲಾಗುತ್ತದೆ. ಮುತ್ತೈದೆಯರು ಕೆಂಪು ಮತ್ತು ಹಸಿರು ಬಳೆಗಳನ್ನು ಹಾಕುವುದು ಒಳ್ಳೆಯದು ಎನ್ನುವ ನಂಬಿಕೆ ಇದೆ. ಹಾಗಾಗಿ ವರಮಹಾಲಕ್ಷ್ಮೀ ಹಬ್ಬದ ದಿನ ಬಳೆಗಳನ್ನು ಹಾಕಿಕೊಳ್ಳುವ ಮೂಲಕ ಆರೋಗ್ಯಕರ ಅಭ್ಯಾಸವನ್ನು ರೂಢಿಸಿಕೊಳ್ಳಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ