AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಆರೋಗ್ಯ ಪದೇ ಪದೇ ಹದಗೆಡುತ್ತಾ? ಹಾಗಿದ್ರೆ ಈ ರೀತಿ ಆರೈಕೆ ಮಾಡಿ!

ಕಳೆದ ಕೆಲವು ದಿನಗಳಿಂದ ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ನಿರಂತರ ಬದಲಾವಣೆಗಳು ಕಂಡುಬರುತ್ತಿವೆ. ಇದು ಮಕ್ಕಳ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಅವರ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯವಾಗುತ್ತದೆ. ಹಿರಿಯರಿಗಿಂತ ಮಕ್ಕಳ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ, ಇಂತಹ ಬದಲಾವಣೆಗಳಿಗೆ ಅವರು ಬೇಗ ತುತ್ತಾಗುತ್ತಾರೆ. ಹಾಗಾದರೆ ಮಕ್ಕಳಲ್ಲಿ ಕಂಡುಬರುವ ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು, ಈ ಸಮಯದಲ್ಲಿ ಅವರ ಆರೈಕೆ ಹೇಗೆ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಕ್ಕಳ ಆರೋಗ್ಯ ಪದೇ ಪದೇ ಹದಗೆಡುತ್ತಾ? ಹಾಗಿದ್ರೆ ಈ ರೀತಿ ಆರೈಕೆ ಮಾಡಿ!
Kids HealthImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on: May 06, 2026 | 6:51 PM

Share

ಇತ್ತೀಚಿನ ದಿನಗಳಲ್ಲಿ ಹವಾಮಾನದಲ್ಲಿ ಆಗುತ್ತಿರುವ ನಿರಂತರ ಬದಲಾವಣೆಗಳು ಮಕ್ಕಳ ಆರೋಗ್ಯದ (Kids’ Health) ಮೇಲೆ ನೇರ ಪರಿಣಾಮ ಬೀರುತ್ತಿವೆ. ಹೆಚ್ಚು ಬಿಸಿಲು, ಸಂಜೆಯ ಸಮಯ ಬೀಸುವ ತಣ್ಣನೆಯ ಗಾಳಿ ಹಾಗೂ ತಾಪಮಾನದಲ್ಲಿ ಆಗುವ ಏರುಪೇರು ಮಕ್ಕಳಲ್ಲಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಿರಿಯರಿಗಿಂತ ಮಕ್ಕಳ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ, ಇಂತಹ ಬದಲಾವಣೆಗಳಿಗೆ ಅವರು ಬೇಗ ತುತ್ತಾಗುತ್ತಾರೆ. ಹಾಗಾದರೆ ಮಕ್ಕಳಲ್ಲಿ ಕಂಡುಬರುವ ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು, ಈ ಸಮಯದಲ್ಲಿ ಅವರ ಆರೈಕೆ ಹೇಗೆ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು?

ಹವಾಮಾನ ಬದಲಾವಣೆಯ ಸಮಯದಲ್ಲಿ ಮಕ್ಕಳಲ್ಲಿ ಪದೇಪದೇ ಜ್ವರ, ಕೆಮ್ಮು ಕಾಣಿಸಿಕೊಂಡರೆ ಅದನ್ನು ನಿರ್ಲಕ್ಷ್ಯ ಮಾಡಬಾರದು. ಜೊತೆಗೆ ದೌರ್ಬಲ್ಯ, ಊಟ, ತಿಂಡಿ ಸರಿಯಾಗಿ ಮಾಡದಿರುವುದು, ಹೆಚ್ಚು ನಿದ್ರೆ ಅಥವಾ ಚಿಡಿಚಿಡಿ ಇತ್ಯಾದಿ ಲಕ್ಷಣಗಳು ಕಾಣಿಸಬಹುದು. ಕೆಲವು ಮಕ್ಕಳಲ್ಲಿ ಅಲರ್ಜಿ, ಉಸಿರಾಟದ ತೊಂದರೆ ಮತ್ತು ಚರ್ಮದ ಮೇಲೆ ರಾಶ್‌ಗಳು ಕಾಣಿಸಬಹುದು. ಈ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಅಗತ್ಯ.

ಇದನ್ನೂ ಓದಿ: ಮಕ್ಕಳು ಪದೇಪದೇ ಬೀಳುವುದರಿಂದ ಮೆದುಳಿಗೆ ಅಪಾಯವಾಗುತ್ತದೆಯೇ? ವೈದ್ಯರನ್ನು ಯಾವಾಗ ಸಂಪರ್ಕ ಮಾಡಬೇಕು?

ಮಕ್ಕಳ ಆರೈಕೆ ಹೇಗೆ ಮಾಡಬೇಕು?

ಮಕ್ಕಳಿಗೆ ಸಮತೋಲನ ಮತ್ತು ಪೌಷ್ಟಿಕ ಆಹಾರ ನೀಡುವುದು ಬಹಳ ಮುಖ್ಯ. ಹಣ್ಣು, ತರಕಾರಿ ಮತ್ತು ವಿಟಮಿನ್‌ಗಳುಳ್ಳ ಆಹಾರವನ್ನು ದಿನನಿತ್ಯದ ಆಹಾರದಲ್ಲಿ ಸೇರಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಮಕ್ಕಳಿಗೆ ಸಾಕಷ್ಟು ನೀರು ಕುಡಿಸುವುದು ಮತ್ತು ಹವಾಮಾನಕ್ಕೆ ಅನುಗುಣವಾದ ಉಡುಪುಗಳನ್ನು ಧರಿಸುವುದು ಅಗತ್ಯ. ಸ್ವಚ್ಛತೆಯ ಬಗ್ಗೆ ವಿಶೇಷ ಗಮನ ಹರಿಸಿ, ಕೈ ತೊಳೆಯುವ ಅಭ್ಯಾಸವನ್ನು ಬೆಳೆಸಬೇಕು. ಅದರ ಜೊತೆಗೆ ಮಕ್ಕಳಿಗೆ ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಸಿಗುವಂತೆ ನೋಡಿಕೊಳ್ಳಬೇಕು. ತುಂಬಾ ಬಿಸಿ ಅಥವಾ ತಣ್ಣನೆಯ ಆಹಾರಗಳನ್ನು ತಪ್ಪಿಸುವುದು ಉತ್ತಮ. ಹೊರಗಡೆ ಆಟವಾಡುವಾಗ ಧೂಳು, ತೀವ್ರ ಬಿಸಿಲು ಅಥವಾ ತಣ್ಣನೆಯ ಗಾಳಿಯಿಂದ ರಕ್ಷಿಸಬೇಕು. ಮನೆಗೆ ಬಂದ ನಂತರ ಕೈ- ಕಾಲುಗಳನ್ನು ಸ್ವಚ್ಛಗೊಳಿಸುವ ಅಭ್ಯಾಸ ಮಾಡಿಸಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ