Weight loss: ತೂಕ ಇಳಿಸಿಕೊಳ್ಳಲು ಸಿಂಪಲ್​ ಟಿಪ್ಸ್​; ಜೀರಿಗೆ ನೀರು ಸೇವನೆಯಿಂದ ಉತ್ತಮ ಪರಿಹಾರ

ಅಡುಗೆಯಲ್ಲಿ ಬಳಸುವ ಜೀರಿಗೆಯಿಂದ ಆರೋಗ್ಯಕ್ಕೆ ಅನೇಕ ಪ್ರಯೋಜಗಳಿವೆ. ಇದು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಇದು ಸಹಾಯ ಮಾಡುತ್ತದೆ.

Weight loss: ತೂಕ ಇಳಿಸಿಕೊಳ್ಳಲು ಸಿಂಪಲ್​ ಟಿಪ್ಸ್​; ಜೀರಿಗೆ ನೀರು ಸೇವನೆಯಿಂದ ಉತ್ತಮ ಪರಿಹಾರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Aug 31, 2021 | 8:06 AM

ಸಾಮಾನ್ಯವಾಗಿ ಮನೆಯಲ್ಲಿ ಜೀರಿಗೆಯಿಂದ ತಯಾರಿಸಿದ ಮಸಾಲೆಯನ್ನು ಬಳಸುತ್ತೇವೆ. ಅಡುಗೆಯಲ್ಲಿ ಬಳಸುವ ಜೀರಿಗೆಯಿಂದ ಆರೋಗ್ಯಕ್ಕೆ ಅನೇಕ ಪ್ರಯೋಜಗಳಿವೆ. ಇದು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಇದು ಸಹಾಯ ಮಾಡುತ್ತದೆ. ದೇಹದಲ್ಲಿನ ವಿಷಕಾರಿ ಅಂಶವನ್ನು ಹೊರಹಾಕಲು ಇದು ಸಹಾಯ ಮಾಡುತ್ತದೆ. ವಾಸ್ತವಾಗಿ ಜೀರಿಗೆಯಲ್ಲಿ ಥೈಮೋಲ್ ಹಾರ್ಮೋನ್ ಇದ್ದು ಇದು ಮೇದೋಜೀರಕ ಗ್ರಂಥಿಯಿಂದ ಪಿತ್ತರಸವನ್ನು ಉತ್ಪಾದಿಸುತ್ತದೆ. ಈ ಹಾರ್ಮೋನ್ ಕಾರ್ಬೊಹೈಡ್ರೇಟ್ ಮತ್ತು ಕೊಬ್ಬನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದು ನಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದಲ್ಲದೇ, ಇನ್ಸುಲಿನ್ ಪ್ರತಿರೋಧವನ್ನು ಕಡಿಮೆ ಮಾಡುತ್ತದೆ. ಜತೆಗೆ ಮಲಬದ್ಧತೆಯ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ಸಹಾಯಕವಾಗಿದೆ. ತೂಕ ನಷ್ಟಕ್ಕೆ ಜೀರಿಗೆ ನೀರು ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ತಿಳಿಯಿರಿ.

ಚಯಾಪಚಯವನ್ನು ಸುಧಾರಿಸುತ್ತದೆ ಚಯಾಪಚಯ ತ್ವರಿತ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ನಿಧಾನ ಚಯಾಪಚಯವು ತೂಕ ಇಳಿಸುವ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಜೀರಿಗೆ ನೀರು ನಿಮ್ಮ ಚಯಾಪಚಯವನ್ನು ಸುಧಾರಿಸುತ್ತದೆ ಮತ್ತು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸಹಾಯಕವಾಗಿದೆ.

ಹಸಿವನ್ನು ತಣಿಸುತ್ತದೆ ಜೀರಿಗೆ ನೀರಿನಲ್ಲಿ ಕಡಿಮೆ ಕ್ಯಾಲೊರಿಗಳಿವೆ. ಇದು ನಿಮ್ಮ ಹಸಿವನ್ನು ದೀರ್ಘಕಾಲದವರೆಗೆ ತುಂಬುತ್ತದೆ. ಇದು ನಿಮ್ಮ ಹೆಚ್ಚಿನ ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಜೀರ್ಣಕ್ರಿಯೆ ತೊಂದರೆಯಿಂದಾಗಿ ಮಲಬದ್ಧತೆ ಉಂಟಾಗುತ್ತದೆ. ಇದರಿಂದಾಗಿ ತೂಕವನ್ನು ಕಳೆದುಕೊಳ್ಳುವುದು ಕಷ್ಟವಾಗುತ್ತದೆ. ಜೀರಿಗೆ ನೀರು ಮಲಬದ್ಧತೆಯನ್ನು ನಿವಾರಿಸುತ್ತದೆ. ಜತೆಗೆ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ.

ಜೀರಿಗೆ ನೀರು ಮತ್ತು ದಾಲ್ಚಿನ್ನಿ ಜೀರಿಗೆಯನ್ನು ರಾತ್ರಿ ನೆನೆಸಿ ಮತ್ತು ಮರುದಿನ ಬೆಳಿಗ್ಗೆ ಒಂದು ಚಿಟಿಕೆ ದಾಲ್ಚಿನ್ನಿ ನೀರಿಗೆ ಸೇರಿಸಿ. ದಾಲ್ಚಿನ್ನಿ ಉರಿಯೂತ ನಿರೋಧಕಗಳನ್ನು ಹೊಂದಿದ್ದು, ಇದು ಗ್ಲೂಕೋಸ್ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಈ ನೀರಿನ ನಿಯಮಿತ ಸೇವನೆ ತವರಿತ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

ಜೀರಿಗೆ ಮತ್ತು ನಿಂಬೆ ನಿಂಬೆಯಲ್ಲಿ ಸ್ಟ್ರಿಕ್ ಆಸಿಡ್ ಅಂಶವಿದ್ದು ಇದು ತೂಕ ಇಳಿಸಿಕೊಳ್ಳಲು ಸಹಾಯಕವಾಗಿದೆ. ಇದಲ್ಲದೆ ಇದು ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ಕೊಬ್ಬನ್ನು ವೇಗವಾಗಿ ಸುಡುತ್ತದೆ. ಹಾಗಾಗಿ ಜೀರಿಗೆ ಮತ್ತು ನಿಂಬು ರಸ ಆರೋಗ್ಯಕ್ಕೆ ಒಳ್ಳೆಯದು.

ಇದನ್ನೂ ಓದಿ:

ಕಪ್ಪು ಜೀರಿಗೆಯಲ್ಲಿ ಕೊವಿಡ್ ಸೋಂಕು ತಡೆಗಟ್ಟುವ ಸಾಮರ್ಥ್ಯವಿದೆ: ವರದಿ

Carom Seeds: ಓಂ ಕಾಳು ರುಚಿಯ ಜತೆಗೆ ಹಲವು ಆರೋಗ್ಯಕರ ಗುಣಗಳನ್ನು ಹೊಂದಿದೆ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ