Sign In

By signing in or creating an account, you agree with Associated Broadcasting Company's Terms & Conditions and Privacy Policy.

West Nile Fever: ವೆಸ್ಟ್ ನೈಲ್ ಜ್ವರದ ಲಕ್ಷಣಗಳೇನು?; ಇದನ್ನು ತಡೆಗಟ್ಟೋದು ಹೇಗೆ?

2011ರಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ವೆಸ್ಟ್ ನೈಲ್ ಜ್ವರದ ಪ್ರಕರಣ ಪತ್ತೆಯಾಯಿತು. 2019ರಲ್ಲಿ ಮಲಪ್ಪುರಂನ 6 ವರ್ಷದ ಬಾಲಕ ಈ ರೋಗಕ್ಕೆ ಬಲಿಯಾಗಿದ್ದ. ಮೇ 2022ರಲ್ಲಿ ತ್ರಿಶೂರ್ ಜಿಲ್ಲೆಯ 47 ವರ್ಷದ ವ್ಯಕ್ತಿ ಕೂಡ ಜ್ವರದಿಂದ ಸಾವನ್ನಪ್ಪಿದರು. ಹಾಗಾದರೆ, ವೆಸ್ಟ್ ನೈಲ್ ಜ್ವರದ ಲಕ್ಷಣಗಳೇನು? ಇದು ಅಪಾಯಕಾರಿಯೇ?

West Nile Fever: ವೆಸ್ಟ್ ನೈಲ್ ಜ್ವರದ ಲಕ್ಷಣಗಳೇನು?; ಇದನ್ನು ತಡೆಗಟ್ಟೋದು ಹೇಗೆ?
ವೆಸ್ಟ್ ನೈಲ್ ಜ್ವರ
Follow us
ಸುಷ್ಮಾ ಚಕ್ರೆ
|

Updated on: May 07, 2024 | 4:47 PM

ಕೇರಳದ ಕೋಝಿಕ್ಕೋಡ್ (Kozhikode) ಜಿಲ್ಲೆಯಲ್ಲಿ ವೆಸ್ಟ್ ನೈಲ್ ಜ್ವರದ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಸೊಳ್ಳೆ ನಿರ್ಮೂಲನಾ ಕಾರ್ಯವನ್ನು ಚುರುಕುಗೊಳಿಸಲಾಗುವುದು ಎಂದು ಆರೋಗ್ಯ ಇಲಾಖೆ ಪ್ರಕಟಿಸಿದೆ. ಕೇರಳದಲ್ಲಿ (Kerala) ಸೋಂಕಿನ ಪ್ರಕರಣ ಪತ್ತೆಯಾಗಿದ್ದು, ಕೋಝಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ರೋಗ ದೃಢಪಟ್ಟಿದೆ. ಈ ವೆಸ್ಟ್ ನೈಲ್ ಜ್ವರದ ಲಕ್ಷಣಗಳೇನು? (West Nile Fever Symptoms) ಈ ಕುರಿತು ಯಾವ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು? ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ವೆಸ್ಟ್ ನೈಲ್ ಎಂಬುದು ಕ್ಯುಲೆಕ್ಸ್ ಸೊಳ್ಳೆಯಿಂದ ಹರಡುವ ಸಾಂಕ್ರಾಮಿಕ ರೋಗವಾಗಿದೆ. ಇದು ಜಪಾನ್ ಜ್ವರದಷ್ಟು ಅಪಾಯಕಾರಿ ಅಲ್ಲ. ಜಪಾನ್ ಜ್ವರವು ಸಾಮಾನ್ಯವಾಗಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ವೆಸ್ಟ್ ನೈಲ್ ಜ್ವರ ವಯಸ್ಕರ ಮೇಲೆ ಪರಿಣಾಮ ಬೀರುತ್ತದೆ. ಇವೆರಡೂ ಸೊಳ್ಳೆಯಿಂದ ಹರಡುವ ರೋಗಗಳಾಗಿವೆ. ಜಪಾನೀಸ್ ಜ್ವರಕ್ಕೆ ಲಸಿಕೆ ಲಭ್ಯವಿದೆ.

ಇದನ್ನೂ ಓದಿ: West Nile Fever: ಕೇರಳದಲ್ಲಿ ಐವರಿಗೆ ವೆಸ್ಟ್ ನೈಲ್ ಜ್ವರ ಪತ್ತೆ

ವೆಸ್ಟ್ ನೈಲ್ ಜ್ವರವು ಮುಖ್ಯವಾಗಿ ಕ್ಯುಲೆಕ್ಸ್ ಜಾತಿಗೆ ಸೇರಿದ ಸೊಳ್ಳೆಗಳಿಂದ ಹರಡುತ್ತದೆ. ಪಕ್ಷಿಗಳಿಗೂ ಈ ಸೋಂಕು ತಗುಲುತ್ತದೆ. ಈ ವೈರಸ್ ಅನ್ನು ಮೊದಲು 1937ರಲ್ಲಿ ಉಗಾಂಡಾದಲ್ಲಿ ಕಂಡುಹಿಡಿಯಲಾಯಿತು. ವೆಸ್ಟ್ ನೈಲ್ ಜ್ವರದ ಲಕ್ಷಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಈ ರೋಗದ ಮುಖ್ಯ ಲಕ್ಷಣಗಳೆಂದರೆ, ತಲೆನೋವು, ಜ್ವರ, ಸ್ನಾಯು ನೋವು, ತಲೆ ತಿರುಗುವಿಕೆ ಮತ್ತು ಜ್ಞಾಪಕ ಶಕ್ತಿಯ ಕೊರತೆ. ಈ ಸೋಂಕಿಗೆ ಒಳಗಾದ ಹೆಚ್ಚಿನ ಜನರು ಸಾಮಾನ್ಯವಾಗಿ ಯಾವುದೇ ರೋಗಲಕ್ಷಣಗಳನ್ನು ಹೊಂದಿರುವುದಿಲ್ಲ. ಕೆಲವರು ಜ್ವರ, ತಲೆನೋವು, ವಾಂತಿ ಮತ್ತು ತುರಿಕೆ ಮುಂತಾದ ಲಕ್ಷಣಗಳನ್ನು ಅನುಭವಿಸುತ್ತಾರೆ. ಶೇ. 1ರಷ್ಟು ಜನರಲ್ಲಿ ಇದು ಪ್ರಜ್ಞಾಹೀನತೆಗೆ ಕಾರಣವಾಗಬಹುದು. ಇನ್ನು ಕೆಲವೊಮ್ಮೆ ಸಾವಿಗೆ ಕಾರಣವಾಗಬಹುದು.

ಇದನ್ನೂ ಓದಿ: Bird Flu: ಹೆಚ್ಚುತ್ತಿದೆ ಹಕ್ಕಿ ಜ್ವರದ ಹಾವಳಿ; ಯಾವ ಆಹಾರ ಸೇವಿಸಬೇಕು? ಏನು ತಿನ್ನಬಾರದು?

ವೆಸ್ಟ್ ನೈಲ್ ಜ್ವರದ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯೇನು?:

ವೆಸ್ಟ್ ನೈಲ್ ಜ್ವರ ಕಾಯಿಲೆಗೆ ಸರಿಯಾದ ಚಿಕಿತ್ಸೆ ಅಥವಾ ಲಸಿಕೆ ಇಲ್ಲದಿರುವುದರಿಂದ ಇದನ್ನು ತಡೆಗಟ್ಟುವಿಕೆ ಮುಖ್ಯವಾಗಿದೆ. ಸೊಳ್ಳೆ ಕಡಿತವನ್ನು ತಪ್ಪಿಸುವುದು ಈ ರೋಗವನ್ನು ತಡೆಗಟ್ಟುವ ಅತ್ಯುತ್ತಮ ವಿಧಾನವಾಗಿದೆ. ದೇಹವನ್ನು ಮುಚ್ಚುವ ಬಟ್ಟೆಗಳನ್ನು ಧರಿಸುವುದು, ಸೊಳ್ಳೆ ಪರದೆಗಳನ್ನು ಬಳಸುವುದು, ಸೊಳ್ಳೆ ನಿವಾರಕಗಳನ್ನು ಹಚ್ಚುವುದು, ಸೊಳ್ಳೆ ಪರದೆಗಳು ಮತ್ತು ವಿದ್ಯುತ್ ಸೊಳ್ಳೆ ನಿವಾರಕ ಸಾಧನಗಳನ್ನು ಬಳಸುವುದು ಈ ಜ್ವರ ನಿವಾರಿಸಲು ಪರಿಣಾಮಕಾರಿ ಮಾರ್ಗವಾಗಿದೆ. ಆರಂಭದಲ್ಲೇ ಚಿಕಿತ್ಸೆ ನೀಡಿದರೆ ಈ ರೋಗ ಗುಣಮುಖವಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ