Namma Clinic: ನಮ್ಮ ಕ್ಲಿನಿಕ್ ಎಂದರೇನು? ಕರ್ನಾಟಕದಾದ್ಯಂತ ಇಂದಿನಿಂದ ಅಸ್ತಿತ್ವಕ್ಕೆ ಬರಲಿರುವ ಹೊಸ ಆರೋಗ್ಯ ಕೇಂದ್ರಗಳ ಬಗ್ಗೆ ಇಲ್ಲಿದೆ ಮಾಹಿತಿ

Karnataka Healthcare: ಕೊಳಗೇರಿ ನಿವಾಸಿಗಳು, ದಿನಗೂಲಿ ಕಾರ್ಮಿಕರು ಮತ್ತು ಸಮಾಜದಲ್ಲಿರುವ ಇತರ ದುರ್ಬಲ ವರ್ಗಗಳಿಗೆ ಸುಲಭವಾಗಿ ವೈದ್ಯಕೀಯ ಸೇವೆ ದೊರಕಿಸಬೇಕು ಎನ್ನುವ ದೃಷ್ಟಿಯಿಂದ ನಮ್ಮ ಕ್ಲಿನಿಕ್​ಗಳು ಕಾರ್ಯಾರಂಭ ಮಾಡುತ್ತಿವೆ.

Namma Clinic: ನಮ್ಮ ಕ್ಲಿನಿಕ್ ಎಂದರೇನು? ಕರ್ನಾಟಕದಾದ್ಯಂತ ಇಂದಿನಿಂದ ಅಸ್ತಿತ್ವಕ್ಕೆ ಬರಲಿರುವ ಹೊಸ ಆರೋಗ್ಯ ಕೇಂದ್ರಗಳ ಬಗ್ಗೆ ಇಲ್ಲಿದೆ ಮಾಹಿತಿ
ಬೆಂಗಳೂರಿನ ನಮ್ಮ ಕ್ಲಿನಿಕ್ ಮತ್ತು ಆರೋಗ್ಯ ಸಚಿವ ಡಾ ಕೆ.ಸುಧಾಕರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 14, 2022 | 8:16 AM

ಬೆಂಗಳೂರು: ನಗರಗಳಲ್ಲಿ ವಾಸವಿರುವ ಬಡವರಿಗೆ ನೆರವಾಗಲೆಂದು ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯು ರಾಜ್ಯದಾದ್ಯಂತ ರೂಪಿಸಿರುವ 114 ‘ನಮ್ಮ ಕ್ಲಿನಿಕ್’​ಗಳು (Namma Clinic) ಇಂದಿನಿಂದ (ಡಿ 14) ಕಾರ್ಯಾರಂಭ ಮಾಡಲಿವೆ. ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಈ ಸಂಬಂಧ ಮಾಹಿತಿ ನೀಡಿದ್ದ ಆರೋಗ್ಯ ಸಚಿವ ಡಾ ಕೆ ಸುಧಾಕರ (Dr K Sudhakar), ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮ್ಮ ಕ್ಲಿನಿಕ್​ಗಳಿಗೆ ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ ಒಟ್ಟು 114 ನಮ್ಮ ಕ್ಲಿನಿಕ್​ಗಳು ಏಕಕಾಲಕ್ಕೆ ಕಾರ್ಯಾರಂಭ ಮಾಡಲಿವೆ’ ಎಂದು ಹೇಳಿದ್ದರು. ಇನ್ನು ಒಂದು ತಿಂಗಳ ಅವಧಿಯಲ್ಲಿ, ಅಂದರೆ ಜನವರಿ 2023ರಲ್ಲಿ ರಾಜ್ಯದ ನಮ್ಮ ಕ್ಲಿನಿಕ್​ಗಳ ಸಂಖ್ಯೆಯನ್ನು 438ಕ್ಕೆ ಹೆಚ್ಚಿಸಲು ಸರ್ಕಾರವು ಕ್ರಮ ವಹಿಸಲಿದೆ. ಇದಕ್ಕಾಗಿ ಕೆಲಸಗಳು ನಡೆಯುತ್ತಿವೆ ಎಂದು ತಿಳಿಸಿದರು.

ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ 243 ನಮ್ಮ ಕ್ಲಿನಿಕ್​ಗಳು ಕಾರ್ಯಾರಂಭ ಮಾಡಲಿವೆ. ಇವೆಲ್ಲವೂ ಸಾರ್ವಜನಿಕರ ಸೇವೆಗೆ ಜನವರಿ ತಿಂಗಳ 2ನೇ ವಾರದಲ್ಲಿ ಲಭ್ಯವಾಗುವಂತೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಕನಿಷ್ಠ 150 ಕ್ಲಿನಿಕ್​ಗಳು ಶೀಘ್ರ ಕಾರ್ಯಾರಂಭ ಮಾಡಲಿವೆ ಎಂದು ಅವರು ಹೇಳಿದರು.

ನಮ್ಮ ಕ್ಲಿನಿಕ್​ಗಳು ಎಂದರೇನು?

ಕೊಳಗೇರಿ ನಿವಾಸಿಗಳು, ದಿನಗೂಲಿ ಕಾರ್ಮಿಕರು ಮತ್ತು ಸಮಾಜದಲ್ಲಿರುವ ಇತರ ದುರ್ಬಲ ವರ್ಗಗಳಿಗೆ ಸುಲಭವಾಗಿ ವೈದ್ಯಕೀಯ ಸೇವೆ ದೊರಕಿಸಬೇಕು ಎನ್ನುವ ದೃಷ್ಟಿಯಿಂದ ನಮ್ಮ ಕ್ಲಿನಿಕ್​ಗಳು ಕಾರ್ಯಾರಂಭ ಮಾಡುತ್ತಿವೆ. ಪ್ರತಿ ನಮ್ಮ ಕ್ಲಿನಿಕ್​ 10ರಿಂದ 20 ಸಾವಿರ ಜನರಿಗೆ ಸೇವೆ ಒದಗಿಸಲಿದೆ.

ನಮ್ಮ ಕ್ಲಿನಿಕ್​ಗಳಲ್ಲಿ 12 ರೀತಿಯ ವೈದ್ಯಕೀಯ ಸೇವೆಗಳು ಲಭ್ಯವಿದೆ. ಪ್ರತಿ ನಮ್ಮ ಕ್ಲಿನಿಕ್​ನಲ್ಲಿಯೂ ವೈದ್ಯಕೀಯ ಅಧಿಕಾರಿ, ನರ್ಸ್, ಲ್ಯಾಬ್ ಟೆಕ್ನೀಷಿಯನ್ ಮತ್ತು ಗ್ರೂಪ್ ಡಿ ನೌಕರ ಇರುತ್ತಾರೆ. ಇಲ್ಲಿ ಲಭ್ಯವಿರುವ 12 ಸೇವೆಗಳಲ್ಲಿ ಗರ್ಭಿಣಿಯರ ತಪಾಸಣೆ ಮತ್ತು ಆರೈಕೆ, ನವಜಾತ ಶಿಶುಗಳ ಆರೈಕೆ, ಶಿಶುಗಳಿಗೆ ಚಿಕಿತ್ಸೆ, ಮಕ್ಕಳು ಮತ್ತು ಹದಿಹರೆಯದವರ ಆರೋಗ್ಯ ಕಾಳಜಿ, ಲಸಿಕೆ ಸೇವೆ, ಕುಟುಂಬ ನಿಯಂತ್ರಣ, ಸೋಂಕು ರೋಗಗಳ ನಿರ್ವಹಣೆ, ಸಕ್ಕೆ ಕಾಯಿಲೆ, ರಕ್ತದೊತ್ತಡ ನಿರ್ವಹಣೆ, ಸಣ್ಣಪುಟ್ಟ ಗಾಯಗಳಿಗೆ ಆರೈಕೆ, ಮರುಕಳಿಸುವ ಕಾಯಿಲೆಗಳು ಸೇರಿವೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಸಮಸ್ಯೆಗಳಿಗೆ ಸಂಬಂಧಿಸಿದ ಆಸ್ಪತ್ರೆಗಳಿಗೆ ರೆಫರಲ್ ಸೇವೆಗಳನ್ನೂ ಉಚಿತವಾಗಿ ಒದಗಿಸಲಾಗುವುದು.

ವಯೋವೃದ್ಧರ ಆರೈಕೆ, ತುರ್ತು ವೈದ್ಯಕೀಯ ಸೇವೆಗಳು, ಅರೋಗ್ಯ ತಪಾಸಣೆ ಮತ್ತು ಔಷಧಿಗಳನ್ನು ಸಂಪೂರ್ಣ ಉಚಿತವಾಗಿ ಒದಗಿಸಲಾಗುವುದು. 14 ಬಗೆಯ ಲ್ಯಾಬ್ ಟೆಸ್ಟ್​ಗಳು, ಟೆಲಿ ಕನ್ಸಲ್​ಟೇಶನ್ ಸೌಲಭ್ಯ, ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಲು ಸಲಹೆಗಳು ಉಚಿತವಾಗಿ ದೊರೆಯುತ್ತವೆ. ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 9ರಿಂದ ಸಂಜೆ 4.30ರವರೆಗೆ ನಮ್ಮ ಕ್ಲಿನಿಕ್​ಗಳು ಕಾರ್ಯನಿರ್ವಹಿಸುತ್ತವೆ. ಜನವಸತಿಗಳಿಗೆ ಹತ್ತಿರದಲ್ಲಿ ಕ್ಲಿನಿಕ್​ಗಳನ್ನು ಆರಂಭಿಸುವುದರಿಂದ ಜನರಿಗೆ ಆರೋಗ್ಯ ಸೇವೆಗಳು ಸುಲಭವಾಗಿ ಸಿಗಲು ಸಾಧ್ಯವಾಗುತ್ತದೆ. ಅಷ್ಟೇ ಅಲ್ಲ, ಸರ್ಕಾರಿ ಆಸ್ಪತ್ರೆಗಳ ಮೇಲಿರುವ ಒತ್ತಡವೂ ಕಡಿಮೆಯಾಗುತ್ತದೆ.

ಇದನ್ನೂ ಓದಿ: Namma Clinic: ವರ್ಷಾಂತ್ಯಕ್ಕೆ 438 ನಮ್ಮ ಕ್ಲಿನಿಕ್‌ ಆಸ್ಪತ್ರೆಗಳ ಕಾರ್ಯಾರಂಭ -ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್‌, 160 ವೈದ್ಯರ ನೇಮಕ ಪೂರ್ಣ – ಡಾ. ಕೆ ಸುಧಾಕರ್‌

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಬರಹ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:14 am, Wed, 14 December 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು