ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿಯುವುದರಿಂದ ತೂಕ ಕಡಿಮೆಯಾಗುತ್ತಾ?

|

Updated on: Jan 25, 2024 | 6:59 PM

ಇತ್ತೀಚೆಗೆ, ಅನೇಕ ಜನರು ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿದ್ದು,ಅಂಥವರಿಗೆ ಜೀರಿಗೆ ನೀರು ಉತ್ತಮ ಪರಿಹಾರ ಎನ್ನುತ್ತಾರೆ ತಜ್ಞರು. ಬೆಳಗ್ಗೆ ಎದ್ದ ತಕ್ಷಣ ಜೀರಿಗೆ ನೀರನ್ನು ಕುಡಿಯುವುದರಿಂದ ಅದ್ಭುತವಾದ ಪ್ರಯೋಜನಗಳನ್ನು ಪಡೆಯಬಹುದು.

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿಯುವುದರಿಂದ ತೂಕ ಕಡಿಮೆಯಾಗುತ್ತಾ?
Cumin water
Image Credit source: Pinterest
Follow us on

ಜೀರಿಗೆ ನೀರನ್ನು ಕುಡಿಯುವುದರಿಂದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಇತ್ತೀಚೆಗೆ, ಅನೇಕ ಜನರು ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿದ್ದು,ಅಂಥವರಿಗೆ ಜೀರಿಗೆ ನೀರು ಉತ್ತಮ ಪರಿಹಾರ ಎನ್ನುತ್ತಾರೆ ತಜ್ಞರು. ಬೆಳಗ್ಗೆ ಎದ್ದ ತಕ್ಷಣ ಜೀರಿಗೆ ನೀರನ್ನು ಕುಡಿಯುವುದರಿಂದ ಅದ್ಭುತವಾದ ಪ್ರಯೋಜನಗಳನ್ನು ಪಡೆಯಬಹುದು. ಜೀರಿಗೆ ನೀರಿನಲ್ಲಿ ಕ್ಯಾಲೋರಿ ಕಡಿಮೆ ಇರುವುರಿಂದ, ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರನ್ನು ಕುಡಿಯುವುದರಿಂದ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. ಈ ನೀರು ತೂಕ ಇಳಿಸಲು ಸಹಾಯ ಮಾಡುತ್ತದೆ.

ಜೀರಿಗೆ ಕಬ್ಬಿಣದಂತಹ ಅಗತ್ಯ ಪೋಷಕಾಂಶಗಳನ್ನು ಹೊಂದಿದ್ದು, ಇದು ರಕ್ತದಲ್ಲಿ ಆಮ್ಲಜನಕವನ್ನು ಸಾಗಿಸುವ ಹಿಮೋಗ್ಲೋಬಿನ್ ಅನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ. ಇದು ರಕ್ತ ಹೆಪ್ಪುಗಟ್ಟುವಿಕೆ ಮತ್ತು ದೈಹಿಕ ಉರಿಯೂತದ ಅಪಾಯವನ್ನು ಕಡಿಮೆ ಮಾಡುತ್ತದೆ. ಜೀರಿಗೆಯಲ್ಲಿ ಆ್ಯಂಟಿಆಕ್ಸಿಡೆಂಟ್ ಗಳಿದ್ದು, ಸ್ವತಂತ್ರ ರಾಡಿಕಲ್ಗಳೊಂದಿಗೆ ಹೋರಾಡಿ ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತಾರೆ. ಜೀರಿಗೆ ನೀರನ್ನು ಕುಡಿಯುವುದರಿಂದ ತೂಕ ನಷ್ಟದ ಜೊತೆಗೆ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಜೀರಿಗೆ ನೀರು ಅಜೀರ್ಣಕ್ಕೆ ತುಂಬಾ ಒಳ್ಳೆಯದು. ಹೊಟ್ಟೆ ಉಬ್ಬರ ಮತ್ತು ತೂಕದಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಜೀರಿಗೆ ನೀರನ್ನು ಕುಡಿಯಿರಿ. ಇದು ಹೊಟ್ಟೆಯ ಅಸ್ವಸ್ಥತೆಯನ್ನು ಸಹ ತೆಗೆದುಹಾಕುತ್ತದೆ.

ಇದನ್ನೂ ಓದಿ: ತೂಕ ಇಳಿಸಬೇಕಾ?; ಕೇಸರಿ ಬಳಸಿ!

ಜೀರಿಗೆಯಲ್ಲಿ ಪೊಟ್ಯಾಸಿಯಮ್ ಇದೆ. ಅಧಿಕ ರಕ್ತದೊತ್ತಡ ಹೊಂದಿರುವ ಜನರಿಗೆ ಪೊಟ್ಯಾಸಿಯಮ್ ಮುಖ್ಯವಾಗಿದೆ. ಜೀರಿಗೆ ನೀರು ಕುಡಿಯುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಇದು ಹೃದ್ರೋಗದ ಅಪಾಯವನ್ನೂ ಕಡಿಮೆ ಮಾಡುತ್ತದೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಅಥವಾ ಆರೋಗ್ಯ ಕಾಪಾಡಿಕೊಳ್ಳಲು ಜೀರಿಗೆ ನೀರನ್ನು ಕುಡಿಯಿರಿ.ಜೀರಿಗೆ ನೀರು ಕುಡಿಯುವುದರಿಂದ ತೂಕ ಇಳಿಸುವುದು ಮಾತ್ರವಲ್ಲ, ಸಕ್ಕರೆಯಿಂದ ಹಿಡಿದು ಎಲ್ಲವನ್ನೂ ನಿಯಂತ್ರಣದಲ್ಲಿಡುತ್ತದೆ. ಜೀರಿಗೆ ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ತ್ವರಿತವಾಗಿ ಹೆಚ್ಚಿಸುವುದಿಲ್ಲ. ಹಾಗಾಗಿ ಮಧುಮೇಹಿಗಳು ಜೀರಿಗೆ ನೀರನ್ನು ಕುಡಿಯಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ