Red Guava: ಕೆಂಪು ಪೇರಲೆ ಹಣ್ಣು ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ

ಬಿಡುವಿಲ್ಲದ ಜೀವನದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ನಿಮ್ಮ ಆರೋಗ್ಯದ ಬಗ್ಗೆ ಸರಿಯಾದ ಕಾಳಜಿ ವಹಿಸದಿದ್ದರೆ, ಅದು ಹಲವಾರು ಸಮಸ್ಯೆಗಳನ್ನು ತಂದೊಡ್ಡುತ್ತದೆ.

Red Guava: ಕೆಂಪು ಪೇರಲೆ ಹಣ್ಣು ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ
Red Guava
Follow us
TV9 Web
| Updated By: ನಯನಾ ರಾಜೀವ್

Updated on: Aug 24, 2022 | 12:34 PM

ಬಿಡುವಿಲ್ಲದ ಜೀವನದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ನಿಮ್ಮ ಆರೋಗ್ಯದ ಬಗ್ಗೆ ಸರಿಯಾದ ಕಾಳಜಿ ವಹಿಸದಿದ್ದರೆ, ಅದು ಹಲವಾರು ಸಮಸ್ಯೆಗಳನ್ನು ತಂದೊಡ್ಡುತ್ತದೆ. ವಿಶೇಷವಾಗಿ ಈ ದಿನಗಳಲ್ಲಿ ಜನರು ತಮ್ಮ ಆಹಾರದ ಬಗ್ಗೆ ವಿಶೇಷ ಗಮನ ಹರಿಸಬೇಕು. ಸರಿಯಾದ ಆಹಾರ ಸೇವನೆಯಿಂದ ದೇಹದಲ್ಲಿನ ಅನೇಕ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು.

ನಿರ್ದಿಷ್ಟವಾಗಿ ಹೇಳುವುದಾದರೆ, ಆರೋಗ್ಯಕರ ದೇಹಕ್ಕೆ ಋತುಮಾನದ ಹಣ್ಣುಗಳ ಸೇವನೆಯು ಅತ್ಯಗತ್ಯ. ಮಳೆಗಾಲದಲ್ಲಿ ಹಲವು ಬಗೆಯ ಹಣ್ಣುಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಇವುಗಳಲ್ಲಿ ಪೇರಲೆಯು ಕೂಡ ಸೇರಿದೆ.

ಸಾಮಾನ್ಯವಾಗಿ ನಾವು ಬಿಳಿ ಪೇರಲೆಯನ್ನು ತಿನ್ನುತ್ತೇವೆ, ಆದರೆ ಕೆಂಪು ಪೇರಲೆಯು ಹಲವಾರು ಅದ್ಭುತವಾದ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂದು ನಿಮಗೆ ತಿಳಿದಿದೆಯೇ. ಕೆಂಪು ಪೇರಲೆಯ ಆರೋಗ್ಯ ಪ್ರಯೋಜನಗಳನ್ನು ತಿಳಿಯೋಣ ಜೀರ್ಣಕ್ರಿಯೆ ಸುಲಭಗೊಳಿಸುವುದು.

ಕೆಂಪು ಪೇರಲೆಯು ದೇಹವನ್ನು ತಂಪಾಗಿರಿಸುತ್ತದೆ. ಇದು ನಿಮ್ಮ ಹೊಟ್ಟೆಗೆ ತುಂಬಾ ಒಳ್ಳೆಯದು. ಇದನ್ನು ಸೇವಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ದೂರವಿರಬಹುದು. ಕೆಂಪು ಪೇರಲೆಯಲ್ಲಿ ವಿಟಮಿನ್ ಸಿ ಹಾಗೂ ಜೀರ್ಣಕ್ರಿಯೆಯನ್ನು ಸುಧಾರಿಸುವ ಅನೇಕ ಗುಣಗಳು ಅಡಗಿವೆ.

ಮಲಬದ್ಧತೆ ಸಮಸ್ಯೆ ನಿವಾರಣೆ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಕೆಂಪು ಪೇರಲೆ ತುಂಬಾ ಉಪಯುಕ್ತವಾಗಿದೆ. ಇದರಲ್ಲಿರುವ ಫೈಬರ್ ಕರುಳಿನ ಚಲನೆಗೆ ಸಹಾಯ ಮಾಡುತ್ತದೆ.

ಶೀತದಿಂದ ಪರಿಹಾರ ಕೆಂಪು ಪೇರಲೆ ಬೀಜಗಳು ಶೀತ ಮತ್ತು ಜ್ವರವನ್ನು ದೂರವಿಡುತ್ತವೆ. ಆದ್ದರಿಂದ ಪೇರಲೆಯನ್ನು ಅದರ ಬೀಜಗಳೊಂದಿಗೆ ಸೇವಿಸಿ. ಅಷ್ಟೇ ಅಲ್ಲ, ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಇದು ಉಪಯುಕ್ತವಾಗಿದೆ.

ಕಬ್ಬಿಣದ ಕೊರತೆಯನ್ನು ನಿವಾರಿಸುತ್ತದೆ ಕೆಂಪು ಪೇರಲೆಯನ್ನು ಸೇವಿಸುವುದರಿಂದ ದೇಹದಲ್ಲಿ ಕಬ್ಬಿಣಾಂಶವನ್ನು ತುಂಬಿಕೊಳ್ಳಬಹುದು. ಅದರಲ್ಲೂ ಪೇರಲೆವನ್ನು ನಿತ್ಯವೂ ಜಗಿದು ತಿಂದರೆ ದೇಹದಲ್ಲಿನ ಕಬ್ಬಿಣಾಂಶದ ಕೊರತೆಯನ್ನು ಹೋಗಲಾಡಿಸಬಹುದು.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ