Red Guava: ಕೆಂಪು ಪೇರಲೆ ಹಣ್ಣು ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ

ಬಿಡುವಿಲ್ಲದ ಜೀವನದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ನಿಮ್ಮ ಆರೋಗ್ಯದ ಬಗ್ಗೆ ಸರಿಯಾದ ಕಾಳಜಿ ವಹಿಸದಿದ್ದರೆ, ಅದು ಹಲವಾರು ಸಮಸ್ಯೆಗಳನ್ನು ತಂದೊಡ್ಡುತ್ತದೆ.

Red Guava: ಕೆಂಪು ಪೇರಲೆ ಹಣ್ಣು ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳನ್ನು ತಿಳಿಯಿರಿ
Red Guava
Edited By:

Updated on: Aug 24, 2022 | 12:34 PM

ಬಿಡುವಿಲ್ಲದ ಜೀವನದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ನಿಮ್ಮ ಆರೋಗ್ಯದ ಬಗ್ಗೆ ಸರಿಯಾದ ಕಾಳಜಿ ವಹಿಸದಿದ್ದರೆ, ಅದು ಹಲವಾರು ಸಮಸ್ಯೆಗಳನ್ನು ತಂದೊಡ್ಡುತ್ತದೆ. ವಿಶೇಷವಾಗಿ ಈ ದಿನಗಳಲ್ಲಿ ಜನರು ತಮ್ಮ ಆಹಾರದ ಬಗ್ಗೆ ವಿಶೇಷ ಗಮನ ಹರಿಸಬೇಕು. ಸರಿಯಾದ ಆಹಾರ ಸೇವನೆಯಿಂದ ದೇಹದಲ್ಲಿನ ಅನೇಕ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು.

ನಿರ್ದಿಷ್ಟವಾಗಿ ಹೇಳುವುದಾದರೆ, ಆರೋಗ್ಯಕರ ದೇಹಕ್ಕೆ ಋತುಮಾನದ ಹಣ್ಣುಗಳ ಸೇವನೆಯು ಅತ್ಯಗತ್ಯ. ಮಳೆಗಾಲದಲ್ಲಿ ಹಲವು ಬಗೆಯ ಹಣ್ಣುಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಇವುಗಳಲ್ಲಿ ಪೇರಲೆಯು ಕೂಡ ಸೇರಿದೆ.

ಸಾಮಾನ್ಯವಾಗಿ ನಾವು ಬಿಳಿ ಪೇರಲೆಯನ್ನು ತಿನ್ನುತ್ತೇವೆ, ಆದರೆ ಕೆಂಪು ಪೇರಲೆಯು ಹಲವಾರು ಅದ್ಭುತವಾದ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂದು ನಿಮಗೆ ತಿಳಿದಿದೆಯೇ. ಕೆಂಪು ಪೇರಲೆಯ ಆರೋಗ್ಯ ಪ್ರಯೋಜನಗಳನ್ನು ತಿಳಿಯೋಣ
ಜೀರ್ಣಕ್ರಿಯೆ ಸುಲಭಗೊಳಿಸುವುದು.

ಕೆಂಪು ಪೇರಲೆಯು ದೇಹವನ್ನು ತಂಪಾಗಿರಿಸುತ್ತದೆ. ಇದು ನಿಮ್ಮ ಹೊಟ್ಟೆಗೆ ತುಂಬಾ ಒಳ್ಳೆಯದು. ಇದನ್ನು ಸೇವಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ನೀವು ದೂರವಿರಬಹುದು. ಕೆಂಪು ಪೇರಲೆಯಲ್ಲಿ ವಿಟಮಿನ್ ಸಿ ಹಾಗೂ ಜೀರ್ಣಕ್ರಿಯೆಯನ್ನು ಸುಧಾರಿಸುವ ಅನೇಕ ಗುಣಗಳು ಅಡಗಿವೆ.

ಮಲಬದ್ಧತೆ ಸಮಸ್ಯೆ ನಿವಾರಣೆ
ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಕೆಂಪು ಪೇರಲೆ ತುಂಬಾ ಉಪಯುಕ್ತವಾಗಿದೆ. ಇದರಲ್ಲಿರುವ ಫೈಬರ್ ಕರುಳಿನ ಚಲನೆಗೆ ಸಹಾಯ ಮಾಡುತ್ತದೆ.

ಶೀತದಿಂದ ಪರಿಹಾರ
ಕೆಂಪು ಪೇರಲೆ ಬೀಜಗಳು ಶೀತ ಮತ್ತು ಜ್ವರವನ್ನು ದೂರವಿಡುತ್ತವೆ. ಆದ್ದರಿಂದ ಪೇರಲೆಯನ್ನು ಅದರ ಬೀಜಗಳೊಂದಿಗೆ ಸೇವಿಸಿ. ಅಷ್ಟೇ ಅಲ್ಲ, ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಇದು ಉಪಯುಕ್ತವಾಗಿದೆ.

ಕಬ್ಬಿಣದ ಕೊರತೆಯನ್ನು ನಿವಾರಿಸುತ್ತದೆ
ಕೆಂಪು ಪೇರಲೆಯನ್ನು ಸೇವಿಸುವುದರಿಂದ ದೇಹದಲ್ಲಿ ಕಬ್ಬಿಣಾಂಶವನ್ನು ತುಂಬಿಕೊಳ್ಳಬಹುದು. ಅದರಲ್ಲೂ ಪೇರಲೆವನ್ನು ನಿತ್ಯವೂ ಜಗಿದು ತಿಂದರೆ ದೇಹದಲ್ಲಿನ ಕಬ್ಬಿಣಾಂಶದ ಕೊರತೆಯನ್ನು ಹೋಗಲಾಡಿಸಬಹುದು.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us