Health Tips: ಕೊತ್ತಂಬರಿ ನೆನೆಸಿದ ನೀರು ಕುಡಿದ್ರೆ ಸಿಗುವ ಆರೋಗ್ಯಕರ ಪ್ರಯೋಜನ ಒಂದಾ ಎರಡಾ..!

Health Tips in Kannada: ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡುವಲ್ಲಿ ಕೊತ್ತಂಬರಿ ನೀರು ವಿಶೇಷ ಪಾತ್ರ ವಹಿಸುತ್ತದೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ದೂರ ಮಾಡುತ್ತದೆ.

Health Tips: ಕೊತ್ತಂಬರಿ ನೆನೆಸಿದ ನೀರು ಕುಡಿದ್ರೆ ಸಿಗುವ ಆರೋಗ್ಯಕರ ಪ್ರಯೋಜನ ಒಂದಾ ಎರಡಾ..!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 08, 2021 | 5:02 PM

Health benefits of coriander: ಕೊತ್ತಂಬರಿ ಬೀಜ ಅಥವಾ ಕೊತ್ತಂಬರಿ ಸೊಪ್ಪು ಎಲ್ಲರ ಅಡುಗೆ ಮನೆಯಲ್ಲಿ ಕಾಣ ಸಿಗುತ್ತೆ. ಮಾರುಕಟ್ಟೆಯಲ್ಲಿ ಅಗ್ಗವಾಗಿ ಸಿಗುವ ಈ ಸೊಪ್ಪಿನ ಬಳಕೆ ಕೂಡ ಅಷ್ಟಕಷ್ಟೇ ಎನ್ನಬಹುದು. ಆದರೆ ಇದರಲ್ಲಿರುವ ಪೋಷಕಾಂಶಗಳ ಬಗ್ಗೆ ತಿಳಿದುಕೊಂಡರೆ ಮುಂದೆ ಪ್ರತಿ ಆಹಾರ ಪದಾರ್ಥಗಳಲ್ಲೂ ಕೊತ್ತಂಬರಿ ಬಳಸುತ್ತೀರಿ. ಅದರಲ್ಲೂ ಕೊತ್ತಂಬರಿ ಬೀಜದ ನೀರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹಾಗಿದ್ರೆ ಕೊತ್ತಂಬರಿ ನೆನಸಿದ ನೀರು ಕುಡಿಯುವುದರಿಂದ ಸಿಗುವ ಆರೋಗ್ಯಕಾರಿ ಪ್ರಯೋಜನಗಳನ್ನು ತಿಳಿಯೋಣ.

ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ: ಕೊತ್ತಂಬರಿ ನೆನಸಿದ ನೀರನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು. ಈ ನೀರಿನಲ್ಲಿರುವ ಅ್ಯಂಟಿ-ಆಕ್ಸಿಡೆಂಟ್‌ಗಳು ದೇಹದಲ್ಲಿನ ಫ್ರೀ ರಾಡಿಕಲ್‌ಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಕಾರಣದಿಂದಾಗಿ ಅನಾರೋಗ್ಯಕ್ಕೆ ತುತ್ತಾಗುವ ಅಪಾಯ ಕೂಡ ಕಡಿಮೆಯಾಗುತ್ತದೆ.

ಜೀರ್ಣಕ್ರಿಯೆ ಸುಧಾರಣೆ: ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡುವಲ್ಲಿ ಕೊತ್ತಂಬರಿ ನೀರು ವಿಶೇಷ ಪಾತ್ರ ವಹಿಸುತ್ತದೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ದೂರ ಮಾಡುತ್ತದೆ. ಇದರಿಂದಾಗಿ ಜೀರ್ಣಾಂಗ ವ್ಯವಸ್ಥೆಯು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ.

ದೇಹವನ್ನು ನಿರ್ವಿಷಗೊಳಿಸುತ್ತದೆ: ಕೊತ್ತಂಬರಿ ನೀರು ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಇದನ್ನು ಕುಡಿಯುವುದರಿಂದ ದೇಹದಲ್ಲಿರುವ ವಿಷಾಂಶಗಳು ಹೊರಬರುತ್ತವೆ. ಈ ಕಾರಣದಿಂದಾಗಿ ಸೋಂಕಿನ ಅಪಾಯ ಕೂಡ ಕಡಿಮೆಯಾಗುತ್ತದೆ.

ಕೂದಲನ್ನು ಬಲಪಡಿಸುತ್ತದೆ: ಕೊತ್ತಂಬರಿ ನೀರನ್ನು ಕುಡಿಯುವುದು ಕೂದಲನ್ನು ಬಲಪಡಿಸಬಹುದು. ಕೊತ್ತಂಬರಿ ಬೀಜಗಳಲ್ಲಿ ವಿಟಮಿನ್-ಕೆ, ಸಿ ಮತ್ತು ಎ ಹೇರಳವಾಗಿ ಕಂಡುಬರುತ್ತವೆ. ಇದು ಕೂದಲನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಹೀಗಾಗಿ ಕೂದಲು ತಂಡಾಗುವ ಸಮಸ್ಯೆ ಹೊಂದಿರುವವರು ಕೊತ್ತಂಬರಿ ನೀರಿನ ಮೊರೆ ಹೋಗಬಹುದು.

ಮುಖದ ಕಲೆಗಳು ಮಾಯ: ಕೊತ್ತಂಬರಿ ನೀರನ್ನು ಸೇವಿಸುವುದರಿಂದ ಮುಖದ ಮೇಲಿನ ಕಲೆಗಳು ನಿಧಾನವಾಗಿ ಮಾಯವಾಗುತ್ತವೆ. ಕೊತ್ತಂಬರಿ ಸೊಪ್ಪು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಚರ್ಮವನ್ನು ಸ್ವಚ್ಛಗೊಳಿಸಲು ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ.

ಕೊತ್ತಂಬರಿ ನೀರನ್ನು ತಯಾರಿಸುವುದು ಹೇಗೆ? ಕೊತ್ತಂಬರಿ ನೀರನ್ನು ತಯಾರಿಸಲು, ಒಂದು ಚಮಚ ಪೂರ್ತಿ ಕೊತ್ತಂಬರಿ ಬೀಜಗಳನ್ನು ತೆಗೆದುಕೊಳ್ಳಿ. ನಂತರ ಅವುಗಳನ್ನು ಒಂದು ಲೋಟ ನೀರಿನಲ್ಲಿ ಒಂದು ರಾತ್ರಿ ನೆನೆಸಿಡಿ. ಬೆಳಿಗ್ಗೆ ಈ ನೀರನ್ನು ಸೋಸಿ ಸೇವಿಸಿ. ನೀವು ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಹೆಚ್ಚು ಪ್ರಯೋಜನಕಾರಿ. ನೀರನ್ನು ಫಿಲ್ಟರ್ ಮಾಡಿದ ನಂತರ, ಈ ಬೀಜಗಳನ್ನು ಎಸೆಯುವ ಬದಲು ಅದನ್ನು ಒಣಗಿಸಿ ಪುಡಿ ಮಾಡಿ ಬಳಸಬಹುದು.

ಇದನ್ನೂ ಓದಿ: Tokyo Olympics 2020: ಭಾರತ ಸೋಲುತ್ತಿದ್ದಂತೆ ರೆಫರಿಗೆ ಬಿತ್ತು ಏಟು..!

ಇದನ್ನೂ ಓದಿ: Neeraj Chopra: ಆಸ್ಪತ್ರೆಯ ಬೆಡ್​ನಿಂದ ಚಿನ್ನದ ಬೇಟೆ ತನಕ: ನೀರಜ್ ಚೋಪ್ರಾ ಎಂಬ ಗೋಲ್ಡನ್ ಸ್ಟಾರ್

ಇದನ್ನೂ ಓದಿ: ಬ್ಲೂಟೂತ್ ಹೆಡ್​ಫೋನ್ ಸ್ಪೋಟ, ಯುವಕ ಸಾವು..!

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್