AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tongue: ವೈದ್ಯರು ಮೊದಲು ರೋಗಿಯ ನಾಲಿಗೆಯನ್ನು ಪರೀಕ್ಷಿಸುತ್ತಾರೆ ಯಾಕೆ? ಇದರಿಂದ ಏನು ತಿಳಿಯುತ್ತದೆ ಗೊತ್ತಾ?

ನಾಲಿಗೆಯಲ್ಲಿನ ಬದಲಾವಣೆಗಳ ಆಧಾರದ ಮೇಲೆ ವೈದ್ಯರು ವ್ಯಕ್ತಿಯ ಆರೋಗ್ಯವನ್ನು ತಿಳಿಯುತ್ತಾರೆ. ನಾಲಿಗೆಯ ಬಣ್ಣದಿಂದ ವ್ಯಕ್ತಿಯು ಉತ್ತಮ ಆರೋಗ್ಯವನ್ನು ಹೊಂದಿದ್ದಾನೆಯೇ, ಇಲ್ಲವೇ ಎಂದು ನಿರ್ಣಯಿಸಬಹುದು. ನಾಲಿಗೆಯಲ್ಲಿ ಕಂಡುಬರುವ ಬದಲಾವಣೆಗಳ ಆಧಾರದ ಮೇಲೆ ವೈದ್ಯರು ಯಾವ ರೀತಿಯ ತೀರ್ಮಾನಕ್ಕೆ ಬರುತ್ತಾರೆ ಎಂಬುದನ್ನು ಕಂಡುಕೊಳ್ಳೋಣ.

Tongue: ವೈದ್ಯರು ಮೊದಲು ರೋಗಿಯ ನಾಲಿಗೆಯನ್ನು ಪರೀಕ್ಷಿಸುತ್ತಾರೆ ಯಾಕೆ? ಇದರಿಂದ ಏನು ತಿಳಿಯುತ್ತದೆ ಗೊತ್ತಾ?
ವೈದ್ಯರು ರೋಗಿಯ ನಾಲಿಗೆಯನ್ನು ಪರೀಕ್ಷಿಸುತ್ತಾರೆ ಯಾಕೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 31, 2023 | 1:00 PM

Share

ಮಾನವರು ತಮ್ಮ ನಾಲಿಗೆಯಲ್ಲಿನ ಬದಲಾವಣೆಗಳ ಆಧಾರದ ಮೇಲೆ ತಮ್ಮ ಆರೋಗ್ಯವನ್ನು ನಿರ್ಣಯಿಸುತ್ತಾರೆ. ವಿಶೇಷವಾಗಿ ನಾಲಿಗೆಯಲ್ಲಿನ ಬದಲಾವಣೆಗಳ ಆಧಾರದ ಮೇಲೆ ವೈದ್ಯರು ವ್ಯಕ್ತಿಯ ಆರೋಗ್ಯವನ್ನು ತಿಳಿಯುತ್ತಾರೆ. ನಾಲಿಗೆಯ ಬಣ್ಣದಲ್ಲಿನ ಬದಲಾವಣೆಯಿಂದ, ವ್ಯಕ್ತಿಯು ಉತ್ತಮ ಆರೋಗ್ಯವನ್ನು ಹೊಂದಿದ್ದಾನೆಯೇ ಅಥವಾ ಇಲ್ಲವೇ ಎಂದು ನಿರ್ಣಯಿಸಬಹುದು. ಆದರೆ ಈ ನಾಲಿಗೆಯಲ್ಲಿ ಕಂಡುಬರುವ ಬದಲಾವಣೆಗಳ ಆಧಾರದ ಮೇಲೆ ವೈದ್ಯರು ಹೇಗೆ ಮತ್ತು ಯಾವ ರೀತಿಯ ತೀರ್ಮಾನಕ್ಕೆ ಬರುತ್ತಾರೆ ಎಂಬುದನ್ನು ತಿಳಿಯೋಣ (The tongue provides information about every system in the body).

ನೀವು ಯಾವುದೇ ಅನಾರೋಗ್ಯದ ಕಾರಣ ಆಸ್ಪತ್ರೆಗೆ ಹೋದಾಗ, ವೈದ್ಯರು ಮೊದಲು ನಿಮ್ಮ ನಾಲಿಗೆ ಮತ್ತು ಕಣ್ಣುಗಳನ್ನು ಪರೀಕ್ಷಿಸುತ್ತಾರೆ. ಕಣ್ಣು ಮತ್ತು ನಾಲಿಗೆಯಲ್ಲಿ ಕಂಡುಬರುವ ಬದಲಾವಣೆಗಳ ಆಧಾರದ ಮೇಲೆ ಮನುಷ್ಯರ ಆರೋಗ್ಯವನ್ನು ನಿರ್ಣಯಿಸುತ್ತಾರೆ. ವಿಶೇಷವಾಗಿ ನಾಲಿಗೆ ಬದಲಾವಣೆಗಳ ಆಧಾರದ ಮೇಲೆ ವೈದ್ಯರು ವ್ಯಕ್ತಿಯ ಆರೋಗ್ಯವನ್ನು ತಿಳಿಯುತ್ತಾರೆ. ನಾಲಿಗೆಯ ಬಣ್ಣದಲ್ಲಿನ ಬದಲಾವಣೆಯಿಂದ, ವ್ಯಕ್ತಿಯು ಉತ್ತಮ ಆರೋಗ್ಯವನ್ನು ಹೊಂದಿದ್ದಾನೆಯೇ ಅಥವಾ ಇಲ್ಲವೇ ಎಂದು ನಿರ್ಣಯಿಸಬಹುದು. ನಾಲಿಗೆಯಲ್ಲಿ ಕಂಡುಬರುವ ಬದಲಾವಣೆಗಳ ಆಧಾರದ ಮೇಲೆ ವೈದ್ಯರು ಯಾವ ರೀತಿಯ ತೀರ್ಮಾನಕ್ಕೆ ಬರುತ್ತಾರೆ ಎಂಬುದನ್ನು ಕಂಡುಕೊಳ್ಳೋಣ.

* ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಯ ನಾಲಿಗೆ ಗುಲಾಬಿ ಬಣ್ಣದಲ್ಲಿರುತ್ತವೆ. ತಿಳಿ ಗುಲಾಬಿ, ಗಾಢ ಗುಲಾಬಿ ಬಣ್ಣ. ಕೆಲವೊಮ್ಮೆ ನಾಲಿಗೆ ಮೇಲೆ ತೆಳುವಾದ ಬಿಳಿ ಪದರ ಇರುತ್ತದೆ. ಆರೋಗ್ಯವಂತ ವ್ಯಕ್ತಿಯಲ್ಲಿ ನಾಲಿಗೆ ತೇವವಾಗಿರುತ್ತದೆ.

Also Read: ಹೌದು.. ಆ ಯುವತಿಗೆ ಎರಡು ನಾಲಿಗೆಗಳು ಇವೆ! ವೈರಲ್ ಆಗುತ್ತಿದೆ ಶಾಕಿಂಗ್ ವಿಡಿಯೋ

* ನಾಲಿಗೆ ಮೇಲೆ ಬಿಳಿ ಚುಕ್ಕೆಗಳು ಕಂಡುಬಂದರೆ, ಅದು ಯೀಸ್ಟ್ ಸೋಂಕಿನ ಸಂಕೇತವಾಗಿರಬಹುದು. ಲ್ಯುಕೋಪ್ಲಾಕಿಯಾದಿಂದಾಗಿ ನಾಲಿಗೆ ಮೇಲೆ ಬಿಳಿ ಕಲೆಗಳು ಕಾಣಿಸಿಕೊಳ್ಳುತ್ತವೆ. ಆದಾಗ್ಯೂ, ಇದು ದೊಡ್ಡ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡದಿದ್ದರೂ, ಕೆಲವು ಸಂದರ್ಭಗಳಲ್ಲಿ ಇದು ಕ್ಯಾನ್ಸರ್​ ಸಂಕೇತವಾಗಿರಬಹುದು. ಈ ಆಧಾರದ ಮೇಲೆ ರೋಗಿಯ ಆರೋಗ್ಯವನ್ನು ನಿರ್ಣಯಿಸಲಾಗುತ್ತದೆ.

* ನಾಲಿಗೆ ಕಪ್ಪಾಗಿ ಕಾಣಿಸಿಕೊಂಡರೆ ಎಚ್ಚರದಿಂದಿರಿ ಎನ್ನುತ್ತಾರೆ ತಜ್ಞರು. ಗಂಟಲಿನಲ್ಲಿ ಬ್ಯಾಕ್ಟೀರಿಯಾ ಮತ್ತು ಫಂಗಸ್ ನಿಂದಾಗಿ ನಾಲಿಗೆ ಕಪ್ಪಾಗುತ್ತವೆ. ಕೆಲವು ಸಂದರ್ಭಗಳಲ್ಲಿ, ನಾಲಿಗೆ ಕಪ್ಪು ಬಣ್ಣಕ್ಕೆ ತಿರುಗುವುದು ಕ್ಯಾನ್ಸರ್​ ಸೂಚಕ ಎಂದು ಹೇಳಲಾಗುತ್ತದೆ. ಆದ್ದರಿಂದ, ನಾಲಿಗೆ ಬಣ್ಣವು ಕಪ್ಪು ಬಣ್ಣಕ್ಕೆ ಬದಲಾದರೆ, ನೀವು ತಕ್ಷಣ ಎಚ್ಚರಿಕೆ ವಹಿಸಬೇಕು.

* ಇನ್ನ, ನಾಲಿಗೆ ಹಳದಿ ಬಣ್ಣಕ್ಕೆ ತಿರುಗಿದರೆ ಕಾಮಾಲೆಯಂತೆ ಅನಿಸುತ್ತದೆ. ಇದು ನಿಜವಾಗಿದ್ದರೂ, ಕೆಲವು ಸಂದರ್ಭಗಳಲ್ಲಿ ಮಧುಮೇಹದ ಲಕ್ಷಣವೂ ಇರಬಹುದು ಎಂದು ತಜ್ಞರು ಹೇಳುತ್ತಾರೆ. ನಿಮ್ಮ ನಾಲಿಗೆ ಹಳದಿ ಬಣ್ಣಕ್ಕೆ ತಿರುಗಿದರೆ, ಸಕ್ಕರೆ ಪರೀಕ್ಷೆಯನ್ನು ಮಾಡಿಸಿಕೊಳ್ಳುವುದು ಉತ್ತಮ.

* ನಾಲಿಗೆ ನೀಲಿ ಬಣ್ಣಕ್ಕೆ ತಿರುಗಿದಂತೆ ಕಂಡುಬಂದರೆ ತಕ್ಷಣ ಎಚ್ಚೆತ್ತುಕೊಳ್ಳಬೇಕು ಎನ್ನುತ್ತಾರೆ ತಜ್ಞರು. ನಾಲಿಗೆ ನೀಲಿ ಬಣ್ಣಕ್ಕೆ ತಿರುಗಿದರೆ, ಅದು ಹೃದಯ ಸಂಬಂಧಿ ಕಾಯಿಲೆಗಳನ್ನು ಸೂಚಿಸುತ್ತದೆ. ಹೃದಯವು ದೇಹದ ಮೂಲಕ ರಕ್ತವನ್ನು ಸರಿಯಾಗಿ ಪಂಪ್ ಮಾಡದಿದ್ದರೆ, ರಕ್ತನಾಳಗಳು ನೀಲಿ ಬಣ್ಣಕ್ಕೆ ತಿರುಗುತ್ತವೆ. ರಕ್ತದಲ್ಲಿ ಆಮ್ಲಜನಕ ಸರಿಯಾದ ಮಟ್ಟದಲ್ಲಿ ಇಲ್ಲದಿದ್ದರೂ ನಾಲಿಗೆ ನೀಲಿ ಬಣ್ಣಕ್ಕೆ ತಿರುಗುತ್ತದೆ ಎನ್ನುತ್ತಾರೆ ತಜ್ಞರು.

(ಗಮನಿಸಿ: ಮೇಲೆ ತಿಳಿಸಲಾದ ವಿಷಯಗಳು ಮೂಲಭೂತ ಮಾಹಿತಿಗಾಗಿ ಮಾತ್ರ. ಆರೋಗ್ಯದ ಬಗ್ಗೆ ವೈದ್ಯರ ಸೂಚನೆಗಳನ್ನು ಅನುಸರಿಸುವುದು ಕ್ಷೇಮಕರ)

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:00 pm, Tue, 31 October 23

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ