ಸಕ್ಕರೆ ಬಳಸುವುದನ್ನು ಕಡಿಮೆ ಮಾಡಿದರೆ ನಮ್ಮ ದೇಹದಲ್ಲಾಗುವ ಬದಲಾವಣೆಯೇನು?

ಅತಿಯಾದ ಸಕ್ಕರೆ ಸೇವನೆಯು ಸ್ಥೂಲಕಾಯತೆ, ಹೃದ್ರೋಗ ಮತ್ತು ಕೆಲವು ಕ್ಯಾನ್ಸರ್ ಸೇರಿದಂತೆ ವಿವಿಧ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಹೊಂದಿದೆ. ಸಕ್ಕರೆಯನ್ನು ಕಡಿಮೆ ಮಾಡುವುದರಿಂದ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದಾಗಿದೆ.

ಸಕ್ಕರೆ ಬಳಸುವುದನ್ನು ಕಡಿಮೆ ಮಾಡಿದರೆ ನಮ್ಮ ದೇಹದಲ್ಲಾಗುವ ಬದಲಾವಣೆಯೇನು?
ಸಕ್ಕರೆImage Credit source: iStock
Follow us
ಸುಷ್ಮಾ ಚಕ್ರೆ
|

Updated on:Jan 22, 2024 | 7:55 PM

ಸಕ್ಕರೆ ನಾವು ದಿನನಿತ್ಯ ಬಳಸುವ ಪ್ರಮುಖ ಆಹಾರ ಪದಾರ್ಥಗಳಲ್ಲಿ ಒಂದು. ಸಿಹಿಗೆ ಸಕ್ಕರೆಯನ್ನು ಬಳಸುವವರು ಇತ್ತೀಚೆಗೆ ಅದರ ಬದಲಾಗಿ ಬೆಲ್ಲ, ಬೆಲ್ಲದ ಪುಡಿ, ಜೇನುತುಪ್ಪದ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಏಕೆಂದರೆ, ಸಕ್ಕರೆ ಬಳಕೆಯಿಂದ ಆರೋಗ್ಯದ ಮೇಲೆ ಆಗುವ ಕೆಟ್ಟ ಪರಿಣಾಮಗಳ ಬಗ್ಗೆ ಜನರಲ್ಲಿ ಇತ್ತೀಚೆಗೆ ಹೆಚ್ಚಿನ ಜಾಗೃತಿ ಮೂಡುತ್ತಿದೆ. ಸಂಸ್ಕರಿಸಿದ ಆಹಾರವಾದ ಸಕ್ಕರೆ ಮೈದಾಹಿಟ್ಟಿನಂತೆಯೇ ನಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಬಿಳಿ ಆಹಾರವಾಗಿದೆ. ಹಾಗಾದರೆ, ಸಕ್ಕರೆಯ ಬಳಕೆಯನ್ನು ನಿಯಂತ್ರಿಸಿದರೆ ನಮ್ಮ ದೇಹದಲ್ಲಿ ಯಾವೆಲ್ಲ ಬದಲಾವಣೆಗಳು ಆಗುತ್ತವೆ? ಇಲ್ಲಿದೆ ಮಾಹಿತಿ.

ತೂಕ ಇಳಿಕೆಗೆ ಸಹಕಾರಿ:

ಸಕ್ಕರೆಯ ಸೇವನೆಯನ್ನು ಕಡಿಮೆ ಮಾಡುವುದರಿಂದ ತೂಕವನ್ನು ಇಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿರುವವರಿಗೆ ಬಹಳ ಸಹಾಯ ಮಾಡುತ್ತದೆ. ಸಂಸ್ಕರಿಸಿದ ಕಾರ್ಬೋಹೈಡ್ರೇಟ್‌ಗಳ ರೂಪದಲ್ಲಿರುವ ಸಕ್ಕರೆ ಕ್ಯಾಲೋರಿಯನ್ನು ಹೊಂದಿರುತ್ತದೆ. ಸಕ್ಕರೆಯನ್ನು ಕಡಿಮೆ ಮಾಡುವುದರಿಂದ ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ.

ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಶುಂಠಿ ಜ್ಯೂಸ್​ ಕುಡಿದರೆ ಏನಾಗುತ್ತದೆ?

ಟೈಪ್ 2 ಡಯಾಬಿಟಿಸ್ ನಿಯಂತ್ರಣ:

ಅತಿಯಾದ ಸಕ್ಕರೆ ಸೇವನೆಯು ಇನ್ಸುಲಿನ್ ಪ್ರತಿರೋಧಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಇದು ಅಂತಿಮವಾಗಿ ಟೈಪ್ 2 ಮಧುಮೇಹಕ್ಕೆ ಕಾರಣವಾಗುತ್ತದೆ. ಸಕ್ಕರೆಯ ಬಳಕೆಯನ್ನು ಕಡಿಮೆ ಮಾಡುವುದರಿಂದ ಇನ್ಸುಲಿನ್ ಸೂಕ್ಷ್ಮತೆಯನ್ನು ತಪ್ಪಿಸಬಹುದು. ಆದ್ದರಿಂದ, ಇದು ಮಧುಮೇಹವನ್ನು ಸುಧಾರಿಸುವ ಅಪಾಯವನ್ನು ಕಡಿಮೆ ಮಾಡುತ್ತದೆ.

ಹೃದಯದ ಆರೋಗ್ಯಕ್ಕೆ ಸಹಕಾರಿ:

ಹೆಚ್ಚಿನ ಸಕ್ಕರೆ ಸೇವನೆಯು ಹೃದಯದ ಕಾಯಿಲೆಯ ಅಪಾಯವನ್ನು ಹೊಂದಿದೆ. ಸಕ್ಕರೆಯನ್ನು ಕಡಿಮೆ ಸೇವಿಸುವುದರಿಂದ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಒಟ್ಟಾರೆಯಾಗಿ ಹೃದಯ ರಕ್ತನಾಳದ ಆರೋಗ್ಯವನ್ನು ಸುಧಾರಿಸುತ್ತದೆ.

ಮಾನಸಿಕ ಆರೋಗ್ಯ ಸುಧಾರಣೆ:

ಸಕ್ಕರೆಯ ಸೇವನೆಯಿಂದ ನರಪ್ರೇಕ್ಷಕಗಳ ಮೇಲೆ ಪರಿಣಾಮ ಉಂಟಾಗುತ್ತದೆ. ಸಕ್ಕರೆ ಸೇವನೆಯನ್ನು ಕಡಿಮೆ ಮಾಡುವುದರಿಂದ ಮೂಡ್ ಸ್ವಿಂಗ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಮಾನಸಿಕ ಆರೋಗ್ಯವೂ ಸುಧಾರಿಸುತ್ತದೆ.

ಇದನ್ನೂ ಓದಿ: Clove Benefits: ದಿನಕ್ಕೆ ಒಂದು ಲವಂಗದ ಎಸಳು ಜಗಿಯುವುದರಿಂದ ಪ್ರಯೋಜನವೇನು?

ಚರ್ಮದ ಆರೋಗ್ಯ ಸುಧಾರಣೆ:

ಹೆಚ್ಚಿನ ಸಕ್ಕರೆ ಸೇವನೆಯು ಮೊಡವೆ ಮತ್ತು ಅಕಾಲಿಕವಾಗಿ ವಯಸ್ಸಾದಂತಹ ಚರ್ಮದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಸಕ್ಕರೆಯನ್ನು ಕಡಿಮೆ ಬಳಸುವುದರಿಂದ ಚರ್ಮವನ್ನು ಸುಂದರವಾಗಿ ಕಾಣುವಂತೆ ಮಾಡುತ್ತದೆ, ಕಡಿಮೆ ಉರಿಯೂತ ಮತ್ತು ಆರೋಗ್ಯಕರ ಮೈಬಣ್ಣವನ್ನು ಹೊಂದಲು ಸಹಾಯ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:54 pm, Mon, 22 January 24

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್