AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ 7ರಿಂದ 8 ಗಂಟೆಗಳ ಕಾಲ ನಿದ್ರೆ ಮಾಡದಿದ್ದರೆ ಏನಾಗುತ್ತದೆ ಎಂಬುದು ತಿಳಿದಿದೆಯೇ?

ಮನುಷ್ಯನಿಗೆ ಆಹಾರದ ಜೊತೆಗೆ ನಿದ್ರೆಯು ಬಹಳ ಮುಖ್ಯಯಾಗುತ್ತದೆ. ಇಲ್ಲವಾದಲ್ಲಿ ವ್ಯಕ್ತಿ ಒತ್ತಡ ಎದುರಿಸಬೇಕಾದಂತಹ ಸ್ಥಿತಿ ನಿರ್ಮಾಣವಾಗುತ್ತದೆ. ಸಾಮಾನ್ಯವಾಗಿ ಸಾಕಷ್ಟು ನಿದ್ರೆ ಆಗದಿದ್ದರೆ, ಅದು ಅನೇಕ ರೋಗಗಳ ಅಪಾಯಕ್ಕೆ ಕಾರಣವಾಗುತ್ತದೆ. ಅಲ್ಲದೆ ನಿದ್ರೆಯ ಕೊರತೆಯು ದೇಹದಲ್ಲಿ ಒತ್ತಡದ ಹಾರ್ಮೋನ್ ಕಾರ್ಟಿಸೋಲ್ ಅನ್ನು ಹೆಚ್ಚಿಸುತ್ತದೆ. ಇದು ರಕ್ತದೊತ್ತಡಕ್ಕೆ ಕಾರಣವಾಗುತ್ತದೆ. ಪರಿಣಾಮವಾಗಿ, ಇದು ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನುಂಟು ಮಾಡುತ್ತದೆ. ಹಾಗಾದರೆ ನಿದ್ರೆಯ ಕೊರತೆಯಾದರೆ ಯಾವ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ? ಇದರ ಪರಿಣಾಮವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಪ್ರತಿದಿನ 7ರಿಂದ 8 ಗಂಟೆಗಳ ಕಾಲ ನಿದ್ರೆ ಮಾಡದಿದ್ದರೆ ಏನಾಗುತ್ತದೆ ಎಂಬುದು ತಿಳಿದಿದೆಯೇ?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jan 20, 2025 | 4:25 PM

Share

ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿ ಮಾಡಿಕೊಂಡಿರುವಂತಹ ಹಲವಾರು ರೀತಿಯ ಬದಲಾವಣೆಗಳಿಂದ ಆರೋಗ್ಯ ಹದಗೆಡುತ್ತಿದೆ. ಜನರು ತಾವು ಮಾಡುತ್ತಿರುವ ಕೆಲಸದಿಂದ ಸರಿಯಾಗಿ ಬಿಡುವು ತೆಗೆದುಕೊಳ್ಳದೆಯೇ, ಊಟ, ತಿಂಡಿ, ನಿದ್ರೆಯನ್ನು ಸರಿಯಾಗಿ ಮಾಡುತ್ತಿಲ್ಲ. ಇದು ಅವರ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಏಕೆಂದರೆ ಮನುಷ್ಯನಿಗೆ ಆಹಾರದ ಜೊತೆಗೆ ನಿದ್ರೆಯು ಬಹಳ ಮುಖ್ಯಯಾಗುತ್ತದೆ. ಇಲ್ಲವಾದಲ್ಲಿ ವ್ಯಕ್ತಿ ಒತ್ತಡ ಎದುರಿಸಬೇಕಾದಂತಹ ಸ್ಥಿತಿ ನಿರ್ಮಾಣವಾಗುತ್ತದೆ. ಸಾಮಾನ್ಯವಾಗಿ ಸಾಕಷ್ಟು ನಿದ್ರೆ ಆಗದಿದ್ದರೆ, ಅದು ಅನೇಕ ರೋಗಗಳ ಅಪಾಯಕ್ಕೆ ಕಾರಣವಾಗುತ್ತದೆ. ಅಲ್ಲದೆ ನಿದ್ರೆಯ ಕೊರತೆಯು ದೇಹದಲ್ಲಿ ಒತ್ತಡದ ಹಾರ್ಮೋನ್ ಕಾರ್ಟಿಸೋಲ್ ಅನ್ನು ಹೆಚ್ಚಿಸುತ್ತದೆ. ಇದು ರಕ್ತದೊತ್ತಡಕ್ಕೆ ಕಾರಣವಾಗುತ್ತದೆ. ಪರಿಣಾಮವಾಗಿ, ಇದು ಹೃದಯದ ಮೇಲೆ ಹೆಚ್ಚಿನ ಒತ್ತಡವನ್ನುಂಟು ಮಾಡುತ್ತದೆ. ಹಾಗಾದರೆ ನಿದ್ರೆಯ ಕೊರತೆಯಾದರೆ ಯಾವ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ? ಇದರ ಪರಿಣಾಮವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಸಾಮಾನ್ಯವಾಗಿ ನಿದ್ರೆಯ ಕೊರತೆಯು ನಿಮ್ಮ ಹಸಿವನ್ನು ಹೆಚ್ಚಿಸುತ್ತದೆ. ಇದರಿಂದ ಚಯಾಪಚಯ ಕ್ರಿಯೆ ಕಡಿಮೆಯಾಗುತ್ತದೆ. ಇದು ತೂಕ ಹೆಚ್ಚಳಕ್ಕೂ ಕಾರಣವಾಗುತ್ತದೆ. ಅದಲ್ಲದೆ ಬೊಜ್ಜಿಗೂ ಕಾರಣವಾಗಬಹುದು. ನಾವು ಪ್ರತಿನಿತ್ಯ ನಿದ್ದೆ ಮಾಡುವುದು ಕಡಿಮೆಯಾದಾಗ ಅಥವಾ ನಿದ್ರೆಯ ಕೊರತೆಯಿಂದಾಗಿ ದೇಹದಲ್ಲಿ ಉರಿಯೂತದ ಸಮಸ್ಯೆ ಪ್ರಾರಂಭವಾಗುತ್ತದೆ. ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವೂ ಹೆಚ್ಚಾಗುತ್ತದೆ. ಹಾಗಾಗಿ ಈ ರೀತಿಯ ಸಮಸ್ಯೆಗಳನ್ನು ತಡೆಯಲು ಸಾಕಷ್ಟು ನಿದ್ರೆ ಅತ್ಯಗತ್ಯ ಎಂದು ತಜ್ಞರು ಹೇಳುತ್ತಾರೆ.

ನಿರಾಶೆ, ಕೋಪ, ಒತ್ತಡ ಹೆಚ್ಚುತ್ತದೆ

7 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವವರಲ್ಲಿ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುತ್ತದೆ. ನೀವು ಸರಿಯಾಗಿ ನಿದ್ರೆ ಮಾಡದಿದ್ದರೆ ನಿರಾಶೆ, ಕೋಪ ಮತ್ತು ಒತ್ತಡಕ್ಕೆ ಒಳಗಾಗುತ್ತೀರಿ. ಇದೆಲ್ಲದರ ಜೊತೆಗೆ ನಿದ್ರೆಯ ಕೊರತೆಯು ನಿಮಗೆ ಮತ್ತಷ್ಟು ಆಯಾಸ ಮಾಡುತ್ತದೆ. ಇದರಿಂದ ದಿನವಿಡೀ ನೀವು ಯಾವುದೇ ರೀತಿಯ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಜೊತೆಗೆ ಯಾವುದರ ಮೇಲೂ ಗಮನವಿಟ್ಟು ಸಮಯ ಕಳೆಯಲು ಸಾಧ್ಯವಾಗುವುದಿಲ್ಲ. ಇದರಿಂದ ಸರಿಯಾದ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಆಗುವುದಿಲ್ಲ. ಇದಕ್ಕೆಲ್ಲಾ ಮುಖ್ಯ ಕಾರಣ ನಿಮ್ಮ ದೇಹಕ್ಕೆ ಸಾಕಷ್ಟು ವಿಶ್ರಾಂತಿ ಇಲ್ಲದಿರುವುದು.

ಇದನ್ನೂ ಓದಿ: ಗರ್ಭಿಣಿಯರಿಗೆ ಮೆಹೆಂದಿ ಹಾನಿಕಾರಕವೇ? ಇಲ್ಲಿದೆ ತಜ್ಞರು ನೀಡಿರುವ ಮಾಹಿತಿ

7 ರಿಂದ 8 ಗಂಟೆಗಳ ಕಾಲ ಮಲಗಬೇಕು ಎನ್ನಲು ಕಾರಣವೇನು?

ನಿಮಗೆ ತಿಳಿದಿರಬಹುದು, ನಿದ್ರೆಯ ಕೊರತೆಯು ನಿಮ್ಮ ಕಣ್ಣುಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ದೇಹದಲ್ಲಿ ಒತ್ತಡದ ಹಾರ್ಮೋನ್ ಕಾರ್ಟಿಸೋಲ್ ಮಟ್ಟವು ಹೆಚ್ಚಾಗುತ್ತದೆ. ಚರ್ಮವು ಸೂಕ್ಷ್ಮವಾಗಿರುವ ಪ್ರದೇಶಗಳಲ್ಲಿ ಇದರ ಪರಿಣಾಮ ಗೋಚರಿಸುತ್ತದೆ. ಅಲ್ಲದೆ ಕಣ್ಣುಗಳ ಕೆಳಗೆ ಕಪ್ಪು ಪಟ್ಟೆಗಳು ಅಥವಾ ಕಪ್ಪು ಕಲೆಗಳು ಕಾಣಿಸಿಕೊಳ್ಳಲು ಪ್ರಾರಂಭವಾಗುತ್ತದೆ. ಜೊತೆಗೆ ನಿದ್ರೆ ಸರಿಯಾಗಿ ಆಗದಿದ್ದಾಗ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಕಾರಣವಾಗಬಹುದು. ನಂತರ ಇದು ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ. ಇದಲ್ಲದೆ, ಹೃದಯ ಬಡಿತವೂ ಹೆಚ್ಚಾಗುತ್ತದೆ. ಅದಕ್ಕಾಗಿಯೇ ದೇಹವನ್ನು ಆರೋಗ್ಯವಾಗಿಡಲು ನೀವು ದಿನಕ್ಕೆ 7 ರಿಂದ 8 ಗಂಟೆಗಳ ಕಾಲ ಮಲಗಬೇಕು. ಇದನ್ನು ಮಾಡುವುದರಿಂದ, ಒತ್ತಡವನ್ನು ನಿವಾರಿಸಬಹುದು. ಇತರ ರೋಗಗಳ ಅಪಾಯವೂ ಕಡಿಮೆಯಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ