Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ತರಕಾರಿಯ ಬೆಲೆ ಅಗ್ಗವಾಗಿದ್ದರೂ ಬೇಸಿಗೆಯ ಸಮಸ್ಯೆಗೆ ಬ್ರಹ್ಮಾಸ್ತ್ರ

ಈರುಳ್ಳಿಯನ್ನು ಸಾಮಾನ್ಯವಾಗಿ ಎಲ್ಲರೂ ಕೂಡ ಇಷ್ಟಪಟ್ಟು ತಿನ್ನುತ್ತಾರೆ. ಇದು ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲ ಆರೋಗ್ಯಕ್ಕೂ ಬಹಳ ಒಳ್ಳೆಯದು. ಈ ತರಕಾರಿಯಲ್ಲಿರುವ ನೈಸರ್ಗಿಕ ಔಷಧಿ ಗುಣಗಳು ದೇಹಕ್ಕೆ ಒಳ್ಳೆಯದು. ಇದನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ಸೇವನೆ ಮಾಡುವುದು ಒಳ್ಳೆಯದು. ಅದರಲ್ಲಿಯೂ ಬೇಸಿಗೆ ಕಾಲದಲ್ಲಿ ಇದರ ಸೇವನೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.

ಈ ತರಕಾರಿಯ ಬೆಲೆ ಅಗ್ಗವಾಗಿದ್ದರೂ ಬೇಸಿಗೆಯ ಸಮಸ್ಯೆಗೆ ಬ್ರಹ್ಮಾಸ್ತ್ರ
ಸಾಂದರ್ಭಿಕ ಚಿತ್ರ Image Credit source: Getty Images
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 11, 2025 | 12:17 PM

ಈರುಳ್ಳಿಯನ್ನು ಸೇವನೆ ಮಾಡದವರೇ ಇಲ್ಲ. ಇದಿಲ್ಲದೆ ಅಡುಗೆ ಮಾಡುವುದು ಬಹಳ ಕಷ್ಟವೇ ಸೈ. ಇವು ಆಹಾರಕ್ಕೆ ರುಚಿ ನೀಡುವುದು ಮಾತ್ರವಲ್ಲ ಬದಲಾಗಿ ಈ ತರಕಾರಿಯಲ್ಲಿರುವ ನೈಸರ್ಗಿಕ ಔಷಧಿ ಗುಣಗಳು ಆರೋಗ್ಯಕ್ಕೂ ಬಹಳ ಒಳ್ಳೆಯದು. ಇದು ಒಂದು ರೀತಿಯ ಪೋಷಕಾಂಶಗಳ ಶಕ್ತಿ ಕೇಂದ್ರ ಎಂದರೆ ತಪ್ಪಾಗಲಾರದು. ಹಾಗಾಗಿ ಇವುಗಳನ್ನು ಅನೇಕ ರೀತಿಯ ಔಷಧಿಗಳಲ್ಲಿ ಬಳಕೆ ಮಾಡಲಾಗುತ್ತದೆ. ಈರುಳ್ಳಿ (Onions) ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತದ ಗುಣಲಕ್ಷಣಗಳಿಂದ ಸಮೃದ್ಧವಾಗಿದ್ದು ಆರೋಗ್ಯಕ್ಕೆ ಉತ್ತಮವಾದ ಅನೇಕ ಪೋಷಕಾಂಶಗಳನ್ನು ಹೊಂದಿದೆ. ಅದರಲ್ಲಿಯೂ ಬೇಸಿಗೆ (Summer) ಕಾಲದಲ್ಲಿ ಈರುಳ್ಳಿ ಸೇವನೆ ಮಾಡುವ ಮೂಲಕ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಿಕೊಳ್ಳಬಹುದು. ಇವುಗಳನ್ನು ಬೇಯಿಸದೆಯೇ ಹಸಿಯಾಗಿ ಸೇವನೆ ಮಾಡುವುದರಿಂದ ಸಾಕಷ್ಟು ಲಾಭಗಳಿವೆ. ಹಾಗಾದರೆ ಇದನ್ನು ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳಿ.

ಈರುಳ್ಳಿಯಲ್ಲಿ ಸಲ್ಫರ್, ಫೈಬರ್, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ವಿಟಮಿನ್ ಬಿ ಮತ್ತು ಸಿ ನಂತಹ ಪೋಷಕಾಂಶಗಳಿವೆ. ಇದು ಎಲ್ಲರಿಗೂ ತಿಳಿದಿರುವ ವಿಚಾರ. ಹಾಗಾಗಿಯೇ ಈರುಳ್ಳಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನಲಾಗುತ್ತದೆ. ಅದರಲ್ಲಿಯೂ ಆಯುರ್ವೇದ ತಜ್ಞರು ಹೇಳುವ ಪ್ರಕಾರ, ಬೇಸಿಗೆ ಕಾಲದಲ್ಲಿ ಸಾಮಾನ್ಯವಾಗಿ ತಾಪಮಾನ ಹೆಚ್ಚಾಗಿರುವುದರಿಂದ ಆ ಶಾಖದಿಂದ ತಪ್ಪಿಸಿಕೊಳ್ಳಲು ಜನ ಹೆಣಗಾಡುತ್ತಿರುತ್ತಾರೆ. ಈ ದಿನಗಳಲ್ಲಿ ರೋಗಗಳ ಅಪಾಯವೂ ಕೂಡ ಅಧಿಕವಾಗಿರುತ್ತದೆ. ಹಾಗಾಗಿ ಇಂತಹ ಸಮಸ್ಯೆಗಳಿಂದ ದೂರವಿರಲು ದೇಹಕ್ಕೆ ಹೆಚ್ಚಿನ ಪೌಷ್ಠಿಕಾಂಶದ ಅಗತ್ಯವಿರುತ್ತದೆ. ಇಂತಹ ಸಂದರ್ಭಗಳಲ್ಲಿ ಪ್ರತಿನಿತ್ಯ ಹಸಿ ಈರುಳ್ಳಿ ಸೇವನೆ ಮಾಡುವುದು ಅನೇಕ ರೀತಿಯ ಸಮಸ್ಯೆಗಳಿಂದ ಮುಕ್ತಿ ಪಡೆಯುವುದಕ್ಕೆ ಸಹಾಯ ಮಾಡುತ್ತದೆ. ಜೊತೆಗೆ ಈರುಳ್ಳಿ ಸೇವನೆಯು ದೇಹಕ್ಕೆ ತಂಪನ್ನು ನೀಡುವುದರಿಂದ ದೇಹವನ್ನು ಒಳಗಿನಿಂದ ತಂಪಾಗಿಡುವುದರ ಜೊತೆಗೆ ದೇಹದ ತಾಪಮಾನವನ್ನು ಸಮತೋಲನದಲ್ಲಿಡುತ್ತದೆ ಜೊತೆಗೆ ಬೆವರು ಕೂಡ ಕಡಿಮೆಯಾಗುತ್ತದೆ.

ಇದನ್ನೂ ಓದಿ: ನೆಲದ ಮೇಲೆ ಮಲಗುವ ಅಭ್ಯಾಸ ನಿಮಗೂ ಇದ್ಯಾ! ಇದು ಆರೋಗ್ಯಕ್ಕೆ ಒಳ್ಳೆಯದೋ, ಅಲ್ಲವೋ ತಿಳಿದುಕೊಳ್ಳಿ

ಇದನ್ನೂ ಓದಿ
Image
ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಾ? ಬುಧವಾರ, ಶನಿವಾರ ಸಂಜೆ ಈ ರೀತಿ ಮಾಡಿ
Image
ಹಾಸಿಗೆ ಬಿಟ್ಟು ನೆಲದ ಮೇಲೆ ಮಲಗುವ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದೋ, ಅಲ್ಲವೋ?
Image
ನಿಮ್ಮ ನಾಲಿಗೆ ನೀಡುವ ಈ ರೀತಿಯ ಸಂದೇಶಗಳನ್ನು ಎಂದಿಗೂ ಕಡೆಗಣಿಸಬೇಡಿ
Image
ರಕ್ತಹೀನತೆ ಸಮಸ್ಯೆ ಇದ್ಯಾ? ಈ ಸುಲಭ ಮನೆಮದ್ದನ್ನು ಟ್ರೈ ಮಾಡಿ ನೋಡಿ

ಬೇಸಿಗೆಯಲ್ಲಿ ಈರುಳ್ಳಿ ತಿನ್ನುವುದರ ಪ್ರಯೋಜನಗಳ ಬಗ್ಗೆ ಮಾಹಿತಿ ಇಲ್ಲಿದೆ;

  • ಈರುಳ್ಳಿ ಸೇವನೆಯು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಬೇಸಿಗೆಯಲ್ಲಿ ಈರುಳ್ಳಿ ತಿನ್ನುವುದರಿಂದ ಹೀಟ್ ಸ್ಟ್ರೋಕ್ ತಡೆಯಬಹುದು. ಜೊತೆಗೆ ಬಿಸಿ ಗಾಳಿ ಅಪಾಯ ಹೆಚ್ಚಾಗಿದ್ದಾಗ ಕಚ್ಚಾ ಈರುಳ್ಳಿ ದೇಹದ ತಾಪಮಾನವನ್ನು ಸಮತೋಲನಗೊಳಿಸುವ ಮೂಲಕ ಶಾಖದ ಆಘಾತದಿಂದ ನಿಮ್ಮನ್ನು ರಕ್ಷಿಸುತ್ತದೆ.
  • ಈರುಳ್ಳಿ ತಂಪು ಸ್ವಭಾವದ್ದಾಗಿರುವುದರಿಂದ ಬೇಸಿಗೆಯಲ್ಲಿ ಇದರ ಸೇವನೆ ಮಾಡುವುದರಿಂದ ನೈಸರ್ಗಿಕವಾಗಿ ದೇಹವನ್ನು ತಂಪು ಮಾಡುತ್ತದೆ.
  • ಈರುಳ್ಳಿಯಲ್ಲಿ ಫೈಬರ್ ಅಧಿಕವಾಗಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇನ್ನು ಬೇಸಿಗೆಯಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿರುವುದರಿಂದ ಇಂತಹ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ.
  • ಈರುಳ್ಳಿಯಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಸಮೃದ್ಧವಾಗಿರುವುದರಿಂದ ಅವು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಬೇಸಿಗೆಯಲ್ಲಿ ಉಂಟಾಗುವ ರೋಗಗಳನ್ನು ತಡೆಗಟ್ಟಲು ಈರುಳ್ಳಿ ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು