AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Covid Variant Arcturus: ಕೋವಿಡ್​ನ ಈ ಹೊಸ ರೂಪಾಂತರಿ ಹಲವು ಪಟ್ಟು ವೇಗವಾಗಿ ಹರಡುತ್ತಂತೆ, ಲಕ್ಷಣಗಳೂ ಭಿನ್ನ

ದೇಶದಲ್ಲಿ ಕೊರೊನಾ ಸೋಂಕು(Coronovirus) ಅಂತ್ಯವಾಗುವಂತೆ ಕಾಣುತ್ತಿಲ್ಲ, ಕೆಲವು ತಿಂಗಳ ಕಾಲ ಕಡಿಮೆಯಾಗಿದ್ದ ಸೋಂಕು ಮತ್ತೆ ವೇಗವಾಗಿ ಹರಡುತ್ತಿದೆ.

New Covid Variant Arcturus: ಕೋವಿಡ್​ನ ಈ ಹೊಸ ರೂಪಾಂತರಿ ಹಲವು ಪಟ್ಟು ವೇಗವಾಗಿ ಹರಡುತ್ತಂತೆ, ಲಕ್ಷಣಗಳೂ ಭಿನ್ನ
ಕೊರೊನಾವೈರಸ್
Follow us
ನಯನಾ ರಾಜೀವ್
|

Updated on: Apr 13, 2023 | 11:13 AM

ದೇಶದಲ್ಲಿ ಕೊರೊನಾ ಸೋಂಕು(Coronovirus) ಅಂತ್ಯವಾಗುವಂತೆ ಕಾಣುತ್ತಿಲ್ಲ, ಕೆಲವು ತಿಂಗಳ ಕಾಲ ಕಡಿಮೆಯಾಗಿದ್ದ ಸೋಂಕು ಮತ್ತೆ ವೇಗವಾಗಿ ಹರಡುತ್ತಿದೆ. ಡೆಲ್ಟಾ, ಓಮಿಕ್ರಾನ್ ನಂತರ ಈಗ ಹೊಸ ರೂಪಾಂತರವು ಜನ್ಮ ತಳೆದಿದೆ ಅದರ ಹೆಸರು ಆರ್ಕ್ಟರಸ್ (XBB.1.16) Arcturus. ಇದು ಓಮಿಕ್ರಾನ್​ಗಿಂತ ಸಾಕಷ್ಟು ಭಿನ್ನವಾದ ಲಕ್ಷಣಗಳನ್ನು ಹೊಂದಿದೆ. ಇದು ಯುಎಸ್, ಸಿಂಗಾಪುರ್, ಆಸ್ಟ್ರೇಲಿಯಾದಂತಹ ಹಲವು ದೇಶಗಳಲ್ಲಿ ಕಂಡುಬಂದಿದೆ. ಇದು ಇಲ್ಲಿಯವರೆಗೆ ವೇಗವಾಗಿ ಹರಡುತ್ತಿರುವ ರೂಪಾಂತರವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಈ ರೂಪಾಂತರಿಯು ವಿಪರೀತ ಜ್ವರ, ನೆಗಡಿ, ತುರಿಕೆ, ಕಣ್ಣು ಕೆಂಪಗಾಗುವುದು, ಕಿರಿಕಿರಿಯ ಸಮಸ್ಯೆಗಳನ್ನು ಉಂಟು ಮಾಡುತ್ತದೆ ಎಂದು ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ ಕಮಿಟಿಯ ಡಾ. ವಿಪಿನ್ ಹೇಳಿದ್ದಾರೆ. ಈ ಹೊಸ ರೂಪಾಂತರವು ಇತರ ರೂಪಾಂತರಗಳಿಗಿಂತ 1.17 ರಿಂದ 1.27 ಪಟ್ಟು ವೇಗವಾಗಿ ಹರಡುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ. ಮತ್ತೆ ಎಲ್ಲಾ ದೇಶಗಳಲ್ಲಿಯೂ ಕೊರೊನಾ ಸೋಂಕು ಹೆಚ್ಚಾಗಬಹುದು ಎನ್ನುವ ಎಚ್ಚರಿಕೆಯನ್ನು ನೀಡಿದ್ದಾರೆ.

ಮತ್ತಷ್ಟು ಓದಿ: India Covid Updates: ಭಾರತದಲ್ಲಿ ಹೊಸದಾಗಿ 10,158 ಮಂದಿಗೆ ಕೊರೊನಾ ಸೋಂಕು, ಪ್ರಕರಣಗಳು ನಿನ್ನೆಗಿಂತ ಶೇ.30ರಷ್ಟು ಹೆಚ್ಚಳ

ಭಾರತದಲ್ಲಿ ಏಪ್ರಿಲ್ 12ಕ್ಕೆ ಹೋಲಿಸಿದರೆ ಒಂದೇ ದಿನದಲ್ಲಿ 3 ಸಾವಿರಕ್ಕಿಂತ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ 10,150 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ.ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ಸಕ್ರಿಯ ಸೋಂಕಿತರ ಸಂಖ್ಯೆ 44,998 ಇದೆ, ಬುಧವಾರ ದೇಶದಲ್ಲಿ 7,830 ಮಂದಿಗೆ ಕೊರೊನಾ ಸೋಂಕು ತಗುಲಿತ್ತು. ಮಂಗಳವಾರ 5,675 ಮಂದಿ ಸೋಂಕಿಗೆ ತುತ್ತಾಗಿದ್ದರು. ಇದೀಗ ಸೋಂಕು ಬಹುಬೇಗ ಎಲ್ಲ ಕಡೆ ಹರಡುತ್ತಿದೆ.

ದೈನಂದಿನ ಧನಾತ್ಮಕತೆಯ ದರ ಶೇ.4.42ರಷ್ಟಿದ್ದರೆ, ವಾರದ ಧನಾತ್ಮಕತೆಯ ದರ ಶೇ. 4.02ರಷ್ಟಿದೆ. ಸಕ್ರಿಯ ಪ್ರಕರಣಗಳು ಈಗ ಒಟ್ಟು ಸೋಂಕುಗಳ ಶೇ.0.10ಯಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್​-19 ಚೇತರಿಕೆ ದರವು ಶೇ.98.71ರಷ್ಟಿದೆ, ಸಾವಿನ ಪ್ರಮಾಣ ಶೇ.1.19ರಷ್ಟಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,42,10,127ಕ್ಕೆ ಏರಿಕೆಯಾಗಿದೆ.

Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?