AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Flu: ಮಕ್ಕಳನ್ನು ಕಾಡುತ್ತಿರುವ ಟೊಮೆಟೊ ಜ್ವರ ಎಂದರೇನು? ಲಕ್ಷಣಗಳು ಯಾವುವು?

Tomato Fever Symptoms:ಟೊಮೆಟೊ ಜ್ವರ (Tomato Fever) ಎಂದರೇನು?, ಹೇಗೆ ಹರಡುತ್ತೆ?, ಲಕ್ಷಣಗಳೇನು, ತಡೆಗಟ್ಟುವುದು ಹೇಗೆ ಎಂಬುದರ ಕುರಿತು ಮಾಹಿತಿಯನ್ನು ಇಲ್ಲಿ ನೀಡಲಾಗುತ್ತಿದೆ.

Tomato Flu: ಮಕ್ಕಳನ್ನು ಕಾಡುತ್ತಿರುವ ಟೊಮೆಟೊ ಜ್ವರ ಎಂದರೇನು? ಲಕ್ಷಣಗಳು ಯಾವುವು?
Tomato Fever
TV9 Web
| Updated By: ನಯನಾ ರಾಜೀವ್|

Updated on: May 11, 2022 | 1:23 PM

Share

ಟೊಮೆಟೊ ಜ್ವರ (Tomato Fever) ಎಂದರೇನು?, ಹೇಗೆ ಹರಡುತ್ತೆ?, ಲಕ್ಷಣಗಳೇನು, ತಡೆಗಟ್ಟುವುದು ಹೇಗೆ ಎಂಬುದರ ಕುರಿತು ಮಾಹಿತಿಯನ್ನು ಇಲ್ಲಿ ನೀಡಲಾಗುತ್ತಿದೆ. ಕೇರಳದಲ್ಲಿ ಶವರ್ಮಾ ಸೇವಿಸಿದ 16 ವರ್ಷದ ಬಾಲಕಿಯೊಬ್ಬಳು ಶಿಗೆಲ್ಲಾ ಬ್ಯಾಕ್ಟೀರಿಯಾದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಹಾಗೆಯೇ ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ವೈರಸ್(Virus)​ನ ಗದ್ದಲ ಶುರುವಾಗಿದೆ ಅದುವೇ ಟೊಮೆಟೊ ವೈರಸ್ ಅಥವಾ ಟೊಮೆಟೊ ಜ್ವರ.

ಟೊಮೆಟೊ ಜ್ವರ ದೊಡ್ಡವರಿಗಿಂತಲೂ ಸಣ್ಣಮಕ್ಕಳನ್ನು ಹೆಚ್ಚಾಗಿ ಕಾಡುತ್ತದೆ. ಕೇರಳದಲ್ಲಿ ಟೊಮೆಟೊ ಜ್ವರದ ಆತಂಕ ಶುರುವಾಗಿದೆ. ಕೊಲ್ಲಂ ಜಿಲ್ಲೆಯೊಂದರಲ್ಲೇ ಬರೋಬ್ಬರಿ 82 ಸೋಂಕಿತ ಪ್ರಕರಣಗಳು ಈವರೆಗೆ ವರದಿಯಾಗಿವೆ. ಈ ಸೋಂಕು ತಗುಲಿದವರೆಲ್ಲ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಾಗಿದ್ದು, ವಾಸ್ತವ ಸ್ಥಿತಿಯ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಗಾ ವಹಿಸಿದೆ.

ಆದರೆ ಟೊಮೆಟೊ ಜ್ವರ ಅಂಟಿಕೊಂಡವರೆಲ್ಲ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳೇ ಆಗಿರುವುದು ಆತಂಕವನ್ನು ಇಮ್ಮಡಿಗೊಳಿಸಿದೆ. ಎಲ್ಲ ಸೋಂಕಿತರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಟೊಮೆಟೊ ಜ್ವರ ಎಂದರೇನು? ಟೊಮೆಟೊ ಜ್ವರವು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಪರಿಣಾಮವನ್ನು ಬೀರುತ್ತದೆ. ಟೊಮೆಟೊ ಜ್ವರವು ಬಹಳ ಅಪರೂಪದ ವೈರಲ್ ಸೋಂಕು ಆಗಿದೆ. ಹೆಚ್ಚಾಗಿ ಈ ಜ್ವರದಿಂದ ಬಳಲುತ್ತಿರುವ ಮಕ್ಕಳಲ್ಲಿ ದದ್ದು ಮತ್ತು ಚರ್ಮದ ಕಿರಿಕಿರಿ ಮತ್ತು ನಿರ್ಜಲೀಕರಣ ಕಂಡು ಬರುತ್ತಿದೆ.

ಇದರಿಂದ ದೇಹದ ಹಲವು ಭಾಗಗಳಲ್ಲಿ ಗುಳ್ಳೆಗಳನ್ನು ಉಂಟಾಗುತ್ತಿವೆ. ಈ ಗುಳ್ಳೆಗಳು ಸಾಮಾನ್ಯವಾಗಿ ಕೆಂಪು ಬಣ್ಣದ ದುಂಡಗಿನ ಆಕಾರದಲ್ಲಿ ಇರುವುದರಿಂದ ಇದನ್ನು ಟೊಮೆಟೊ ಜ್ವರ ಎಂಬ ಹೆಸರಿನಲ್ಲಿ ಕರೆಯಲಾಗುತ್ತಿದೆ. ಕೊಲ್ಲಂ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಾತ್ರ ಈ ರೀತಿಯ ಜ್ವರದ ಪ್ರಕರಣಗಳು ವರದಿಯಾಗಿದ್ದು, ಇದು ಇತರ ಪ್ರದೇಶಗಳಿಗೂ ಹರಡಬಹುದು ಎಂದು ರಾಜ್ಯ ಆರೋಗ್ಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಟೊಮೆಟೊ ಜ್ವರದ ಲಕ್ಷಣಗಳೇನು? -ಅಧಿಕ ಜ್ವರ, ಮೈಕೈ ನೋವು, ಕೀಲು ಊತ ಮತ್ತು ಸುಸ್ತು ಇತರ ಕೆಲವು ಲಕ್ಷಣ -ಟೊಮೆಟೊ ಜ್ವರ ಪೀಡಿತ ಮಕ್ಕಳಲ್ಲಿ ಟೊಮೇಟೋ ಗಾತ್ರದ ಕೆಂಪು ದದ್ದುಗಳು ಕಂಡು ಬಂದಿವೆ. -ಸೋಂಕಿತ ಮಗು ನಿರ್ಜಲೀಕರಣದ ಕಾರಣದಿಂದಾಗಿ ಬಾಯಿಯಲ್ಲಿ ಕಿರಿಕಿರಿ ಉಂಟಾಗುತ್ತದೆ -ದದ್ದುಗಳ ಮೇಲೆ ಉಂಟಾಗುವ ಹುಣ್ಣುಗಳಿಂದ ಹುಳುಗಳು ಹೊರಬರುತ್ತವೆ ಎಂದು ಕೆಲವು ರೋಗಿಗಳು ಹೇಳುತ್ತಾರೆ

ಟೊಮೆಟೊ ಜ್ವರದ ಮುನ್ನೆಚ್ಚರಿಕೆ ಕ್ರಮಗಳೇನು? – ಶುಚಿತ್ವ ಮತ್ತು ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಬೇಕು -ಸೋಂಕಿತ ಮಕ್ಕಳಿಗೆ ಹೆಚ್ಚು ಕುದಿಸಿ ಆರಿಸಿದ ನೀರನ್ನು ಕುಡಿಸುವ ಮೂಲಕ ನೀರಿನಂಶವನ್ನು ಕಾಪಾಡಿಕೊಳ್ಳಬೇಕು -ನಿಮ್ಮ ಮಗುವಿನಲ್ಲಿ ರೋಗದ ಲಕ್ಷಣಗಳು ಕಂಡು ಬರುತ್ತಿದ್ದಂತೆ ವೈದ್ಯರನ್ನು ಸಂಪರ್ಕಿಸಬೇಕು -ಗುಳ್ಳೆಗಳು ಅಥವಾ ದದ್ದುಗಳನ್ನು ತುರಿಸುವುದು ಅಥವಾ ಒಡೆದುಕೊಳ್ಳದಂತೆ ನೋಡಿಕೊಳ್ಳಬೇಕು – ಬಿಸಿ ನೀರಿನಲ್ಲಿಯೇ ಸ್ನಾನ ಮಾಡುವುದು – ಜ್ವರದ ದೀರ್ಘಕಾಲೀನ ಪರಿಣಾಮಗಳನ್ನು ತಪ್ಪಿಸಲು ಸರಿಯಾಗಿ ವಿಶ್ರಾಂತಿ ತೆಗೆದುಕೊಳ್ಳಬೇಕು

ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ