Heart Health: ಹೃದಯದ ಆರೋಗ್ಯ ಕಾಪಾಡಲು ಯಾವ ರೀತಿಯ ಪೋಷಕಾಂಶ ಆಹಾರ ಸೇವಿಸಬೇಕು?

ನಿಮ್ಮ ಹೃದಯವನ್ನು ಆರೋಗ್ಯಕರವಾಗಿಡಲು ಅಗತ್ಯವಿರುವ ಕೆಲವು ಪ್ರಮುಖ ಪೋಷಕಾಂಶಗಳನ್ನು ಪ್ರತಿದಿನ ಸೇವಿಸುವುದು ಅಗತ್ಯ ಜೊತೆಗೆ ಅವುಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ದಿನನಿತ್ಯದ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಈ ಬಗ್ಗೆ ಆಯುರ್ವೇದ ತಜ್ಞ ವಿಕಾಸ್ ಚಾವ್ಲಾ ಕೆಲವೊಂದು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

Heart Health: ಹೃದಯದ ಆರೋಗ್ಯ ಕಾಪಾಡಲು ಯಾವ ರೀತಿಯ ಪೋಷಕಾಂಶ ಆಹಾರ ಸೇವಿಸಬೇಕು?
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Apr 27, 2023 | 10:32 AM

ಹೃದಯವು ಮಾನವ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ, ರಕ್ತವನ್ನು ಪಂಪ್ ಮಾಡಲು ಮತ್ತು ದೇಹದ ಎಲ್ಲಾ ಭಾಗಗಳಿಗೆ ಆಮ್ಲಜನಕ ಮತ್ತು ಪೋಷಕಾಂಶಗಳನ್ನು ಪೂರೈಸಲು ಕಾರಣವಾಗಿದೆ. ಆದ್ದರಿಂದ, ಆರೋಗ್ಯಕರ ಜೀವನ ನಡೆಸಲು ಮುಖ್ಯವಾಗಿ ನಮ್ಮ ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅತ್ಯಗತ್ಯ. ಹೃದಯವನ್ನು ಆರೋಗ್ಯಕರವಾಗಿಡುವ ಅತ್ಯುತ್ತಮ ಮಾರ್ಗವೆಂದರೆ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಸಮತೋಲಿತ ಆಹಾರವನ್ನು ಸೇವಿಸುವುದು. ವೇದಾಸ್ ಕ್ಯೂರ್ನ ಆಯುರ್ವೇದ ತಜ್ಞ ವಿಕಾಸ್ ಚಾವ್ಲಾ ಎಂಬವರು ಹೃದಯವನ್ನು ಆರೋಗ್ಯಕರವಾಗಿಡಲು ಅಗತ್ಯವಿರುವ ಕೆಲವು ಪ್ರಮುಖ ಪೋಷಕಾಂಶಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಒಮೆಗಾ 3 ಕೊಬ್ಬಿನಾಮ್ಲಗಳು: ಒಮೆಗಾ -3 ಕೊಬ್ಬಿನಾಮ್ಲಗಳು ಆಹಾರದ ಮೂಲಕ ಪಡೆಯಬೇಕಾದ ಅಗತ್ಯ ಕೊಬ್ಬಿನಾಂಶಗಳಾಗಿವೆ. ಇವು ಮೀನುಗಳಾದ ಸಾಲ್ಮನ್, ಬಂಗುಡೆ ಮತ್ತು ಸಾರ್ಡೀನ್, ಹಾಗೆಯೇ ಅಗಸೆಬೀಜ, ಚಿಯಾ ಬೀಜಗಳಲ್ಲಿ ಕಂಡುಬರುತ್ತವೆ, ಅವು ಉರಿಯೂತವನ್ನು ಕಡಿಮೆ ಮಾಡುವುದಲ್ಲದೆ, ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ. ಇವೆಲ್ಲವೂ ಉತ್ತಮ ಹೃದಯ ಆರೋಗ್ಯಕ್ಕೆ ಕೊಡುಗೆ ನೀಡುವ ಅಂಶಗಳಾಗಿವೆ.

ಫೈಬರ್: ಫೈಬರ್ ಒಂದು ರೀತಿಯ ಕಾರ್ಬೋಹೈಡ್ರೇಟ್ ಆಗಿದ್ದು, ಇದು ಜೀರ್ಣಕ್ರಿಯೆಯನ್ನು ನಿಯಂತ್ರಿಸಲು, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ನಾರಿನ ಉತ್ತಮ ಮೂಲಗಳಲ್ಲಿ ಹಣ್ಣುಗಳು, ತರಕಾರಿಗಳು, ಧಾನ್ಯಗಳು ಮತ್ತು ದ್ವಿದಳ ಧಾನ್ಯಗಳು ಸೇರಿವೆ.

ಪೊಟ್ಯಾಸಿಯಮ್: ಪೊಟ್ಯಾಸಿಯಮ್ ಒಂದು ಅತ್ಯಗತ್ಯ ಖನಿಜವಾಗಿದ್ದು, ಇದು ಹೃದಯದ ಲಯ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಬಾಳೆಹಣ್ಣುಗಳು, ಆವಕಾಡೊಗಳು, ಪಾಲಕ್ ಮತ್ತು ಸಿಹಿ ಆಲೂಗಡ್ಡೆಗಳಲ್ಲಿ ಕಂಡುಬರುತ್ತದೆ.

ಇದನ್ನೂ ಓದಿ:Heart Health: ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಸಹಾಯಕ ಈ ಪಾನೀಯ

ಮೆಗ್ನೀಷಿಯಂ: ಮೆಗ್ನೀಷಿಯಂ ಮತ್ತೊಂದು ಪ್ರಮುಖ ಖನಿಜವಾಗಿದ್ದು, ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮೆಗ್ನೀಷಿಯಂ ಇರುವ ಉತ್ತಮ ಮೂಲಗಳೆಂದರೆ ಬೀಜಗಳು, ಧಾನ್ಯಗಳು ಮತ್ತು ಹಸಿರು ತರಕಾರಿಗಳು ಸೇರಿವೆ.

ವಿಟಮಿನ್ ಡಿ: ವಿಟಮಿನ್ ಡಿ ದೇಹವು ಕ್ಯಾಲ್ಸಿಯಂ ಅನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ, ಇದು ಆರೋಗ್ಯಕರ ಮೂಳೆಗಳಿಗೆ ಅವಶ್ಯಕವಾಗಿದೆ. ಉರಿಯೂತವನ್ನು ಕಡಿಮೆ ಮಾಡುವ ಮೂಲಕ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸಿ ಹೃದಯದ ಆರೋಗ್ಯದಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ವಿಟಮಿನ್ ಡಿ ಯ ಉತ್ತಮ ಮೂಲಗಳಲ್ಲಿ ಮೀನು, ಮೊಟ್ಟೆಯ ಹಳದಿ ಭಾಗ ಮತ್ತು ಹಾಲು ಹಾಗೂ ಧಾನ್ಯಗಳಂತಹ ಬಲವರ್ಧಿತ ಆಹಾರಗಳು ಸೇರಿವೆ.

ಈ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರ ಜೊತೆಗೆ, ಅನಾರೋಗ್ಯಕರ ಕೊಬ್ಬಿನಾಂಶವಿರುವ ಪದಾರ್ಥ, ಉಪ್ಪು ಮತ್ತು ಹೆಚ್ಚುವರಿ ಸಕ್ಕರೆಗಳ ಸೇವನೆಯನ್ನು ಮಿತಿಗೊಳಿಸುವುದು ಸಹ ಮುಖ್ಯವಾಗಿದೆ. ಇವೆಲ್ಲವೂ ಕಳಪೆ ಹೃದಯದ ಆರೋಗ್ಯಕ್ಕೆ ಕಾರಣವಾಗಬಹುದು. ಹೃದಯದ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಲು ನಿಯಮಿತ ದೈಹಿಕ ಚಟುವಟಿಕೆ ಮತ್ತು ಆರೋಗ್ಯಕರ ರೀತಿಯಲ್ಲಿ ತೂಕವನ್ನು ಕಾಪಾಡಿಕೊಳ್ಳುವುದು ಸಹ ಮುಖ್ಯವಾಗಿದೆ. ನಮ್ಮ ಆಹಾರ ಮತ್ತು ಜೀವನಶೈಲಿಯಲ್ಲಿ ಸಣ್ಣ ಬದಲಾವಣೆಗಳನ್ನು ಮಾಡುವ ಮೂಲಕ, ನಮ್ಮ ಹೃದಯಗಳನ್ನು ರಕ್ಷಿಸಲು ಮತ್ತು ನಮ್ಮ ಒಟ್ಟಾರೆ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ನಾವು ಕ್ರಮಗಳನ್ನು ತೆಗೆದುಕೊಳ್ಳಬಹುದು. ನಿಮ್ಮ ಹೃದಯದ ಸ್ಥಿತಿಯು ಸಾಮಾನ್ಯವಾಗಿ ನಿಮ್ಮ ಆಹಾರ ಪದ್ಧತಿಯ ಸ್ಥಿತಿಯ ನೇರ ಪ್ರತಿಬಿಂಬವಾಗಿದೆ. ಹೃದಯವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುವ ಪೋಷಕಾಂಶಗಳ ಬಗ್ಗೆ ತಿಳಿದುಕೊಂಡು ಆಹಾರದ ಬಗ್ಗೆ ಹೆಚ್ಚು ಗಮನ ನೀಡಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:30 am, Thu, 27 April 23

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ