
ಸೋಂಪು(ಬಡೆಸೊಪ್ಪು) ಇದೊಂದು ಮಸಾಲೆ ಪದಾರ್ಥ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಸಾಮಾನ್ಯವಾಗಿ ಅಡುಗೆ ತಯಾರಿಯಲ್ಲಿ ಇದನ್ನು ಹೆಚ್ಚು ಹೆಚ್ಚು ಬಳಕೆ ಮಾಡುವುದರಿಂದ ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಹಾಗಾಗಿಯೇ ಬಾಯಿ ಫ್ರೆಶ್ ಆಗಿರಲು ಹೆಚ್ಚು ಸೋಂಪನ್ನು ಬಳಕೆ ಮಾಡುವವರಿದ್ದಾರೆ. ಅದಲ್ಲದೆ ಇವುಗಳಲ್ಲಿ ಅನೇಕ ರೀತಿಯ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಹಲವಾರು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಇದರಲ್ಲಿ ವಿಟಮಿನ್ ಸಿ, ಪೊಟ್ಯಾಸಿಯಮ್, ಆಹಾರದ ಫೈಬರ್, ಉತ್ಕರ್ಷಣ ನಿರೋಧಕಗಳು, ಉರಿಯೂತ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಸಮೃದ್ಧವಾಗಿವೆ. ಹಾಗಾಗಿ ಊಟದ ನಂತರ ಸೋಂಪನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಇದು ರಾತ್ರಿ ಊಟಕ್ಕೂ ಅನ್ವಯವಾಗುತ್ತದೆಯೇ? ಮಲಗುವ ಮೊದಲು ಸೋಂಪು ಸೇವನೆ ಒಳ್ಳೆಯದೇ ಎಂಬುದನ್ನು ಎಂದಾದರೂ ಯೋಚಿಸಿದ್ದೀರಾ? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಆರೋಗ್ಯ ತಜ್ಞರ ಪ್ರಕಾರ, ರಾತ್ರಿ ಊಟವಾದ ಮೇಲೆ ಸೋಂಪನ್ನು ಜಗಿಯುವುದರಿಂದ ಹೊಟ್ಟೆ ಉಬ್ಬರ, ಗ್ಯಾಸ್ ಮತ್ತು ಅಜೀರ್ಣದಂತಹ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಅದರಲ್ಲಿಯೂ ಸೋಂಪಿನಲ್ಲಿ ಕ್ಯಾಲೊರಿ ಅಂಶವು ತುಂಬಾ ಕಡಿಮೆ ಮತ್ತು ಫೈಬರ್ ಅಂಶ ಹೆಚ್ಚಾಗಿದೆ ಎಂದು ಹಲವಾರು ಅಧ್ಯಯನಗಳಿಂದ ಬೆಳಕಿಗೆ ಬಂದಿದೆ. ಇದು ತೂಕ ನಷ್ಟಕ್ಕೂ ಕೂಡ ಸಹಾಯ ಮಾಡುತ್ತದೆ. ಫೈಬರ್, ಪೊಟ್ಯಾಸಿಯಮ್ ಮತ್ತು ಅನೇಕ ಪೋಷಕಾಂಶಗಳು ಸೋಂಪಿನಲ್ಲಿ ಕಂಡುಬರುತ್ತವೆ. ಇದು ನಿಮ್ಮ ಹೃದಯದ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ.
ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಹಾಗಲಕಾಯಿ ಜ್ಯೂಸ್ ಕುಡಿಯಿರಿ, ಈ ಆರೋಗ್ಯ ಪ್ರಯೋಜನ ಖಂಡಿತ
ಸೋಂಪಿನಲ್ಲಿ ಕ್ಯಾಲೊರಿಗಳು ತುಂಬಾ ಕಡಿಮೆ ಇದ್ದು, ಫೈಬರ್ ಅಂಶ ಅಧಿಕವಾಗಿರುತ್ತದೆ. ಇದನ್ನು ಸೇವನೆ ಮಾಡುವುದರಿಂದ ಹೊಟ್ಟೆ ದೀರ್ಘಕಾಲದ ವರೆಗೆ ತುಂಬಿರುತ್ತದೆ. ಹಾಗಾಗಿ ಪದೇ ಪದೇ ಆಹಾರ ಸೇವನೆ ಮಾಡುವ ಅವಶ್ಯಕತೆ ಬರುವುದಿಲ್ಲ ಜೊತೆಗೆ ಇದು ತೂಕ ಇಳಿಸಿಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಪ್ರತಿನಿತ್ಯ ಊಟ ಮಾಡಿದ ನಂತರ ಸೋಂಪನ್ನು ಜಗಿಯಬೇಕು. ನೋವು ಮತ್ತು ಋತುಚಕ್ರಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳಿಂದ ಪರಿಹಾರ ಪಡೆಯಲು ರಾತ್ರಿ ಊಟವಾದ ನಂತರ ಸ್ವಲ್ಪ ನೀರು ಕುಡಿದು ಆ ಬಳಿಕ ಸೋಂಪನ್ನು ಸೇವನೆ ಮಾಡಬೇಕು. ಈ ರೀತಿ ರಾತ್ರಿ ಸಮಯದಲ್ಲಿ ಸೋಂಪನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಹಾಗಾಗಿ ಈ ರೀತಿಯ ಅಭ್ಯಾಸ ದೇಹದ ಆರೋಗ್ಯಕ್ಕೆ ಬಹಳ ಒಳ್ಳೆಯದು.
ಸೂಚನೆ: ಇಲ್ಲಿರುವ ವಿಷಯಗಳು ಮಾಹಿತಿಗಾಗಿ ಮಾತ್ರ, ಯಾವುದೇ ರೀತಿಯ ಸಂದೇಹಗಳಿದ್ದಲ್ಲಿ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸುವುದು ಸೂಕ್ತ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ