Best Time To Eat Bananas For Energy & Digestion
Image Credit source: Getty Images
ವರ್ಷಪೂರ್ತಿ ಲಭ್ಯವಿರುವ ಹಣ್ಣುಗಳಲ್ಲಿ ಬಾಳೆಹಣ್ಣುಗಳು ಕೂಡ ಒಂದು. ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಬಾಳೆಹಣ್ಣು (Bananas) ತಿನ್ನಲು ಇಷ್ಟಪಡುತ್ತಾರೆ. ಆದರೆ ಬಾಳೆಹಣ್ಣನ್ನು ಯಾವಾಗಲೂ ಸರಿಯಾದ ರೀತಿಯಲ್ಲಿ ಮತ್ತು ಸರಿಯಾದ ಸಮಯಕ್ಕೆ ಸೇವನೆ ಮಾಡಿದಾಗ ಮಾತ್ರವೇ ಸಾಕಷ್ಟು ಪ್ರಯೋಜನಗಳು ಸಿಗಲು ಸಾಧ್ಯವಾಗುತ್ತದೆ. ಜೊತೆಗೆ ಅವುಗಳಲ್ಲಿರುವ ಪೋಷಕಾಂಶಗಳು ಸಂಪೂರ್ಣವಾಗಿ ದೇಹ ಹೀರಿಕೊಳ್ಳಲು ಸಹಾಯ ಮಾಡುತ್ತೆ. ಹಾಗಾಗಿ ಬಾಳೆಹಣ್ಣುಗಳು ಒಳ್ಳೆಯದು ಎಂದು ಮನ ಬಂದಾಗ ತಿನ್ನುವುದನ್ನು ಬಿಟ್ಟು ಅದನ್ನು ಯಾವಾಗ ಸೇವನೆ ಮಾಡಿದರೆ ಒಳ್ಳೆಯದು ಎಂದು ತಿಳಿದುಕೊಂಡು ಅದನ್ನು ಪಾಲನೆ ಮಾಡುವುದು ಒಳಿತು. ಇದರಿಂದ ನೀವು ಊಹಿಸಲೂ ಸಾಧ್ಯವಾಗದಂತಹ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
- ಬೆಳಿಗ್ಗೆ ಎದ್ದ ತಕ್ಷಣ ಬಾಳೆಹಣ್ಣು ತಿನ್ನುವುದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ. ಇದರಲ್ಲಿರುವ ವಿಟಮಿನ್ ಬಿ6 ಮತ್ತು ಪೊಟ್ಯಾಸಿಯಮ್ ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ. ಮಲಬದ್ಧತೆಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬೆಳಿಗ್ಗೆ ಎದ್ದು ಬಾಳೆಹಣ್ಣು ತಿನ್ನುವುದು ಬಹಳ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.
- ಜಿಮ್‌ಗೆ ಹೋಗುವ ಮೊದಲು ಅಥವಾ ವ್ಯಾಯಾಮ ಮಾಡುವ ಮೊದಲು 1 ಅಥವಾ 2 ಬಾಳೆಹಣ್ಣುಗಳನ್ನು ತಿನ್ನುವುದು ಒಳ್ಳೆಯದು. ಬಾಳೆಹಣ್ಣಿನಲ್ಲಿರುವ ಕಾರ್ಬೋಹೈಡ್ರೇಟ್‌ಗಳು ವ್ಯಾಯಾಮಕ್ಕೆ ಅಗತ್ಯವಾದ ಶಕ್ತಿಯನ್ನು ಒದಗಿಸುತ್ತವೆ. ಹೆಚ್ಚುವರಿಯಾಗಿ, ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಮ್ ಸ್ನಾಯು ಸೆಳೆತವನ್ನು ತಡೆಯುತ್ತದೆ ಮತ್ತು ಸ್ನಾಯುಗಳನ್ನು ಬಲಪಡಿಸುತ್ತದೆ.
- ಊಟದ ನಂತರ ಬಾಳೆಹಣ್ಣು ತಿನ್ನುವುದರಿಂದ ಜೀರ್ಣಕ್ರಿಯೆ ವೇಗಗೊಳ್ಳುತ್ತದೆ. ಬಾಳೆಹಣ್ಣಿನಲ್ಲಿರುವ ನಾರಿನಾಂಶ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದು ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ.
- ಸಂಜೆ 4 ರಿಂದ 6 ಗಂಟೆಯ ನಡುವೆ ಹಸಿವಾದಾಗ ಜಂಕ್ ಫುಡ್ ತಿನ್ನುವ ಬದಲು ಬಾಳೆಹಣ್ಣು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಇದು ಎಣ್ಣೆ ತಿಂಡಿ ತಿನ್ನುವ ಅಭ್ಯಾಸವನ್ನು ತಡೆಯಲು ಸಹಾಯ ಮಾಡುತ್ತದೆ ಮತ್ತು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಸಹ ಒದಗಿಸುತ್ತದೆ. ಹಾಗಾಗಿ ಮಕ್ಕಳು ಶಾಲೆಯಿಂದ ಬಂದ ಬಳಿಕ ಒಂದು ಬಾಳೆಹಣ್ಣನ್ನು ಕೊಡಿ. ಆದರೆ ಯಾವುದೇ ಕಾರಣಕ್ಕೂ 7 ಗಂಟೆಯ ನಂತರ ಸಾಧ್ಯವಾದಷ್ಟು ಹಣ್ಣುಗಳ ಸೇವನೆ ಮಾಡುವುದನ್ನು ತಪ್ಪಿಸಿ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ