AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cashew: ಈ ಕೆಲವು ಆರೋಗ್ಯ ಸಮಸ್ಯೆ ಹೊಂದಿರುವವರು ಗೋಡಂಬಿಯನ್ನು ಸೇವಿಸಬಾರದು

ಕೆಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಗೋಡಂಬಿ ಸೇವನೆಯನ್ನು ತಪ್ಪಿಸುವುದು ಒಳ್ಳೆಯದು. ಯಾರು ಗೋಡಂಬಿಯಅನ್ನು ಸೇವಿಸಬಾರದು? ಗೋಡಂಬಿ ಸೇವನೆಯಿಂದ ಆರೋಗ್ಯ ಪ್ರಯೋಜನಗಳೆಷ್ಟಿವೆ? ಈ ಕುರಿತಾದ ಮಾಹಿತಿ ಈ ಕೆಳಗಿನಂತಿದೆ.

Cashew: ಈ ಕೆಲವು ಆರೋಗ್ಯ ಸಮಸ್ಯೆ ಹೊಂದಿರುವವರು ಗೋಡಂಬಿಯನ್ನು ಸೇವಿಸಬಾರದು
ಗೋಡಂಬಿ
TV9 Web
| Edited By: |

Updated on: Nov 30, 2021 | 1:01 PM

Share

ಗೋಡಂಬಿ ಬೀಜ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಕೆಲವು ಆಹಾರ ಪದಾರ್ಥಗಳನ್ನು ಅತಿಯಾಗಿ ಸೇವಿಸಿದರೆ ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತದೆ ಎಂಬುದು ನೆನಪಿನಲ್ಲಿರಲಿ. ಗೋಡಂಬಿಯಲ್ಲಿ ಪ್ರೊಟೀನ್, ಜೀವಸತ್ವಗಳು, ಖನಿಜಗಳು, ಪೈಬರ್ ಮತ್ತು ಉತ್ಕರ್ಷಣ ನಿರೋಧಕಗಳಿರುತ್ತವೆ. ಮಿತವಾದ ಸೇವನೆಯ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಆದರೆ ಕೆಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಗೋಡಂಬಿ ಸೇವನೆಯನ್ನು ತಪ್ಪಿಸುವುದು ಒಳ್ಳೆಯದು. ಯಾರು ಗೋಡಂಬಿಯಅನ್ನು ಸೇವಿಸಬಾರದು? ಗೋಡಂಬಿ ಸೇವನೆಯಿಂದ ಆರೋಗ್ಯ ಪ್ರಯೋಜನಗಳೆಷ್ಟಿವೆ? ಈ ಕುರಿತಾದ ಮಾಹಿತಿ ಈ ಕೆಳಗಿನಂತಿದೆ. ಮುಂಬೈನ ಅಪೊಲೊ ಆಸ್ಪತ್ರೆಯ ಡಯೆಟೀಷಿಯನ್ ಡಾ. ಜಿನಾಲ್ ಪಟೇಲ್ ಅವರು ಹೇಳಿರುವ ಮಾಹಿತಿಯನ್ನು ಇಂಡಿಯನ್ ಡಾಟ್ ಕಾಮ್​ನಲ್ಲಿ ಉಲ್ಲೇಖಿಸಲಾಗಿದೆ. ಅಲರ್ಜಿ ಅಥವಾ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರೂ ಸಹ ಗೋಡಂಬಿ ಸೇವನೆಯನ್ನು ತಪ್ಪಿಸುವುದು ಒಳ್ಳೆಯದು.

ನೀವು ಗೋಡಂಬಿಯನ್ನು ಅತಿಯಾಗಿ ಸೇವಿಸಿದಾಗ ಮಲಬದ್ಧತೆಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಅದರಲ್ಲಿಯೂ ಮುಖ್ಯವಾಗಿ ಅಜೀರ್ಣ ಸಮಸ್ಯೆ ಹೊಂದಿರುವವರಿಗೆ ಸಮಸ್ಯೆ ಇನ್ನೂ ಉಲ್ಬಣಗೊಳ್ಳುತ್ತದೆ. ಹೆಚ್ಚಿನ ಪ್ರಮಾಣದಲ್ಲಿ ಗೋಡಂಬಿ ಸೇವನೆಯು ಮೂತ್ರಪಿಂಡದ ಹಾನಿಯಂತಹ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಜೊತೆಯಲ್ಲಿ ಇದರಲ್ಲಿರುವ ಅಮೈನೋ ಆಮ್ಲದಿಂದ ತಲೆನೋವಿನಂತಹ ಸಮಸ್ಯೆಗಳು ಇನ್ನೂ ಹೆಚ್ಚಾಗಬಹುದು ಎಂದು ತಜ್ಞರು ಹೇಳಿದ್ದಾರೆ.

ಗೋಡಂಬಿ ಸೇವನೆಯಿಂದ ಆರೋಗ್ಯ ಪ್ರಯೋಜನಗಳು; ಗೋಡಂಬಿಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯಕ. ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ಜೊತೆಗೆ ತೂಕ ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

ತೂಕ ನಷ್ಟಕ್ಕೆ ಒಳ್ಳೆಯದು ಬೀಜಗಳಲ್ಲಿ ಹೆಚ್ಚಿನ ಪ್ರೋಟೀನ್, ಫೈಬರ್ ಮತ್ತು ಕೊಬ್ಬುಗಳನ್ನು ಹೊಂದಿರುತ್ತದೆ. ಹಸಿವಿನ ನೋವನ್ನು ನಿವಾರಿಸುತ್ತದೆ. ತೂಕವನ್ನು ಕಳೆದುಕೊಳ್ಳಲು ಇದು ಉತ್ತಮ ಆಯ್ಕೆ ಎಂದು ತಜ್ಞರು ಹೇಳಿದ್ದಾರೆ.

ಹೃದಯದ ಆರೋಗ್ಯ ಸುಧಾರಣೆ ಬ್ರಿಟಿಷ್ ಜರ್ನಲ್ ಆಫ್ ನ್ಯೂಟ್ರಿಷನ್​ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ವಾರಕ್ಕೆ ನಾಲ್ಕು ಬಾರಿ ಗೋಡಂಬಿ ಸೇವಿಸುವುದರಿಂದ ಶೇ 37ರಷ್ಟು ಹೃದ್ರೋಗ ಅಪಾಯವು ಕಡಿಮೆಯಾಗುತ್ತದೆ.

ಜೀವಕೋಶದ ಹಾನಿಯನ್ನು ತಡೆಗಟ್ಟುತ್ತದೆ ಬೀಜಗಳು ಉತ್ಕರ್ಷಕ ನಿರೋಧಕಗಳನ್ನು ಹೊಂದಿರುತ್ತದೆ. ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ. ಉರಿಯೂತವನ್ನು ಕಡಿಮೆ ಮಾಡುತ್ತದೆ. ನಿಯಮಿತವಾದ ಗೋಡಂಬಿ ಸೇವನೆಯು ಒಟ್ಟಾರೆ ಆರೋಗ್ಯ ಸುಧಾರಣೆಗೆ ಸಹಾಯಕವಾಗಿದೆ.

ರಕ್ತದ ಸಕ್ಕರೆ ಮಟ್ಟನ್ನು ನಿಯಂತ್ರಿಸುತ್ತದೆ ಗೋಡಂಬಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯಕವಾಗಿದೆ. ನಿಮ್ಮ ದೈಹಿಕ ಸ್ಥಿತಿ ಜೊತೆಗೆ ಮಾನಸಿಕ ಒತ್ತಡದಿಂದ ಪರಿಹಾರ ಕಂಡುಕೊಳ್ಳಲು ಸಹಾಯಕವಾಗಿದೆ.

ಇದನ್ನೂ ಓದಿ:

ಮೂಲಂಗಿ ಎಲೆಯ ಜ್ಯೂಸ್ ಚಳಿಗಾಲದಲ್ಲಿ ಎಷ್ಟು ಮುಖ್ಯ? ಆರೋಗ್ಯಕರ ಗುಣಗಳ ಬಗ್ಗೆ ತಿಳಿಯಿರಿ

Omicron: ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಒಮಿಕ್ರಾನ್ ವೈರಸ್ ಭೀತಿ; ವಿಶ್ವ ಆರೋಗ್ಯ ಸಂಸ್ಥೆಯಿಂದಲೂ ಎಚ್ಚರಿಕೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ