AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಯಟ್ ಮಾಡುವವರು ತಪ್ಪದೆ ಈ ಒಂದು ಹಣ್ಣನ್ನು ಸೇವನೆ ಮಾಡಲೇಬೇಕು! ಯಾಕೆ ಗೊತ್ತಾ?

ನೀವು ಡ್ರ್ಯಾಗನ್ ಫ್ರೂಟ್ ಅನ್ನು ನೋಡಿರಬೇಕು. ಇತ್ತೀಚಿನ ದಿನಗಳಲ್ಲಿ ಇದು ಎಲ್ಲೆಡೆ ಹೇರಳವಾಗಿ ಲಭ್ಯವಿದ್ದು ಇದರ ರುಚಿ ಕೂಡ ಚೆನ್ನಾಗಿದೆ. ಈ ಹಣ್ಣು ಪೋಷಕಾಂಶಗಳಿಂದ ತುಂಬಿರುವ ಉಷ್ಣವಲಯದ ಹಣ್ಣು. ಇದನ್ನು ಪಿಟಾಯಾ ಅಥವಾ ಪಿಟಾಹಯಾ ಎಂದು ಕರೆಯಲಾಗುತ್ತದೆ. ಇದು ಹೈಲೋಸೀರಿಯಸ್ ಹಣ್ಣಿನ ಕುಲಕ್ಕೆ ಸೇರಿದೆ. ಇದರ ಸೇವನೆಯಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿದ್ದು. ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಕೂಡ ಡಯಟ್ ನಲ್ಲಿ ಸೇರಿಸಿಕೊಳ್ಳಬಹುದು. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳೇನು, ಯಾವ ಸಮಸ್ಯೆಗೆ ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಡಯಟ್ ಮಾಡುವವರು ತಪ್ಪದೆ ಈ ಒಂದು ಹಣ್ಣನ್ನು ಸೇವನೆ ಮಾಡಲೇಬೇಕು! ಯಾಕೆ ಗೊತ್ತಾ?
ಡಯಟ್ ನಲ್ಲಿ ಡ್ರ್ಯಾಗನ್ ಫ್ರೂಟ್
ಪ್ರೀತಿ ಭಟ್​, ಗುಣವಂತೆ
|

Updated on: Nov 19, 2025 | 2:05 PM

Share

ನೀವು ಕೂಡ ಡ್ರ್ಯಾಗನ್ ಫ್ರೂಟ್ (Dragon Fruit) ಅನ್ನು ನೋಡಿರಬಹುದು ಕೆಲವರು ಇದರ ರುಚಿಯನ್ನು ಕೂಡ ಆಸ್ವಾದಿಸಿರಬಹುದು. ಇತ್ತೀಚಿನ ದಿನಗಳಲ್ಲಿ ಇದು ಎಲ್ಲೆಡೆ ಹೇರಳವಾಗಿ ಲಭ್ಯವಿದ್ದು ಇದರ ರುಚಿಯೂ ತುಂಬಾ ಚೆನ್ನಾಗಿದೆ. ಪ್ರತಿಯೊಬ್ಬರೂ ಕೂಡ ಒಮ್ಮೆಯಾದರೂ ಇದನ್ನು ತಿಂದು, ರುಚಿ ನೋಡಲೇಬೇಕು. ಈ ಹಣ್ಣು ಪೋಷಕಾಂಶಗಳಿಂದ ತುಂಬಿರುವ ಉಷ್ಣವಲಯದ ಹಣ್ಣು. ಅಮೇರಿಕಾ ಮೂಲದ್ದಾಗಿದ್ದು ಕಳ್ಳಿ ಜಾತಿಗೆ ಸೇರಿದ ಹಣ್ಣಾಗಿದೆ. ಇದನ್ನು ಪಿಟಾಯಾ ಅಥವಾ ಪಿಟಾಹಯಾ ಎಂದು ಕರೆಯಲಾಗುತ್ತದೆ. ಇದು ಹೈಲೋಸೀರಿಯಸ್ ಹಣ್ಣಿನ ಕುಲಕ್ಕೆ ಸೇರಿದೆ. ಇದರ ಸೇವನೆಯಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿದ್ದು. ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಕೂಡ ಡಯಟ್ ನಲ್ಲಿ ಸೇರಿಸಿಕೊಳ್ಳಬಹುದು. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನಗಳೇನು, ಯಾವ ಸಮಸ್ಯೆಗೆ ಒಳ್ಳೆಯದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಡ್ರ್ಯಾಗನ್ ಫ್ರೂಟ್ ವಿಟಮಿನ್ ಸಿ ಮತ್ತು ಬಿ2 ಗಳಿಂದ ಸಮೃದ್ಧವಾಗಿದ್ದು ಇದರಲ್ಲಿ ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ಖನಿಜಗಳೂ ಇವೆ. ಇವು ಆರೋಗ್ಯ ಸಮಸ್ಯೆಗಳಿಂದ ನಮ್ಮನ್ನು ದೂರವಿಡಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದಕ್ಕಾಗಿಯೇ ನಾವು ಸೇವನೆ ಮಾಡುವ ಆಹಾರದಲ್ಲಿ ಡ್ರ್ಯಾಗನ್ ಫ್ರೂಟ್ ಸೇರಿಸಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಡ್ರ್ಯಾಗನ್ ಫ್ರೂಟ್ ನಲ್ಲಿ ವಿಟಮಿನ್ ಸಿ, ಫ್ಲೇವನಾಯ್ಡ್‌ಗಳು ಮತ್ತು ಫೀನಾಲಿಕ್ ಆಮ್ಲಗಳಂತಹ ಉತ್ಕರ್ಷಣ ನಿರೋಧಕಗಳು ಇರುತ್ತವೆ. ಅವು ಜೀವಕೋಶಗಳನ್ನು ಆಕ್ಸಿಡೇಟಿವ್ ಒತ್ತಡದ ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತವೆ. ಇದು ಆರೋಗ್ಯವನ್ನು ಕಾಪಾಡಿಕೊಳ್ಳಲು ತುಂಬಾ ಪ್ರಯೋಜನಕಾರಿ.

ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ:

ಡ್ರ್ಯಾಗನ್ ಫ್ರೂಟ್ ನಲ್ಲಿರುವ ಫೈಬರ್, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳು ಉರಿಯೂತವನ್ನು ಕಡಿಮೆ ಮಾಡುವ ಮೂಲಕ ಮತ್ತು ರಕ್ತದ ಲಿಪಿಡ್ ಪ್ರೊಫೈಲ್‌ಗಳನ್ನು ಸುಧಾರಿಸುವ ಮೂಲಕ ಹೃದಯದ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಕೆಲವು ಅಧ್ಯಯನಗಳು ಡ್ರ್ಯಾಗನ್ ಹಣ್ಣು ರಕ್ತದಲ್ಲಿನ ಸಕ್ಕರೆ ನಿಯಂತ್ರಣದ ಮೇಲೆ ಪ್ರಯೋಜನಕಾರಿ ಪರಿಣಾಮವನ್ನು ಬೀರುತ್ತದೆ ಎಂದು ಸೂಚಿಸುತ್ತವೆ.

ಇದನ್ನೂ ಓದಿ: ಚಳಿಗಾಲದಲ್ಲೇಕೆ ಪರ್ಸಿಮನ್‌ ಹಣ್ಣನ್ನು ಹೆಚ್ಚೆಚ್ಚು ಸೇವಿಸಬೇಕು? ಇದರ ಹಿಂದಿದೆ ಮುಖ್ಯ ಕಾರಣ

ಮಲಬದ್ಧತೆಯ ಸಮಸ್ಯೆಗೆ ಮುಕ್ತಿ ನೀಡುತ್ತದೆ:

ಡ್ರ್ಯಾಗನ್ ಫ್ರೂಟ್ ನಲ್ಲಿ ನಾರಿನಾಂಶ ಉತ್ತಮವಾಗಿದೆ. ಇದು ಜೀರ್ಣಕ್ರಿಯೆಯ ಆರೋಗ್ಯವನ್ನು ಉತ್ತೇಜಿಸಲು ಮತ್ತು ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಈ ಹಣ್ಣು ಉರಿಯೂತದ ಗುಣಲಕ್ಷಣಗಳನ್ನು ಹೊಂದಿರುವ ಸಂಯುಕ್ತವನ್ನು ಹೊಂದಿರುತ್ತದೆ. ಇವು ಊತವನ್ನು ಕಡಿಮೆ ಮಾಡಲು ಮತ್ತು ಸಂಧಿವಾತಕ್ಕೆ ಸಂಬಂಧಿಸಿದ ಲಕ್ಷಣಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಚರ್ಮದ ಆರೋಗ್ಯಕ್ಕೆ ಪ್ರಯೋಜನಕಾರಿ:

ಡ್ರ್ಯಾಗನ್ ಫ್ರೂಟ್ ನಲ್ಲಿರುವ ವಿಟಮಿನ್ ಸಿ ಮತ್ತು ಇತರ ಉತ್ಕರ್ಷಣ ನಿರೋಧಕಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಇವು ಪದೇ ಪದೇ ಉಂಟಾಗುವ ನೆಗಡಿಯಂತಹ ಕಾಯಿಲೆಗಳ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಜೀವಸತ್ವಗಳು ಚರ್ಮವನ್ನು ಹಾನಿಯಿಂದ ರಕ್ಷಿಸಲು, ವಯಸ್ಸಾಗುವುದನ್ನು ವಿಳಂಬಗೊಳಿಸಲು ಮತ್ತು ಆರೋಗ್ಯಕರ ಚರ್ಮವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ