Health Tips: ಬೆಂಗಳೂರಿನಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ಹೆಚ್ಚುತ್ತಿರುವುದೇಕೆ? ತಜ್ಞರು ಹೇಳುವುದೇನು?

ಬೆಂಗಳೂರಿನಲ್ಲಿ ಟೈಫಾಯಿಡ್, ವೈರಲ್ ಹೆಪಟೈಟಿಸ್, ಅತಿಸಾರದಂತಹ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ನಿರಂತರವಾಗಿ ಹೆಚ್ಚುತ್ತಿವೆ. ಳೆದ ನಾಲ್ಕು ತಿಂಗಳಲ್ಲಿ 60,100 ಕ್ಕೂ ಹೆಚ್ಚು ಜನರು ಕರುಳಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಬಹುತೇಕ ಜನರಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ವರದಿಯಾಗುತ್ತಿವೆ. ಬೆಂಗಳೂರಿನಲ್ಲಿಈ ರೀತಿ ಪ್ರಕರಣಗಳು ಹೆಚ್ಚುತ್ತಿರಲು ಕಾರಣವೇನು? ಈ ಬಗ್ಗೆ ತಜ್ಞರು ಹೇಳುವುದೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Health Tips: ಬೆಂಗಳೂರಿನಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ಹೆಚ್ಚುತ್ತಿರುವುದೇಕೆ? ತಜ್ಞರು ಹೇಳುವುದೇನು?
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: May 22, 2024 | 8:23 PM

ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನಲ್ಲಿ ಟೈಫಾಯಿಡ್, ವೈರಲ್ ಹೆಪಟೈಟಿಸ್, ಅತಿಸಾರದಂತಹ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ನಿರಂತರವಾಗಿ ಹೆಚ್ಚುತ್ತಿವೆ. ಎಡಿಡಿ (ತೀವ್ರ ಅತಿಸಾರ) 4500 ಕ್ಕೂ ಹೆಚ್ಚು ಜನರಲ್ಲಿ ಪತ್ತೆಯಾಗಿದೆ. ಅಲ್ಲದೆ, ಕಳೆದ ನಾಲ್ಕು ತಿಂಗಳಲ್ಲಿ 60,100 ಕ್ಕೂ ಹೆಚ್ಚು ಜನರು ಕರುಳಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಬಹುತೇಕ ಜನರಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ವರದಿಯಾಗುತ್ತಿವೆ. ಬೆಂಗಳೂರಿನಲ್ಲಿಈ ರೀತಿ ಪ್ರಕರಣಗಳು ಹೆಚ್ಚುತ್ತಿರಲು ಕಾರಣವೇನು? ಈ ಬಗ್ಗೆ ತಜ್ಞರು ಹೇಳುವುದೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಹವಾಮಾನ ಬದಲಾವಣೆ ಮತ್ತು ಹೆಚ್ಚುತ್ತಿರುವ ಶಾಖದಿಂದಾಗಿ ಈ ರೀತಿಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ತಜ್ಞರು ಹೇಳುತ್ತಾರೆ. ಪ್ರಸ್ತುತ, ಈ ಋತುವಿನಲ್ಲಿ ಅತಿಸಾರದ ಪ್ರಕರಣಗಳು ಹೆಚ್ಚಾಗುತ್ತಿದೆ. ಕಲುಷಿತ ನೀರನ್ನು ಕುಡಿಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಡಾ. ಜುಗಲ್ ಕಿಶೋರ್ ಅವರು ಬೇಸಿಗೆಯಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ಹೆಚ್ಚಾಗುತ್ತವೆ ಎಂದು ಹೇಳುತ್ತಾರೆ. ನಿರ್ಜಲೀಕರಣ, ಹೊಟ್ಟೆಯಲ್ಲಿ ಸೋಂಕು, ವಾಂತಿ ಮತ್ತು ಅತಿಸಾರದಂತಹ ಸಮಸ್ಯೆಗಳು ಕಂಡುಬರುವುದು ಸಾಮಾನ್ಯವಾಗಿದೆ.

ಬೆಂಗಳೂರಿನಲ್ಲಿ ಏಕೆ ಪ್ರಕರಣಗಳು ಹೆಚ್ಚುತ್ತಿವೆ?

ಬೆಂಗಳೂರಿನಲ್ಲಿ ಈ ರೀತಿ ಪ್ರಕರಣಗಳು ಹೆಚ್ಚಾಗಲು ಅನೇಕ ಕಾರಣಗಳಿರಬಹುದು. ಜನರು ಕುಡಿಯುತ್ತಿರುವ ನೀರು, ಸೇವನೆ ಮಾಡುತ್ತಿರುವ ಆಹಾರ, ಇವೆಲ್ಲವೂ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಕಲುಷಿತ ನೀರನ್ನು ಕುಡಿಯುತ್ತಿದ್ದರೆ ಅತಿಸಾರ, ಟೈಫಾಯಿಡ್ ಮತ್ತು ಹೆಪಟೈಟಿಸ್ ಅಪಾಯ ಹೆಚ್ಚಾಗುತ್ತದೆ. ವಾಂತಿ ಮತ್ತು ಅತಿಸಾರದಂತಹ ಪ್ರಕರಣಗಳು ಹೆಚ್ಚಾಗುತ್ತದೆ. ಇದು ದೇಹದಲ್ಲಿ ನೀರಿನ ಕೊರತೆಯನ್ನು ಉಂಟುಮಾಡುತ್ತದೆ. ಹೆಪಟೈಟಿಸ್ ಕಾಯಿಲೆ ಅಪಾಯಕಾಯಾಗಿದ್ದು, ಇದು ಯಕೃತ್ತಿನ ಹಾನಿಗೆ ಕಾರಣವಾಗಬಹುದು.

ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳ ಲಕ್ಷಣಗಳು?

  • ಅತಿಸಾರ, ವಾಕರಿಕೆ ಮತ್ತು ವಾಂತಿ
  • ಹೊಟ್ಟೆಯಲ್ಲಿ ಸೆಳೆತ
  • ಹೊಟ್ಟೆ ನೋವು
  • ಅಜೀರ್ಣ

ಹೇಗೆ ರಕ್ಷಿಸಿಕೊಳ್ಳುವುದು?

  • ನೀರನ್ನು ಕುದಿಸಿ ಕುಡಿಯಿರಿ
  • ಏನನ್ನಾದರೂ ತಿನ್ನುವ ಮೊದಲು ಕೈಗಳನ್ನು ತೊಳೆಯಿರಿ
  • ಮನೆಯನ್ನು ಸ್ವಚ್ಛವಾಗಿರಿಸಿಕೊಳ್ಳಿ
  • ಆದಷ್ಟು ಹೊರಗೆ ಊಟ ಮಾಡಬೇಡಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್