ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನಲ್ಲಿ ಟೈಫಾಯಿಡ್, ವೈರಲ್ ಹೆಪಟೈಟಿಸ್, ಅತಿಸಾರದಂತಹ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ನಿರಂತರವಾಗಿ ಹೆಚ್ಚುತ್ತಿವೆ. ಎಡಿಡಿ (ತೀವ್ರ ಅತಿಸಾರ) 4500 ಕ್ಕೂ ಹೆಚ್ಚು ಜನರಲ್ಲಿ ಪತ್ತೆಯಾಗಿದೆ. ಅಲ್ಲದೆ, ಕಳೆದ ನಾಲ್ಕು ತಿಂಗಳಲ್ಲಿ 60,100 ಕ್ಕೂ ಹೆಚ್ಚು ಜನರು ಕರುಳಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಬಹುತೇಕ ಜನರಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ವರದಿಯಾಗುತ್ತಿವೆ. ಬೆಂಗಳೂರಿನಲ್ಲಿಈ ರೀತಿ ಪ್ರಕರಣಗಳು ಹೆಚ್ಚುತ್ತಿರಲು ಕಾರಣವೇನು? ಈ ಬಗ್ಗೆ ತಜ್ಞರು ಹೇಳುವುದೇನು? ಇಲ್ಲಿದೆ ಸಂಪೂರ್ಣ ಮಾಹಿತಿ.
ಹವಾಮಾನ ಬದಲಾವಣೆ ಮತ್ತು ಹೆಚ್ಚುತ್ತಿರುವ ಶಾಖದಿಂದಾಗಿ ಈ ರೀತಿಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ತಜ್ಞರು ಹೇಳುತ್ತಾರೆ. ಪ್ರಸ್ತುತ, ಈ ಋತುವಿನಲ್ಲಿ ಅತಿಸಾರದ ಪ್ರಕರಣಗಳು ಹೆಚ್ಚಾಗುತ್ತಿದೆ. ಕಲುಷಿತ ನೀರನ್ನು ಕುಡಿಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಡಾ. ಜುಗಲ್ ಕಿಶೋರ್ ಅವರು ಬೇಸಿಗೆಯಲ್ಲಿ ಹೊಟ್ಟೆಗೆ ಸಂಬಂಧ ಪಟ್ಟ ಕಾಯಿಲೆಗಳು ಹೆಚ್ಚಾಗುತ್ತವೆ ಎಂದು ಹೇಳುತ್ತಾರೆ. ನಿರ್ಜಲೀಕರಣ, ಹೊಟ್ಟೆಯಲ್ಲಿ ಸೋಂಕು, ವಾಂತಿ ಮತ್ತು ಅತಿಸಾರದಂತಹ ಸಮಸ್ಯೆಗಳು ಕಂಡುಬರುವುದು ಸಾಮಾನ್ಯವಾಗಿದೆ.
ಬೆಂಗಳೂರಿನಲ್ಲಿ ಈ ರೀತಿ ಪ್ರಕರಣಗಳು ಹೆಚ್ಚಾಗಲು ಅನೇಕ ಕಾರಣಗಳಿರಬಹುದು. ಜನರು ಕುಡಿಯುತ್ತಿರುವ ನೀರು, ಸೇವನೆ ಮಾಡುತ್ತಿರುವ ಆಹಾರ, ಇವೆಲ್ಲವೂ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಕಲುಷಿತ ನೀರನ್ನು ಕುಡಿಯುತ್ತಿದ್ದರೆ ಅತಿಸಾರ, ಟೈಫಾಯಿಡ್ ಮತ್ತು ಹೆಪಟೈಟಿಸ್ ಅಪಾಯ ಹೆಚ್ಚಾಗುತ್ತದೆ. ವಾಂತಿ ಮತ್ತು ಅತಿಸಾರದಂತಹ ಪ್ರಕರಣಗಳು ಹೆಚ್ಚಾಗುತ್ತದೆ. ಇದು ದೇಹದಲ್ಲಿ ನೀರಿನ ಕೊರತೆಯನ್ನು ಉಂಟುಮಾಡುತ್ತದೆ. ಹೆಪಟೈಟಿಸ್ ಕಾಯಿಲೆ ಅಪಾಯಕಾಯಾಗಿದ್ದು, ಇದು ಯಕೃತ್ತಿನ ಹಾನಿಗೆ ಕಾರಣವಾಗಬಹುದು.
ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ