AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಸಿಕಂ ತಿನ್ನಲು ಇಷ್ಟವಿಲ್ಲವೇ? ಇದರ ಆರೋಗ್ಯ ಪ್ರಯೋಜನ ತಿಳಿದ್ರೆ ಪ್ರತಿದಿನ ತಿನ್ನುತ್ತೀರಿ!

ಕ್ಯಾಪ್ಸಿಕಂ ಅಡುಗೆಮನೆಯಲ್ಲಿ ನಾವು ಹೆಚ್ಚಾಗಿ ಬಳಸುವ ತರಕಾರಿಗಳಲ್ಲಿ ಒಂದಾಗಿದೆ. ಚೀನೀ ಭಕ್ಷ್ಯಗಳಿಂದ ಹಿಡಿದು ನಮ್ಮ ಸ್ಥಳೀಯ ಮೇಲೋಗರಗಳು ಮತ್ತು ಸಲಾಡ್‌ಗಳವರೆಗೆ ಎಲ್ಲದರಲ್ಲಿಯೂ ಬಳಸಲಾಗುತ್ತದೆ. ಆದರೆ ಕೆಲವರಿಗೆ ಇದು ಅಷ್ಟಾಗಿ ಇಷ್ಟವಾಗುವುದಿಲ್ಲ. ಆದರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಅನೇಕ ರೀತಿಯ ಪ್ರಯೋಜನಗಳನ್ನು ಪಡೆಯಬಹುದು. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನವೇನು, ಯಾವ ಸಮಸ್ಯೆಗೆ ಒಳ್ಳೆಯದು ತಿಳಿದುಕೊಳ್ಳಿ.

ಕ್ಯಾಪ್ಸಿಕಂ ತಿನ್ನಲು ಇಷ್ಟವಿಲ್ಲವೇ? ಇದರ ಆರೋಗ್ಯ ಪ್ರಯೋಜನ ತಿಳಿದ್ರೆ ಪ್ರತಿದಿನ ತಿನ್ನುತ್ತೀರಿ!
CapsicumImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on: Jun 20, 2026 | 10:15 PM

Share

ಕ್ಯಾಪ್ಸಿಕಂ (Capsicum) ಕೇವಲ ಅಡುಗೆಯ ರುಚಿ ಹೆಚ್ಚಿಸುವ ತರಕಾರಿ ಮಾತ್ರವಲ್ಲ, ಅನೇಕ ಪೋಷಕಾಂಶಗಳ ಭಂಡಾರವೂ ಆಗಿದೆ. ವಿಟಮಿನ್‌, ಖನಿಜಾಂಶಗಳು ಮತ್ತು ಶಕ್ತಿಶಾಲಿ ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವ ಕ್ಯಾಪ್ಸಿಕಮ್ ದೇಹದ ಒಟ್ಟಾರೆ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಆದರೆ ಕೆಲವರಿಗೆ ಕ್ಯಾಪ್ಸಿಕಂ ಅಂದ್ರೆ ಅಷ್ಟಕ್ಕೇ ಅಷ್ಟೇ. ಇನ್ನು ಕೆಲವರಿಗೆ ಅದರಿಂದ ಬರುವ ಪರಿಮಳ ವಾಕರಿಕೆ ಹುಟ್ಟಿಸುತ್ತದೆ. ಆದರೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಅನೇಕ ರೀತಿಯ ಪ್ರಯೋಜನಗಳನ್ನು ಪಡೆಯಬಹುದು. ಹಾಗಾದರೆ ಇದರ ಸೇವನೆಯಿಂದ ಸಿಗುವ ಪ್ರಯೋಜನವೇನು, ಯಾವ ಸಮಸ್ಯೆಗೆ ಒಳ್ಳೆಯದು ತಿಳಿದುಕೊಳ್ಳಿ.

ಕಣ್ಣಿನ ಆರೋಗ್ಯಕ್ಕೆ ಉತ್ತಮ

ಕ್ಯಾಪ್ಸಿಕಮ್‌ನಲ್ಲಿ ವಿಟಮಿನ್ ಎ ಮತ್ತು ಲ್ಯೂಟಿನ್ ಸಮೃದ್ಧವಾಗಿವೆ. ವಿಶೇಷವಾಗಿ ಕೆಂಪು ಕ್ಯಾಪ್ಸಿಕಮ್ ಕಣ್ಣಿನ ದೃಷ್ಟಿಯನ್ನು ತೀಕ್ಷ್ಣಗೊಳಿಸುವುದರ ಜೊತೆಗೆ ವಯೋಸಹಜ ಕಣ್ಣಿನ ಸಮಸ್ಯೆಗಳು ಹಾಗೂ ಕ್ಯಾಟರಾಕ್ಟ್ ಅಪಾಯವನ್ನು ಕಡಿಮೆ ಮಾಡಲು ಸಹಕಾರಿ.

ತೂಕ ಇಳಿಕೆಗೆ ಸಹಾಯ ಮಾಡುತ್ತದೆ

ಕ್ಯಾಪ್ಸಿಕಮ್‌ನಲ್ಲಿ ಇರುವ ಕ್ಯಾಪ್ಸೈಸಿನ್ ಎಂಬ ಸಂಯುಕ್ತವು ದೇಹದ ಮೆಟಾಬಾಲಿಸಂ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಜೊತೆಗೆ ಫೈಬರ್ ಅಧಿಕವಾಗಿರುವುದರಿಂದ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದರಿಂದ ಅತಿಯಾಗಿ ತಿನ್ನುವ ಅಭ್ಯಾಸ ಕಡಿಮೆಯಾಗುತ್ತದೆ ಮತ್ತು ತೂಕ ನಿಯಂತ್ರಣ ಸುಲಭವಾಗುತ್ತದೆ.

ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಕೆಂಪು ಕ್ಯಾಪ್ಸಿಕಮ್‌ನಲ್ಲಿರುವ ಲೈಕೋಪಿನ್ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಸಿರು ಕ್ಯಾಪ್ಸಿಕಮ್‌ನಲ್ಲಿರುವ ಫೈಬರ್, ಫೋಲೇಟ್ ಮತ್ತು ವಿಟಮಿನ್ ಬಿ6 ರಕ್ತನಾಳಗಳ ಆರೋಗ್ಯವನ್ನು ಕಾಪಾಡಿ ಹೃದಯ ಸಂಬಂಧಿತ ಸಮಸ್ಯೆಗಳ ಅಪಾಯವನ್ನು ತಗ್ಗಿಸಬಹುದು.

ರೋಗನಿರೋಧಕ ಶಕ್ತಿ ಮತ್ತು ಚರ್ಮದ ಆರೈಕೆಗೆ ಒಳ್ಳೆಯದು

ಕ್ಯಾಪ್ಸಿಕಮ್‌ನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ಕೊಲಾಜನ್ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಚರ್ಮದ ಕಾಂತಿಯನ್ನು ಕಾಪಾಡಲು ಸಹಾಯ ಮಾಡುತ್ತದೆ.

ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಸಹಕಾರಿ

ಕ್ಯಾಪ್ಸಿಕಮ್‌ನಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ದೇಹದ ಫ್ರೀ ರ್ಯಾಡಿಕಲ್‌ಗಳ ವಿರುದ್ಧ ಹೋರಾಡಿ ಜೀವಕೋಶಗಳನ್ನು ರಕ್ಷಿಸುತ್ತವೆ. ಕೆಲವು ವಿಧದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ