AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿರಿಯಡ್ಸ್ ಸಮಯದಲ್ಲಿ ಸರಿಯಾದ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡುವುದು ಎಷ್ಟು ಮುಖ್ಯ ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಸ್ಯಾನಿಟರಿ ಪ್ಯಾಡ್‌ಗಳು ಲಭ್ಯವಿದೆ. ಅಂತಹ ಸಮಯದಲ್ಲಿ, ವೈಯಕ್ತಿಕ ನೈರ್ಮಲ್ಯ ಮತ್ತು ಚರ್ಮದ ರಕ್ಷಣೆಗೆ ಸರಿಯಾದ ಸ್ಯಾನಿಟರಿ ಪ್ಯಾಡ್ ಅನ್ನು ಆಯ್ಕೆ ಮಾಡುವುದು ಬಹಳ ಮುಖ್ಯವಾಗಿರುತ್ತದೆ. ಅದರಲ್ಲಿಯೂ ಇತ್ತೀಚಿಗೆ ಬಹಳ ಚರ್ಚೆಯಲ್ಲಿರುವ ಮೋರಿಂಗಾ ಪ್ಯಾಡ್‌ ಬಳಕೆಗೆ ಉತ್ತಮೋ, ಅಲ್ಲವೋ? ಎಂಬುದರ ಬಗ್ಗೆ ಹಲವರಿಗೆ ಗೊಂದಲವಿದೆ. ಹಾಗಾಗಿ ಯಾವ ರೀತಿಯ ಪ್ಯಾಡ್ ಬಳಸಬೇಕು, ಏನಿದು ಮೋರಿಂಗಾ ಪ್ಯಾಡ್‌, ಇದು ನಿಜವಾಗಿಯೂ ಉಪಯೋಗಕಾರಿಯೇ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಉತ್ತಮ.

ಪಿರಿಯಡ್ಸ್ ಸಮಯದಲ್ಲಿ ಸರಿಯಾದ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡುವುದು ಎಷ್ಟು ಮುಖ್ಯ ಗೊತ್ತಾ?
Sanitary PadImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on: May 27, 2026 | 7:53 PM

Share

ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರಲ್ಲಿ ಪಿರಿಯಡ್ಸ್ (Periods) ಹೈಜೀನ್ ಬಗ್ಗೆ ಜಾಗೃತಿ ಹೆಚ್ಚಾಗಿದೆ. ಈಗ ಮಹಿಳೆಯರು ತಾವು ಬಳಸುವ ಪ್ಯಾಡ್‌ನ ಗುಣಮಟ್ಟ ಮತ್ತು ಅದು ಚರ್ಮದ ಮೇಲೆ ಬೀರುವ ಪರಿಣಾಮಗಳತ್ತವೂ ಹೆಚ್ಚು ಗಮನ ಹರಿಸುತ್ತಿದ್ದಾರೆ. ತಜ್ಞರ ಪ್ರಕಾರ, ಸರಿಯಾದ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡದಿದ್ದರೆ ಚರ್ಮದ ಸಮಸ್ಯೆಗಳು ಮತ್ತು ಸೋಂಕಿನ ಅಪಾಯ ಹೆಚ್ಚಾಗಬಹುದು. ವೈದ್ಯರು ನೀಡುವ ಮಾಹಿತಿ ಪ್ರಕಾರ, ಸ್ಯಾನಿಟರಿ ಪ್ಯಾಡ್‌ನ ಮೇಲಿನ ಪದರ ದೇಹದ ಸೂಕ್ಷ್ಮ ಭಾಗದೊಂದಿಗೆ ನೇರ ಸಂಪರ್ಕದಲ್ಲಿರುತ್ತದೆ. ಪ್ಯಾಡ್‌ನಲ್ಲಿ ಹೆಚ್ಚು ಸುಗಂಧ ದ್ರವ್ಯಗಳು ಅಥವಾ ಹಾನಿಕಾರಕ ರಾಸಾಯನಿಕಗಳು ಇದ್ದರೆ ಚರ್ಮದಲ್ಲಿ ಉರಿ, ಕೆಂಪು ದದ್ದುಗಳು ಮತ್ತು ಅಲರ್ಜಿ ಸಮಸ್ಯೆಗಳು ಕಾಣಿಸಬಹುದು. ವಿಶೇಷವಾಗಿ ಬೇಸಿಗೆ ಮತ್ತು ತೇವಾಂಶ ಇರುವ ವಾತಾವರಣದಲ್ಲಿ ದೀರ್ಘಕಾಲ ಒಂದೇ ಪ್ಯಾಡ್ ಬಳಸುವುದರಿಂದ ಬ್ಯಾಕ್ಟೀರಿಯಾ ಹಾಗೂ ಫಂಗಲ್ ಇನ್‌ಫೆಕ್ಷನ್ ಅಪಾಯ ಹೆಚ್ಚಾಗುತ್ತದೆ. ಹಾಗಾದರೆ ಯಾವ ರೀತಿಯ ಪ್ಯಾಡ್ ಬಳಸಬೇಕು, ಏನಿದು ಮೋರಿಂಗಾ ಪ್ಯಾಡ್‌, ಇದು ನಿಜವಾಗಿಯೂ ಉಪಯೋಗಕಾರಿಯೇ ಎಂಬುದನ್ನು ತಿಳಿದುಕೊಳ್ಳಿ.

ಯಾವ ರೀತಿಯ ಪ್ಯಾಡ್ ಬಳಸಬೇಕು?

ತಜ್ಞರು, ಮಹಿಳೆಯರಿಗೆ ಮೃದುವಾದ, ಗಾಳಿಯಾಡುವ ಮತ್ತು ಚರ್ಮ ಸ್ನೇಹಿ ಪ್ಯಾಡ್‌ಗಳನ್ನು ಬಳಸುವಂತೆ ಸಲಹೆ ನೀಡುತ್ತಾರೆ. ಹೆಚ್ಚು ಸುಗಂಧವಿರುವ ಪ್ಯಾಡ್‌ಗಳನ್ನು ಬಳಸದಿರುವುದು ಉತ್ತಮ ಎಂದು ಹೇಳಿದ್ದಾರೆ. ಜೊತೆಗೆ ಪ್ರತಿ 4ರಿಂದ 6 ಗಂಟೆಗಳಿಗೊಮ್ಮೆ ಪ್ಯಾಡ್ ಬದಲಾಯಿಸುವುದು ಆರೋಗ್ಯದ ದೃಷ್ಟಿಯಿಂದ ಅಗತ್ಯವಾಗಿದೆ. ಹೆಚ್ಚು ಬೆವರು ಅಥವಾ ಚರ್ಮದ ಸಮಸ್ಯೆ ಇರುವಂತಹ ಮಹಿಳೆಯರಿಗೆ ಕಾಟನ್ ಆಧಾರಿತ ಪ್ಯಾಡ್‌ಗಳು ಅಥವಾ ಕಾಟನ್ ಪ್ಯಾಂಟಿ ಉತ್ತಮ ಆಯ್ಕೆ ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: ಋತುಚಕ್ರದ ಸಮಯದಲ್ಲಿ ಈ ಆಹಾರಗಳನ್ನು ಕಡ್ಡಾಯವಾಗಿ ಸೇವಿಸಬೇಕು!

ಮೋರಿಂಗಾ ಪ್ಯಾಡ್‌ ನಿಜವಾಗಿಯೂ ಉಪಯೋಗಕಾರಿಯೇ?

ಇತ್ತೀಚೆಗೆ ಮೋರಿಂಗಾ ಆಧಾರಿತ ಸ್ಯಾನಿಟರಿ ಪ್ಯಾಡ್‌ಗಳು ಗಮನ ಸೆಳೆಯುತ್ತಿವೆ. ಮೋರಿಂಗಾದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿ ಕಡಿಮೆ ಮಾಡುವ ಗುಣಗಳಿರುವುದರಿಂದ ಚರ್ಮದ ಸಮಸ್ಯೆ ಹಾಗೂ ದುರ್ಗಂಧ ಕಡಿಮೆ ಮಾಡಲು ಸಹಾಯಕವಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಮಹಿಳೆಯರ ಆರೋಗ್ಯಕ್ಕೆ ಪೀರಿಯಡ್ಸ್ ಹೈಜೀನ್ ಅತ್ಯಂತ ಮುಖ್ಯ. ಆದ್ದರಿಂದ ಗುಣಮಟ್ಟದ ಮತ್ತು ಸುರಕ್ಷಿತ ಸ್ಯಾನಿಟರಿ ಪ್ಯಾಡ್ ಆಯ್ಕೆ ಮಾಡುವುದು ಆರೋಗ್ಯ ಕಾಪಾಡುವ ಪ್ರಮುಖ ಹೆಜ್ಜೆಯಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?