ಈ 7 ಆರೋಗ್ಯ ಸಮಸ್ಯೆ ಇರುವವರು ತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಾರದು ಎಚ್ಚರ!

ನೀವು ಕೂಡ ಪ್ರತಿದಿನ ಬೆಳಿಗ್ಗೆ ಚಹಾದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸುತ್ತೀರಾ? ಹಾಗಾದರೆ ನೀವು ಬಹಳ ಜಾಗರೂಕರಾಗಿರಬೇಕು. ಹೌದು, ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ದೇಹದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಅದರಲ್ಲಿಯೂ 7 ರೀತಿಯ ಜನರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎಂದಿಗೂ ಚಹಾ ಕುಡಿಯಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದಕ್ಕೆ ಕಾರಣವೇನು? ಈ ಅಭ್ಯಾಸದಿಂದ ಯಾವ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಈ 7 ಆರೋಗ್ಯ ಸಮಸ್ಯೆ ಇರುವವರು ತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಾರದು ಎಚ್ಚರ!
Drinking Tea On An Empty Stomach

Updated on: Dec 20, 2025 | 11:05 AM

ಕೆಲವರಿಗೆ ಚಹಾ (Tea) ಕೇವಲ ಪಾನೀಯವಲ್ಲ, ಅದು ಅವರ ದಿನಚರಿಯ ಪ್ರಮುಖ ಭಾಗ. ಪ್ರತಿದಿನವನ್ನು ಚಹಾದೊಂದಿಗೆ ಪ್ರಾರಂಭಿಸುವುದು ಹಲವರಿಗೆ ಅಭ್ಯಾಸ. ಅದರಲ್ಲಿಯೂ ಹಾಸಿಗೆಯಿಂದ ಎದ್ದ ತಕ್ಷಣ ಚಹಾ ಕುಡಿಯುವವರಿದ್ದಾರೆ, ಇನ್ನು ಕೆಲವರು ಚಹಾ ಕುಡಿದ ಮೇಲೆಯೇ ಶಕ್ತಿ ಬರುತ್ತದೆ ಎಂದು ಅದನ್ನೇ ಅವಲಂಬಿಸಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದು ಮನಸ್ಸಿಗೆ ಖುಷಿ ನೀಡಬಹುದು. ಆದರೆ ಆರೋಗ್ಯಕ್ಕೆ… ಹೌದು, ಆರೋಗ್ಯ ತಜ್ಞರು ಈ ಅಭ್ಯಾಸ ಆರೋಗ್ಯಕ್ಕೆ ಹಾನಿಕಾರಕ ಎಂದು ಹೇಳುತ್ತಾರೆ. ಅದರಲ್ಲಿಯೂ 7 ರೀತಿಯ ಜನರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎಂದಿಗೂ ಚಹಾ ಕುಡಿಯಬಾರದು ಎಂದು ಹೇಳಲಾಗುತ್ತದೆ. ಹಾಗಾದರೆ ಇದಕ್ಕೆ ಕಾರಣವೇನು? ಈ ಅಭ್ಯಾಸದಿಂದ ಯಾವ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಈ 7 ಜನರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದನ್ನು ತಪ್ಪಿಸಬೇಕು!

ಚಹಾ ಎಲೆಗಳಲ್ಲಿ ಕೆಫೀನ್ ಮತ್ತು ಟ್ಯಾನಿನ್‌ಗಳಿರುತ್ತದೆ. ಅದರಲ್ಲಿಯೂ ಚಹಾ ತಯಾರಿಸುವಾಗ, ಹಾಲು ಮತ್ತು ಸಕ್ಕರೆಯನ್ನು ಸೇರಿಸುವುದರಿಂದ ಇದು ದೇಹದಲ್ಲಿ ತಾತ್ಕಾಲಿಕವಾಗಿ ಶಕ್ತಿಯನ್ನು ನೀಡುತ್ತದೆ, ಆದರೆ ವಾಸ್ತವದಲ್ಲಿ, ಅವು ದೇಹದ ಚಯಾಪಚಯ ಕ್ರಿಯೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಅಷ್ಟೇ ಅಲ್ಲ, ರಕ್ತಹೀನತೆ (ಕಬ್ಬಿಣದ ಕೊರತೆ) ಇರುವವರು ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದನ್ನು ತಪ್ಪಿಸಬೇಕು, ಏಕೆಂದರೆ ಚಹಾದಲ್ಲಿರುವ ಖನಿಜಗಳು ಕಬ್ಬಿಣದ ಹೀರಿಕೊಳ್ಳುವಿಕೆಗೆ ಅಡ್ಡಿಯಾಗಬಹುದು. ಅತಿಯಾದ ಕೂದಲು ಉದುರುವಿಕೆ ಸಮಸ್ಯೆ ಇರುವವರು ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯಬಾರದು. ಜೊತೆಗೆ ಮಧುಮೇಹ, ಪಿಸಿಓಎಸ್, ಆತಂಕ, ಅಧಿಕ ರಕ್ತದೊತ್ತಡ ಮತ್ತು ಹೈಪೋಥೈರಾಯ್ಡಿಸಮ್‌ನಿಂದ ಬಳಲುತ್ತಿರುವವರು ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದನ್ನು ತಪ್ಪಿಸಬೇಕು.

ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದಾಗುವ ಸಮಸ್ಯೆಗಳು:

ಜೀರ್ಣಕಾರಿ ಸಮಸ್ಯೆ: ಚಹಾದಲ್ಲಿರುವ ಕೆಫೀನ್ ಮತ್ತು ಟ್ಯಾನಿನ್‌ಗಳು ಜೀರ್ಣಕಾರಿ ರಸಗಳ ಸ್ರವಿಸುವಿಕೆಯ ಮೇಲೆ ಪರಿಣಾಮ ಬೀರುತ್ತವೆ, ಇದು ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳುವುದನ್ನು ತಡೆಯುತ್ತದೆ. ಕಾಲಾನಂತರದಲ್ಲಿ, ಇದು ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು.

ಎದೆಯುರಿ ಮತ್ತು ಆಮ್ಲೀಯತೆ: ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ಹೊಟ್ಟೆಯಲ್ಲಿ ಆಮ್ಲದ ಮಟ್ಟ ಹೆಚ್ಚಾಗುತ್ತದೆ, ಇದು ಅನಿಲ, ಆಮ್ಲೀಯತೆ ಮತ್ತು ಎದೆಯುರಿ ಮುಂತಾದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈಗಾಗಲೇ ಈ ಸಮಸ್ಯೆಗಳನ್ನು ಹೊಂದಿರುವವರು ಜಾಗರೂಕರಾಗಿರಬೇಕು.

ಇದನ್ನೂ ಓದಿ: ನಿಮಗೂ ಕೂಡ ಚಹಾ ಜೊತೆ ಬಿಸ್ಕತ್ತು ತಿನ್ನುವ ಅಭ್ಯಾಸ ಇದ್ಯಾ, ಹಾಗಿದ್ರೆ ಈ ಸ್ಟೋರಿಯನ್ನು ಮಿಸ್ ಮಾಡ್ದೆ ನೋಡಿ

ಒತ್ತಡ ಮತ್ತು ಚಡಪಡಿಕೆ: ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ಕೆಫೀನ್ ದೇಹಕ್ಕೆ ಬೇಗನೆ ಹೀರಲ್ಪಡುತ್ತದೆ, ಇದು ಹೃದಯ ಬಡಿತವನ್ನು ಹೆಚ್ಚಿಸುತ್ತದೆ ಮತ್ತು ಚಡಪಡಿಕೆಗೆ ಕಾರಣವಾಗಬಹುದು.

ರಕ್ತದ ಸಕ್ಕರೆ ಮಟ್ಟದ ಮೇಲೆ ಪರಿಣಾಮ: ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಹಠಾತ್ ಏರಿಕೆ ಅಥವಾ ಇಳಿಕೆ ಉಂಟಾಗಬಹುದು, ಇದು ಮಧುಮೇಹ ಇರುವವರಿಗೆ ಅಪಾಯಕಾರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ