ರಾತ್ರಿ ಮಲಗುವ ಮುನ್ನ ಒಂದು ಲವಂಗ ಸೇವನೆ ಮಾಡಿದ್ರೆ ಏನಾಗುತ್ತೆ ನೋಡಿ!

ಲವಂಗವು ಕೇವಲ ಮಸಾಲೆ ಪದಾರ್ಥವಲ್ಲ. ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿರುವ ಔಷಧೀಯ ಗುಣಗಳ ನಿಧಿಯಾಗಿದೆ. ಮಲಗುವ ಮುನ್ನ ಲವಂಗ ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅಷ್ಟೇ ಅಲ್ಲ, ಶೀತ, ಕೆಮ್ಮು ಮತ್ತು ಬಾಯಿಯ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಹಾಗಾಗಿ ಮಲಗುವ ಮುನ್ನ ಒಂದು ಲವಂಗವನ್ನು ಸೇವಿಸುವುದರಿಂದ ಅಥವಾ ಲವಂಗದ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ಉಂಟಾಗಬಹುದು. ಈ ಬಗೆಗಿನ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ರಾತ್ರಿ ಮಲಗುವ ಮುನ್ನ ಒಂದು ಲವಂಗ ಸೇವನೆ ಮಾಡಿದ್ರೆ ಏನಾಗುತ್ತೆ ನೋಡಿ!
Eating Cloves Before Bed

Updated on: Dec 17, 2025 | 7:15 PM

ಲವಂಗ (Cloves) ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಅದರ ಔಷಧೀಯ ಗುಣಗಳಿಂದಾಗಿ ನಮ್ಮ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ. ಅದರಲ್ಲಿಯೂ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಮಲಗುವ ಮುನ್ನ ಒಂದು ಲವಂಗವನ್ನು ಸೇವಿಸುವುದರಿಂದ ಅಥವಾ ಲವಂಗದ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ಉಂಟಾಗಬಹುದು. ಅಷ್ಟೇ ಅಲ್ಲ, ಇದು ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ. ಅಜೀರ್ಣ ಮತ್ತು ಉಬ್ಬುವಿಕೆಯಂತಹ ಸಾಮಾನ್ಯ ಜೀರ್ಣಕಾರಿ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಲವಂಗದಲ್ಲಿರುವ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಇಷ್ಟು ಮಾತ್ರವಲ್ಲ, ರಾತ್ರಿ ಮಲಗುವ ಮೊದಲು ಒಂದು ಲವಂಗ ತಿನ್ನುವುದರಿಂದ ಮತ್ತಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ಬಗೆಗಿನ ಮಾಹಿತಿ ಸ್ಟೋರಿಯಲ್ಲಿದೆ.

ರಾತ್ರಿ ಮಲಗುವ ಮೊದಲು ಲವಂಗದ ಸೇವನೆ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ. ಜೊತೆಗೆ ಬಾಯಿಯ ಆರೋಗ್ಯಕ್ಕೂ ಕೂಡ ಪ್ರಯೋಜನಕಾರಿಯಾಗಿದೆ. ಇನ್ನು ಲವಂಗದಲ್ಲಿರುವ ಫೈಬರ್, ಮ್ಯಾಂಗನೀಸ್, ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮತ್ತು ವಿಟಮಿನ್ ಕೆ ನಂತಹ ಖನಿಜಗಳು ಮತ್ತು ಜೀವಸತ್ವಗಳಿದ್ದು, ಫ್ಲೇವನಾಯ್ಡ್‌ ಮತ್ತು ಯುಜೆನಾಲ್‌ನಂತಹ ಪ್ರಮುಖ ಇಂಗಾಲದ ಸಂಯುಕ್ತಗಳನ್ನು ಹೊಂದಿರುತ್ತದೆ. ಅದಕ್ಕಾಗಿಯೇ ಆಯುರ್ವೇದ ತಜ್ಞರು ರಾತ್ರಿ ಮಲಗುವ ಮೊದಲು ಲವಂಗವನ್ನು ಸೇವಿಸಲು ಶಿಫಾರಸು ಮಾಡುತ್ತಾರೆ.

ಇದನ್ನೂ ಓದಿ: ಚಳಿಗಾಲದಲ್ಲೇಕೆ ಪ್ರತಿನಿತ್ಯ ಎಳ್ಳನ್ನು ಸೇವನೆ ಮಾಡಬೇಕು ಎಂಬುದಕ್ಕೆ ಇಲ್ಲಿದೆ ಮಹತ್ವದ ಕಾರಣ

ಒತ್ತಡ ಕಡಿಮೆ ಮಾಡಲು ಸಹಕಾರಿ

ಲವಂಗವು ಮನಸ್ಸನ್ನು ಶಾಂತಗೊಳಿಸುವ ನೈಸರ್ಗಿಕ ಪದಾರ್ಥಗಳನ್ನು ಹೊಂದಿರುತ್ತದೆ. ಅವುಗಳನ್ನು ತಿನ್ನುವುದರಿಂದ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಒಳ್ಳೆಯ ನಿದ್ರೆ ಬರುವುದಕ್ಕೂ ಕೂಡ ಸಹಕಾರಿಯಾಗಿದೆ. ಲವಂಗದ ಔಷಧೀಯ ಗುಣಗಳು ದೇಹದಿಂದ ವಿಷವನ್ನು ಸುಲಭವಾಗಿ ತೆಗೆದುಹಾಕಲು ಸಹಕಾರಿ. ಜೊತೆಗೆ ಶೀತ ಮತ್ತು ಕೆಮ್ಮಿನಂತಹ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಪರಿಹಾರ ನೀಡುತ್ತದೆ. ಇನ್ನು ಇವುಗಳಲ್ಲಿರುವ ಉಷ್ಣತೆ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಗಂಟಲು ನೋವು, ಕೆಮ್ಮು, ಶೀತ ಮತ್ತು ಕಫದಂತಹ ಸಮಸ್ಯೆಗಳನ್ನು ತ್ವರಿತವಾಗಿ ನಿವಾರಿಸುತ್ತದೆ ಎಂದು ಹೇಳಲಾಗುತ್ತದೆ.

ಬಾಯಿಯ ದುರ್ವಾಸನೆಗೆ ಮುಕ್ತಿ

ಬಾಯಿಯ ಆರೋಗ್ಯದ ವಿಷಯಕ್ಕೆ ಬಂದರೆ, ಲವಂಗವನ್ನು ಅಗಿಯುವುದರಿಂದ ಬಾಯಿಯ ದುರ್ವಾಸನೆ ಕಡಿಮೆಯಾಗುತ್ತದೆ. ಅಷ್ಟು ಮಾತ್ರವಲ್ಲ, ಇದು ಹಲ್ಲುನೋವಿನಿಂದ ತಕ್ಷಣದ ಪರಿಹಾರ ನೀಡುತ್ತದೆ. ಲವಂಗ ಹೃದಯದ ಆರೋಗ್ಯಕ್ಕೂ ಕೂಡ ಪ್ರಯೋಜನಕಾರಿಯಾಗಿದ್ದು ಇದರ ನೀರು ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ. ಆದರೆ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿರುವವರು ಲವಂಗ ಸೇವನೆ ಮಾಡುವ ಮೊದಲು ವೈದ್ಯರ ಸಲಹೆ ಪಡೆಯಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ