AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ವರ್ಷ ದಾಟಿದ ಮಹಿಳೆಯರಲ್ಲಿ ಕೂದಲು ಉದುರುವಿಕೆಯ ಸಮಸ್ಯೆ ಕಾಣಿಸಿಕೊಳ್ಳಲು ಕಾರಣವೇ ಇದು!

ಮಹಿಳೆಯರಲ್ಲಿ ಕೂದಲು ಉದುರುವ ಸಮಸ್ಯೆ ಕಂಡುಬರುವುದು ಸಾಮಾನ್ಯ. ಅದರಲ್ಲಿಯೂ 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ. ಇದರಿಂದ ಮಹಿಳೆಯರಿಗೆ ನಾನಾ ರೀತಿಯ ತೊಂದರೆಯಾಗುತ್ತದೆ. ನಿಮ್ಮ ಮನೆಯಲ್ಲಿಯೂ ಯಾರಿಗಾದರೂ ಈ ರೀತಿ ಸಮಸ್ಯೆ ಕಂಡು ಬಂದಿದ್ಯಾ, 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಹೆಚ್ಚಾಗಲು ಕಾರಣವೇನು ಎಂದು ಯೋಚಿಸಿದ್ದೀರಾ... ಅನಾರೋಗ್ಯದಿಂದ ಈ ರೀತಿಯಾಗುತ್ತದೆಯೇ ಇದನ್ನು ನಿಯಂತ್ರಿಸಲು ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ. ಈ ವಿಷಯವಾಗಿ ತಜ್ಞರು ನೀಡಿರುವ ಸಲಹೆ ಸ್ಟೋರಿಯಲ್ಲಿದೆ.

40 ವರ್ಷ ದಾಟಿದ ಮಹಿಳೆಯರಲ್ಲಿ ಕೂದಲು ಉದುರುವಿಕೆಯ ಸಮಸ್ಯೆ ಕಾಣಿಸಿಕೊಳ್ಳಲು ಕಾರಣವೇ ಇದು!
Hair Loss In Women Over 40
ಪ್ರೀತಿ ಭಟ್​, ಗುಣವಂತೆ
|

Updated on: Dec 19, 2025 | 6:59 PM

Share

ಮಹಿಳೆಯರಾಗಲಿ ಅಥವಾ ಪುರುಷರಾಗಲಿ, ಕೂದಲು ಉದುರುವ ಸಮಸ್ಯೆ (Hair Fall) ಕಂಡುಬರುವುದು ಸಾಮಾನ್ಯ. ಆದರೆ ಮಹಿಳೆಯರಿಗೆ 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ. ಅನೇಕರಲ್ಲಿ ಈ ಸಮಸ್ಯೆಯನ್ನು ನಿಯಂತ್ರಿಸಲು ಸಾಧ್ಯವೇ ಇಲ್ಲ ಎಂಬುವಷ್ಟರ ಮಟ್ಟಿಗೆ ಕೂದಲು ಉದುರುತ್ತದೆ. ನಿಮ್ಮ ಮನೆಯಲ್ಲಿಯೂ ಯಾರಿಗಾದರೂ ಈ ರೀತಿ ಸಮಸ್ಯೆ ಕಂಡು ಬಂದಿದ್ಯಾ, 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಹೆಚ್ಚಾಗಲು ಕಾರಣವೇನು ಎಂದು ಯೋಚಿಸಿದ್ದೀರಾ… ಅನಾರೋಗ್ಯದಿಂದ ಈ ರೀತಿಯಾಗುತ್ತದೆಯೇ ಇದನ್ನು ನಿಯಂತ್ರಿಸಲು ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ. ಈ ವಿಷಯವಾಗಿ ತಜ್ಞರು ನೀಡಿರುವ ಸಲಹೆ ಸ್ಟೋರಿಯಲ್ಲಿದೆ.

ಮ್ಯಾಕ್ಸ್ ಆಸ್ಪತ್ರೆಯ ಚರ್ಮರೋಗ ವಿಭಾಗದ ಡಾ. ಸೌಮ್ಯ ಸಚ್‌ದೇವ ಅವರು ಹೇಳುವ ಪ್ರಕಾರ, 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಕಂಡುಬರುವುದಕ್ಕೆ ಹಲವು ಕಾರಣಗಳಿವೆ. ಕೆಲವು ಮಹಿಳೆಯರು ಈ ವಯಸ್ಸಿನಲ್ಲಿ ಋತುಬಂಧಕ್ಕೆ ಒಳಗಾಗುತ್ತಾರೆ ಇದು ಕೂಡ ಒಂದು ಕಾರಣವಾಗಿದೆ. ಅಷ್ಟೇಅಲ್ಲ, ಹಲವಾರು ಹಾರ್ಮೋನುಗಳ ಕೊರತೆ ಕೂಡ ಈ ರೀತಿಯಾಗುವುದಕ್ಕೆ ಕಾರಣವಾಗಿರಬಹುದು. ಜೊತೆಗೆ ಮಹಿಳೆಯರಲ್ಲಿ ಕಂಡುಬರುವ ಕಬ್ಬಿಣದ ಅಂಶ, ವಿಟಮಿನ್ ಡಿ ಮತ್ತು ಬಯೋಟಿನ್ ಕೊರತೆಯಿದ್ದರೆ, ಕೂದಲು ಉದುರುವ ಸಮಸ್ಯೆ ಕಂಡುಬರಬಹುದು.

ಕೂದಲು ಉದುರುವುದಕ್ಕೆ ಮಾನಸಿಕ ಒತ್ತಡವೂ ಕಾರಣವಾಗಿರಬಹುದು;

ಮಹಿಳೆಯರಲ್ಲಿ ಕೂದಲು ಉದುರುವಿಕೆಗೆ ಮಾನಸಿಕ ಒತ್ತಡವೂ ಒಂದು ಪ್ರಮುಖ ಕಾರಣ ಎಂದು ಡಾ. ಸೌಮ್ಯಾ ಹೇಳುತ್ತಾರೆ. ಇತ್ತೀಚಿನ ವರ್ಷಗಳಲ್ಲಿ, ಮಾನಸಿಕ ಒತ್ತಡದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು ಇವು ಕೂದಲಿನ ಮೇಲೂ ಪರಿಣಾಮ ಬೀರುವ ಮೂಲಕ ಕೂದಲಿನ ಬೆಳವಣಿಗೆಗೆ ಅಡ್ಡಿಯಾಗುತ್ತದೆ, ಜೊತೆಗೆ ಉದುರುವಿಕೆಗೆ ಕಾರಣವಾಗುತ್ತದೆ. ಕೆಲವು ಸಂದರ್ಭಗಳಲ್ಲಿ, ಆಟೋಇಮ್ಯೂನ್ ಕಾಯಿಲೆಗಳು ಸಹ ಕೂದಲು ಉದುರುವಿಕೆಗೆ ಕಾರಣವಾಗಬಹುದು. ಈ ಕಾಯಿಲೆಗಳಿಗೆ ಯಾವುದೇ ರೀತಿಯ ಚಿಕಿತ್ಸೆ ಇಲ್ಲ. ಕೆಲವು ಮಹಿಳೆಯರಲ್ಲಿ, ಕೂದಲು ಉದುರುವಿಕೆ ಥೈರಾಯ್ಡ್ ಅಥವಾ ಮಧುಮೇಹದಿಂದಲೂ ಉಂಟಾಗಬಹುದು. ಅಂತಹ ಸಂದರ್ಭಗಳಲ್ಲಿ, ಥೈರಾಯ್ಡ್ ಮತ್ತು ಮಧುಮೇಹವನ್ನು ನಿಯಂತ್ರಿಸಿದರೆ, ಕೂದಲು ಉದುರುವಿಕೆಯನ್ನು ಕೂಡ ನಿಯಂತ್ರಿಸಬಹುದು.

ಇದನ್ನೂ ಓದಿ: ಈ ಆಹಾರಗಳ ಸೇವನೆ ಮಾಡುವುದನ್ನು ಬಿಟ್ಟರೆ ಕೂದಲು ಉದುರುವುದು ಕಡಿಮೆಯಾಗುತ್ತೆ!

ಕೂದಲು ಉದುರುವಿಕೆಯನ್ನು ತಡೆಯಬಹುದೇ?

ಮಹಿಳೆಗೆ ಸ್ವಯಂ ನಿರೋಧಕ ಕಾಯಿಲೆ ಅಥವಾ ಆನುವಂಶಿಕ ಕಾರಣಗಳಿಂದ ಕೂದಲು ಉದುರುವಿಕೆ ಇದ್ದರೆ, ಅದನ್ನು ಸಂಪೂರ್ಣವಾಗಿ ನಿಯಂತ್ರಿಸುವುದು ಕಷ್ಟ. ಇತರ ಸಂದರ್ಭಗಳಲ್ಲಿ, ಕೂದಲು ಉದುರುವಿಕೆಯನ್ನು ಈ ಸಲಹೆಗಳನ್ನು ಅನುಸರಿಸುವ ಮೂಲಕ ತಡೆಯಬಹುದು.

  • ಪ್ರೋಟೀನ್, ಕಬ್ಬಿಣ ಮತ್ತು ವಿಟಮಿನ್‌ ಸಮೃದ್ಧವಾಗಿರುವ ಆಹಾರಗಳನ್ನು ಸೇವನೆ ಮಾಡಿ.
  • ಕೂದಲು ಬೆಳವಣಿಗೆಗೆ ವಿಟಮಿನ್ ಡಿ ಹೊಂದಿರುವ ಆಹಾರವನ್ನು ಸೇವಿಸಿ, ಉದಾಹರಣೆಗೆ ಅಣಬೆಗಳು.
  • ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ.
  • ಮಾನಸಿಕ ಒತ್ತಡವನ್ನು ತಪ್ಪಿಸಿ, ಅದನ್ನು ತಡೆಗಟ್ಟಲು ಪ್ರತಿದಿನ ಯೋಗಾಭ್ಯಾಸ ಮಾಡಿ.
  • ನಿಯಮಿತವಾಗಿ ನೆತ್ತಿಯನ್ನು ಮಸಾಜ್ ಮಾಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ