ಚಳಿಗಾಲದಲ್ಲಿ ಹೃದಯಾಘಾತದಿಂದ ಸಾಯುವವರ ಸಂಖ್ಯೆ ಹೆಚ್ಚಾಗಲು ಕಾರಣವೇನು?

ಜೀವನಶೈಲಿಯಲ್ಲಿ ಹೊಂದಾಣಿಕೆಗಳು ಮತ್ತು ಉತ್ತಮ ಆರೋಗ್ಯಕ್ಕೆ ಪೂರಕವಾದ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದರಿಂದ ಜನರು ಹೃದಯಾಘಾತದ ಅಪಾಯದಿಂದ ಪಾರಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಆದರೆ, ಚಳಿಗಾಲದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಲು ಕಾರಣವೇನು?

ಚಳಿಗಾಲದಲ್ಲಿ ಹೃದಯಾಘಾತದಿಂದ ಸಾಯುವವರ ಸಂಖ್ಯೆ ಹೆಚ್ಚಾಗಲು ಕಾರಣವೇನು?
ಹೃದಯಾಘಾತ
Follow us
ಸುಷ್ಮಾ ಚಕ್ರೆ
|

Updated on: Dec 26, 2023 | 4:17 PM

ಚಳಿಗಾಲದ ಚಳಿ ಶುರುವಾಗುತ್ತಿದ್ದಂತೆ ಮಾರಣಾಂತಿಕ ಹೃದಯಾಘಾತವನ್ನು ತಡೆಗಟ್ಟಲು ಹೃದಯದ ಆರೋಗ್ಯಕ್ಕೆ ಆದ್ಯತೆ ನೀಡುವುದು ಬಹಳ ಮುಖ್ಯವಾಗುತ್ತದೆ. ಜೀವನಶೈಲಿಯಲ್ಲಿ ಹೊಂದಾಣಿಕೆಗಳು ಮತ್ತು ಉತ್ತಮ ಆರೋಗ್ಯಕ್ಕೆ ಪೂರಕವಾದ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದರಿಂದ ಜನರು ಹೃದಯಾಘಾತದ ಅಪಾಯದಿಂದ ಪಾರಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಆದರೆ, ಚಳಿಗಾಲದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಲು ಕಾರಣವೇನು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ತಾಪಮಾನಪ್ರೇರಿತ ಒತ್ತಡ:

ಚಳಿಗಾಲದ ಶೀತ ವಾತಾವರಣವು ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ. ಇದರಿಂದ ಹೃದಯದ ಮೇಲೆ ಕೆಲಸದ ಹೊರೆ ಹೆಚ್ಚಾಗುತ್ತದೆ. ಈ ಶಾರೀರಿಕ ಪ್ರತಿಕ್ರಿಯೆಯು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ. ಅದರಲ್ಲೂ ವಿಶೇಷವಾಗಿ ಮೊದಲೇ ಹೃದಯರಕ್ತನಾಳದ ಸಮಸ್ಯೆ ಇದ್ದವರಿಗೆ ಈ ಸಂದರ್ಭದಲ್ಲಿ ಅಪಾಯ ಜಾಸ್ತಿ.

ಕಡಿಮೆಯಾದ ದೈಹಿಕ ಚಟುವಟಿಕೆ:

ಚಳಿಗಾಲದಲ್ಲಿ ಹೊರಗೆ ಹೋಗಿ ವಾಕಿಂಗ್, ಜಾಗಿಂಗ್, ವರ್ಕ್​ಔಟ್ ಮಾಡಲು ಮನಸು ಒಪ್ಪುವುದಿಲ್ಲ. ಚಳಿಗೆ ಆರಾಮಾಗಿ ಹೊದ್ದು ಮಲಗಬೇಕೆಂಬ ಆಸೆಯಿಂದ ನಮ್ಮ ದೈಹಿಕ ವ್ಯಾಯಾಮಗಳನ್ನು ನಿಲ್ಲಿಸುತ್ತೇವೆ. ಈ ರೀತಿಯ ಜಡ ಜೀವನಶೈಲಿಯು ಹೃದಯಾಘಾತ ಮತ್ತು ಪಾರ್ಶ್ವವಾಯುಗಳಿಗೆ ಕಾರಣವಾಗುವ ಅಪಾಯಕಾರಿ ಅಂಶವಾಗಿದೆ.

ಇದನ್ನೂ ಓದಿ: ವಾಯು ಮಾಲಿನ್ಯದಿಂದ ಕ್ಯಾನ್ಸರ್, ಹೃದಯಾಘಾತ ಹೆಚ್ಚಳ; ಏನಿದು ಶಾಕಿಂಗ್ ವಿಷಯ?

ನಿರ್ಜಲೀಕರಣ:

ಚಳಿಗಾಲದ ತಿಂಗಳುಗಳಲ್ಲಿ ಜನರು ಹೆಚ್ಚು ಬಾಯಾರಿಕೆಯನ್ನು ಅನುಭವಿಸುವುದಿಲ್ಲ. ಹೀಗಾಗಿ, ನೀರು ಕುಡಿಯುವುದು ಕೂಡ ಕಡಿಮೆಯಾಗುತ್ತದೆ. ನಿರ್ಜಲೀಕರಣವು ಹೃದಯರಕ್ತನಾಳದ ಅಪಾಯಗಳಿಗೆ ಕಾರಣವಾಗುತ್ತದೆ.

ಅನಾರೋಗ್ಯಕರ ಆಹಾರದ ಆಯ್ಕೆಗಳು:

ರಜಾದಿನಗಳು ಅದರಲ್ಲೂ ವಿಶೇಷವಾಗಿ ಕ್ರಿಸ್ಮಸ್ ಮತ್ತು ಹೊಸ ವರ್ಷದ ಆಚರಣೆಗಳಲ್ಲಿ ಅಧಿಕ ಕೊಬ್ಬು ಮತ್ತು ಹೆಚ್ಚಿನ ಸಕ್ಕರೆಯ ಆಹಾರಗಳನ್ನು ಸೇವಿಸುತ್ತೇವೆ. ಇದು ಸ್ಥೂಲಕಾಯತೆ ಮತ್ತು ಮಧುಮೇಹದಂತಹ ಸಮಸ್ಯೆಗಳಿಗೆ ಕಾರಣವಾಗಿ, ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ.

ಅಧಿಕ ರಕ್ತದೊತ್ತಡ:

ಅಧಿಕ ರಕ್ತದೊತ್ತಡವು ಕಾಲಾನಂತರದಲ್ಲಿ ಪಾರ್ಶ್ವವಾಯು ಮತ್ತು ಹೃದಯಾಘಾತದ ಹೆಚ್ಚಿನ ಅಪಾಯಕ್ಕೆ ಕಾರಣವಾಗುತ್ತದೆ.

ಅಧಿಕ ಕೊಲೆಸ್ಟ್ರಾಲ್ ಮಟ್ಟಗಳು:

ಹೆಚ್ಚಿನ ಎಲ್‌ಡಿಎಲ್ ಕೊಲೆಸ್ಟ್ರಾಲ್ ಮಟ್ಟಗಳು ಅಪಧಮನಿಗಳಲ್ಲಿ ಪ್ಲೇಕ್ ಶೇಖರಣೆಗೆ ಕಾರಣವಾಗುತ್ತದೆ. ಇದು ಅಪಧಮನಿಕಾಠಿಣ್ಯವನ್ನು ಉಂಟುಮಾಡುತ್ತದೆ ಮತ್ತು ರಕ್ತ ಹೆಪ್ಪುಗಟ್ಟುವಿಕೆ, ಹೃದಯರಕ್ತನಾಳದ ಸಮಸ್ಯೆಯ ಅಪಾಯವನ್ನು ಹೆಚ್ಚಿಸುತ್ತದೆ.

ಧೂಮಪಾನ ಮತ್ತು ತಂಬಾಕು ಬಳಕೆ:

ಧೂಮಪಾನವು ರಕ್ತನಾಳಗಳನ್ನು ಕಿರಿದಾಗಿಸುತ್ತದೆ ಮತ್ತು ರಕ್ತ ಹೆಪ್ಪುಗಟ್ಟುವಿಕೆಯನ್ನು ಹೆಚ್ಚಿಸುತ್ತದೆ. ಇದು ಅಪಧಮನಿಕಾಠಿಣ್ಯಕ್ಕೆ ಕಾರಣವಾಗುತ್ತದೆ. ಹಾಗೇ, ಪಾರ್ಶ್ವವಾಯು ಮತ್ತು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: Belly Fat: ಸುಲಭವಾಗಿ ನಿಮ್ಮ ಹೊಟ್ಟೆಯ ಬೊಜ್ಜು ಕರಗಿಸುವ 7 ಆಹಾರಗಳಿವು

ಮಧುಮೇಹ:

ಇನ್ಸುಲಿನ್ ಪ್ರತಿರೋಧ ಮತ್ತು ಅಧಿಕ ರಕ್ತದ ಸಕ್ಕರೆಯು ರಕ್ತನಾಳಗಳನ್ನು ಹಾನಿಗೊಳಿಸುತ್ತದೆ. ಇದು ಅಪಧಮನಿಕಾಠಿಣ್ಯ, ಹೃದಯಾಘಾತ ಮತ್ತು ಪಾರ್ಶ್ವವಾಯುಗಳ ಸಾಧ್ಯತೆಯನ್ನು ಹೆಚ್ಚಿಸುತ್ತದೆ.

ಸ್ಥೂಲಕಾಯತೆ:

ಬೊಜ್ಜು ಅದರಲ್ಲೂ ವಿಶೇಷವಾಗಿ ಹೊಟ್ಟೆಯ ಸುತ್ತ ಕೊಬ್ಬಿನ ಸಂಗ್ರಹ ಹೃದಯರಕ್ತನಾಳದ ವ್ಯವಸ್ಥೆಯನ್ನು ತಗ್ಗಿಸುತ್ತದೆ. ಇದು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಅತಿಯಾದ ಆಲ್ಕೋಹಾಲ್ ಸೇವನೆ:

ಅತಿಯಾದ ಮದ್ಯಪಾನವು ಅಧಿಕ ರಕ್ತದೊತ್ತಡ ಮತ್ತು ಅನಿಯಮಿತ ಹೃದಯದ ಲಯಕ್ಕೆ ಕಾರಣವಾಗಬಹುದು. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್