International Day Of Persons With Disabilities 2023: ಅಂತರಾಷ್ಟ್ರೀಯ ವಿಶೇಷ ಚೇತನರ ದಿನದ ಇತಿಹಾಸ ಏನು? 

ವಿಕಲಚೇತನರಿಗೆ ಅವರ ಹಕ್ಕುಗಳ ಬಗ್ಗೆ ತಿಳಿಸಲು, ಸಮಾಜದಲ್ಲಿ ಅವರಿಗೂ ಸಮಾನ ಬದುಕುವ ಅವಕಾಶವನ್ನು ಕಲ್ಪಿಸಲು  ಮತ್ತು ಅಂಗವೈಕಲ್ಯದ ಬಗ್ಗೆ ಸಾರ್ವಜನಿಕರಿಗೆ  ಅರಿವು ಮೂಡಿಸಲು ಪ್ರತಿವರ್ಷ ಡಿಸೆಂಬರ್ 03 ರಂದು ಅಂತರಾಷ್ಟ್ರೀಯ ವಿಕಲಚೇತನರ ದಿನವನ್ನು ಆಚರಿಸಲಾಗುತ್ತದೆ. ವಿಶೇಷ ದಿನದ ಇತಿಹಾಸ ಮತ್ತು ಮಹತ್ವದ ಬಗ್ಗೆ ತಿಳಿದುಕೊಳ್ಳೋಣ.

International Day Of Persons With Disabilities 2023: ಅಂತರಾಷ್ಟ್ರೀಯ ವಿಶೇಷ ಚೇತನರ ದಿನದ ಇತಿಹಾಸ ಏನು? 
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 02, 2023 | 6:21 PM

ಇಂದಿಗೂ ಹಲವರು ಅಂಗವೈಕಲ್ಯ ಸಮಸ್ಯೆಯಿಂದ ಬಳಲುತ್ತಿರುವವರನ್ನು ಕೀಳಾಗಿ ನೋಡುವುದುಂಟು. ಇಂತಹ ಘಟನೆಗಳು ವಿಶೇಷಚೇತನರ ಆತ್ಮವಿಶ್ವಾಸವನ್ನು ಕುಗ್ಗಿಸುವುದಲ್ಲದೇ, ಅವರಲ್ಲಿ ನಮ್ಮಿಂದ ಏನು ಸಾಧಿಸಲು ಸಾಧ್ಯವಿಲ್ಲ ಎಂಬ ಭಾವನೆ ಬರುವಂತೆ ಮಾಡುತ್ತದೆ. ಈ ನಿಟ್ಟಿನಲ್ಲಿ ಈ ಸಮಾಜದಲ್ಲಿ ಸಾಮಾನ್ಯ ಜನರಂತೆ ವಿಶೇಷ ಚೇತನರಿಗೂ ಹೆಮ್ಮೆಯಿಂದ ಜೀವನ ನಡೆಸಲು ಅವಕಾಶವನ್ನು ನೀಡಬೇಕು, ಪ್ರತಿಯೊಂದು ಕ್ಷೇತ್ರದಲ್ಲೂ ಅವರಿಗೂ ಸಮಾನ ಅವಕಾಶವನ್ನು ನೀಡಬೇಕು ಮತ್ತು ವಿಶೇಷ ಚೇತನರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕು ಎನ್ನುವ ಸಲುವಾಗಿ  ಪ್ರತಿವರ್ಷ ಡಿಸೆಂಬರ್ 03 ರಂದು ಅಂತರಾಷ್ಟ್ರೀಯ ವಿಶೇಷ ಚೇತನರ ದಿನವನ್ನು ಆಚರಿಸಲಾಗುತ್ತದೆ.

ಅಂತರಾಷ್ಟ್ರೀಯ ವಿಶೇಷ ಚೇತನರ ದಿನದ ಇತಿಹಾಸ:

1976 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 1981 ರ ವರ್ಷವನ್ನು ವಿಕಲಚೇತನರ ಅಂತರಾಷ್ಟ್ರೀಯ ವರ್ಷವೆಂದು ಘೋಷಿಸಿತು. ನಂತರ 1992 ರಲ್ಲಿ  ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 47/3 ರ ನಿರ್ಣಯದ  ಅಡಿಯಲ್ಲಿ ಡಿಸೆಂಬರ್ 3 ರಂದು ಅಂತರಾಷ್ಟ್ರೀಯ ವಿಶೇಷ ಚೇತನರ ದಿನವನ್ನು ಆಚರಿಸುವ ನಿರ್ಣಯವನ್ನು ಘೋಷಿಸಲಾಯಿತು. ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ವಿಕಲ ಚೇತನರ  ಹಕ್ಕುಗಳು ಮತ್ತು ಕಲ್ಯಾಣವನ್ನು ಉತ್ತೇಜಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.  ಅಂದಿನಿಂದ ಪ್ರತಿವರ್ಷ ಡಿಸೆಂಬರ್ 03 ರಂದು ಅಂತರಾಷ್ಟ್ರೀಯ ವಿಶೇಷಚೇತನರ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಅಂತರಾಷ್ಟ್ರೀಯ ವಿಶೇಷ ಚೇತನರ ದಿನದ ಮಹತ್ವ:

ಅಂತರಾಷ್ಟ್ರೀಯ ವಿಕಲಚೇತನರ ದಿನ ಬಹಳ ಮುಖ್ಯವಾದ ದಿನವಾಗಿದೆ. ಈ ದಿನ ವಿಕಲಚೇತನರ ಗೌರವ, ಯೋಗಕ್ಷೇಮ ಮತ್ತು  ಹಕ್ಕುಗಳ  ಬಗ್ಗೆ ಅರಿವು ಮೂಡಿಸಲಾಗುವುದಲ್ಲದೆ, ಪ್ರತಿಯೊಂದು ಕ್ಷೇತ್ರದಲ್ಲೂ ವಿಶೇಷಚೇತನರು ತಮ್ಮ ಛಾಪನ್ನು ಮೂಡಿಸಬೇಕೆಂದು ಅವರಿಗೆ ಪ್ರೋತ್ಸಾಹ ಮತ್ತು ಬೆಂಬಲವನ್ನು ನೀಡಲಾಗುತ್ತದೆ.

ಇಂದಿಗೂ ಅನೇಕರು ವಿಶೇಷ ಚೇತನರನ್ನು ಕಂಡರೆ ಕೀಳಾಗಿ ಕಾಣುವುದು ಅಥವಾ ಗೇಲಿ ಮಾಡುವುದುಂಟು. ಇಂತಹ ಕೆಟ್ಟ ಮನಸ್ಥಿತಿಯನ್ನು ತೊಡೆದುಹಾಕಿ ನಮ್ಮಂತೆಯೇ ಅವರಿಗೂ ಬದುಕುವ ಅವಕಾಶವಿದೆ ಎಂಬ ಬಗ್ಗೆ ಜನರಿಗೆ ಶಿಕ್ಷಣವನ್ನು ನೀಡಲು ಈ ದಿನವನ್ನು ಆಚರಿಸಲಾಗುತ್ತದೆ.  ಅಲ್ಲದೆ ಈ ದಿನ ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ವಿಶೇಷ ಚೇತನರಿಗೆ  ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶವನ್ನು ನೀಡಲಾಗುತ್ತದೆ.  ಅಲ್ಲದೆ ಈ ದಿನ ವಿಶೇಷಚೇತನರ ಸಾಧನೆಗಳನ್ನು ಗೌರವಿಸಲಾಗುತ್ತದೆ.

ಇದನ್ನೂ ಓದಿ: ವಿಶೇಷ ಚೇತನರಿಗಾಗಿಯೇ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಿಟ್ಟಿ ಕೆಫೆ ಆರಂಭ

ಮುಖ್ಯವಾಗಿ  ವಿಶೇಷ ಚೇತನರ ಬಗೆಗಿನ ಸಾಮಾಜಿಕ ಚಿಂತನೆಯನ್ನು ಬದಲಾಯಿಸುವುದು ಮತ್ತು ಅವರ ಜೀವನವಿಧಾನವನ್ನು ಇನ್ನಷ್ಟು ಸುಧಾರಿಸುವುದು ಹಾಗೂ ಅವರ ಕಲ್ಯಾಣಕ್ಕಾಗಿ ಸಮಗ್ರ ಯೋಜನೆಗಳನ್ನು ಯೋಜನೆಗಳನ್ನು ಜಾರಿಗೊಳಿಸುವುದು ಈ ವಿಶೇಷ  ದಿನವನ್ನು ಆಚರಿಸುವ  ಮುಖ್ಯ ಉದ್ದೇಶವಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್