World Heart Day 2023: ವಿಶ್ವ ಹೃದಯ ದಿನವನ್ನು ಏಕೆ ಆಚರಿಸಲಾಗುತ್ತದೆ? ಅದರ ಇತಿಹಾಸ, ಪ್ರಾಮುಖ್ಯತೆ ಇಲ್ಲಿದೆ

ಹೃದಯವು ಮಾನವನ ದೇಹದ ಪ್ರಮುಖ ಅಂಗವಾಗಿದ್ದು, ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಏಕೆಂದರೆ ಹೃದಯದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಅಡಚಣೆಯಾದರೂ ಅದು ವ್ಯಕ್ತಿಯ ಪ್ರಾಣಕ್ಕೆ ಕುತ್ತು ತರುವ ಸಾಧ್ಯತೆಯಿದೆ. ಹಾಗಾಗಿ ಹೃದಯ ಆರೋಗ್ಯ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ತಡೆಗಟ್ಟುವಿಕೆಯ  ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ.

World Heart Day 2023: ವಿಶ್ವ ಹೃದಯ ದಿನವನ್ನು ಏಕೆ ಆಚರಿಸಲಾಗುತ್ತದೆ? ಅದರ ಇತಿಹಾಸ, ಪ್ರಾಮುಖ್ಯತೆ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Sep 28, 2023 | 5:00 PM

ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವು ನಿರಂತರವಾಗಿ ಹೆಚ್ಚುತ್ತಿದೆ. ಅದರಲ್ಲೂ ಹೃದಯಾಘಾತದಿಂದಾಗಿ ಮರಣ ಹೊಂದುತ್ತಿರುವ ಪ್ರಕರಣಗಳು ಸಾಕಷ್ಟು ಹೆಚ್ಚುತ್ತಿವೆ. ವರದಿಗಳ ಪ್ರಕಾರ 30 ವರ್ಷಕ್ಕಿಂತ ಕಡಿಮೆ ವಯಸ್ಸಿನ ಜನರು ಕೂಡಾ ಹೃದ್ರೋಗದಿಂದ ಬಳಲುತ್ತಿದ್ದಾರೆ. ಅನಾರೋಗ್ಯಕರ  ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿ, ವ್ಯಾಯಾಮದ ಕೊರತೆ, ವಿಪರೀತ ಪ್ರಮಾಣದ ಮದ್ಯಪಾನ  ಧೂಮಪಾನ ಇತ್ಯಾದಿಗಳು ಹೃದ್ರೋಗಕ್ಕೆ ಮುಖ್ಯ ಕಾರಣವಾಗಿದೆ. ಹೃದಯವು ಆರೋಗ್ಯವಾಗಿ ಕಾರ್ಯನಿರ್ವಹಿಸಿದರೆ ವ್ಯಕ್ತಿಯೂ ಆರೋಗ್ಯವಾಗಿರುತ್ತಾನೆ. ಉತ್ತಮ ಜೀವನಶೈಲಿ, ಆರೋಗ್ಯಕರ ಆಹಾರ, ವ್ಯಾಯಾಮ, ಸಾಕಷ್ಟು ನೀರು ಕುಡಿಯುವುದು ಈ ರೀತಿಯ ಆರೋಗ್ಯಕರ ಅಭ್ಯಾಸವನ್ನು ಅಳವಡಿಸಿಕೊಳ್ಳುವ ಮೂಲಕ ಹೃದಯದ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದು.  ಈ ನಿಟ್ಟಿನಲ್ಲಿ ಹೃದಯದ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಲು,  ಹೃದಯರಕ್ತನಾಳಗಳ ಕಾಯಿಲೆಗಳು ಮತ್ತು ಅದರ ಅಪಾಯಗಳ  ಬಗ್ಗೆ ಜನರಿಗೆ  ಅರಿವು ಮೂಡಿಸಲು ಪ್ರತಿ ವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನವನ್ನು  (World Heart Day ) ಆಚರಿಸಲಾಗುತ್ತದೆ.

ವಿಶ್ವ ಹೃದಯ ದಿನವನ್ನು ಏಕೆ ಆಚರಿಸಲಾಗುತ್ತದೆ?

ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ ಹೃದಯರಕ್ತನಾಳಗಳ ಕಾಯಿಲೆ, ಅದರ ತಡೆಗಟ್ಟುವಿಕೆ ಮತ್ತು ಜನರ ಮೇಲೆ ಆರೋಗ್ಯದ ಮೇಲೆ ಬೀರುವ ಅದರ ಪ್ರಭಾವದ ಬಗ್ಗೆ ಜಾಗೃತಿ ಮೂಡಿಸುವುದು. ಹೃದಯಾಘಾತ, ಪಾರ್ಶ್ವವಾಯು ಸೇರಿದಂತೆ ಹೃದಯ ರಕ್ತನಾಳಗಳ ಕಾಯಿಲೆ ಪ್ರತಿವರ್ಷ 17.8 ವಿಲಿಯನ್ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ.  ವರ್ಲ್ಡ್ ಹಾರ್ಟ್ ಫೆಡರೇಷನ್ ಪ್ರಕಾರ, 80% ಅಕಾಲಿಕ ಮರಣಗಳು ಹೃದಯ ರಕ್ತನಾಳಗಳ ಕಾಯಿಲೆಯಿಂದಾಗಿ ಸಂಭವಿಸುತ್ತಿವೆ. ಈ ನಿಟ್ಟಿನಲ್ಲಿ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಅದನ್ನು  ನಿಯಂತ್ರಿಸಲು ಜನರು ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಹೃದಯ ದಿನದ ಇತಿಹಾಸ:

ವರ್ಲ್ಡ್ ಹರ್ಟ್ ಫೆಡರೇಶನ್ ಮಾಜಿ ಅಧ್ಯಕ್ಷ ಆಂಟೋನಿ ಬೇಯೆಸ್ ಡಿ ಲೂನಾ ಅವರು ವಿಶ್ವ ಹೃದಯ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು  ಪರಿಚಯಿಸಿದರು. ಇವರ ಪರಿಕಲ್ಪನೆಯಡಿಯಲ್ಲಿ ವರ್ಲ್ಡ್ ಹರ್ಟ್ ಫೆಡರೇಶನ್ (WHF) ಮತ್ತು ವಿಶ್ವ ಆರೋಗ್ಯ ಸಂಸ್ಥೆ  (WHO) ಜಂಟಿಯಾಗಿ ವಿಶ್ವ ಹೃದಯ ದಿನದ ಆಚರಣೆಯನ್ನು  24 ಸೆಪ್ಟೆಂಬರ್ 2000 ರಂದು  ಪ್ರಾರಂಭಿಸಿತು. ನಂತರ ಪ್ರತಿವರ್ಷ ಸೆಪ್ಟೆಂಬರ್ ತಿಂಗಳ ಕೊನೆಯ ಭಾನುವಾರದಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತಿತ್ತು.  2014 ರಿಂದ ವಿಶ್ವ ಹೃದಯ ದಿನವನ್ನು ಸೆಪ್ಟೆಂಬರ್ 29 ರಂದು ಆಚರಿಸಲು ಪ್ರಾರಂಭಿಸಲಾಯಿತು.  ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ವಿಶ್ವ ಹೃದಯ ದಿನವನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ: ವಿಶ್ವ ಹೃದಯ ದಿನ, ಇತಿಹಾಸ, ಮಹತ್ವ, ಈ ವರ್ಷದ ಥೀಮ್​ ಬಗ್ಗೆ ತಿಳಿಯಿರಿ

ವಿಶ್ವ ಹೃದಯ ದಿನದ ಮಹತ್ವ:

ಜಗತ್ತಿನಾದ್ಯಂತ ಹೃದ್ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿನ ಅನಾರೋಗ್ಯಕರ  ಜೀವನಶೈಲಿ ಮತ್ತು ತಪ್ಪು ಆಹಾರ ಪದ್ಧತಿಗಳಿಂದ ಹೃದಯ ಸಂಬಂಧಿ ಕಾಯಿಲೆಯ ಅಪಾಯವೂ ಹೆಚ್ಚುತ್ತಿದೆ. ಎಲ್ಲಾ ವಯಸ್ಸಿನ ಜನರು ಕೂಡಾ  ಹೃದಯ ಸಂಬಂಧಿ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ಹೃದಯರಕ್ತನಾಳಗಳ   ಕಾಯಿಲೆಯಿಂದಾಗಿ ಹೃಯಾಘಾತದ ಅಪಾಯವೂ ಹೆಚ್ಚಾಗುತ್ತಿದೆ. ಪ್ರತಿವರ್ಷ ಸುಮಾರು 18.6 ಮಿಲಿಯನ್ ಜನರು ಹೃದ್ರೋಗ ಅಥವಾ ಪಾರ್ಶ್ವವಾಯುವಿಗೆ ಬಲಿಯಾಗಿ ಸಾಯುತ್ತಿದ್ದಾರೆ. ಈ ನಿಟ್ಟಿನಲ್ಲಿ  ಆರೋಗ್ಯಕರ ಜೀವನಶೈಲಿ ಹಾಗೂ ಆಹಾರ ಪದ್ಧತಿಯ ಪಾಲನೆಯ ಮೂಲಕ ಹೃದಯದ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬಹುದು, ಹೃದಯ ಸಂಬಂಧಿ ಕಾಯಿಲೆಗಳು ತಡೆಗಟ್ಟುವಿಕೆಯ  ಬಗ್ಗೆ ವಿಶ್ವದಾದ್ಯಂತ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಈ ದಿನ ಹಮ್ಮಿಕೊಳ್ಳಲಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​