AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Hepatitis Day 2025: ಹೆಪಟೈಟಿಸ್‌ ಎಂಬ ಮೌನ ಕಾಯಿಲೆಯ ಬಗ್ಗೆ ಇರಲಿ ಜಾಗೃತಿ

ಹೆಪಟೈಟಿಸ್‌ ಎಂಬುದು ಗಂಭೀರ ವೈರಸ್‌ ಸೋಂಕಾಗಿದ್ದು, ಇದು ಮುಖ್ಯವಾಗಿ ಯಕೃತ್ತು ಅಂದರೆ ಲಿವರನ್ನು ಹಾನಿಗೊಳಿಸುತ್ತದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದೆ ಹೋದರೆ ಇದು ಲಿವರ್‌ ಫೈಲ್ಯೂರ್‌ ಮತ್ತು ಗಂಭೀರ ಅನಾರೋಗ್ಯಕ್ಕೂ ಕಾರಣವಾಗುತ್ತದೆ. ಹಾಗಾಗಿ ಈ ಕಾಯಿಲೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿವರ್ಷ ಜುಲೈ 28 ರಂದು ವಿಶ್ವ ಹೆಪಟೈಟಿಸ್‌ ದಿನವನ್ನು ಆಚರಿಸಲಾಗುತ್ತದೆ.

World Hepatitis Day 2025: ಹೆಪಟೈಟಿಸ್‌ ಎಂಬ ಮೌನ ಕಾಯಿಲೆಯ ಬಗ್ಗೆ ಇರಲಿ ಜಾಗೃತಿ
ವಿಶ್ವ ಹೆಪಟೈಟಿಸ್‌ ದಿನImage Credit source: Getty Images
ಮಾಲಾಶ್ರೀ ಅಂಚನ್​
|

Updated on: Jul 28, 2025 | 9:19 AM

Share

ದೇಹದಲ್ಲಿರುವ ವಿಷವನ್ನು ತೆಗೆದುಹಾಕುವಲ್ಲಿ ಯಕೃತ್ತು (Liver) ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಕಳಪೆ ಜೀವನಶೈಲಿಯಿಂದಾಗಿ, ಅನೇಕ ಜನರು ಹೆಪಟೈಟಿಸ್‌ನಂತಹ ಗಂಭೀರ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ಹೆಪಟೈಟಿಸ್‌ ಎಂಬುದು ಲಿವರ್‌ಗೆ ಸಂಬಂಧಿಸಿದ ಕಾಯಿಲೆಯಾಗಿದ್ದು, ಇದಕ್ಕೆ ಚಿಕಿತ್ಸೆ ಲಭ್ಯವಿದ್ದರೂ ಅರಿವಿನ ಕೊರತೆಯ ಕಾರಣದಿಂದಾಗಿ ಲಕ್ಷಾಂತರ ಜನ ಈ ಕಾಯಿಲೆಗೆ ಬಲಿಯಾಗುತ್ತಿದ್ದಾರೆ. ಆದರೆ ನಿರ್ಲಕ್ಷ್ಯ ವಹಿಸದೆ ಸೂಕ್ತ ಸಮಯಕ್ಕೆ ಈ ರೋಗದ ಲಕ್ಷಣವನ್ನು ಪತ್ತೆ ಹಚ್ಚಿ ಚಿಕಿತ್ಸೆ ಪಡೆಯುವುದರಿಂದ ಈ ರೋಗದಿಂದ ಮುಕ್ತ ಪಡೆಯಬಹುದು. ಈ ನಿಟ್ಟಿನಲ್ಲಿ ಈ ಅಪಾಯಕಾರಿ ಹೆಪಟೈಟಿಸ್‌ ಕಾಯಿಲೆ, ಅದರ ಲಕ್ಷಣಗಳು, ಆ ರೋಗವನ್ನು ತಡೆಗಟ್ಟುವುದು ಹೇಗೆ ಎಂದು ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಜುಲೈ 28 ರಂದು ವಿಶ್ವ ಹೆಪಟೈಟಿಸ್‌ (World Hepatitis Day) ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ವಿಶ್ವ ಹೆಪಟೈಟಿಸ್ ದಿನವನ್ನು ಏಕೆ ಆಚರಿಸಲಾಗುತ್ತದೆ?

ವಿಶ್ವ ಹೆಪಟೈಟಿಸ್ ದಿನವನ್ನು ಜುಲೈ 28 ರಂದು ಆಚರಿಸಲಾಗುತ್ತದೆ. ವಿಜ್ಞಾನಿ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಡಾ. ಬರೂಚ್ ಬ್ಲಂಬರ್ಗ್ ಅವರ ಜನ್ಮದಿನದ ಸವಿ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಬ್ಲಂಬರ್ಗ್‌ ಅವರು ಹೆಪಟೈಟಿಸ್ ಬಿ ವೈರಸ್ (HBV) ಅನ್ನು ಕಂಡುಹಿಡಿದ ಮತ್ತು ಹೆಪಟೈಟಿಸ್-ಬಿ ವೈರಸ್‌ಗೆ ಚಿಕಿತ್ಸೆ ನೀಡಲು ರೋಗನಿರ್ಣಯ ಪರೀಕ್ಷೆ ಮತ್ತು ಲಸಿಕೆಯನ್ನು ಅಭಿವೃದ್ಧಿಪಡಿಸಿದವರು. ಇವರ ಆವಿಷ್ಕಾರವು ಪ್ರಪಂಚದಾದ್ಯಂತ ಲಕ್ಷಾಂತರ ಜನರ ಜೀವಗಳನ್ನು ಉಳಿಸಲು ಸಹಾಯ ಮಾಡಿತು.

ಇವರ ಈ ಸಾಧನೆ ಮತ್ತು ಕೊಡುಗೆಗಳನ್ನು ಸ್ಮರಿಸುವ ಸಲುವಾಗಿ ಈ ದಿನದ ಆಚರಣೆಯನ್ನು ವಿಶ್ವ ಆರೋಗ್ಯ ಸಂಸ್ಥೆಯು ವರ್ಲ್ಡ್ ವೈಡ್ ಹೆಪಟೈಟಿಸ್ ಫ್ರೀ ಮಿಷನ್‌ನೊಂದಿಗೆ ಪ್ರಾರಂಭಿಸಿತು. 2008 ರಲ್ಲಿ ಮೊದಲ ಬಾರಿಗೆ ವಿಶ್ವ ಹೆಪಟೈಟಿಸ್ ದಿನವನ್ನು ಆಚರಿಸಲಾಯಿತು. ನಂತರ ಪ್ರತಿವರ್ಷ ಈ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ
Image
ಮಲೇರಿಯಾ ಸೋಂಕನ್ನು ತಡೆಯಲು ಬಂತು ಮೊದಲ ಲಸಿಕೆ!
Image
ಕೆಟ್ಟ ಕೊಲೆಸ್ಟ್ರಾಲ್ ನಿಂದ ಹೃದಯವನ್ನು ಹೇಗೆ ರಕ್ಷಿಸಿಕೊಳ್ಳುವುದು?
Image
ನೀವು ಸಹ ನಿದ್ರೆಯಿಂದ ಸಡನ್ನಾಗಿ ಎಚ್ಚರಗೊಳ್ತೀರಾ?
Image
ಹೆಚ್ಚಾಯ್ತು ಡೆಂಗ್ಯೂ, ಮನೆ ಬಳಿ ಸ್ವಚ್ಛತೆ ಕಾಪಾಡದಿದ್ದರೆ ಭಾರೀ ಮೊತ್ತದ ದಂಡ

ವಿಶ್ವ ಹೆಪಟೈಟಿಸ್ ದಿನದ ಮಹತ್ವ:

ಹೆಪಟೈಟಿಸ್ ಒಂದು ಮೌನ ಕಾಯಿಲೆಯಾಗಿದ್ದು, ಇದು ಯಕೃತ್ತನ್ನು ಹಾನಿಗೊಳಿಸುತ್ತದೆ, ಇದರ ಲಕ್ಷಣಗಳು ಹೆಚ್ಚಾಗಿ ತಡವಾಗಿ ಕಾಣಿಸಿಕೊಳ್ಳುತ್ತವೆ. ಅದಕ್ಕಾಗಿಯೇ ಜನರು ತಮ್ಮ ಆರೋಗ್ಯದ ಬಗ್ಗೆ ಸರಿಯಾಗಿ ಗಮನ ಹರಿಸಲು ಮತ್ತು ಅಗತ್ಯ ಪರೀಕ್ಷೆಗಳನ್ನು ಮಾಡಿಕೊಳ್ಳಲು  ಜಾಗೃತಿ ಮೂಡಿಸಲು,  ಹೆಪಟೈಟಿಸ್ ಒಂದು ಗಂಭೀರ ಕಾಯಿಲೆ ಎಂದು ಜನರಿಗೆ ತಿಳಿಸಲು ಮತ್ತು  ಸಕಾಲಿಕ ಪರೀಕ್ಷೆ ಮತ್ತು ಚಿಕಿತ್ಸೆಯಿಂದ ಅದನ್ನು ಯಾವ ರೀತಿ ತಡೆಗಟ್ಟಬಹುದು ಎಂದು ಜಾಗೃತಿ ಮೂಡಿಸುವುದು ವಿಶ್ವ ಹೆಪಟೈಟಿಸ್‌ ದಿನದ ಉದ್ದೇಶವಾಗಿದೆ.

ಹೆಪಟೈಟಿಸ್ ಲಕ್ಷಣಗಳು:

  • ಆಯಾಸ ಮತ್ತು ದೌರ್ಬಲ್ಯ
  • ವಾಕರಿಕೆ ಮತ್ತು ವಾಂತಿ
  • ಚರ್ಮ ಮತ್ತು ಕಣ್ಣುಗಳು ಹಳದಿಯಾಗುವುದು
  • ಹೊಟ್ಟೆ ನೋವು
  • ಗಾಢ ಹಳದಿ ಬಣ್ಣದ ಮೂತ್ರ
  • ಹಸಿವಿನ ಕೊರತೆ
  • ಕೀಲು ನೋವು
  • ಜ್ವರ
  • ತೂಕ ಇಳಿಕೆ
  • ಕಣ್ಣುಗಳು ಹಳದಿಯಾಗುವುದು

ಇದನ್ನೂ ಓದಿ: ಕೆಟ್ಟ ಕೊಲೆಸ್ಟ್ರಾಲ್ ನಿಂದ ಹೃದಯವನ್ನು ರಕ್ಷಿಸಿಕೊಳ್ಳಲು ಈ ರೀತಿ ಮಾಡಿ; ಹೃದಯಾಘಾತ, ಪಾರ್ಶ್ವವಾಯುವಿನಿಂದ ದೂರವಿರಿ

ಹೆಪಟೈಟಿಸ್‌ ವಿಧಗಳು:

ಹೆಪಟೈಟಿಸ್‌ ಕಾಯಿಲೆಯಲ್ಲಿ ಹಲವು ವಿಧಗಳಿವೆ. ಹೆಪಟೈಟಿಸ್‌ ಎ, ಬಿ, ಸಿ, ಡಿ ಮತ್ತು ಇ. ಇದರಲ್ಲಿ ಹೆಪಟೈಟಿಸ್‌ ಎ ಮತ್ತು ಇ ಕಲುಷಿತ ಆಹಾರ ಮತ್ತು ನೀರಿನ ಮೂಲಕ ಹರಡುತ್ತದೆ. ಹೆಪಟೈಟಿಸಿ  ಬಿ, ಸಿ ಮತ್ತು ಡಿ ರಕ್ತ, ಸೋಂಕಿತ ಸಿರಿಂಜ್‌, ಅಸುರಕ್ಷಿತ ಲೈಂಗಿಕತೆಯಿಂದ ಹರಡುವ ಸಾಧ್ಯತೆ ಇರುತ್ತದೆ. ಹೆಪಟೈಟಿಸಗ ಎ ಮತ್ತು ಇ ಅಷ್ಟು ಅಪಾಯಕಾರಿಯಲ್ಲ. ಆದರೆ ಹೆಪಟೈಟಿಸ್‌ ಬಿ, ಸಿ ಮತ್ತು ಡಿ ವೈರಸ್‌ಗಳು ಲಿವರ್‌ನ ಶಕ್ತಿಯನ್ನೇ ಕುಂದಿಸುತ್ತದೆ. ಕ್ರಮೇಣ ಇದು ಲಿವರ್‌ ಕ್ಯಾನ್ಸರ್‌ಗೆ ಕಾರಣವಾಗುತ್ತದೆ.

ರೋಗ ನಿಯಂತ್ರಣ:

ಹೆಪಟೈಟಿಸ್‌ ಕಾಯಿಲೆ ಬಾರದಂತೆ ನೋಡಿಕೊಳ್ಳಲು ಮೊದಲಿಗೆ ಸರಿಯಾದ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಸುರಕ್ಷಿತ ಚುಚ್ಚುಮದ್ದುಗಳು, ಸುರಕ್ಷಿತ ಉತ್ಪನ್ನಗಳನ್ನೇ ಬಳಸಬೇಕು. ಆಲ್ಕೋಹಾಲ್‌ನಿಂದ ಸಾಧ್ಯವಾದಷ್ಟು ದೂರವಿರಬೇಕು. ಮತ್ತು ಮುಖ್ಯವಾಗಿ ಸ್ವಚ್ಛ ನೀರನ್ನು ಕುಡಿಯಬೇಕು ಮತ್ತು ನೈರ್ಮಲ್ಯವನ್ನು ಕಾಪಾಡಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್