AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ತಡೆಯಲು ಈ ಸಲಹೆ ಪಾಲಿಸುವುದನ್ನು ಮರೆಯಬೇಡಿ

ಕೀಲು ನೋವು ಚಳಿಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಅಷ್ಟೇ ಅಲ್ಲ ಇದು ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲಿಯೂ ಬೆಳಿಗ್ಗೆಯಿಂದ ಸಂಜೆವರೆಗೆ ಒಂದೇ ಜಾಗದಲ್ಲಿ ಕುಳಿತಲ್ಲಿಯೇ ಇದ್ದರೆ ಇಂತಹ ನೋವುಗಳು ಹೆಚ್ಚಾಗುತ್ತದೆ. ಜೊತೆಗೆ ಶೀತ ಹೆಚ್ಚಾದಂತೆ, ದೇಹದ ಚಟುವಟಿಕೆ ಕಡಿಮೆಯಾಗುವುದರಿಂದ, ಇದು ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಹಾಗಾಗಿ ಇಂತಹ ಸಮಯದಲ್ಲಿ ಕೀಲು ನೋವು ಏಕೆ ಹೆಚ್ಚಾಗುತ್ತದೆ, ಅದರ ಬಗ್ಗೆ ಯಾರು ಹೆಚ್ಚು ಜಾಗರೂಕರಾಗಿರಬೇಕು ಮತ್ತು ಅದನ್ನು ಹೇಗೆ ತಡೆಯಬಹುದು ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ.

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ತಡೆಯಲು ಈ ಸಲಹೆ ಪಾಲಿಸುವುದನ್ನು ಮರೆಯಬೇಡಿ
ಚಳಿಗಾಲದಲ್ಲಿ ಕಂಡುಬರುವ ಕೀಲು ನೋವು
ಪ್ರೀತಿ ಭಟ್​, ಗುಣವಂತೆ
|

Updated on: Dec 31, 2025 | 4:45 PM

Share

ಚಳಿಗಾಲದಲ್ಲಿ, ಅನೇಕರಿಗೆ ಕೀಲು ನೋವು (Joint Pain), ಬಿಗಿತದಿಂದ ನಡೆಯಲು ಅಥವಾ ಕುಳಿತುಕೊಳ್ಳಲು ತೊಂದರೆಯಾಗುತ್ತದೆ. ಅದರಲ್ಲಿಯೂ ಬೆಳಿಗ್ಗೆಯಿಂದ ಸಂಜೆವರೆಗೆ ಒಂದೇ ಜಾಗದಲ್ಲಿ ಕುಳಿತಲ್ಲಿಯೇ ಇದ್ದರೆ ಇಂತಹ ನೋವುಗಳು ಹೆಚ್ಚಾಗುತ್ತದೆ. ಶೀತ ಹೆಚ್ಚಾದಂತೆ, ದೇಹದ ಚಟುವಟಿಕೆಯೂ ಸೀಮಿತವಾಗುತ್ತದೆ, ಇದು ಕೀಲುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಅನೇಕರು ಇದನ್ನು ನಿರ್ಲಕ್ಷಿಸುತ್ತಾರೆ, ಆದರೆ ಇದು ದಿನಕಳೆದಂತೆ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ಅದರಲ್ಲಿಯೂ ಚಳಿಗಾಲದಲ್ಲಿ ಕೀಲು ನೋವು ವಯಸ್ಸಾದವರಿಗೆ ಮಾತ್ರವಲ್ಲ ಯುವ ಜನರಲ್ಲಿಯೂ ಕಂಡುಬರಬಹುದು. ಹಾಗಾಗಿ ಇಂತಹ ಸಮಯದಲ್ಲಿ ಕೀಲು ನೋವು ಏಕೆ ಹೆಚ್ಚಾಗುತ್ತದೆ, ಅದರ ಬಗ್ಗೆ ಯಾರು ಹೆಚ್ಚು ಜಾಗರೂಕರಾಗಿರಬೇಕು ಮತ್ತು ಅದನ್ನು ಹೇಗೆ ತಡೆಯಬಹುದು ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ.

ಚಳಿಗಾಲದಲ್ಲಿ ಕೀಲು ನೋವು ಹೆಚ್ಚಾಗುವುದಕ್ಕೆ ಕಾರಣವೇನು?

ಡಾ. ಅಖಿಲೇಶ್ ಯಾದವ್ ಎನ್ನುವವರು ತಿಳಿಸಿರುವ ಮಾಹಿತಿ ಅನುಸಾರ ಚಳಿಗಾಲದಲ್ಲಿ, ತಾಪಮಾನದಲ್ಲಿನ ಇಳಿಕೆ, ಸ್ನಾಯು ಮತ್ತು ಕೀಲುಗಳು ಗಟ್ಟಿಯಾಗಲು ಪ್ರಾರಂಭಿಸುತ್ತವೆ, ಇದು ನೋವು ಮತ್ತು ಬಿಗಿತವನ್ನು ಹೆಚ್ಚಿಸುತ್ತದೆ. ಹೆಚ್ಚುವರಿಯಾಗಿ, ಚಳಿಗಾಲದಲ್ಲಿ, ರಕ್ತದ ಹರಿವು ನಿಧಾನವಾಗಬಹುದು, ಸಾಕಷ್ಟು ಉಷ್ಣತೆ ಮತ್ತು ಪೋಷಣೆ ಕೀಲುಗಳನ್ನು ತಲುಪುವುದನ್ನು ತಡೆಯುತ್ತದೆ. ವಯಸ್ಸಾದವರು, ಸಂಧಿವಾತ ಮತ್ತು ಅಸ್ಥಿಸಂಧಿವಾತ ರೋಗಿಗಳು ಮತ್ತು ಈಗಾಗಲೇ ಕೀಲು ನೋವಿನಿಂದ ಬಳಲುತ್ತಿರುವವರಿಗೆ ಈ ಅಪಾಯ ಹೆಚ್ಚು. ಜೊತೆಗೆ ದೀರ್ಘಕಾಲದವರೆಗೆ ಒಂದೇ ಜಾಗದಲ್ಲಿ ಕುಳಿತುಕೊಳ್ಳುವ ಮತ್ತು ನಿಯಮಿತವಾಗಿ ವ್ಯಾಯಾಮ ಮಾಡದವರಲ್ಲಿ ಈ ಸಮಸ್ಯೆ ಹೆಚ್ಚಾಗಬಹುದು. ಇನ್ನು ಕೆಲವು ಮಹಿಳೆಯರಲ್ಲಿ, ಹಾರ್ಮೋನುಗಳ ಬದಲಾವಣೆಗಳು ಮತ್ತು ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಕೊರತೆಯಿಂದಾಗಿ, ಕೀಲು ನೋವು ಕಂಡುಬರುತ್ತದೆ. ಸಮಯಕ್ಕೆ ಸರಿಯಾಗಿ ಗಮನ ನೀಡದಿದ್ದರೆ, ಈ ನೋವು ಕ್ರಮೇಣ ತೀವ್ರಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೀಲು ನೋವು ಬರಬಾರದು ಎಂದರೆ ತಪ್ಪದೆ ಈ ಆಹಾರಗಳ ಸೇವನೆ ಮಾಡಿ

ಕೀಲು ನೋವು ಹೆಚ್ಚಾಗುವುದನ್ನು ತಡೆಯಲು ಈ ಸಲಹೆಯನ್ನು ಪಾಲಿಸಿ:

  • ನಿಮ್ಮ ದೇಹವನ್ನು ಆದಷ್ಟು ಬೆಚ್ಚಗಿಟ್ಟುಕೊಳ್ಳಿ.
  • ಪ್ರತಿದಿನ ಲಘು ವ್ಯಾಯಾಮ ಮತ್ತು ಸ್ಟ್ರೆಚಿಂಗ್ ಮಾಡಿ.
  • ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿ.
  • ದೀರ್ಘಕಾಲದವರೆಗೆ ಒಂದೇ ಸ್ಥಳದಲ್ಲಿ ಕುಳಿತುಕೊಳ್ಳುವುದನ್ನು ತಪ್ಪಿಸಿ.
  • ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಒಳಗೊಂಡಿರುವ ಸಮತೋಲಿತ ಆಹಾರವನ್ನು ಸೇವಿಸಿ.
  • ನೋವು ತೀವ್ರವಾಗಿದ್ದರೆ, ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ