AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರಲ್ಲಿ ಕ್ಯಾಲ್ಸಿಯಂ ಕೊರತೆ: ಯಾವ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು?

ಇತ್ತೀಚಿಗೆ ಮಹಿಳೆಯರಲ್ಲಿ ಕ್ಯಾಲ್ಸಿಯಂ ಕೊರತೆ ಹೆಚ್ಚಾಗಿ ಕಂಡುಬರುತ್ತಿರುವುದನ್ನು ಗಮನಿಸಿರಬಹುದು. ಕ್ಯಾಲ್ಸಿಯಂ ದೇಹಕ್ಕೆ ಅಗತ್ಯವಾದ ಪೋಷಕಾಂಶವಾಗಿದ್ದು ಇದು ಕಡಿಮೆ ಆದಲ್ಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುತ್ತದೆ. ಹಾಗಾಗಿ ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅನಿವಾರ್ಯವಾಗಿದೆ. ಅದರಲ್ಲಿಯೂ ಗರ್ಭಧಾರಣೆ, ಮಗುವಿಗೆ ತಾಯಿ ಹಾಲುಣಿಸುವ ಅವಧಿ ಮತ್ತು ಮೆನೋಪಾಸ್ ಸಮಯದಲ್ಲಿ ಮಹಿಳೆಯರ ದೇಹಕ್ಕೆ ಹೆಚ್ಚುವರಿ ಕ್ಯಾಲ್ಸಿಯಂ ಅಗತ್ಯವಿರುವುದರಿಂದ ಸರಿಯಾದ ಪೋಷಕಾಂಶ ಸಿಗುವುದು ಬಹಳ ಮುಖ್ಯವಾಗುತ್ತದೆ.

ಮಹಿಳೆಯರಲ್ಲಿ ಕ್ಯಾಲ್ಸಿಯಂ ಕೊರತೆ: ಯಾವ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು?
Low Calcium Symptoms in FemalesImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 28, 2026 | 9:04 PM

Share

ಇಂದಿನ ಜೀವನಶೈಲಿ, ಅಸಮತೋಲನ ಆಹಾರ ಪದ್ಧತಿ ಮತ್ತು ಹಾರ್ಮೋನ್ ಬದಲಾವಣೆಗಳ ಕಾರಣದಿಂದ ಮಹಿಳೆಯರಲ್ಲಿ ಕ್ಯಾಲ್ಸಿಯಂ ಕೊರತೆ (Low Calcium) ಸಾಮಾನ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಕ್ಯಾಲ್ಸಿಯಂ ದೇಹಕ್ಕೆ ಅತ್ಯವಶ್ಯಕ ಖನಿಜವಾಗಿದ್ದು, ಎಲುಬುಗಳು, ಹಲ್ಲುಗಳು ಮತ್ತು ಸ್ನಾಯುಗಳನ್ನು ಬಲವಾಗಿ ಇಡಲು ಪ್ರಮುಖ ಪಾತ್ರವಹಿಸುತ್ತದೆ. ದೇಹದಲ್ಲಿ ಇದರ ಕೊರತೆ ಉಂಟಾದರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ನಿಧಾನವಾಗಿ ಕಾಣಿಸಿಕೊಳ್ಳಬಹುದು ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ವಿಶೇಷವಾಗಿ ಗರ್ಭಧಾರಣೆ, ಮಗುವಿಗೆ ತಾಯಿ ಹಾಲುಣಿಸುವ ಅವಧಿ ಮತ್ತು ಮೆನೋಪಾಸ್ ಸಮಯದಲ್ಲಿ ಮಹಿಳೆಯರ ದೇಹಕ್ಕೆ ಹೆಚ್ಚುವರಿ ಕ್ಯಾಲ್ಸಿಯಂ ಅಗತ್ಯವಿರುತ್ತದೆ. ಸರಿಯಾದ ಪೋಷಕಾಂಶಗಳು ಸಿಗದಿದ್ದರೆ ಎಲುಬುಗಳ ದುರ್ಬಲತೆ, ದೇಹದ ಅಲ್ಲಲ್ಲಿ ನೋವು ಮತ್ತು ಆಯಾಸದಂತಹ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ಕ್ಯಾಲ್ಸಿಯಂ ಕೊರತೆಯಿಂದ ಕಂಡುಬರಬಹುದಾದ ಸಮಸ್ಯೆಗಳು

ಕ್ಯಾಲ್ಸಿಯಂ ಕೊರತೆಯಿಂದ ಎಲುಬುಗಳು ನಿಧಾನವಾಗಿ ದುರ್ಬಲವಾಗುತ್ತವೆ. ಇದರ ಪರಿಣಾಮವಾಗಿ ಸಂಧಿ ನೋವು, ಸ್ನಾಯುಗಳಲ್ಲಿ ದುರ್ಬಲತೆ, ದೇಹದಲ್ಲಿ ಭಾರವಾಗಿರುವ ಅನುಭವ ಮತ್ತು ಬೇಗ ಆಯಾಸವಾಗುವ ಸಮಸ್ಯೆಗಳು ಕಾಣಿಸಬಹುದು. ಕೆಲವು ಮಹಿಳೆಯರಲ್ಲಿ ಸ್ನಾಯು ಎಳೆತ, ಕಾಲುಗಳಲ್ಲಿ ನೋವು ಮತ್ತು ಕೈಕಾಲುಗಳಲ್ಲಿ ಕಂಪನ ಕೂಡ ಕಾಣಿಸಬಹುದು. ಈ ಕೊರತೆ ದೀರ್ಘಕಾಲ ಮುಂದುವರಿದರೆ ‘ಆಸ್ಟಿಯೋಪೊರೋಸಿಸ್’ ಅಪಾಯ ಹೆಚ್ಚಾಗುತ್ತದೆ. ಈ ಸ್ಥಿತಿಯಲ್ಲಿ ಎಲುಬುಗಳು ತುಂಬಾ ಬಲಹೀನವಾಗಿ ಸಣ್ಣ ಗಾಯವಾದರೂ ಮುರಿಯುವ ಸಾಧ್ಯತೆ ಇರುತ್ತದೆ. ಜೊತೆಗೆ ಹಲ್ಲು ದುರ್ಬಲವಾಗುವುದು, ನೇಗಿಲುಗಳು ಬೇಗ ಮುರಿಯುವುದು ಮತ್ತು ದೇಹದಲ್ಲಿ ಶಕ್ತಿಯ ಕೊರತೆ ಕಾಣಿಸಬಹುದು.

ಇದನ್ನೂ ಓದಿ: ಉಪ್ಪನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ಕ್ಯಾಲ್ಸಿಯಂ ಕೊರತೆ ಉಂಟಾಗುತ್ತದೆಯೇ?

ಯಾವ ಲಕ್ಷಣಗಳು ಕಂಡರೆ ಪರೀಕ್ಷೆ ಅಗತ್ಯ?

ನಿರಂತರ ಆಯಾಸ, ಸಂಧಿ ಅಥವಾ ಎಲುಬು ನೋವು, ಸ್ನಾಯುಗಳಲ್ಲಿ ಎಳೆತ, ದೇಹ ದುರ್ಬಲತೆ ಅಥವಾ ಸಣ್ಣ ಗಾಯಕ್ಕೂ ಹೆಚ್ಚು ನೋವು ಕಂಡುಬಂದರೆ ವೈದ್ಯರ ಸಲಹೆ ಪಡೆದು ಕ್ಯಾಲ್ಸಿಯಂ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ.

ಕ್ಯಾಲ್ಸಿಯಂ ಹೆಚ್ಚಿಸಿಕೊಳ್ಳಲು ಯಾವ ರೀತಿಯ ಆಹಾರ ಸೇವನೆ ಮಾಡಬೇಕು?

ಹಾಲು, ಮೊಸರು, ಪನ್ನೀರ್, ಮಜ್ಜಿಗೆ ಮೊದಲಾದ ಹಾಲಿನಿಂದ ಮಾಡಿದ ಉತ್ಪನ್ನಗಳು ಕ್ಯಾಲ್ಸಿಯಂನ ಉತ್ತಮ ಮೂಲಗಳಾಗಿವೆ. ಜೊತೆಗೆ ಹಸಿರು ಸೊಪ್ಪು, ಎಳ್ಳು, ಬಾದಾಮಿ ಮತ್ತು ಸೋಯಾ ಉತ್ಪನ್ನಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದು ಉಪಯುಕ್ತ. ವಿಟಮಿನ್ ಡಿ ಕೂಡ ದೇಹದಲ್ಲಿ ಕ್ಯಾಲ್ಸಿಯಂ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಆದ್ದರಿಂದ ಪ್ರತಿದಿನ ಸ್ವಲ್ಪ ಸಮಯ ಸೂರ್ಯನ ಬೆಳಕಿನಲ್ಲಿ ಇರುವುದು ಆರೋಗ್ಯಕ್ಕೆ ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ