AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಸಮಯದಲ್ಲಿ ಪದೇಪದೇ ಹಸಿವಾಗುವುದಕ್ಕೆ ಕಾರಣವೇನು? ಇದು ಕಾಯಿಲೆಯ ಲಕ್ಷಣವೇ?

ಕೆಲವರಿಗೆ ರಾತ್ರಿಯಲ್ಲಿ ಪದೇ ಪದೇ ಹಸಿವಾಗುತ್ತದೆ, ಇದರ ಬಗ್ಗೆ ಯಾರೂ ಕೂಡ ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ ಆರೋಗ್ಯ ತಜ್ಞರು ಅದನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ಹೇಳುತ್ತಾರೆ. ಹಾಗಾದರೆ ಈ ರೀತಿಯಾಗುವುದಕ್ಕೆ ಕಾರಣವೇನು, ಇದು ಕಾಯಿಲೆ ಬರುವ ಮುನ್ಸೂಚನೆಯೇ, ನಿದ್ರೆಗೂ ಮತ್ತು ಹಸಿವಿಗೂ ಇರುವ ಸಂಬಂಧವೇನು, ಲಕ್ಷಣಗಳು ಹೇಗಿರುತ್ತವೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರಾತ್ರಿ ಸಮಯದಲ್ಲಿ ಪದೇಪದೇ ಹಸಿವಾಗುವುದಕ್ಕೆ ಕಾರಣವೇನು? ಇದು ಕಾಯಿಲೆಯ ಲಕ್ಷಣವೇ?
Late Night Cravings? Causes and Healthy Ways to ManageImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Apr 15, 2026 | 7:02 PM

Share

ಕೆಲವರಿಗೆ ದಿನಪೂರ್ತಿ ಸರಿಯಾಗಿ ಆಹಾರ ಸೇವನೆ ಮಾಡಿದರೂ ಕೂಡ, ರಾತ್ರಿ ಸಮಯದಲ್ಲಿ ಪದೇಪದೇ ಹಸಿವಾಗುತ್ತದೆ. ಮಧ್ಯರಾತ್ರಿ ಎದ್ದಾಗ ಏನಾದರೂ ತಿನ್ನಬೇಕೆನ್ನಿಸುವುದು ಸಾಮಾನ್ಯವೆನಿಸಬಹುದು. ಆದರೆ ಇದು ಪ್ರತಿದಿನ ನಡೆಯುತ್ತಿದ್ದರೆ, ಅದನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಈ ರೀತಿಯಾಗುವುದಕ್ಕೆ ಕಾರಣವೇನು, ಇದು ಕಾಯಿಲೆ ಬರುವ ಮುನ್ಸೂಚನೆಯೇ, ನಿದ್ರೆಗೂ ಮತ್ತು ಹಸಿವಿಗೂ (Hungry) ಇರುವ ಸಂಬಂಧವೇನು, ಲಕ್ಷಣಗಳು ಹೇಗಿರುತ್ತವೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹಸಿವಿನ ಹಿಂದಿರುವ ಕಾರಣವೇನು?

ಡಾ. ದೀಪಕ್ ಕುಮಾರ್ ಹೇಳುವ ಪ್ರಕಾರ, ರಾತ್ರಿ ಸಮಯದಲ್ಲಿ ಹಸಿವು ಕಾಣಿಸಿಕೊಳ್ಳುವುದು ದೇಹಕ್ಕೆ ಇನ್ನೂ ಎನರ್ಜಿ ಬೇಕೆಂಬ ಸೂಚನೆಯಾಗಿದೆ. ಇದು ಸಾಮಾನ್ಯವಾಗಿ ಕಂಡುಬಂದರೂ ಕೂಡ ಈ ರೀತಿಯಾಗುವುದಕ್ಕೆ ಕಾರಣವಿದೆ. ಮೆದುಳು ದೇಹಕ್ಕೆ ಹಸಿವಿನ ಸಂದೇಶ ಕಳುಹಿಸುವುದರಿಂದ ರಾತ್ರಿ ಕೂಡ ಆಹಾರ ಸೇವಿಸಬೇಕು ಎಂದು ಅನಿಸುತ್ತದೆ.

ಇದು ಕಾಯಿಲೆಯ ಲಕ್ಷಣವೇ?

ಕೆಲವು ಸಂದರ್ಭಗಳಲ್ಲಿ ಇದು ‘ನೈಟ್ ಈಟಿಂಗ್ ಸಿಂಡ್ರೋಮ್’ (Night Eating Syndrome) ಎಂಬ ಸಮಸ್ಯೆಯಾಗಿರಬಹುದು. ಈ ಸ್ಥಿತಿಯಲ್ಲಿ ವ್ಯಕ್ತಿಗೆ ರಾತ್ರಿ ಸಮಯದಲ್ಲಿ ಹೆಚ್ಚು ಹಸಿವು ಕಾಣಿಸಿಕೊಳ್ಳುತ್ತದೆ ಮತ್ತು ಅವರು ಪದೇ ಪದೇ ಎದ್ದು ಏನಾದರೂ ತಿಂಡಿ ತಿನ್ನುತ್ತಾರೆ. ಆದರೆ ಪ್ರತಿದಿನವೂ ಇದೆ ರೀತಿಯಾಗುತ್ತಿದ್ದರೆ ಮಾತ್ರ ಸಮಸ್ಯೆಯಾಗಿ ಪರಿಗಣಿಸಬೇಕಾಗುತ್ತದೆ. ವಾರಕ್ಕೆ ಒಮ್ಮೆ ಅಥವಾ ಎರಡು ಬಾರಿ ಆಗುವುದು ಸಾಮಾನ್ಯ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಪ್ರತಿ ಇಬ್ಬರು ಉದ್ಯೋಗಿಗಳಲ್ಲಿ ಒಬ್ಬರಿಗೆ ಮಧುಮೇಹದ ಅಪಾಯ! ಸಮೀಕ್ಷೆಯಲ್ಲಿ ಆತಂಕಕಾರಿ ಅಂಶ ಬಹಿರಂಗ

ನಿದ್ರೆ ಮತ್ತು ಹಸಿವಿಗಿರುವ ಸಂಬಂಧ

ರಾತ್ರಿ ತಡವಾಗಿ ಮಲಗುವವರಿಗೆ ನಿದ್ರೆಯ ಕೊರತೆ ಉಂಟಾಗುತ್ತದೆ. ಇದರಿಂದ ‘ಘ್ರೆಲಿನ್’ ಎಂಬ ಹಾರ್ಮೋನ್ ಪ್ರಮಾಣ ಹೆಚ್ಚಾಗುತ್ತದೆ, ಇದು ಹಸಿವು ಹೆಚ್ಚಿಸಲು ಕಾರಣವಾಗುತ್ತದೆ. ಹೀಗಾಗಿ ರಾತ್ರಿ ಸಮಯದಲ್ಲಿ ಪದೇಪದೇ ಹಸಿವು ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆ ದೀರ್ಘಕಾಲ ಮುಂದುವರಿದರೆ ಅತಿಯಾದ ತೂಕ, ಮೆಟಾಬಾಲಿಕ್ ಸಮಸ್ಯೆಗಳು ಮತ್ತು ಯಕೃತ್ತಿನ ಕಾಯಿಲೆಗಳಿಗೂ ಕಾರಣವಾಗಬಹುದು. ಆದ್ದರಿಂದ ಸಮಯಕ್ಕೆ ಸರಿಯಾಗಿ ನಿಯಂತ್ರಿಸುವುದು ಬಹಳ ಮುಖ್ಯ.

ಹೇಗೆ ನಿಯಂತ್ರಿಸಬೇಕು?

  • ದಿನಕ್ಕೆ 3 ರಿಂದ 4 ಬಾರಿ ಸಮತೋಲನ ಆಹಾರ ಸೇವಿಸಿ
  • ರಾತ್ರಿ ಹಗುರವಾದ ಆಹಾರ ತೆಗೆದುಕೊಳ್ಳಿ
  • ತಡವಾಗಿ ಮಲಗುವ ಅಭ್ಯಾಸ ಬಿಡಿ
  • ಒತ್ತಡವನ್ನು ನಿಯಂತ್ರಿಸಿ
  • ಸಮಸ್ಯೆ ಮುಂದುವರಿದರೆ ವೈದ್ಯರನ್ನು ಸಂಪರ್ಕಿಸಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಇಂದು ಈ ರಾಶಿಯವರಿಗೆ ಹಳೆಯ ಹೂಡಿಕೆಗಳಿಂದ ಲಾಭ
ಇಂದು ಈ ರಾಶಿಯವರಿಗೆ ಹಳೆಯ ಹೂಡಿಕೆಗಳಿಂದ ಲಾಭ
ದಸರಾ 2026: ಅ.16 ರಿಂದ 27 ರವರೆಗೆ 3,000 ಹೆಚ್ಚುವರಿ KSRTC ಬಸ್ ಸೇವೆ
ದಸರಾ 2026: ಅ.16 ರಿಂದ 27 ರವರೆಗೆ 3,000 ಹೆಚ್ಚುವರಿ KSRTC ಬಸ್ ಸೇವೆ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ