AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕ ಇಳಿಕೆ, ಜೀರ್ಣಕ್ರಿಯೆ, ಹೃದಯ ಆರೋಗ್ಯ ಕಾಪಾಡಲು ಒಂದು ಮುಷ್ಟಿ ಮೊಳಕೆ ಬಂದ ಮೆಂತ್ಯೆ ಸಾಕು..!

ಮೆಂತ್ಯೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದು ಜೀರ್ಣಕ್ರಿಯೆಗೆ ಬಹಳ ಸಹಾಯ ಮಾಡುತ್ತವೆ ಏಕೆಂದರೆ ಅವುಗಳಲ್ಲಿರುವ ಫೈಬರ್ ಮಲಬದ್ಧತೆ ಮತ್ತು ಅಜೀರ್ಣದಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಅಷ್ಟೇ ಅಲ್ಲ, ಅವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟ ಏರಿಕೆಯನ್ನು ನಿಧಾನಗೊಳಿಸಲು ಸಹಾಯ ಮಾಡುತ್ತವೆ. ಈ ಮೊಳಕೆಗಳಲ್ಲಿರುವ ಪೋಷಕಾಂಶಗಳು ದೇಹದಿಂದ ಸುಲಭವಾಗಿ ಹೀರಲ್ಪಡುತ್ತವೆ, ಅದಕ್ಕಾಗಿಯೇ ಬಹಳಷ್ಟು ಜನರು ಅವುಗಳನ್ನು ಸೇವಿಸುತ್ತಾರೆ.

ತೂಕ ಇಳಿಕೆ, ಜೀರ್ಣಕ್ರಿಯೆ, ಹೃದಯ ಆರೋಗ್ಯ ಕಾಪಾಡಲು ಒಂದು ಮುಷ್ಟಿ ಮೊಳಕೆ ಬಂದ ಮೆಂತ್ಯೆ ಸಾಕು..!
Sprouted FenugreekImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jul 23, 2026 | 5:56 PM

Share

ಮುಖ್ಯಾಂಶಗಳು

  • ನಿಯಮಿತವಾಗಿ ಮೊಳಕೆ ಬಂದ ಮೆಂತ್ಯೆ ತಿಂದರೆ ಏನಾಗುತ್ತದೆ ಎಂಬುದಕ್ಕೆ ಆರೋಗ್ಯ ತಜ್ಞರ ಸಲಹೆ
  • ಒಂದು ಮುಷ್ಟಿ ಮೊಳಕೆ ಬಂದ ಮೆಂತ್ಯೆ ಕಾಳುಗಳನ್ನು ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನ
  • ಮೊಳಕೆ ಮೆಂತ್ಯೆ ತಿನ್ನುವ ಸರಿಯಾದ ವಿಧಾನ ಮತ್ತು ಯಾರಿಗೆ ಒಳ್ಳೆಯದು?

ಮೆಂತ್ಯೆ ಅಡುಗೆ ಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಮಸಾಲೆಯಾಗಿದ್ದರೂ, ಇದರ ಆರೋಗ್ಯ ಪ್ರಯೋಜನಗಳು ಸಾಕಷ್ಟಿದೆ. ವಿಶೇಷವಾಗಿ ಮೊಳಕೆ ಬಂದ ಮೆಂತ್ಯೆ (Sprouted Fenugreek) ಕಾಳುಗಳು ಪೌಷ್ಟಿಕಾಂಶಗಳ ಉತ್ತಮ ಮೂಲವಾಗಿದ್ದು, ಜೀರ್ಣಕ್ರಿಯೆ ಸುಧಾರಿಸುವುದರಿಂದ ಹಿಡಿದು ರಕ್ತದಲ್ಲಿನ ಸಕ್ಕರೆ ನಿಯಂತ್ರಣ, ಕೊಲೆಸ್ಟ್ರಾಲ್ ಕಡಿಮೆ ಮಾಡಲು ಮತ್ತು ಹೃದಯದ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ. ಅದರಲ್ಲಿಯೂ ಮೆಂತ್ಯೆ ಕಾಳುಗಳನ್ನು ಮೊಳಕೆ ಬರಿಸಿದಾಗ ಅವುಗಳಲ್ಲಿರುವ ಕೆಲವು ವಿಟಮಿನ್‌, ಖನಿಜಾಂಶಗಳು ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ದೇಹಕ್ಕೆ ಸುಲಭವಾಗಿ ಹೀರಿಕೊಳ್ಳಲು ಸಹಾಯ ನಡುತ್ತದೆ.

ಮೊಳಕೆ ಬಂದ ಮೆಂತ್ಯೆ ಆರೋಗ್ಯಕ್ಕೆ ಹೇಗೆ ಸಹಕಾರಿ?

ಜೀರ್ಣಕ್ರಿಯೆ ಸುಧಾರಿಸುತ್ತದೆ: ಮೆಂತ್ಯೆಯಲ್ಲಿ ಫೈಬರ್ ಅಧಿಕ ಪ್ರಮಾಣದಲ್ಲಿದ್ದು, ಮಲಬದ್ಧತೆ, ಅಜೀರ್ಣ ಹಾಗೂ ಹೊಟ್ಟೆ ಉಬ್ಬರದಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕರುಳಿನ ಆರೋಗ್ಯವನ್ನು ಉತ್ತಮಗೊಳಿಸುವಲ್ಲಿಯೂ ಇದು ನೆರವಾಗುತ್ತದೆ.

ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಸಹಕಾರಿ: ಕೆಲವು ಅಧ್ಯಯನಗಳ ಪ್ರಕಾರ ಮೆಂತ್ಯೆಯಲ್ಲಿರುವ ಕರಗುವ ನಾರಿನ ಅಂಶ (Soluble Fiber) ಕಾರ್ಬೋಹೈಡ್ರೇಟ್‌ಗಳ ಜೀರ್ಣಕ್ರಿಯೆಯನ್ನು ನಿಧಾನಗೊಳಿಸುವ ಮೂಲಕ ಊಟದ ನಂತರ ರಕ್ತದಲ್ಲಿನ ಸಕ್ಕರೆಯ ಏರಿಕೆಯನ್ನು ನಿಯಂತ್ರಿಸಲು ಸಹಾಯ ಮಾಡಬಹುದು. ಆದರೆ ಇದು ಮಧುಮೇಹದ ಔಷಧಿಗೆ ಪರ್ಯಾಯವಲ್ಲ.

ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ: ನಿಯಮಿತ ಪ್ರಮಾಣದಲ್ಲಿ ಮೆಂತ್ಯೆ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ (LDL) ಮಟ್ಟವನ್ನು ಕಡಿಮೆ ಮಾಡಲು ಸಹಕಾರಿಯಾಗಬಹುದು ಎಂದು ಕೆಲವು ಸಂಶೋಧನೆಗಳು ಸೂಚಿಸಿವೆ. ಇದರಿಂದ ಹೃದಯದ ಆರೋಗ್ಯಕ್ಕೂ ಪ್ರಯೋಜನವಾಗಬಹುದು.

ತೂಕ ಇಳಿಕೆಗೆ ನೆರವಾಗಬಹುದು: ಮೆಂತ್ಯೆಯಲ್ಲಿರುವ ಫೈಬರ್ ಹೆಚ್ಚು ಹೊತ್ತು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದರಿಂದ ಅನಗತ್ಯ ಹಸಿವು ಕಡಿಮೆಯಾಗಬಹುದು ಮತ್ತು ತೂಕ ನಿಯಂತ್ರಣಕ್ಕೆ ಸಹಕಾರಿಯಾಗಬಹುದು.

ಚರ್ಮ ಮತ್ತು ಕೂದಲಿನ ಆರೋಗ್ಯ: ಮೆಂತ್ಯೆಯಲ್ಲಿ ಇರುವ ಆ್ಯಂಟಿಆಕ್ಸಿಡೆಂಟ್‌ಗಳು ಮತ್ತು ಖನಿಜಾಂಶಗಳು ಚರ್ಮ ಹಾಗೂ ಕೂದಲಿನ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡಬಹುದು. ಫ್ರೀ ರ್ಯಾಡಿಕಲ್‌ಗಳಿಂದ ಉಂಟಾಗುವ ಹಾನಿಯನ್ನು ಕಡಿಮೆ ಮಾಡಲು ಸಹಕಾರಿ.

ಮಹಿಳೆಯರ ಆರೋಗ್ಯ: ಮೆಂತ್ಯೆಯಲ್ಲಿ ಇರುವ ಕೆಲವು ಸಸ್ಯ ಮೂಲದ ಸಂಯುಕ್ತಗಳು (Phytoestrogens) ಮಹಿಳೆಯರ ಹಾರ್ಮೋನ್ ಸಮತೋಲನಕ್ಕೆ ನೆರವಾಗಬಹುದು ಎಂಬುದು ಕೆಲವು ಅಧ್ಯಯನಗಳಿಂದ ತಿಳಿದು ಬಂದಿದೆ. ಆದರೆ PCOS, ಥೈರಾಯ್ಡ್ ಅಥವಾ ಇತರ ಹಾರ್ಮೋನ್ ಸಮಸ್ಯೆಗಗಳಿಗೆ ಇದನ್ನೇ ಅವಲಂಬಿಸುವುದು ಸರಿಯಲ್ಲ. ವೈದ್ಯರ ಸಲಹೆಯೊಂದಿಗೆ ಮಾತ್ರ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳಬೇಕು.

ಇದನ್ನೂ ಓದಿ: ಮೊಳಕೆಯೊಡೆದ ಹೆಸರುಕಾಳು vs ಮೊಳಕೆ ಬಂದ ಕಪ್ಪು ಕಡಲೆ: ಯಾವುದು ನಿಜವಾದ ಸೂಪರ್‌ಫುಡ್ ತಿಳಿದುಕೊಳ್ಳಿ

ಮೆಂತ್ಯೆಯನ್ನು ಹೇಗೆ ಸೇವಿಸಬೇಕು?

  • ಒಂದು ಮುಷ್ಟಿ ಮೆಂತ್ಯೆ ಕಾಳುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಡಿ.
  • ನಂತರ ನೀರನ್ನು ಸೋಸಿ 1– 2 ದಿನ ಬಟ್ಟೆಯಲ್ಲಿ ಅಥವಾ ಮೊಳಕೆ ಬರುವ ಪಾತ್ರೆಯಲ್ಲಿ ಇಡಿ.
  • ಮೊಳಕೆ ಬಂದ ಬಳಿಕ ಬೆಳಿಗ್ಗೆ ಸೇವಿಸಬಹುದು.
  • ಆರಂಭದಲ್ಲಿ 1– 2 ಟೇಬಲ್ ಸ್ಪೂನ್ ಸಾಕು.
  • ಸಲಾಡ್, ಮೊಳಕೆ ಮಿಶ್ರಣ, ಮೊಸರು ಅಥವಾ ಸ್ಮೂಥಿಗೆ ಸೇರಿಸಿ ಸೇವಿಸಬಹುದು.

ಯಾರು ಎಚ್ಚರಿಕೆಯಿಂದ ಸೇವಿಸಬೇಕು?

  • ಗರ್ಭಿಣಿಯರು ವೈದ್ಯರ ಸಲಹೆಯಿಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ಸೇವಿಸಬಾರದು.
  • ಮಧುಮೇಹದ ಔಷಧಿ ಸೇವಿಸುವವರು ರಕ್ತದಲ್ಲಿನ ಸಕ್ಕರೆ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ ವೈದ್ಯರ ಸಲಹೆ ಪಡೆಯಬೇಕು.
  • ರಕ್ತ ತೆಳುವಾಗಿಸುವ ಔಷಧಿ (Blood Thinners) ಬಳಸುವವರು ಎಚ್ಚರಿಕೆ ವಹಿಸಬೇಕು.
  • ಕೆಲವರಿಗೆ ಹೊಟ್ಟೆ ಉಬ್ಬರ ಅಥವಾ ಅಲರ್ಜಿ ಕಾಣಿಸಬಹುದು.

ಮೆಂತ್ಯೆ ಆರೋಗ್ಯಕರ ಆಹಾರದ ಭಾಗವಾಗಬಹುದು. ಆದರೆ ಯಾವುದೇ ಒಂದು ಆಹಾರವೇ ಎಲ್ಲ ಕಾಯಿಲೆಗಳಿಗೆ ಪರಿಹಾರವಲ್ಲ. ಸಮತೋಲನ ಆಹಾರ, ನಿಯಮಿತ ವ್ಯಾಯಾಮ, ಸಾಕಷ್ಟು ನಿದ್ರೆ ಮತ್ತು ವೈದ್ಯರ ಸಲಹೆ ಇವೆಲ್ಲವೂ ಉತ್ತಮ ಆರೋಗ್ಯಕ್ಕೆ ಅಗತ್ಯ.

ಸೂಚನೆ: ಈ ಲೇಖನವು ಆರೋಗ್ಯ ಮಾಹಿತಿಗಾಗಿ ಮಾತ್ರ. ಮಧುಮೇಹ, ಹಾರ್ಮೋನ್ ಸಮಸ್ಯೆಗಳು ಅಥವಾ ಇತರ ಆರೋಗ್ಯ ಸಮಸ್ಯೆಗಳಿದ್ದರೆ ವೈದ್ಯರು ಅಥವಾ ಪೌಷ್ಟಿಕ ತಜ್ಞರ ಸಲಹೆ ಪಡೆದು ಆ ಬಳಿಕ ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!