AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಸೀನು ಬರುತ್ತಾ? ಇದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತವೇ?

ಕಳೆದ ಕೆಲವು ತಿಂಗಳುಗಳಿಂದ, ದೇಶದ ಹಲವಾರು ರಾಜ್ಯಗಳಲ್ಲಿ ಹವಾಮಾನ ಬದಲಾಗುತ್ತಿದೆ. ಇಂತಹ ಸಮಯದಲ್ಲಿ ಅನೇಕರ ಆರೋಗ್ಯ ಹದಗೆಟ್ಟಿದೆ. ನೆಗಡಿ, ಜ್ವರ ಪದೇ ಪದೇ ಸೀನುವುದು ಹೀಗೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿದೆ. ಹಾಗಾದರೆ ಈ ರೀತಿ ಆಗುತ್ತಿರುವುದಕ್ಕೆ ಕಾರಣವೇನು? ಇದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತವೇ? ಈ ಬಗ್ಗೆ ಆರೋಗ್ಯ ತಜ್ಞರು ಏನು ಹೇಳುತ್ತಾರೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪದೇ ಪದೇ ಸೀನು ಬರುತ್ತಾ? ಇದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತವೇ?
Seasonal SneezingImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jan 29, 2026 | 8:18 PM

Share

ಇತ್ತೀಚಿನ ದಿನಗಳಲ್ಲಿ, ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ತ್ವರಿತ ಬದಲಾವಣೆ ಕಂಡುಬರುತ್ತಿದ್ದು, ಶೀತ, ಮಳೆ ಕೆಲವು ಭಾಗದಲ್ಲಿ ಆರ್ದ್ರತೆ ಮತ್ತು ಧೂಳು ಹೆಚ್ಚಾಗಿದೆ. ಈ ರೀತಿಯ ಹವಾಮಾನದಲ್ಲಿ, ಅನೇಕರ ಆರೋಗ್ಯ ಏರುಪೇರಾಗುತ್ತಿದೆ. ಆಗಾಗ ಸೀನುವುದು (Sneezing), ಮೂಗಿನಲ್ಲಿ ತುರಿಕೆ ಅಥವಾ ನೆಗಡಿ ಅನುಭವಕ್ಕೆ ಬರುತ್ತಿದೆ. ಆದರೆ ಜನರು ಇದನ್ನು ಅಲರ್ಜಿ ಎಂದು ಭಾವಿಸಿ ನಿರ್ಲಕ್ಷಿಸುತ್ತಾರೆ, ಆದರೆ ಇದು ದೊಡ್ಡ ಸಮಸ್ಯೆಯ ಸಂಕೇತ ಆಗಿರಬಹುದು ಎಂಬುದನ್ನು ಮರೆಯಬಾರದು. ಸಾಮಾನ್ಯವಾಗಿ ಹವಾಮಾನದಲ್ಲಿ, ದೇಹವು ಹೊಸ ಪರಿಸರಕ್ಕೆ ಹೊಂದಿಕೊಳ್ಳಬೇಕಾಗುತ್ತದೆ, ಈ ಅವಧಿಯಲ್ಲಿ, ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ಗಮನಿಸಬಹುದು. ಇಂತಹ ಸಂದರ್ಭಗಳಲ್ಲಿ, ಆಗಾಗ ಸೀನು ಬರುವುದು ಸಾಮಾನ್ಯವೇ ಅಥವಾ ಅಲ್ಲವೇ ಎಂಬುದನ್ನು ತಿಳಿಯುವುದು ಬಹಳ ಮುಖ್ಯವಾಗುತ್ತದೆ. ಹಾಗಾದರೆ ಆಗಾಗ ಸೀನು ಬರುವುದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತವೇ ತಿಳಿದುಕೊಳ್ಳಿ.

ಆಗಾಗ ಸೀನು ಬರುವುದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತವೇ?

ಲೇಡಿ ಹಾರ್ಡಿಂಗ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಎಚ್‌ಒಡಿ ಡಾ. ಎಲ್.ಎಚ್. ​​ಘೋಟೇಕರ್ ಹೇಳುವ ಪ್ರಕಾರ, ಆಗಾಗ ಸೀನು ಬರುವುದು ಧೂಳು, ತಂಪಾದ ಗಾಳಿ ಅಥವಾ ಮಾಲಿನ್ಯದ ಪರಿಣಾಮವೂ ಆಗಿರಬಹುದು. ಆದರೆ ಆಗಾಗ ಸೀನು ಬರುವುದು, ಪುನರಾವರ್ತಿತವಾಗಿ ಶೀತವಾಗುವುದು, ಗಂಟಲು ನೋವು, ಆಯಾಸ ಅಥವಾ ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುವುದು ದುರ್ಬಲ ರೋಗನಿರೋಧಕ ಶಕ್ತಿಯ ಸಂಕೇತ. ಪ್ರತಿರಕ್ಷಣಾ ವ್ಯವಸ್ಥೆ ದುರ್ಬಲವಾಗಿದ್ದಾಗ, ದೇಹವು ಬಾಹ್ಯ ಅಲರ್ಜಿನ್ ಮತ್ತು ವೈರಸ್‌ಗಳ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ, ರೋಗಲಕ್ಷಣಗಳು ಪದೇ ಪದೇ ಕಂಡುಬರುತ್ತದೆ.

ಇದನ್ನೂ ಓದಿ: ಪದೇ ಪದೇ ಶೀತವಾಗುವುದು ಈ ಕಾಯಿಲೆಯ ಆರಂಭಿಕ ಲಕ್ಷಣವಾಗಿರಬಹುದು ಎಚ್ಚರ!

ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹವಾಮಾನಕ್ಕೆ ಅನುಗುಣವಾಗಿ ಮೊದಲು ದೇಹವನ್ನು ಬೆಚ್ಚಗಿಟ್ಟುಕೊಳ್ಳಬೇಕು. ತಂಪಾದ ಗಾಳಿ ಮತ್ತು ಧೂಳಿನಿಂದ ಮೂಗನ್ನು ರಕ್ಷಿಸಿಕೊಳ್ಳುವುದು ಬಹಳ ಮುಖ್ಯ. ಇದೆಲ್ಲದರ ಜೊತೆಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದರಿಂದ ದೇಹವು ತೇವಾಂಶದಿಂದ ಕೂಡಿರುತ್ತದೆ ಮತ್ತು ಅಲರ್ಜಿಯ ಪರಿಣಾಮಗಳನ್ನು ಕಡಿಮೆ ಮಾಡಬಹುದು. ಧೂಳು ಮತ್ತು ಅಲರ್ಜಿನ್ ಗಳನ್ನು ಕಡಿಮೆ ಮಾಡಲು ಮನೆ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸುವತ್ತ ಗಮನ ಹರಿಸಿ. ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ, ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ಸಮತೋಲಿತ ಆಹಾರ ಮತ್ತು ಸರಿಯಾಗಿ ನಿದ್ರೆ ಮಾಡುವುದು ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ