AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ರಿಂದ 35 ನೇ ವಯಸ್ಸಿನಲ್ಲಿ ಬಿಪಿ ಬರುವುದನ್ನು ತಡೆಯಲು ಈ ಟ್ರಿಕ್ಸ್ ಪಾಲಿಸಿ ನೋಡಿ!

ಅಧಿಕ ರಕ್ತದೊತ್ತಡವು ತುಂಬಾ ಗಂಭೀರ ಸಮಸ್ಯೆ ಎಂಬುದು ತಿಳಿದ ವಿಚಾರ. ಇದನ್ನು ನಿಯಂತ್ರಿಸದಿದ್ದರೆ, ಹೃದಯಾಘಾತ ಸೇರಿದಂತೆ ಹೃದಯ ಸಂಬಂಧಿ ಕಾಯಿಲೆಗಳು ಬರುವ ಅಪಾಯವಿರುತ್ತದೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ, ಯುವಜನತೆಯಲ್ಲಿ ಅಧಿಕ ರಕ್ತದೊತ್ತಡ ಪ್ರಕರಣಗಳು ಹೆಚ್ಚಾಗುತ್ತಿದ್ದು, 30 ರಿಂದ 35 ವರ್ಷ ವಯಸ್ಸಿನವರಲ್ಲಿ ಕಂಡುಬರುತ್ತಿದೆ. ಹಾಗಾದರೆ ರಕ್ತದೊತ್ತಡ ಹೆಚ್ಚಾಗುವುದಕ್ಕೆ ಕಾರಣವೇನು? ಲಕ್ಷಣಗಳು ಹೇಗಿರುತ್ತವೆ, ಈ ಸಮಸ್ಯೆಯನ್ನು ಸುಲಭವಾಗಿ ನಿಯಂತ್ರಿಸಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

30 ರಿಂದ 35 ನೇ ವಯಸ್ಸಿನಲ್ಲಿ ಬಿಪಿ ಬರುವುದನ್ನು ತಡೆಯಲು ಈ ಟ್ರಿಕ್ಸ್ ಪಾಲಿಸಿ ನೋಡಿ!
Causes Of Hypertension In Youth & How To ManageImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jan 27, 2026 | 5:55 PM

Share

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ಕಾಣಬಹುದು. ಚಿಕ್ಕ ವಯಸ್ಸಿನಲ್ಲಿಯೇ ಅಧಿಕ ರಕ್ತದೊತ್ತಡದ ಸಮಸ್ಯೆ (Hypertension) ಕಂಡುಬರುತ್ತಿರುವುದು ಬಹಳ ಕಳವಳಕಾರಿ ವಿಷಯ. ಅದರಲ್ಲಿಯೂ 30 ರಿಂದ 35 ವರ್ಷ ವಯಸ್ಸಿನವರಲ್ಲಿ ರಕ್ತದೊತ್ತಡ ಅಂದರೆ ಬಿಪಿ ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಾರಣಗಳು ಹಲವಾರಾದರೂ ಕೂಡ, ನಾವು ದಿನನಿತ್ಯ ಸೇವನೆ ಮಾಡುವ ಆಹಾರ, ಹದಗೆಟ್ಟ ಜೀವನಶೈಲಿ, ಮತ್ತು ಮಾನಸಿಕ ಒತ್ತಡ ಈ ಸಮಸ್ಯೆಯ ಹೆಚ್ಚಳಕ್ಕೆ ಗಮನಾರ್ಹ ಅಂಶವಾಗಿದೆ. ಅದರಲ್ಲಿಯೂ ಅಧಿಕ ರಕ್ತದೊತ್ತಡ ಬಹಳ ಅಪಾಯಕಾರಿಯಾಗಿದ್ದು ಇದನ್ನು ನಿಯಂತ್ರಿಸದಿದ್ದರೆ, ಅದು ಹೃದಯಾಘಾತದಿಂದ ಮಿದುಳಿನ ಪಾರ್ಶ್ವವಾಯುವಿನವರೆಗೆ ನಾನಾ ರೀತಿಯ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಹಾಗಾದರೆ ರಕ್ತದೊತ್ತಡ ಹೆಚ್ಚಾಗುವುದಕ್ಕೆ ಕಾರಣವೇನು, ಇದನ್ನು ಸುಲಭವಾಗಿ ನಿಯಂತ್ರಿಸಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ದೆಹಲಿಯ ಜಿಟಿಬಿ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಡಾ. ಅಜಿತ್ ಕುಮಾರ್ ಹೇಳುವ ಪ್ರಕಾರ, ಬಿಪಿ ಅಥವಾ ಅಧಿಕ ರಕ್ತದೊತ್ತಡ ಮೌನವಾಗಿ ದೇಹದ ಮೇಲೆ ದಾಳಿ ಮಾಡುವಂತಹ ಕಾಯಿಲೆ. ಏಕೆಂದರೆ ಇದರ ಆರಂಭಿಕ ಲಕ್ಷಣಗಳು ಹೆಚ್ಚಾಗಿ ಗಮನಕ್ಕೆ ಬರುವುದಿಲ್ಲ. ಕೆಲವು ಸಂದರ್ಭಗಳಲ್ಲಿ, ಲಕ್ಷಣಗಳು ಕಂಡುಬಂದರೂ ಸಹ ಜನರಿಗೆ ಅವುಗಳ ಬಗ್ಗೆ ತಿಳಿದಿರುವುದಿಲ್ಲ. ಪರಿಣಾಮವಾಗಿ, ಈ ರೋಗವು ಕ್ರಮೇಣ ದೇಹದ ಮೇಲೆ ದಾಳಿ ಮಾಡುತ್ತದೆ. ಹಾಗಾಗಿ ಈ ಆರೋಗ್ಯ ಸಮಸ್ಯೆಯಿಂದ ದೂರವಿರಲು ಪ್ರತಿಯೊಬ್ಬರೂ ಕೂಡ ಮೊದಲು ಅಧಿಕ ರಕ್ತದೊತ್ತಡದ ಲಕ್ಷಣಗಳ ಬಗ್ಗೆ ತಿಳಿಯುವುದು ಮತ್ತು ಅವು ಕಂಡುಬಂದಾಗ ಬಹಳ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ.

ಅಧಿಕ ರಕ್ತದೊತ್ತಡ ಕಂಡು ಬರುವ ಮೊದಲು ಕಾಣಿಸಿಕೊಳ್ಳುವ ಲಕ್ಷಣಗಳು:

  • ತಲೆನೋವು
  • ತಲೆಯಲ್ಲಿ ಭಾರ
  • ತಲೆತಿರುಗುವಿಕೆ
  • ಆತಂಕ
  • ಕಣ್ಣುಗಳು ಆಗಾಗ ಮಸುಕಾಗುವುದು
  • ಆಯಾಸ

ಇದನ್ನೂ ಓದಿ: ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರಲು ನಿಂಬೆ ನೀರು ಕುಡಿಯುವುದು ಒಳ್ಳೆಯದೇ… ಇಲ್ಲಿದೆ ತಜ್ಞರ ಅಭಿಪ್ರಾಯ

ಅಧಿಕ ರಕ್ತದೊತ್ತಡ ನಿಯಂತ್ರಿಸಲು ಸಲಹೆಗಳು:

  • ಮೊದಲನೆಯದಾಗಿ ನೀವು ಸೇವನೆ ಮಾಡುವ ಆಹಾರದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯ.
  • ಆಹಾರದಲ್ಲಿ ಉಪ್ಪನ್ನು ಕಡಿಮೆ ಮಾಡಿ. ದಿನಕ್ಕೆ 5 ಗ್ರಾಂ ಗಿಂತ ಹೆಚ್ಚು ಉಪ್ಪನ್ನು ಸೇವಿಸಬೇಡಿ.
  • ಜಂಕ್ ಫುಡ್ ಮತ್ತು ಪ್ಯಾಕ್ ಮಾಡಿದ ಆಹಾರಗಳನ್ನು ಸೇವನೆ ಮಾಡಬೇಡಿ.
  • ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ.
  • ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಿ.
  • ಪ್ರತಿದಿನ ವ್ಯಾಯಾಮ ಮಾಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್