Winter Health: ಚಳಿಗಾಲದಲ್ಲಿ ಸೋಂಕಿನಿಂದ ರಕ್ಷಿಸಿಕೊಳ್ಳಲು ಈ 4 ಅಭ್ಯಾಸಗಳನ್ನು ರೂಢಿಸಿಕೊಳ್ಳಿ

ಚಳಿಗಾಲದಲ್ಲಿ ಹೆಚ್ಚಿನ ಕಾಳಜಿಯನ್ನು ವಹಿಸಬೇಕಾಗುತ್ತದೆ. ಸರಿಯಾದ ಆಹಾರ ಸೇವಿಸಿದರೆ ದೇಹ ಬೆಚ್ಚಗಿರುತ್ತದೆ. ಹೈಡ್ರೇಟೆಡ್ ಆಗಿರಲು ಪ್ರತಿದಿನ ಕನಿಷ್ಠ 5ರಿಂದ 6 ಗ್ಲಾಸ್ ನೀರನ್ನು ಸೇವಿಸಬೇಕು.

Winter Health: ಚಳಿಗಾಲದಲ್ಲಿ ಸೋಂಕಿನಿಂದ ರಕ್ಷಿಸಿಕೊಳ್ಳಲು ಈ 4 ಅಭ್ಯಾಸಗಳನ್ನು ರೂಢಿಸಿಕೊಳ್ಳಿ
ಸಾಂದರ್ಭಿಕ ಚಿತ್ರImage Credit source: Aaj Tak
Follow us
ಸುಷ್ಮಾ ಚಕ್ರೆ
|

Updated on: Feb 06, 2023 | 1:38 PM

ನವದೆಹಲಿ: ಭಾರತದ ಹಲವು ಪ್ರದೇಶಗಳಲ್ಲಿ ಅದರಲ್ಲೂ ಉತ್ತರ ಭಾಗದಲ್ಲಿ ತೀವ್ರ ಶೀತಗಾಳಿ (Cold Wave) ಆವರಿಸಿದೆ. ನಮ್ಮ ದೇಹವು ಬದಲಾಗುತ್ತಿರುವ ಹವಾಮಾನಕ್ಕೆ (Weather) ಹೊಂದಿಕೊಳ್ಳಲು ಸಮಯ ಬೇಕಾಗುತ್ತದೆ. ಶೀತ ಹವಾಮಾನವು ದೇಹದ ಉಷ್ಣತೆಯಲ್ಲಿ ಇಳಿಕೆಗೆ ಕಾರಣವಾಗುತ್ತದೆ. ಕಡಿಮೆ ರೋಗನಿರೋಧಕ ಶಕ್ತಿ (Immunity Power) ಹೊಂದಿರುವ ಜನರು ತಮ್ಮ ದುರ್ಬಲ ರೋಗನಿರೋಧಕ ಶಕ್ತಿಯಿಂದಾಗಿ ಅನಾರೋಗ್ಯಕ್ಕೆ ಒಳಗಾಗುತ್ತಾರೆ.

ಚಳಿಗಾಲದಲ್ಲಿ ಜ್ವರ, ಶೀತ, ಚರ್ಮ, ಉಸಿರಾಟ ಮತ್ತು ಚಲನಶೀಲತೆಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಚಳಿಗಾಲದಲ್ಲಿ ಹೆಚ್ಚಿನ ಕಾಳಜಿಯನ್ನು ವಹಿಸಬೇಕಾಗುತ್ತದೆ. ಸರಿಯಾದ ಆಹಾರ ಸೇವಿಸಿದರೆ ದೇಹ ಬೆಚ್ಚಗಿರುತ್ತದೆ. ಶೀತದ ಕೆಟ್ಟ ಆರೋಗ್ಯ ಪರಿಣಾಮಗಳಿಂದ ಸುರಕ್ಷಿತವಾಗಿರಲು ನೀವು ಅಳವಡಿಸಿಕೊಳ್ಳುವುದನ್ನು ಪರಿಗಣಿಸಬೇಕಾದ ಕೆಲವು ಆರೋಗ್ಯಕರ ಅಭ್ಯಾಸಗಳನ್ನು ಬಹಿರಂಗಪಡಿಸುತ್ತದೆ.

1. ನಿಮ್ಮನ್ನು ಹೈಡ್ರೀಕರಿಸಿಟ್ಟುಕೊಳ್ಳಿ: ನೈಸರ್ಗಿಕವಾಗಿ ಚಳಿಗಾಲದಲ್ಲಿ ಬಾಯಾರಿಕೆ ಕಡಿಮೆ ಇರುತ್ತದೆ. ಹೀಗಾಗಿ, ನೀರು ಕುಡಿಯುವುದು ಕೂಡ ಕಡಿಮೆ. ಈ ವೇಳೆ ಗಾಳಿಯಲ್ಲಿ ತೇವಾಂಶದ ಕೊರತೆಯಿಂದಾಗಿ ನಿರ್ಜಲೀಕರಣವು ವಯಸ್ಸಾದವರ ಮೇಲೆ ಪರಿಣಾಮ ಬೀರುತ್ತದೆ. ನೀರು ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ದೇಹದ ಜೀವಕೋಶಗಳಿಗೆ ಪೋಷಕಾಂಶಗಳನ್ನು ತಲುಪಿಸುತ್ತದೆ. ದೇಹದ ದ್ರವ ಸಮತೋಲನವನ್ನು ನಿಯಂತ್ರಣದಲ್ಲಿಡುತ್ತದೆ. ತಜ್ಞರ ಪ್ರಕಾರ, ಹೈಡ್ರೇಟೆಡ್ ಆಗಿರಲು ಪ್ರತಿದಿನ ಕನಿಷ್ಠ 5ರಿಂದ 6 ಗ್ಲಾಸ್ ನೀರನ್ನು ಸೇವಿಸಬೇಕು. ನೀರು ಕುಡಿಯಲು ಸಾಧ್ಯವಾಗದಿದ್ದರೆ ಗ್ರೀನ್ ಟೀಯನ್ನು ಸಹ ಸೇವಿಸಬಹುದು.

ಇದನ್ನೂ ಓದಿ: Winter Tips: ಚಳಿಗಾಲದಲ್ಲಿ ಬೆಳಗ್ಗೆ ವಾಕಿಂಗ್ ಮಾಡುವುದರಿಂದ ಆಗುವ ಐದು ಪ್ರಯೋಜನಗಳು

2. ಆ್ಯಕ್ಟಿವ್ ಆಗಿರಿ: ಚಳಿಗಾಲದಲ್ಲಿ ಬೆಳಗ್ಗೆ ಎದ್ದ ಕೂಡಲೆ ಬಿಸಿ ಬಿಸಿಯಾಗಿ ಏನನ್ನಾದರೂ ಸೇವಿಸಿ, ಉತ್ತಮ ಉಪಹಾರವನ್ನು ಸೇವಿಸಿ, ಬಿಸಿಲಲ್ಲಿ ಓಡಾಡಿ ನೈಸರ್ಗಿಕ ವಿಟಮಿನ್ ಡಿ ಪಡೆಯುವುದು ಮುಖ್ಯ. ಯಾವುದೇ ರೀತಿಯ ವ್ಯಾಯಾಮ, ಸಣ್ಣ ವಾಕಿಂಗ್, ಸ್ನಾಯುಗಳ ಚಲನೆಯು ಹೃದಯ ಬಡಿತವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ರಕ್ತದ ಹರಿವನ್ನು ನಿಯಂತ್ರಿಸುತ್ತದೆ. ಚಳಿಗಾಲದ ಖಿನ್ನತೆ, ಆಲಸ್ಯ, ಬಿಗಿತ ಮತ್ತು ನೋವನ್ನು ನಿವಾರಿಸುತ್ತದೆ.

3. ಚೆನ್ನಾಗಿ ವಿಶ್ರಾಂತಿ ತೆಗೆದುಕೊಳ್ಳಿ: ಚಳಿಯ ವಾತಾವರಣದಲ್ಲಿ ನಿದ್ರೆಯ ಕೊರತೆಯು ನಿಮಗೆ ಅರೆನಿದ್ರಾವಸ್ಥೆ ಮತ್ತು ದಣಿದ ಭಾವನೆಯನ್ನು ಉಂಟುಮಾಡಬಹುದು. ದಿನವಿಡೀ ಚಟುವಟಿಕೆಯಿಂದ ಇರಲು ಸಾಕಷ್ಟು ವಿಶ್ರಾಂತಿ ಪಡೆಯುವುದು ಅತ್ಯಗತ್ಯ. ನಿಮ್ಮ ದೇಹಕ್ಕೆ ಸರಿಯಾದ ನಿದ್ರೆ ಸಿಕ್ಕರೆ ಚೆನ್ನಾಗಿ ವಿಶ್ರಾಂತಿ ಸಿಗುತ್ತದೆ.

ಇದನ್ನೂ ಓದಿ: Health Tips: ಚಳಿಗಾಲದಲ್ಲಿ ಕೀಲು ನೋವು ಕಾಡುತ್ತಿದೆಯೇ?; ಸಂಧಿವಾತವನ್ನು ನಿಯಂತ್ರಿಸಲು ನೈಸರ್ಗಿಕ ಪರಿಹಾರ ಇಲ್ಲಿದೆ

4. ಸಮತೋಲಿತ ಆಹಾರವನ್ನು ಸೇವಿಸಿ: ಶೀತ ವಾತಾವರಣದಲ್ಲಿ ಸಮತೋಲಿತ ಆಹಾರವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ನೀವು ಧಾನ್ಯಗಳು, ಹಸಿ ಮಾಂಸ, ಮೀನು, ಕೋಳಿ, ದ್ವಿದಳ ಧಾನ್ಯಗಳು, ಬೀಜಗಳು, ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಹೊಂದಿರುವ ಸಮತೋಲಿತ ಆಹಾರವನ್ನು ಸೇವಿಸಿದರೆ ರೋಗನಿರೋಧಕ ವ್ಯವಸ್ಥೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಬೆಳಗಿನ ಉಪಾಹಾರದಲ್ಲಿ ಮೊಟ್ಟೆ, ಚಪಾತಿ, ಓಟ್ಸ್, ಇಡ್ಲಿಯನ್ನು ಸೇವಿಸಿ. ಮಧ್ಯಾಹ್ನದ ಊಟದ ಸಮಯದಲ್ಲಿ ಮತ್ತು ರಾತ್ರಿಯ ಊಟದ ಸಮಯದಲ್ಲಿ ಗೆಣಸು, ಪಾಲಕ್, ಮೂಲಂಗಿ, ಕ್ಯಾರೆಟ್, ಬೀಟ್ರೂಟ್​ಗಳಂತಹ ಆಯಾ ಸೀಸನ್​ಗೆ ಸರಿಯಾದ ತರಕಾರಿಗಳನ್ನು ಸೇವಿಸಿ. ವಿಟಮಿನ್ ಎ, ಸಿ, ಡಿ ಮತ್ತು ಇ, ಸತು ಮತ್ತು ಒಮೆಗಾ 3 ಕೊಬ್ಬಿನಾಮ್ಲಗಳಂತಹ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?